ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯ ಬೆಲ್ದಂಗಾ ಪಟ್ಟಣದಲ್ಲಿ ಶುಕ್ರವಾರ ರಾತ್ರಿ ಹಿಂದೂ ಮತ್ತು ಮುಸ್ಲಿಂ ಗುಂಪುಗಳ ನಡುವೆ ಘರ್ಷಣೆಗಳು ಭುಗಿಲೆದ್ದಿದ್ದು, ಜಿಲ್ಲಾಡಳಿತವು ನಿಷೇಧಾಜ್ಞೆಗಳನ್ನು ಜಾರಿ ಮಾಡಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ಕಾರ್ತಿಕ ಪೂಜೆಯ ಹಬ್ಬಕ್ಕಾಗಿ ನಿರ್ಮಿಸಿದ್ದ ತಾತ್ಕಾಲಿಕ ಶೆಡ್ ಮೇಲೆ ನಿಯಾನ್ ಸೈನ್ ಬೋರ್ಡ್‌ನಲ್ಲಿ ಬರೆಯಲಾದ ಆಕ್ಷೇಪಾರ್ಹ ಸಂದೇಶವು ಹಿಂಸಾಚಾರಕ್ಕೆ ಕಾರಣವಾಯಿತು ಎಂದು ಪೊಲೀಸರು ಹೇಳಿದ್ದಾರೆ. ಪಶ್ಚಿಮ ಬಂಗಾಳ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
ಎರಡೂ ಕಡೆಯ ಗುಂಪುಗಳು ಪರಸ್ಪರ ಇಟ್ಟಿಗೆಗಳನ್ನು ಎಸೆದು ವಿಧ್ವಂಸಕ ಕೃತ್ಯಗಳಲ್ಲಿ ತೊಡಗಿದ್ದು, ಹಿಂಸಾಚಾರದಲ್ಲಿ ಹಲವಾರು ಅಂಗಡಿಗಳು ಮತ್ತು ಮನೆಗಳನ್ನು ಧ್ವಂಸಗೊಳಿಸಲಾಗಿದೆ ಎಂದು ಪೊಲೀಸ್ ಮೂಲಗಳನ್ನು ಉಲ್ಲೇಖಿಸಿ ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ಪಶ್ಚಿಮ ಬಂಗಾಳ
ಪರಿಸ್ಥಿತಿಯನ್ನು ಹತೋಟಿಗೆ ತರಲು ಪೊಲೀಸರು ಗುಂಪುಗಳ ಮೇಲೆ ಲಾಠಿ ಚಾರ್ಜ್ ಮಾಡಿದ್ದು, ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯ ಸೆಕ್ಷನ್ 163 ರ ಅಡಿಯಲ್ಲಿ ಐದು ಅಥವಾ ಅದಕ್ಕಿಂತ ಹೆಚ್ಚು ವ್ಯಕ್ತಿಗಳು ಒಂದೇ ಸ್ಥಳದಲ್ಲಿ ಸೇರುವುದನ್ನು ಜಿಲ್ಲಾಡಳಿತ ನಿಷೇಧಿಸಿದೆ. ಹಿಂಸಾಚಾರಕ್ಕಾಗಿ 15 ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಪತ್ರಿಕೆಗೆ ತಿಳಿಸಿದ್ದಾರೆ.
ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ಮುಖಂಡ ಮೊಹಮ್ಮದ್ ಸಲೀಂ ಪ್ರತಿಕ್ರಿಯಿಸಿ, ಬೆಲ್ದಂಗದಲ್ಲಿ “ಧಾರ್ಮಿಕ ದ್ವೇಷವನ್ನು ಪ್ರಚೋದಿಸಿ ನಿಂದಿಸಲಾಗಿದೆ” ಎಂದು ಆರೋಪಿಸಿದ್ದಾರೆ. ಆದರೆ ಬಿಜೆಪಿ ಎಂದಿನಂತೆ ಹಿಂದೂ ಮುಸ್ಲಿಂ ಭಾವನೆಗಳನ್ನು ಪ್ರಚೋದಿಸಲು ಪ್ರಯತ್ನ ಮಾಡಿದ್ದು, ”ಹಿಂದೂಗಳ ಮನೆಗಳ ಮೇಲೆ ದಾಳಿ ನಡೆಸಲಾಯಿತು” ಎಂದು ಆರೋಪಿಸಿದೆ.
ಇದನ್ನೂ ಓದಿ: 2019 ರಲ್ಲಿ ಅಪಘಾತ; 5 ವರ್ಷಗಳ ನಂತರ ₹31ಲಕ್ಷ ಪರಿಹಾರ ಘೋಷಿಸಿದ ಮೋಟಾರು ಅಪಘಾತ ಹಕ್ಕುಗಳ ನ್ಯಾಯಮಂಡಳಿ
2019 ರಲ್ಲಿ ಅಪಘಾತ; 5 ವರ್ಷಗಳ ನಂತರ ₹31ಲಕ್ಷ ಪರಿಹಾರ ಘೋಷಿಸಿದ ಮೋಟಾರು ಅಪಘಾತ ಹಕ್ಕುಗಳ ನ್ಯಾಯಮಂಡಳಿ


