HomeUncategorizedಕೋಲ್ಕತ್ತಾ ಕಮಲಕ್ಕೆ ಮುಖಭಂಗ; ಟಿಎಂಸಿ ಸೇರಿದ ಬಿಜೆಪಿ ಸಂಸದನ ಪತ್ನಿ!

ಕೋಲ್ಕತ್ತಾ ಕಮಲಕ್ಕೆ ಮುಖಭಂಗ; ಟಿಎಂಸಿ ಸೇರಿದ ಬಿಜೆಪಿ ಸಂಸದನ ಪತ್ನಿ!

ಈ ಭಾರಿ ಬಿಜೆಪಿ ಪಶ್ಚಿಮ ಬಂಗಾಳದಲ್ಲಿ ಎರಡಂಕಿ ಸ್ಥಾನವನ್ನು ಗೆಲ್ಲಲು ಸಾಧ್ಯವಿಲ್ಲ ಎಂದು ಪ್ರಖ್ಯಾತ ರಾಜಕೀಯ ನಿಪುಣ ಪ್ರಶಾಂತ್​ ಕಿಶೋರ್​ ಸವಾಲು ಹಾಕಿದ್ದಾರೆ.

- Advertisement -
- Advertisement -

ಬಿಹಾರದ ಬೆನ್ನಿಗೆ ಮುಂದಿನ ವರ್ಷ ನಡೆಯಲಿರುವ ತಮಿಳುನಾಡು ಹಾಗೂ ಪಶ್ಚಿಮ ಬಂಗಾಳದ ಚುನಾವಣಾ ಅಖಾಡ ದಿನದಿಂದ ದಿನಕ್ಕೆ ರಂಗೇರುತ್ತಲೇ ಇದೆ. ಶನಿವಾರ ಮತ್ತು ಭಾನುವಾರ ಎರಡು ದಿನಗಳ ಕಾಲ ಬಂಗಾಳದ ಪ್ರವಾಸ ಕೈಗೊಂಡಿದ್ದ ಕೇಂದ್ರ ಗೃಹ ಸಚಿವ ಅಮಿತ್​ ಶಾ ಟಿಎಂಸಿ ಪಕ್ಷದ ಪ್ರಬಲ ನಾಯಕ ಸುವೆಂಧು ಅಧಿಕಾರಿ ಸೇರಿದಂತೆ 9 ಜನ ಶಾಸಕರನ್ನು ಬಿಜೆಪಿಗೆ ಬರಮಾಡಿಕೊಳ್ಳುವ ಮೂಲಕ ಬಂಗಾಳದ ಮಣ್ಣಲ್ಲಿ ಪಕ್ಷಾಂತರ ಪರ್ವಕ್ಕೆ ಚಾಲನೆ ನೀಡಿ ಟಿಎಂಸಿಗೆ ಶಾಕ್​ ನೀಡುವ ಕೆಲಸ ಮಾಡಿದ್ದರು. ಆದರೆ, ಇದೀಗ ಬಿಜೆಪಿಗೆ ಆಘಾತ ನೀಡಿರುವ ಬಿಜೆಪಿ ಸಂಸದ ಸೌಮಿತ್ರಾ ಖಾನ್ ಅವರ ಪತ್ನಿ ಸುಜಾತಾ ಮೊಂಡಾಲ್ ಖಾನ್ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಪಕ್ಷಕ್ಕೆ ಸೇರ್ಪಡೆಯಾಗುವ ಮೂಲಕ ಕಮಲ ಪಾಳಯಕ್ಕೆ ತೀವ್ರ ಮುಖಭಂಗಕ್ಕೆ ಈಡುಮಾಡಿದ್ದಾರೆ.

ಭಾನುವಾರ ಬಿಜೆಪಿಗೆ ಪಕ್ಷಾಂತರ ಮಾಡಿದ್ದ 9 ಜನ ಶಾಸಕರ ಪೈಕಿ ಐವರು ಟಿಎಂಸಿ ಪಕ್ಷದವರು. ಇನ್ನೂ ಟಿಎಂಸಿ ಪಕ್ಷದ ಪ್ರಬಲ ನಾಯಕ ಮಾಜಿ ಸಚಿವ ಸುವೆಂಧು ಅಧಿಕಾರಿ ಸಹ ಈ ಪಕ್ಷಾಂತರಿಗಳ ಪಟ್ಟಿಗಳಲ್ಲಿ ಸೇರ್ಪಡೆಯಾಗಿದ್ದು, ಟಿಎಂಸಿ ಪಾಲಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿತ್ತು. ಆದರೆ, ಈ ಬೆಳವಣಿಗೆಯ ಬೆನ್ನಿಗೆ ಬಂಗಾಳದ ಬಿಜೆಪಿ ನಾಯಕ ಸಂಸದ ಸೌಮಿತ್ರಾ ಖಾನ್ ಪತ್ನಿ ಟಿಎಂಸಿಗೆ ಸೇರ್ಪಡೆಯಾಗಿರುವುದು ಬಂಗಾಳದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲು ಮುಂದಾಗಿರುವ ಬಿಜೆಪಿ ಪಾಳಯಕ್ಕೆ ತೀವ್ರ ಮುಖಬಂಗ ಎಂದು ಬಣ್ಣಿಸಲಾಗುತ್ತಿದೆ.

ತೃಣಮೂಲ ಸಂಸದ ಸೌಗತಾ ರಾಯ್ ಮತ್ತು ವಕ್ತಾರ ಕುನಾಲ್ ಘೋಷ್ ಅವರ ಸಮ್ಮುಖದಲ್ಲಿ ಸುಜಾತಾ ಮಂಡಲ್ ಖಾನ್ ಟಿಎಂಸಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಟಿಎಂಸಿಗೆ ಸೇರಿದ ನಂತರ ಮಾಧ್ಯಮಗಳ ಎದುರು ಮಾತನಾಡಿರುವ ಸುಜಾತಾ ಮೊಂಡಾಲ್, “ನಾನು ರಾಜ್ಯದಲ್ಲಿ ಬಿಜೆಪಿ ಪಕ್ಷವನ್ನು ಬೆಳೆಸಲು ಸಾಕಷ್ಟು ಶ್ರಮವಹಿಸಿ ಕೆಲಸ ಮಾಡಿದ್ದೇನೆ. ಆದರೆ, ಸದ್ಯಕ್ಕೆ ಮೂಲ ಬಿಜೆಪಿಗರಿಗೇ ಪಕ್ಷದಲ್ಲಿ ಬೆಲೆ ಗೌರವ ಇಲ್ಲದಂತಾಗಿದೆ. ಇದೇ ಕಾರಣಕ್ಕಾಗಿ ನಾನು ಪಕ್ಷವನ್ನು ತ್ಯಜಿಸುತ್ತಿದ್ದೇನೆ. ಅಲ್ಲದೆ, ಓರ್ವ ಮಹಿಳೆಯಾಗಿ ನನಗೆ ಆ ಪಕ್ಷದಲ್ಲಿರುವುದು ಕಷ್ಟವಾಗುತ್ತಿದೆ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಪ.ಬಂಗಾಳದಲ್ಲಿ BJP ಎರಡಂಕಿ ದಾಟುವುದಿಲ್ಲ: ಒಂದು ವೇಳೆ ಗೆದ್ದರೆ ರಾಜಕೀಯ ತ್ಯಜಿಸುತ್ತೇನೆ- ಪ್ರಶಾಂತ್ ಕಿಶೋರ್

ಅಲ್ಲದೆ, “ಬಿಜೆಪಿ ಪಕ್ಷ ತೃಣಮೂಲ ಕಾಂಗ್ರೆಸ್​ನಲ್ಲಿರುವ ಎಲ್ಲಾ ರಾಜಕಾರಣಿಗಳನ್ನು ಪಕ್ಷಾಂತರದ ಹೆಸರಿನಲ್ಲಿ ಭ್ರಷ್ಟಗೊಳಿಸುತ್ತಿದೆ. ದೇಶದಲ್ಲಿ ಬಿಜೆಪಿಗೆ 6 ಮುಖ್ಯಮಂತ್ರಿ ಮತ್ತು 13 ಉಪ ಮುಖ್ಯಮಂತ್ರಿ ಮುಖಗಳಿಗೆ. ಆದರೆ, ಬಂಗಾಳದಲ್ಲಿ ಬಿಜೆಪಿ ಪಕ್ಷಕ್ಕೆ ಮುಖ್ಯಮಂತ್ರಿ ಮುಖ ಇಲ್ಲ. ಇಲ್ಲಿ ಮಮತಾ ಬ್ಯಾನರ್ಜಿ ಅವರ ವರ್ಚಸ್ಸನ್ನು ಬಿಜೆಪಿ ಏನೇ ಮಾಡಿದರು ಕುಗ್ಗಿಸಲು ಸಾಧ್ಯವಿಲ್ಲ. ಹೀಗಾಗಿ ಓರ್ವ ಮಹಿಳೆಯಾಗಿ ಮಮತಾ ಬ್ಯಾನರ್ಜಿ ಜೊತೆಗೆ ಕೆಲಸ ಮಾಡುವುದು ನನಗೆ ಗೌರವಾನ್ವಿತವಾದ ವಿಚಾರ ಎಂದು ನಾನು ಭಾವಿಸುತ್ತೇನೆ” ಎಂದು ಸುಜಾತಾ ಮಂಡಲ್ ಖಾನ್ ತಿಳಿಸಿದ್ದಾರೆ.

ಕಳೆದ ಲೋಕಸಭಾ ಚುನಾವಣೆಯಲ್ಲಿ 42 ಸ್ಥಾನಗಳ ಪೈಕಿ ಬಿಜೆಪಿ 18 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು. ಹೀಗಾಗಿ ವಿಧಾನಸಭಾ ಚುನಾವಣೆಯಲ್ಲೂ ಉತ್ತಮ ಫಲಿತಾಂಶದ ನಿರೀಕ್ಷೆಯಲ್ಲಿದೆ. ಆದರೆ, ಈ ಭಾರಿ ಬಿಜೆಪಿ ಪಶ್ಚಿಮ ಬಂಗಾಳದಲ್ಲಿ ಎರಡಂಕಿ ಸ್ಥಾನವನ್ನು ಗೆಲ್ಲಲು ಸಾಧ್ಯವಿಲ್ಲ ಎಂದು ಪ್ರಖ್ಯಾತ ರಾಜಕೀಯ ನಿಪುಣ ಪ್ರಶಾಂತ್​ ಕಿಶೋರ್​ ಸವಾಲು ಹಾಕಿರುವುದು ಸಹ ಬಂಗಾಳ ಚುನಾವಣೆ ಮೇಲೆ ಪ್ರಭಾವ ಬೀರಲಿದೆ ಎಂದು ಹೇಳಲಾಗುತ್ತಿದೆ. ಪ್ರಶಾಂತ್​ ಕಿಶೋರ್​ ಈ ಭಾರಿ ಬಂಗಾಳ ಚುನಾವಣೆಯಲ್ಲಿ ಟಿಎಂಸಿ ಪರ ಕೆಲಸ ಮಾಡುತ್ತಿದ್ದಾರೆ.


ಇದನ್ನೂ ಓದಿ:’ಮುಸ್ಲಿಮರು ಗೋಮಾಂಸ ತಿನ್ನಬೇಡಿ’ ಹೇಳಿಕೆಗೆ ಮಲಯಾಳಂನಲ್ಲಿ ಸ್ಪಷ್ಟನೆ ನೀಡಿದ ಸಿ.ಎಂ. ಇಬ್ರಾಹಿಂ!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕೋವಿಡ್ ಭ್ರಷ್ಟ ಸುಧಾಕರ್ ಪರವಾಗಿ ಮತ ಕೇಳಲು ಪ್ರಧಾನಿ ಮೋದಿ ಚಿಕ್ಕಬಳ್ಳಾಪುರಕ್ಕೆ ಬರುತ್ತಿದ್ದಾರೆ :...

0
ಪ್ರಧಾನಿ ಮೋದಿಯವರು ಹತ್ತು ವರ್ಷದಲ್ಲಿ ಕೊಟ್ಟ ಒಂದೂ ಆಶ್ವಾಸನೆಯನ್ನೂ ಈಡೇರಿಸದೆ ಭಾರತೀಯರ ನಂಬಿಕೆಗಳಿಗೆ ದ್ರೋಹ ಬಗೆದಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಾಗೇಪಲ್ಲಿಯಲ್ಲಿ ನಡೆದ ಪ್ರಜಾಧ್ವನಿ-2 ಬೃಹತ್ ಜನ ಸಮಾವೇಶದಲ್ಲಿ...