Homeಮುಖಪುಟಉಪಚುನಾವಣೆ: ಬಂಗಾಳದಲ್ಲಿ ದೀದಿ ಪಾರಮ್ಯ, ಒಂದು ಕ್ಷೇತ್ರದಲ್ಲಿ ಗೆಲುವು ಮತ್ತು ಎರಡರಲ್ಲಿ ಟಿಎಂಸಿ ಮುನ್ನಡೆ...

ಉಪಚುನಾವಣೆ: ಬಂಗಾಳದಲ್ಲಿ ದೀದಿ ಪಾರಮ್ಯ, ಒಂದು ಕ್ಷೇತ್ರದಲ್ಲಿ ಗೆಲುವು ಮತ್ತು ಎರಡರಲ್ಲಿ ಟಿಎಂಸಿ ಮುನ್ನಡೆ…

- Advertisement -
- Advertisement -

ಪಶ್ಚಿಮ ಬಂಗಾಳದ ಮೂರು ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯ ಮತ ಎಣಿಕೆ ಕಾರ್ಯ ಪ್ರಗತಿಯಲ್ಲಿದ್ದು ಬಂಗಾಗದ ಕಾಳಿಯಗಂಜ್‌ ಕ್ಷೆತ್ರದಲ್ಲಿ ಟಿಎಂಸಿಯ ತಪನ್‌ ದೇವ್‌ ಸಿಂಗಾರವರು ಜಯಗಳಿಸಿದ್ದಾರೆ. ಈ ಕ್ಷೇತ್ರವನ್ನು ಮೊದಲು ಕಾಂಗ್ರೆಸ್‌ ಪ್ರತಿನಿಧಿಸುತ್ತಿತ್ತು.

ಉಳಿದ ಇನ್ನೆರಡು ಕ್ಷೇತ್ರಗಳಲ್ಲಿಯೂ ಕೂಡ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಪಕ್ಷವೇ ಮುನ್ನಡೆ ಕಾಯ್ದುಕೊಂಡಿದೆ. ಕರೀಂಪುರ್‌ ನಲ್ಲಿ ಟಿಎಂಸಿ 25 ಸಾವಿರಕ್ಕೂ ಹೆಚ್ಚು ಮತಗಳ ಮುನ್ನಡೆ ಸಾಧಿಸಿದರೆ ಖರಗ್‌ಪುರ್‌ ಸದರ್‌ನಲ್ಲಿ 17ಸಾವಿರಕ್ಕೂ ಹೆಚ್ಚು ಮತಗಳ ಮುನ್ನಡೆಯನ್ನು ಟಿಎಂಸಿ ಕಾಯ್ದುಕೊಂಡಿದ್ದು ಅಲ್ಲಿಯೂ ಸಹ ಗೆಲುವಿನ ಸನಿಹದಲ್ಲಿದೆ.

ಬಂಗಾಳದ ಮೂರು ಕ್ಷೇತ್ರಗಳಲ್ಲಿ ನಡೆದ ಉಪಚುನಾವಣೆಯಲ್ಲಿ ಮೂರು ಕ್ಷೇತ್ರಗಳಲ್ಲಿಯೂ ಟಿಎಂಸಿ, ಕಾಂಗ್ರೆಸ್‌ ಮತ್ತು ಬಿಜೆಪಿ ತಲಾ ಒಂದೊಂದು ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದವು. ಈಗ ಆ ಮೂರು ಕ್ಷೇತ್ರಗಳು ಟಿಎಂಸಿ ಪಾಲಾಗಲಿವೆ.

ಇನ್ನೊಂದೆಡೆ ಉತ್ತರಖಂಡ ರಾಜ್ಯದ ಪಿತ್ರೋಘರ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯ ಮತ ಎಣಿಕೆ ಸಹ ನಡೆದಯುತ್ತಿದ್ದು ಬಿಜೆಪಿಯು 2500 ಮತಗಳಿಂದ ಮುನ್ನಡೆ ಸಾಧಿಸಿದ್ದು ಕಾಂಗ್ರೆಸ್‌ ಎರಡನೇ ಸ್ಥಾನದಲ್ಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....