Homeಚಳವಳಿರೈತ ಹೋರಾಟಕ್ಕೆ ಬೆಂಬಲ ಸೂಚಿಸಿದ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ರೈತ ಹೋರಾಟಕ್ಕೆ ಬೆಂಬಲ ಸೂಚಿಸಿದ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

- Advertisement -
- Advertisement -

ವಿವಾದಿತ ಕೃಷಿ ಕಾನೂನುಗಳ ವಿರುದ್ಧ ನಡೆಯುತ್ತಿರುವ ಆಂದೋಲನಕ್ಕೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬೆಂಬಲ ನೀಡಿದ್ದಾರೆ. ಭಾರತೀಯ ಕಿಸಾನ್ ಯೂನಿಯನ್ ಮುಖಂಡರಾದ ರಾಕೇಶ್ ಟಿಕಾಯತ್ ಮತ್ತು ಯುಧ್ವೀರ್ ಸಿಂಗ್ ನೇತೃತ್ವದಲ್ಲಿ ರೈತ ಮುಖಂಡರೊಂದಿಗೆ ಸಭೆ ನಡೆಸಿ ಭರವಸೆ ನೀಡಿದ್ದಾರೆ.

ಬುಧವಾರ ರೈತ ಮುಖಂಡರೊಂದಿಗೆ ನಡೆದ ಸಭೆಯಲ್ಲಿ, ನೀತಿ ವಿಷಯಗಳ ಬಗ್ಗೆ ರಾಜ್ಯಗಳು ಸಂವಾದ ನಡೆಸುವ ವೇದಿಕೆ ಇರಬೇಕು ಎಂದು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ.

ರೈತ ಮುಖಂಡರ ಸಭೆಯ ನಂತರ ಸುದ್ಧಿಗಾರರೊಂದಿಗೆ ಮಾತನಾಡಿದ ಮಮತಾ ಬ್ಯಾನರ್ಜಿ “ರೈತರ ಆಂದೋಲನಕ್ಕೆ ನನ್ನ ಬೆಂಬಲವಿದೆ” ಎಂದು ಘೋಷಿಸಿದ್ದಾರೆ. “ಭಾರತವು ಕೊರೊನಾ ವಿರುದ್ಧ ಹೋರಾಡಲು, ರೈತರಿಗೆ ಮತ್ತು ಉದ್ಯಮಗಳಿಗೆ ಸಹಾಯ ಮಾಡುವ ನೀತಿಗಳಿಗಾಗಿ ಹಸಿವಿನಿಂದ ಕಾಯುತ್ತಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ರೈತ ಹೋರಾಟ ತೀವ್ರಗೊಳಿಸಲು ನಿರ್ಧಾರ: ಮಮತಾ ಬ್ಯಾನರ್ಜಿ ಭೇಟಿಯಾಗಲಿರುವ ರಾಕೇಶ್‌ ಟಿಕಾಯತ್‌

ರೈತರೊಂದಿಗೆ ಮಾತನಾಡಲು ಏಕೆ ಸರ್ಕಾರಕ್ಕೆ ತುಂಬಾ ಕಷ್ಟವಾಗುತ್ತಿದೆ? ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪ್ರಶ್ನಿಸಿದ್ದಾರೆ. ಸಂಸತ್ತು ಅಂಗೀಕರಿಸಿದ ಮೂರು ವಿವಾದಿತ ಕೃಷಿ ಕಾನೂನುಗಳ ವಿರುದ್ಧ ಕಳೆದ 6 ತಿಂಗಳಿನಿಂದ ದೆಹಲಿಯ ಗಡಿಯಲ್ಲಿ ಪ್ರತಿಭಟನೆ ಮಾಡುತ್ತಿರುವ ರೈತರೊಂದಿಗೆ ಕೇಂದ್ರ ಸರ್ಕಾರ ಸಂವಹನ ನಡೆಸಲು ಹಿಂದೆ ಸರಿಯುತ್ತಿರುವ ಬಗ್ಗೆ ಉಲ್ಲೇಖಿಸಿದ್ದಾರೆ.

ಈ ವಿವಾದಿತ ಕೃಷಿ ಕಾನೂನುಗಳು ಸಣ್ಣ ರೈತರಿಗೆ ರಕ್ಷಣೆ ನೀಡದೆ ಕೃಷಿಯನ್ನು ವ್ಯಾಪಾರೀಕರಿಸುತ್ತವೆ. ಇದರಿಂದ ರೈತರು ದೊಡ್ಡ ದೊಡ್ಡ ವ್ಯಾಪಾರಿಗಳು ಮತ್ತು ಕೈಗಾರಿಕೆಗಳ ಶೋಷಣೆಗೆ ಒಳಗಾಗುತ್ತಾರೆ ಎಂದು ರೈತ ಪ್ರತಿಭಟನಾಕಾರರು ಅಭಿಪ್ರಾಯಪಟ್ಟಿದ್ದಾರೆ.

“ಬಿಜೆಪಿ ನಿಯಮಗಳು ಆರೋಗ್ಯ ರಕ್ಷಣೆಯಿಂದ ಹಿಡಿದು ರೈತರವರೆಗೆ, ಎಲ್ಲ ಉದ್ಯಮಗಳಿಗೆ, ಎಲ್ಲ ಕ್ಷೇತ್ರಗಳಿಗೆ ಹಾನಿಕಾರಕವಾಗಿದೆ. ಇದರಿಂದ ಭಾರತವು ಬಳಲುತ್ತಿದೆ. ನಾವು ನೈಸರ್ಗಿಕ ಮತ್ತು ರಾಜಕೀಯ ವಿಪತ್ತು ಎರಡನ್ನು ಎದುರಿಸುತ್ತಿದ್ದೇವೆ” ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

“ರೈತರ ಚಳುವಳಿ ಕೇವಲ ಪಂಜಾಬ್, ಹರಿಯಾಣ ಅಥವಾ ಉತ್ತರ ಪ್ರದೇಶಗಳಿಗೆ ಮಾತ್ರ ಸೀಮಿತವಲ್ಲ, ಅದು ಇಡೀ ದೇಶಕ್ಕೆ ಸಂಬಂಧಿಸಿದೆ. ನೀತಿ ರೂಪಿಸುವ ವಿಷಯಗಳ ಬಗ್ಗೆ ಚರ್ಚಿಸಲು ಮತ್ತು ಅನ್ಯಾಯದ ವಿರುದ್ಧ ಒಟ್ಟಾಗಿ ನಿಲ್ಲಲು ರಾಜ್ಯಗಳು ಒಗ್ಗೂಡುವುದು ಅಗತ್ಯವಾಗಿದೆ ಎಂದು ಅಭಿಪ್ರಾಯ ಪಟ್ಟಿದ್ದಾರೆ.

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೂ ಮುನ್ನ ರೈತ ಮುಖಂಡ ರಾಕೇಶ್ ಟಿಕಾಯತ್ ಮತ್ತು ಯುಧ್ವೀರ್ ಸಿಂಗ್ ನೇತೃತ್ವದಲ್ಲಿ ಭಾರತೀಯ ಕಿಸಾನ್ ಯೂನಿಯನ್ ‘ಬಿಜೆಪಿಗೆ ಮತ ನೀಡಬೇಡಿ’ ಎಂಬ ಅಭಿಯಾನವನ್ನು ನಡೆಸಿತ್ತು.

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಚುನಾವಣಾ ಬಾಂಡ್‌ ಹಗರಣ: ಸುಪ್ರೀಂ ಮೇಲ್ವಿಚಾರಣೆಯಲ್ಲಿ ಎಸ್‌ಐಟಿ ತನಿಖೆಗೆ ಮನವಿ

0
ಚುನಾವಣಾ ಬಾಂಡ್‌ಗಳ ಮೂಲಕ ರಾಜಕೀಯ ಪ್ರೇರಿತ ಹಣಕಾಸು ವ್ಯವಹಾರದಲ್ಲಿ ತೊಡಗಿಸಿಕೊಂಡಿರುವ ಶಂಕಿತ ಹಗರಣದ ಕುರಿತು ನ್ಯಾಯಾಲಯದ ಮೇಲ್ವಿಚಾರಣೆಯ ವಿಶೇಷ ತನಿಖಾ ತಂಡ (ಎಸ್‌ಐಟಿ) ತನಿಖೆಗೆ ಒತ್ತಾಯಿಸಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿದೆ ಎಂದು...