Homeಮುಖಪುಟ’ನಂದಿಗ್ರಾಮ್ ದಿವಸ್’: ರಾಜಕೀಯ ಹಿಂಸಾಚಾರದಲ್ಲಿ ಮೃತಪಟ್ಟವರಿಗೆ ಮಮತಾ ಬ್ಯಾನರ್ಜಿ ಗೌರವ

’ನಂದಿಗ್ರಾಮ್ ದಿವಸ್’: ರಾಜಕೀಯ ಹಿಂಸಾಚಾರದಲ್ಲಿ ಮೃತಪಟ್ಟವರಿಗೆ ಮಮತಾ ಬ್ಯಾನರ್ಜಿ ಗೌರವ

ನಂದಿಗ್ರಾಮದಲ್ಲಿ ಭೂಸ್ವಾಧೀನ ವಿರುದ್ಧ ಬೀದಿಗಿಳಿದಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ನಡೆಸಿದ ಗುಂಡಿನ ದಾಳಿಯಲ್ಲಿ ಹದಿನಾಲ್ಕು ಜನರು ಸಾವನ್ನಪ್ಪಿದ್ದರು.

- Advertisement -
- Advertisement -

ಮಂಗಳವಾರ ನಡೆದ 13 ನೇ ‘ನಂದಿಗ್ರಾಮ್ ದಿವಸ್’ ಸಂದರ್ಭದಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿಶ್ವದಾದ್ಯಂತ ರಾಜಕೀಯ ಹಿಂಸಾಚಾರದಲ್ಲಿ ಪ್ರಾಣ ಕಳೆದುಕೊಂಡ ಎಲ್ಲರಿಗೂ ಗೌರವ ನಮನ ಸಲ್ಲಿಸಿದ್ದಾರೆ.

ಹಿಂದಿನ ಎಡಪಂಥೀಯ ಆಡಳಿತದ ಅವಧಿಯಲ್ಲಿ ಪುರ್ಬಾ ಮದಿನಿಪುರ ಜಿಲ್ಲೆಯ ನಂದಿಗ್ರಾಮ್‌ನಲ್ಲಿ ನಡೆದ ಹತ್ಯೆಗಳನ್ನು “ಹೊಸ ಬೆಳಕಿನ ಹೆಸರಿನಲ್ಲಿ ನಡೆದ ಅನಾಗರಿಕ ಹತ್ಯಾಕಾಂಡ” ಎಂದು ಮುಖ್ಯಮಂತ್ರಿ ಬಣ್ಣಿಸಿದ್ದಾರೆ.

ಇದನ್ನೂ ಓದಿ: ಪಶ್ಚಿಮ ಬಂಗಾಳದ ವೈಭವ ಮರುಸ್ಥಾಪಿಸುವ ಅಗತ್ಯವಿದೆ: ಗೃಹ ಸಚಿವ ಅಮಿತ್ ಶಾ

“ಇಂದು ನಂದಿಗ್ರಾಮ್ ದಿವಸ್ – ಹೊಸ ಬೆಳಕು ಮೂಡಿಸುವ ಹೆಸರಿನಲ್ಲಿ ನಡೆದ ಅನಾಗರಿಕ ಹತ್ಯಾಕಾಂಡದ 13 ನೇ ವಾರ್ಷಿಕೋತ್ಸವ. ಪ್ರಪಂಚದಾದ್ಯಂತದ ರಾಜಕೀಯ ಹಿಂಸಾಚಾರದಿಂದ ಪ್ರಾಣ ಕಳೆದುಕೊಂಡ ಎಲ್ಲರಿಗೂ ನನ್ನ ಗೌರವ. ಶಾಂತಿ ಯಾವಾಗಲೂ ಗೆಲ್ಲಬೇಕು, ”ಎಂದು ಮಮತಾ ಬ್ಯಾನರ್ಜಿ ಟ್ವೀಟ್ ಮಾಡಿದ್ದಾರೆ.

2007ರ ಜನವರಿಯಲ್ಲಿ, ಎಡಪಂಥೀಯ ಆಡಳಿತದ ಸರ್ಕಾರವು ಪ್ರಸ್ತಾಪಿಸಿದ ವಿಶೇಷ ಆರ್ಥಿಕ ವಲಯ (ಎಸ್‌ಇ ಝಡ್) ವಿರುದ್ಧ ಮಮತಾ ಬ್ಯಾನರ್ಜಿಯ ತೃಣಮೂಲ ಕಾಂಗ್ರೆಸ್ (ಟಿಎಂಸಿ) ನೇತೃತ್ವದಲ್ಲಿ ನಂದಿಗ್ರಾಮ್‌ನ ರೈತರು ತೀವ್ರ ಪ್ರತಿಭಟನೆ ನಡೆಸಿದ್ದರು.

PC: Outlook India

ಮಾರ್ಚ್ 14, 2007 ರಂದು ನಂದಿಗ್ರಾಮದಲ್ಲಿ ಭೂಸ್ವಾಧೀನ ವಿರುದ್ಧ ಬೀದಿಗಿಳಿದಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ನಡೆಸಿದ ಗುಂಡಿನ ದಾಳಿಯಲ್ಲಿ ಹದಿನಾಲ್ಕು ಜನರು ಸಾವನ್ನಪ್ಪಿದ್ದರು. ಮತ್ತೆ 2007 ರಲ್ಲೇ ಈ ದಿನ ಪೊಲೀಸರು ಮತ್ತುರೈತರ ನಡುವಿನ ಘರ್ಷಣೆಯಲ್ಲಿ ಹಲವಾರು ಜನರು ಮೃತಪಟ್ಟಿದ್ದರು.

ಭೂಸ್ವಾಧೀನ ವಿರೋಧಿ ಆಂದೋಲನವು ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಕಾರಣವಾಯಿತು. 2009 ರ ಲೋಕಸಭಾ ಚುನಾವಣೆಯಲ್ಲಿ ಟಿಎಂಸಿ 19 ಸ್ಥಾನಗಳನ್ನು ಗೆದ್ದುಕೊಂಡಿತು ಮತ್ತು 2011 ರ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಎಡರಂಗದಿಂದ ಅಧಿಕಾರವನ್ನು ಪಡೆದುಕೊಂಡಿತು.

2012 ರಿಂದಲೂ ತೃಣಮೂಲ ಕಾಂಗ್ರೆಸ್ ಪ್ರತಿವರ್ಷ ಈ ದಿನವನ್ನು “ನಂದಿಗ್ರಾಮ್ ದಿವಸ್” ಎಂದು ಆಚರಿಸುತ್ತದೆ. ಜೊತೆಗೆ ನಂದಿಗ್ರಾಮದಲ್ಲಿ ಮಾರ್ಚ್ 14 ರಂದು ಗೋಲಿಬಾರ್‌ನಲ್ಲಿ ಹತ್ಯೆಯಾದ 14 ರೈತರ ನೆನಪಲ್ಲಿ ಟಿಎಂಸಿ ಪ್ರತಿವರ್ಷ ‘ಕೃಷಿಕ್ ದಿವಸ್’ ಎಂದು ಆಚರಿಸುತ್ತದೆ.


ಇದನ್ನೂ ಓದಿ: ಪಶ್ಚಿಮ ಬಂಗಾಳದ ನಿರುದ್ಯೋಗ ದರ, ದೇಶದ ಒಟ್ಟು ನಿರುದ್ಯೋಗ ದರಕ್ಕಿಂತ ಉತ್ತಮ: ಮಮತಾ ಬ್ಯಾನರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...