HomeಅಂಕಣಗಳುSIRಪಶ್ಚಿಮ ಬಂಗಾಳ: ಎಸ್‌ಐಆರ್ ವಿವಾದದ ಬಳಿಕ ಶಿಶುವಿಗೆ ಜನನ ಪ್ರಮಾಣಪತ್ರ

ಪಶ್ಚಿಮ ಬಂಗಾಳ: ಎಸ್‌ಐಆರ್ ವಿವಾದದ ಬಳಿಕ ಶಿಶುವಿಗೆ ಜನನ ಪ್ರಮಾಣಪತ್ರ

- Advertisement -
- Advertisement -

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ವೇಳೆ ತಂದೆಯ ಹೆಸರನ್ನು ಪಟ್ಟಿಯಿಂದ ತೆಗೆದುಹಾಕಲಾಗಿತ್ತು ಎಂಬ ಕಾರಣಕ್ಕೆ ಜನನ ಪ್ರಮಾಣಪತ್ರ ನೀಡಲು ನಿರಾಕರಿಸಿದ್ದ ಪಶ್ಚಿಮ ಬಂಗಾಳ ಸರ್ಕಾರವು, ಅಂತಿಮವಾಗಿ ಎರಡು ತಿಂಗಳ ಹೆಣ್ಣು ಶಿಶುವಿಗೆ ಜನನ ಪ್ರಮಾಣಪತ್ರವನ್ನು ವಿತರಿಸಿದೆ.

ಅಸೋಸಿಯೇಷನ್ ಫಾರ್ ಪ್ರೊಟೆಕ್ಷನ್ ಆಫ್ ಸಿವಿಲ್ ರೈಟ್ಸ್ (ಎಪಿಸಿಆರ್) ಪ್ರಕಾರ, ಕೂಚ್ ಬೆಹಾರ್‌ನಲ್ಲಿರುವ ತನ್ನ ಸ್ಥಳೀಯ ತಂಡದ ನಿರಂತರ ಪ್ರಯತ್ನಗಳು ಮತ್ತು ಮಾಧ್ಯಮಗಳ ಬೆಂಬಲದ ನಂತರ ಈ ಬೆಳವಣಿಗೆ ಕಂಡುಬಂದಿದೆ.

‘ದಿ ಹಿಂದೂ’ ವರದಿಯ ಪ್ರಕಾರ, ಅಮೀನಾ ಖಾತೂನ್ ಅವರು ಸೆಪ್ಟೆಂಬರ್ 9 ರಂದು ಕೂಚ್ ಬೆಹಾರ್‌ನ ದಿನ್ಹಾಟಾ ಉಪ-ವಿಭಾಗೀಯ ಆಸ್ಪತ್ರೆಯಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಮಗಳ ಜನನದ ನಂತರ, ಅವರ ಪತಿ ಅಬ್ದುಲ್ ಹಬೀಬ್ ಜನನ ಪ್ರಮಾಣಪತ್ರ ಪಡೆಯಲು ಆಸ್ಪತ್ರೆ ಮತ್ತು ಪಂಚಾಯತ್ ಕಚೇರಿಯನ್ನು ಸಂಪರ್ಕಿಸಿದ್ದರು. ಆದರೆ, ವಾಸಸ್ಥಳದ ಪುರಾವೆ ಸಲ್ಲಿಸುವಂತೆ ಅವರನ್ನು ವಾಪಸ್ ಕಳುಹಿಸಲಾಗಿತ್ತು.

ಶಾಸಕರು ಅಥವಾ ಪಂಚಾಯತ್ ಪ್ರಧಾನ್ ಅವರಿಂದ ವಾಸಸ್ಥಳ ದೃಢೀಕರಣ ಪತ್ರ ಪಡೆಯುವಂತೆ ಅವರಿಗೆ ತಿಳಿಸಲಾಗಿತ್ತು. ಆದರೆ, ಶಾಸಕರ ಕಚೇರಿಯಲ್ಲಿ ಅಧಿಕಾರಿಯೊಬ್ಬರು ಅವರನ್ನು ‘ಬಾಂಗ್ಲಾದೇಶಿ’ ಎಂದು ಕರೆದಿದ್ದು, ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಸಿಆರ್) ಮೂಲಕ ನೋಂದಾಯಿಸಿಕೊಳ್ಳುವಂತೆ ಹೇಳಿದ್ದಾರೆ ಎಂದು ಆರೋಪಿಸಲಾಗಿದೆ.

ಎಸ್‌ಐಆರ್ ಸಮಯದಲ್ಲಿ ಮತದಾರರ ಪಟ್ಟಿಯಿಂದ ತಮ್ಮ ಹೆಸರನ್ನು ತೆಗೆದುಹಾಕಿರುವುದರಿಂದ ತಮ್ಮ ಮಗಳ ಜನನ ಪ್ರಮಾಣಪತ್ರವನ್ನು ನೋಂದಾಯಿಸಲು ಸಾಧ್ಯವಿಲ್ಲ ಎಂದು ಶಾಸಕರ ಕಚೇರಿಯವರು ತಿಳಿಸಿದ್ದಾರೆ ಎಂಬುದಾಗಿ ಹಬೀಬ್ ಹೇಳಿದ್ದಾರೆ.

ತಾವು ಹುಟ್ಟಿನಿಂದಲೂ ಭಾರತದಲ್ಲೇ ವಾಸಿಸುತ್ತಿದ್ದು, ಖಾತಮಾರಿಯಲ್ಲಿರುವ ತಮ್ಮ ಮನೆಯನ್ನು ತಮ್ಮ ಅಜ್ಜ ನಿರ್ಮಿಸಿದ್ದಾರೆ ಎಂದು ಹಬೀಬ್ ಪ್ರತಿಪಾದಿಸಿದ್ದಾರೆ. “ನಾನು ಅವರಿಗೆ ಎಲ್ಲಾ ದಾಖಲೆಗಳನ್ನು ತೋರಿಸಿದ್ದೇನೆ, ಆದರೂ ಅವರು ನಿರಾಕರಿಸಿದರು” ಎಂದು ಅವರು ಹೇಳಿದ್ದಾರೆ.

ಎಸ್‌ಐಆರ್‌ನಲ್ಲಿ ಹೆಸರು ಕೈಬಿಟ್ಟ ಕಾರಣಕ್ಕೆ ಹಬೀಬ್ ಅವರ ಎರಡು ತಿಂಗಳ ಮಗಳಿಗೆ ಜನನ ಪ್ರಮಾಣಪತ್ರ ನಿರಾಕರಿಸಲಾಗಿದೆ ಎಂಬ ವರದಿಗಳು ಪ್ರಕಟವಾದ ಒಂದು ದಿನದ ನಂತರ, ಕ್ಷೇತ್ರ ಅಭಿವೃದ್ಧಿ ಅಧಿಕಾರಿ (ಬಿಡಿಒ) ಖಾತೂನ್ ಅವರಿಗೆ ವಾಸಸ್ಥಳ ಪ್ರಮಾಣಪತ್ರವನ್ನು ನೀಡಿದ್ದಾರೆ.

ಹಬೀಬ್ ಅವರ ಹೆಸರನ್ನು ಪಟ್ಟಿಗೆ ಸೇರಿಸುವ ಕುರಿತು ನ್ಯಾಯಮಂಡಳಿಯ ತೀರ್ಪಿಗಾಗಿ ಕಾಯುತ್ತಿದ್ದರೆ, ಖಾತೂನ್ ಅವರ ಹೆಸರು ಮತದಾರರ ಪಟ್ಟಿಯಲ್ಲಿ ನೋಂದಣಿಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕ್ಷೇತ್ರ ಪುನರ್ವಿಂಗಡಣೆ ಮಸೂದೆ ವಿರುದ್ಧ ಪ್ರತಿಪಕ್ಷಗಳ ಒಗ್ಗಟ್ಟಿಗೆ ಖರ್ಗೆ ಮನವಿ; ಡಿಎಂಕೆ, ಎಎಪಿ, ಬಿಜೆಡಿಗೂ ಆಹ್ವಾನ

ನವದೆಹಲಿ: ಮಹಿಳಾ ಮೀಸಲಾತಿ ಜಾರಿ ನೆಪದಲ್ಲಿ ಕ್ಷೇತ್ರ ಪುನರ್ವಿಂಗಡಣೆಗೆ ಸಂಬಂಧಿಸಿದ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ಮತ್ತೆ ಸಂಸತ್ತಿನಲ್ಲಿ ಮಂಡಿಸಲು ಕೇಂದ್ರ ಸರ್ಕಾರ ಸಿದ್ಧತೆ ನಡೆಸುತ್ತಿದೆ ಎಂಬ ಸೂಚನೆಗಳ ಬೆನ್ನಲ್ಲೇ, ಸರ್ಕಾರದ ನಡೆಗೆ ಸಂಘಟಿತ...

ನಿಗದಿತ ಮಿತಿಗಿಂತ ಹೆಚ್ಚಿನ ಎಥೆನಾಲ್ ಮಿಶ್ರಣ: ಕರ್ನಾಟಕ ಸರ್ಕಾರದಿಂದ ಇಂಡಿಯನ್ ಆಯಿಲ್‌ಗೆ ಕಾರಣ ಕೇಳಿ ನೋಟಿಸ್

ಬೆಂಗಳೂರು ಸಮೀಪದ ದೇವನಗೊಂದಿ ಟರ್ಮಿನಲ್‌ನಲ್ಲಿ ಪೆಟ್ರೋಲ್‌ಗೆ ನಿಗದಿತ ಶೇ. 20 ರ ಮಿತಿಗಿಂತ ಹೆಚ್ಚಿನ ಪ್ರಮಾಣದಲ್ಲಿ ಎಥೆನಾಲ್ ಮಿಶ್ರಣ ಮಾಡುತ್ತಿರುವುದು ತಪಾಸಣೆಯ ವೇಳೆ ಪತ್ತೆಯಾದ ಹಿನ್ನೆಲೆಯಲ್ಲಿ, ಕರ್ನಾಟಕ ಸರ್ಕಾರವು ಇಂಡಿಯನ್ ಆಯಿಲ್ ಕಾರ್ಪೊರೇಷನ್...

ಅಸ್ಸಾಂನ ಲಖಿಂಪುರದಲ್ಲಿ ತೆರವು ಕಾರ್ಯಾಚರಣೆ ಬಳಿಕವೂ ನಿಲ್ಲದ ಸಂಕಷ್ಟ: ಸೂರು ಕಳೆದುಕೊಂಡು ಬಯಲಿನಲ್ಲಿ ಕಾಲಕಳೆಯುತ್ತಿರುವ 135 ಬಡ ಮುಸ್ಲಿಂ ಕುಟುಂಬಗಳು, ಧರ್ಮದ ಆಧಾರದ ತಾರತಮ್ಯದ ಗಂಭೀರ ಆರೋಪ!

ಲಖಿಂಪುರ (ಅಸ್ಸಾಂ): ಅಸ್ಸಾಂನ ಲಖಿಂಪುರ ಜಿಲ್ಲೆಯ ಕದಮ್ ಕಂದಾಯ ವೃತ್ತದ ವ್ಯಾಪ್ತಿಯ ಬೋಗಿನದಿ ಪ್ರದೇಶದಲ್ಲಿ ಜಿಲ್ಲಾಡಳಿತ ನಡೆಸಿದ ಬೃಹತ್ ತೆರವು ಕಾರ್ಯಾಚರಣೆಯ ಬೆನ್ನಲ್ಲೇ ಸುಮಾರು 135 ಬಡ ಕುಟುಂಬಗಳು ತೀವ್ರ ಸಂಕಷ್ಟಕ್ಕೆ ಸಿಲುಕಿವೆ....

ಪೌರಕಾರ್ಮಿಕರ ಸ್ವಂತ ಮನೆ ಕನಸಿಗೆ ಸರ್ಕಾರದ ಬಲ; ಮೈಸೂರಿನಲ್ಲಿ 158 ಕುಟುಂಬಗಳ ವಸತಿ ಸಮುಚ್ಚಯ ಉದ್ಘಾಟಿಸಿದ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ನಗರದ ಸ್ವಚ್ಛತೆ ಮತ್ತು ಸಾರ್ವಜನಿಕ ಆರೋಗ್ಯವನ್ನು ಕಾಪಾಡಲು ಹಗಲಿರುಳು ಶ್ರಮಿಸುವ ಪೌರಕಾರ್ಮಿಕರಿಗೆ ಸ್ವಂತ ಮನೆಯ ಸೌಲಭ್ಯ ಕಲ್ಪಿಸುವುದು ಸರ್ಕಾರದ ಸಾಮಾಜಿಕ ಹೊಣೆಗಾರಿಕೆಯಾಗಿದೆ. ಪೌರಕಾರ್ಮಿಕರ ಬದುಕಿನಲ್ಲಿ ಗೌರವ, ಸ್ವಾಭಿಮಾನ ಮತ್ತು ಭದ್ರತೆ ತರುವ...

ಕ್ಷೇತ್ರ ಮರುವಿಂಗಡಣೆ ಮಸೂದೆಗೆ ಬೆಂಬಲ ನೀಡಲು ನಿರ್ಧರಿಸಿದರೆ ಡಿಎಂಕೆ ತನ್ನ ‘ನಿಲುವು ಬದಲಾವಣೆ’ಗೆ ವಿವರಣೆ ನೀಡಬೇಕು: ಕಾರ್ತಿ ಚಿದಂಬರಂ

ಈ ಹಿಂದೆ ಕ್ಷೇತ್ರ ಮರುವಿಂಗಡಣೆ ಮಸೂದೆಯನ್ನು ವಿರೋಧಿಸಿದ್ದ ಡಿಎಂಕೆ, ಇದೀಗ ಅದನ್ನು ಬೆಂಬಲಿಸಲು ನಿರ್ಧರಿಸಿದರೆ ತನ್ನ ನಿಲುವು ಬದಲಾವಣೆಗೆ (ಯು-ಟರ್ನ್) ಕಾರಣವೇನು ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಕಾಂಗ್ರೆಸ್ ನಾಯಕ ಕಾರ್ತಿ ಚಿದಂಬರಂ ಶುಕ್ರವಾರ...

ಪಶ್ಚಿಮ ಬಂಗಾಳ ವಿಧಾನಸಭೆಯ ವಿಪಕ್ಷ ನಾಯಕನ ನೇಮಕ ರದ್ದು: 10 ದಿನದಲ್ಲಿ ಹೊಸ ನಿರ್ಧಾರಕ್ಕೆ ಹೈಕೋರ್ಟ್ ಸೂಚನೆ

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಿ (LoP) ರಿತಬ್ರತ ಬ್ಯಾನರ್ಜಿ ಅವರನ್ನು ನೇಮಿಸಿದ್ದ ಆದೇಶವನ್ನು ಕಲ್ಕತ್ತಾ ಹೈಕೋರ್ಟ್ ರದ್ದುಗೊಳಿಸಿದೆ. ನ್ಯಾಯಮೂರ್ತಿ ಕೃಷ್ಣ ರಾವ್ ಅವರ ಪೀಠವು ಈ ತೀರ್ಪು ನೀಡಿದ್ದು,...

‘ಒಂದು ನಿರ್ದಿಷ್ಟ ವರ್ಗಕ್ಕೆ ಮಣೆ’: ಉನ್ನತ ನ್ಯಾಯಾಂಗದಲ್ಲಿ ಎಸ್‌ಸಿ, ಎಸ್‌ಟಿ, ಒಬಿಸಿ, ಅಲ್ಪಸಂಖ್ಯಾತರ ಕಡಿಮೆ ಪ್ರಾತಿನಿಧ್ಯಕ್ಕೆ ಮಾಜಿ ಸಿಜೆಐ ಗವಾಯಿ ಆಕ್ಷೇಪ

ನವದೆಹಲಿ: ದೇಶದ ಉನ್ನತ ನ್ಯಾಯಾಂಗದಲ್ಲಿ ಪರಿಶಿಷ್ಟ ಜಾತಿ (ಎಸ್‌ಸಿ), ಪರಿಶಿಷ್ಟ ಪಂಗಡ (ಎಸ್‌ಟಿ), ಇತರೆ ಹಿಂದುಳಿದ ವರ್ಗ (ಒಬಿಸಿ) ಮತ್ತು ಅಲ್ಪಸಂಖ್ಯಾತ ಸಮುದಾಯಗಳಿಗೆ ಸಮರ್ಪಕ ಪ್ರಾತಿನಿಧ್ಯ ಸಿಗುತ್ತಿಲ್ಲ ಎಂದು ಭಾರತದ ಮಾಜಿ ಮುಖ್ಯ...

ಕ್ಷೇತ್ರ ಮರುವಿಂಗಡಣೆಗೆ ಸಂಬಂಧಿಸಿದ ಮಹಿಳಾ ಮೀಸಲಾತಿ ಮಸೂದೆಗೆ ಕೇಂದ್ರ ಸಚಿವ ಸಂಪುಟ ಅಸ್ತು!

ಕ್ಷೇತ್ರ ಮರುವಿಂಗಡಣೆಗೆ ಸಂಬಂಧಿಸಿದ ಮಹಿಳಾ ಮೀಸಲಾತಿಯ ಹೊಸ ಮಸೂದೆಗೆ ಕೇಂದ್ರ ಸಚಿವ ಸಂಪುಟ ಶುಕ್ರವಾರ (ನವೆಂಬರ್ 27) ಅನುಮೋದನೆ ನೀಡಿದೆ ಎಂದು ತಿಳಿದುಬಂದಿದೆ. ಮುಂದಿನ ವಾರದಿಂದ ಆರಂಭವಾಗಲಿರುವ ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಈ...

ಪೆಟ್ರೋಲ್ ಬಂಕ್‌ಗಳ ಬೆನ್ನಲ್ಲೇ IOCL ಟರ್ಮಿನಲ್‌ನಲ್ಲಿ ಪರಿಶೀಲನೆ! 3,000 ಲೀಟರ್‌ಗೆ 14 ಲೀಟರ್ ಹೆಚ್ಚು ಎಥೆನಾಲ್, 4–6 ಲೀಟರ್ ಕಡಿಮೆ ಪೆಟ್ರೋಲ್ ಪತ್ತೆ: ಸಚಿವ ರಿಜ್ವಾನ್ ಅರ್ಷದ್ ಮಾಹಿತಿ

ಬೆಂಗಳೂರು: ಪೆಟ್ರೋಲ್‌ನಲ್ಲಿ ನಿಗದಿತ E20 (ಶೇ.20 ಎಥೆನಾಲ್) ಮಿತಿಗಿಂತ ಹೆಚ್ಚಿನ ಪ್ರಮಾಣದಲ್ಲಿ ಎಥೆನಾಲ್ ಮಿಶ್ರಣ ಮಾಡುತ್ತಿರುವುದನ್ನು ಕರ್ನಾಟಕ ಸರ್ಕಾರ ಬಯಲಿಗೆ ತಂದ ಬೆನ್ನಲ್ಲೇ, ರಾಜ್ಯ ಕಾನೂನು ಮಾಪನಶಾಸ್ತ್ರ ಇಲಾಖೆಯು ತೈಲ ಮಾರುಕಟ್ಟೆ ಕಂಪನಿಗಳ...

ಕ್ಷೇತ್ರ ಮರುವಿಂಗಡಣೆ ಮಸೂದೆ: ನಮಗೆ ಅನುಕೂಲವಾಗಿದ್ದರೆ ಮಾತ್ರ ಒಪ್ಪಿಗೆ; ಡಿಎಂಕೆ ಸ್ಪಷ್ಟನೆ

ನವೆಂಬರ್ 30ರಂದು ಲೋಕಸಭೆಯ ವಿಶೇಷ ಅಧಿವೇಶನ ಆರಂಭವಾಗಲಿರುವ ಹಿನ್ನೆಲೆಯಲ್ಲಿ, ಕೇಂದ್ರ ಸರ್ಕಾರ ಇಂದು (ನವೆಂಬರ್ 30) ಮಹತ್ವದ ಕೇಂದ್ರ ಸಚಿವ ಸಂಪುಟ ಸಭೆ ಕರೆದಿದೆ. ಮೂಲಗಳ ಪ್ರಕಾರ, ಈ ಸಭೆಯಲ್ಲಿ ಕ್ಷೇತ್ರ ಮರುವಿಂಗಡಣೆಗೆ...