Homeಮುಖಪುಟಪಶ್ಚಿಮ ಬಂಗಾಳ ಉಪಚುನಾವಣೆ | ಆರ್‌ಜಿ ಕರ್ ಪ್ರತಿಭಟನೆ ಮೇಲೆ ಎಲ್ಲರ ಕಣ್ಣು

ಪಶ್ಚಿಮ ಬಂಗಾಳ ಉಪಚುನಾವಣೆ | ಆರ್‌ಜಿ ಕರ್ ಪ್ರತಿಭಟನೆ ಮೇಲೆ ಎಲ್ಲರ ಕಣ್ಣು

- Advertisement -
- Advertisement -

ಪಶ್ಚಿಮ ಬಂಗಾಳದಲ್ಲಿ ನವೆಂಬರ್ 13 ರಂದು ನಡೆಯಲಿರುವ ಉಪ ಚುನಾವಣೆಯ ಮೇಲೆ ದೇಶದ ಕಣ್ಣು ನೆಟ್ಟಿದೆ. ದೇಶದಾದ್ಯಂತ ಭಾರಿ ಸುದ್ದಿಯಾದ ಕೊಲ್ಕತ್ತಾದ ಆರ್‌ಜಿಕರ್ ಆಸ್ಪತ್ರೆಯಲ್ಲಿ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ನಂತರ ರಾಜ್ಯದಲ್ಲಿ ಭಾರಿ ಪ್ರತಿಭಟನೆ ನಡೆಯುತ್ತಿದ್ದು, ಹಾಗಾಗಿ ವಿಪಕ್ಷಗಳು ಈ ಚುನಾವಣೆಯಲ್ಲಿ ಲಾಭ ಪಡೆಯಲಿದೆ ಎಂದು ನಂಬಲಾಗಿದೆ. ಬಂಗಾಳ ಉಪಚುನಾವಣೆ

ಉಪ ಚುನಾವಣೆಯಲ್ಲಿ ಲಾಭ ಪಡೆಯಲು ಪ್ರಮುಖ ವಿಪಕ್ಷವಾದ ಬಿಜೆಪಿ ಸೇರಿದಂತೆ ಸಿಪಿಐ(ಎಂ) ಮತ್ತು ಕಾಂಗ್ರೆಸ್ ಕೂಡಾ ಲೆಕ್ಕಾಚಾರಗಳನ್ನು ಮಾಡುತ್ತಿವೆ. ಒಟ್ಟು ಆರು ಕ್ಷೇತ್ರಗಳಲ್ಲಿ 2021ರ ಚುನಾವಣೆ ವೇಳೆ ಬಿಜೆಪಿ 1 ಕ್ಷೇತ್ರವನ್ನು ಗೆದ್ದಿದ್ದರೆ, ಉಳಿದ ಐದು ಕ್ಷೇತ್ರಗಳಲ್ಲಿ ಆಡಳಿತರೂಢ ಟಿಎಂಸಿ ಗೆದ್ದುಕೊಂಡಿತ್ತು. ಎಲ್ಲಾ ಹಾಲಿ ಶಾಸಕರು ಈ ವರ್ಷದ ಲೋಕಸಭೆ ಚುನಾವಣೆಯಲ್ಲಿ ಸಂಸತ್ತಿಗೆ ಆಯ್ಕೆಯಾದ ಕಾರಣ ಕ್ಷೇತ್ರಗಳು ತೆರವುಗೊಂಡಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

2021ರಲ್ಲಿ ಸಿತಾಯಿ (ಎಸ್‌ಸಿ-ಮೀಸಲು), ನೈಹತಿ, ಹರೋವಾ, ಮೇದಿನಿಪುರ್ ಮತ್ತು ತಲ್ದಂಗ್ರಾ ವಿಧಾನಸಭಾ ಕ್ಷೇತ್ರಗಳಲ್ಲಿ ಟಿಎಂಸಿಯ ಅಭ್ಯರ್ಥಿಗಳು ಗೆದ್ದಿದ್ದರೆ, ಬಿಜೆಪಿ ಮದರಿಹತ್ (ಎಸ್‌ಟಿ) ಕ್ಷೇತ್ರದಲ್ಲಿ ಜಯಗಳಿಸಿತ್ತು. ಟಿಎಂಸಿ ಗೆದ್ದಿರುವ ನಾಲ್ಕು ಕ್ಷೇತ್ರಗಳಲ್ಲಿ ಬಿಜೆಪಿ 2ನೇ ಸ್ಥಾನದಲ್ಲಿದ್ದರೆ, ಬಿಜೆಪಿ ಗೆದ್ದ ಮದರಿಹತ್‌ ಕ್ಷೇತ್ರದಲ್ಲಿ ಟಿಎಂಸಿ ಎರಡನೇ ಸ್ಥಾನದಲ್ಲಿದೆ. ಬಂಗಾಳ ಉಪಚುನಾವಣೆ

“ಆರ್ ಜಿ ಕರ್ ಅತ್ಯಾಚಾರ ಮತ್ತು ಕೊಲೆಯ ನಂತರ ಇದು ಮೊದಲ ಚುನಾವಣೆ. ನೀವು ಸೇಡು ತೀರಿಸಿಕೊಳ್ಳಲು ಬಯಸುವುದಿಲ್ಲವೇ?” ಎಂದು ವಿರೋಧ ಪಕ್ಷದ ನಾಯಕ ಮತ್ತು ಬಿಜೆಪಿ ನಾಯಕ ಸುವೇಂದು ಅಧಿಕಾರಿ ಮತದಾರರಿಗೆ ಹೇಳುತ್ತಿದ್ದಾರೆ. ಆಸ್ಪತ್ರೆಯ ದಾಳಿಯ ಸಂತ್ರಸ್ತರಿಗೆ ನ್ಯಾಯವನ್ನು ಖಚಿತಪಡಿಸಿಕೊಳ್ಳಲು ಪಶ್ಚಿಮ ಬಂಗಾಳದಲ್ಲಿ ಸರ್ಕಾರ ಬದಲಾವಣೆಯೊಂದೇ ಮಾರ್ಗವಾಗಿದೆ ಎಂದು ಅವರು ಪ್ರತಿಪಾದಿಸುತ್ತಿದ್ದಾರೆ.

ಬಿಜೆಪಿಯು ಚುನಾವಣೆಗೆ ಯಾವುದೇ ಸಂಬಂಧವಿಲ್ಲದ ವಿಷಯಗಳನ್ನು ಎಳೆದು ತರುತ್ತಿದೆ ಎಂದು ಟಿಎಂಸಿ ನಾಯಕ ಕುನಾಲ್ ಘೋಷ್ ಆರೋಪಿಸಿದ್ದಾರೆ. “ಅಭಿವೃದ್ಧಿ ವಿಚಾರದ ಮೇಲೆ ವಿಧಾನಸಭೆ ಚುನಾವಣೆ ನಡೆಯಲಿದೆ. ಯಾರು ಅಭಿವೃದ್ಧಿಯನ್ನು ಖಾತ್ರಿಪಡಿಸುತ್ತಾರೆ ಎಂಬುದನ್ನು ಜನರು ನೋಡುತ್ತಾರೆ ಮತ್ತು ಅದಕ್ಕೆ ಅನುಗುಣವಾಗಿ ಮತ ಚಲಾಯಿಸುತ್ತಾರೆ” ಎಂದು ಘೋಷ್ ಹೇಳಿದ್ದಾರೆ.

“ಬಿಜೆಪಿ ಅತ್ಯಾಚಾರ ಪ್ರಕರಣವನ್ನು ಮುನ್ನಲೆಗೆ ತಂದರೆ ಟಿಎಂಸಿ ಉತ್ತರ ಪ್ರದೇಶದ ಉನ್ನಾವ್ ಮತ್ತು ಹತ್ರಾಸ್ ಹಾಗೂ ಮಧ್ಯಪ್ರದೇಶ, ಗುಜರಾತ್‌ನಲ್ಲಿ ನಡೆದ ಇತರ ಲೈಂಗಿಕ ದೌರ್ಜನ್ಯದ ಘಟನೆಗಳನ್ನು ಸಹ ಪ್ರತಿಯಾಗಿ ಎತ್ತಬಹುದಲ್ಲವೆ, ಇವೆಲ್ಲವೂ ಬಿಜೆಪಿ ಆಡಳಿತವಿರುವ ರಾಜ್ಯಗಳು. ವಾಸ್ತವವೆಂದರೆ ಬಿಜೆಪಿಗೆ ತಾವು ಗೆಲ್ಲುವುದಿಲ್ಲ ಎಂದು ತಿಳಿದಿದೆ. ಹಾಗಾಗಿ ಆರ್ ಜಿ ಕರ್ ಬಗ್ಗೆ ಕೂಗಾಡುತ್ತಿದ್ದಾರೆ” ಎಂದು ಘೋಷ್ ಹೇಳಿದ್ದಾರೆ.

ಉಪ ಚುನಾವಣೆ ನಡೆಯುತ್ತಿರುವ ಆರು ಕ್ಷೇತ್ರಗಳಲ್ಲಿ ಐದು ಕ್ಷೇತ್ರಗಳನ್ನು 2021 ಟಿಎಂಸಿ ಗೆದ್ದಿದ್ದು ಮಾತ್ರವಲ್ಲದೆ, ಈ ವರ್ಷ ನಡೆದ ಲೋಕಸಭಾ ಚುನಾವಣೆಯಲ್ಲಿ ಕೂಡಾ ಹೆಚ್ಚಿನ ಕ್ಷೇತಗಳಲ್ಲಿ ಪ್ರಾಬಲ್ಯ ಮೆರೆದಿತ್ತು. ಅದಾಗ್ಯೂ, ಮದರಿಹತ್ ಮತ್ತು ಮೇದಿನಿಪುರದ ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ ಮಾತ್ರ ಬಿಜೆಪಿ ಕ್ರಮವಾಗಿ 9,000 ಮತ್ತು 11,000 ಮತಗಳಿಂದ ಮುಂದಿದೆ.

ಹಾಗಾಗಿ ಒಂದು ತಿಂಗಳ ಕಾಲ ನಡೆದ ಆರ್‌ಜಿ ಕಾರ್‌ ಪ್ರತಿಭಟನೆಯ ಕಾರಣಕ್ಕೆ ಮೇದಿನಿಪುರ ಮತ್ತು ಮದರಿಹತ್‌ನಲ್ಲಿ ಪಕ್ಷವೂ ಗೆಲ್ಲಬಹುದು ಎಂದು ಬಿಜೆಪಿ ಬಿಜೆಪಿ ಆಶಿಸುತ್ತಿದೆ. ಆದರೆ ಈ ಲೆಕ್ಕಾಚಾರವನ್ನು ಟಿಎಂಸಿ ನಿರಾಕರಿಸಿದೆ. ನಮ್ಮ ಮತ ಬ್ಯಾಂಕ್ ಹಾಗೆ ಉಳಿದಿದೆ ಎಂದ ಹೇಳುವ ಪಕ್ಷವೂ, ಉಪ ಚುನಾವಣೆಗಳಲ್ಲಿ ಯಾವತ್ತೂ ಆಡಳಿತರೂಢ ಪಕ್ಷಕ್ಕೆ ಹೆಚ್ಚಿನ ಲಾಭವಾಗಿದೆ ಎಂದು ಪ್ರತಿಪಾದಿಸಿದೆ.

ಭ್ರಷ್ಟಾಚಾರದ ಆರೋಪಗಳ ವಿರುದ್ಧ ಹೋರಾಡುತ್ತಿರುವ ಟಿಎಂಸಿಯು ಉಪಚುನಾವಣೆಗೆ ಜನಪ್ರಿಯ ಶುದ್ಧಹಸ್ತ ಎಂದು ತೋರುವ ಸ್ಥಳೀಯ ಮುಖಗಳನ್ನು ಕಣಕ್ಕಿಳಿಸಿದೆ. ಬಿಜೆಪಿ ಕೂಡಾ ಸ್ಥಳೀಯ ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದು, ಅದರಲ್ಲೂ ಇಬ್ಬರು ಅಭ್ಯರ್ಥಿಗಳು ಎಡಪಕ್ಷಗಳಿಂದ ಬಿಜೆಪಿಗೆ ಸೇರಿದವರಾಗಿದ್ದಾರೆ.

ಎರಡು ಪಕ್ಷಗಳು ಭಾರಿ ಪ್ರಚಾರ ಮಾಡುತ್ತಿದ್ದು, ಸಚಿವರಾದ ಸುಜಿತ್ ಬೋಸ್, ಫಿರ್ಹಾದ್ ಹಕೀಮ್ ಮತ್ತು ಚಂದ್ರಿಮಾ ಭಟ್ಟಾಚಾರ್ಯರಂತಹ ಟಿಎಂಸಿ ನಾಯಕತ್ವವು ಪ್ರಚಾರವನ್ನು ಮುನ್ನಡೆಸುತ್ತಿದ್ದಾರೆ. ಅವರು ಟಿಎಂಸಿ ಸರ್ಕಾರದ ಜನಪ್ರಿಯ ಕಲ್ಯಾಣ ಯೋಜನೆಗಳಾದ ಲಕ್ಷ್ಮೀರ್ ಭಂಡಾರ್, ಕನ್ಯಾಶ್ರೀ, ಯುವಶ್ರೀ ಇತ್ಯಾದಿಗಳನ್ನು ಮುಂದಿಟ್ಟು ಪ್ರಚಾರ ಮಾಡುತ್ತಿದ್ದಾರೆ.

ಬಿಜೆಪಿ ಕಡೆಯಿಂದ, ಪ್ರಮುಖವಾಗಿ ಸುವೆಂಧು ಅಧಿಕಾರಿಯೆ ಮತ್ತೊಮ್ಮೆ ಪ್ರಚಾರದ ಪ್ರಮುಖ ಮುಖವಾಗಿದ್ದು, ಅವರು ರಾಜ್ಯಾಧ್ಯಕ್ಷ ಸುಕಾಂತ ಮಜುಂದಾರ್ ಅವರೊಂದಿಗೆ ಪ್ರಚಾರ ಕೈಗೊಳ್ಳುತ್ತಿದ್ದಾರೆ. ಟಿಎಂಸಿ ಸರ್ಕಾರದ ಅಡಿಯಲ್ಲಿ ಹೆಚ್ಚುತ್ತಿರುವ ಭ್ರಷ್ಟಾಚಾರ ಮತ್ತು ಹದಗೆಟ್ಟ ಕಾನೂನು ಮತ್ತು ಸುವ್ಯವಸ್ಥೆ ಅವರ ಪ್ರಮುಖ ಚುನಾವಣಾ ವಿಷಯವಾಗಿದೆ.

ಮತ್ತೊಂದೆಡೆ, ಎಡಪಕ್ಷಗಳು ಮತ್ತು ಕಾಂಗ್ರೆಸ್ ತಮ್ಮ ಮೈತ್ರಿಯನ್ನು ಒಟ್ಟಿಗೆ ಹಿಡಿದಿಟ್ಟುಕೊಳ್ಳುವುದರಲ್ಲಿ ವಿಫಲವಾಗಿರುವುದು ಸೇರಿದಂತೆ ಉಪಚುನಾವಣೆಗೆ ನೀರಸವಾಗಿ ಸಿದ್ಧವಾಗಿದೆ. ಉಪ ಚುನಾವಣೆ ನಡೆಯಲಿರುವ ಐದು ಕ್ಷೇತ್ರಗಳಲ್ಲಿ ಎಡರಂಗದ ಅಭ್ಯರ್ಥಿಗಳಿದ್ದರೆ, ಆರನೇ ಕ್ಷೇತ್ರದಲ್ಲಿ ತಮ್ಮ ಮಿತ್ರಪಕ್ಷವಾದ ಇಂಡಿಯನ್ ಸೆಕ್ಯುಲರ್ ಫ್ರಂಟ್ ಅಭ್ಯರ್ಥಿಯನ್ನು ಬೆಂಬಲಿಸುತ್ತಿದೆ. ಈ ಎಲ್ಲ ಆರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪ್ರತ್ಯೇಕವಾಗಿ ಸ್ಪರ್ಧಿಸುತ್ತಿದೆ.

2021ರ ವಿಧಾನಸಭಾ ಚುನಾವಣೆಯಲ್ಲಿ ಎಡಪಕ್ಷಗಳು ಮತ್ತು ಕಾಂಗ್ರೆಸ್ ಒಟ್ಟಿಗೆ ಸ್ಪರ್ಧಿಸಿದ್ದರೂ ಒಂದೇ ಒಂದು ಅಸೆಂಬ್ಲಿ ಸ್ಥಾನವನ್ನು ಗೆಲ್ಲಲು ವಿಫಲವಾಗಿತ್ತು. ಈ ಮೈತ್ರಿಯ ಅಭ್ಯರ್ಥಿಗಳು ಸೀತಾಯ್‌ನಲ್ಲಿ 1.66%, ನೈಹಾಟಿಯಲ್ಲಿ 10.11%, ಮೆದಿನಿಪುರದಲ್ಲಿ 5.43%, ತಲ್ದಂಗ್ರಾದಲ್ಲಿ 11.41% ಮತ್ತು ಮದಾರಿಹತ್‌ನಲ್ಲಿ 4.24% ಮತಗಳನ್ನು ಪಡೆದಿದ್ದರು.

ತಮ್ಮ ಅಭ್ಯರ್ಥಿಗಳು ಬಿಜೆಪಿ ಅಥವಾ ಟಿಎಂಸಿ ಅಭ್ಯರ್ಥಿಗಳಂತೆ ಗೋಚರಿಸದಿರಬಹುದು. ಆದರೆ ಪಕ್ಷವೂ ಮನೆ-ಮನೆ ಪ್ರಚಾರದ ಮೇಲೆ ಕೇಂದ್ರೀಕರಿಸುತ್ತಿದೆ ಎಂದು ಎಡಪಕ್ಷಗಳ ನಾಯಕರು ಹೇಳಿದ್ದಾರೆ. ಹಿರಿಯ ಸಿಪಿಐ(ಎಂ) ನಾಯಕರೊಬ್ಬರು ಮಾತನಾಡಿ, “ನಾವು ಗೆಲ್ಲುವುದಿಲ್ಲ ಎಂದು ನಮಗೆ ತಿಳಿದಿದೆ. ಆದರೆ ಆರ್ ಜಿ ಕಾರ್ ಚಳುವಳಿಯ ನಂತರ ನಮ್ಮ ಮತಗಳ ಶೇಕಡಾವಾರು ಏರಿಕೆಯಾಗಿದೆಯೇ ಎಂದು ನಾವು ನೋಡಬೇಕಾಗಿದೆ.” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಮಾಲೆಗಾಂವ್ ಸ್ಫೋಟ ಪ್ರಕರಣ | ಶಂಕಿತ ಭಯೋತ್ಪಾದಕಿ ಪ್ರಜ್ಞಾ ಠಾಕೂರ್‌ ವಿರುದ್ಧ ವಾರೆಂಟ್

ಮಾಲೆಗಾಂವ್ ಸ್ಫೋಟ ಪ್ರಕರಣ | ಶಂಕಿತ ಭಯೋತ್ಪಾದಕಿ ಪ್ರಜ್ಞಾ ಠಾಕೂರ್‌ ವಿರುದ್ಧ ವಾರೆಂಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...