Homeಮುಖಪುಟಪಶ್ಚಿಮ ಬಂಗಾಳ: ಎಡಪಕ್ಷಗಳೊಂದಿಗೆ 'ಕೈ' ಜೋಡಿಸಲು ಒಪ್ಪಿಗೆ - ಅಧೀರ್‌ ಚೌಧರಿ

ಪಶ್ಚಿಮ ಬಂಗಾಳ: ಎಡಪಕ್ಷಗಳೊಂದಿಗೆ ‘ಕೈ’ ಜೋಡಿಸಲು ಒಪ್ಪಿಗೆ – ಅಧೀರ್‌ ಚೌಧರಿ

ಈ ಬಾರಿ ಹೇಗಾದರೂ ಅಧಿಕಾರ ಹಿಡಿಯಲೇ ಬೇಕು ಎಂದು ಬಿಜೆಪಿ ಪಣತೊಟ್ಟಿದೆ. ಮತ್ತೊಂದು ಕಡೆ ಮಮತಾ ಬ್ಯಾನರ್ಜಿಯವರು ತಮ್ಮ ಅಧಿಕಾರವನ್ನು ಉಳಿಸಿಕೊಳ್ಳಲು ಶತಪ್ರಯತ್ನ ಮಾಡುತ್ತಿದ್ದಾರೆ

- Advertisement -
- Advertisement -

2021 ರ ಮಾರ್ಚ್‌ನಲ್ಲಿ ಪ‍ಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಪಕ್ಷವು ಎಡಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳಲಿದೆ ಎಂದು ಪಶ್ಚಿಮ ಬಂಗಾಳ ಪ್ರದೇಶ ಕಾಂಗ್ರೆಸ್‌ ಸಮಿತಿಯ ಅಧ್ಯಕ್ಷ ಅಧೀರ್‌ ರಂಜನ್‌ ಚೌಧರಿ ಗುರುವಾರ ಹೇಳಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅಧೀರ್‌ ರಂಜನ್‌ ಚೌಧರಿ, “ಎಡಪಕ್ಷಗಳ ಜೊತೆಗಿನ ಮೈತ್ರಿಗೆ ಕಾಂಗ್ರೆಸ್‌ ಹೈಕಮಾಂಡ್‌ ಗುರುವಾರ ಸಮ್ಮತಿ ಸೂಚಿಸಿದೆ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಪಾಕಿಸ್ತಾನದ ಪತ್ರಕರ್ತರೊಬ್ಬರು ಪ್ರಧಾನಿ ಮೋದಿಯವರನ್ನು ಹೊಗಳಿದ್ದಾರೆಯೇ?

ಇದನ್ನೂ ಓದಿ: ‘IPL T20’ ಟೂರ್ನಿಗೆ 2 ಹೊಸ ತಂಡ ಸೇರ್ಪಡೆ: ಬಿಸಿಸಿಐ ಒಪ್ಪಿಗೆ

ಪಶ್ಚಿಮ ಬಂಗಾಳ ಪ್ರದೇಶ ಕಾಂಗ್ರೆಸ್‌ ಸಮಿತಿಯು ಎಡಪಕ್ಷಗಳ ಜೊತೆಗಿನ ಮೈತ್ರಿ ಬಗ್ಗೆ ಒಲವು ತೋರಿ, ಈ ವಿಷಯವನ್ನು ಹೈಕಮಾಂಡ್‌ ಗಮನಕ್ಕೆ ತಂದಿತ್ತು. ಕಾಂಗ್ರೆಸ್‌ ಜೊತೆ ಕೈ ಜೋಡಿಸಲು ಎಡಪಕ್ಷಗಳೂ ಆಸಕ್ತಿ ತೋರಿದ್ದವು. ಹಾಗಾಗಿ ಮೈತ್ರಿಯ ಹಾದಿ ಸುಗಮವಾಗಿದೆ.

ಕಳೆದ ಲೋಕಸಭಾ ಚುನಾವಣೆ ವೇಳೆ ಎಡಪಕ್ಷ ಹಾಗೂ ಕಾಂಗ್ರೆಸ್‌ ಪ್ರತ್ಯೇಕವಾಗಿಯೇ ತಮ್ಮ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದವು. ಈಗ ಇವು ಮೈತ್ರಿ ಮಾಡಿಕೊಂಡಿರುವುದು ಕುತೂಹಲ ಮೂಡಿಸಿದೆ.

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯು 2021ರ ಮಾರ್ಚ್‌ ಮತ್ತು ಏಪ್ರಿಲ್‌ನಲ್ಲಿ ನಡೆಯಲಿದೆ. ಈ ಬಾರಿ ಹೇಗಾದರೂ ಅಧಿಕಾರ ಹಿಡಿಯಲೇ ಬೇಕು ಎಂದು ಬಿಜೆಪಿ ಪಣತೊಟ್ಟಿದೆ. ಮತ್ತೊಂದು ಕಡೆ ಮಮತಾ ಬ್ಯಾನರ್ಜಿಯವರು ತಮ್ಮ ಅಧಿಕಾರವನ್ನು ಉಳಿಸಿಕೊಳ್ಳಲು ಶತಪ್ರಯತ್ನ ಮಾಡುತ್ತಿದ್ದಾರೆ.


ಇದನ್ನೂ ಓದಿ: ಮುತ್ತು ಸುತ್ತು: ಟಿಪ್ಪುವಿನ ಪ್ರಸ್ತುತ ಸ್ಥಿತಿ ಸಾರುವ ನಂದಿಬೆಟ್ಟಕ್ಕೊಮ್ಮೆ ಹೋಗಿಬನ್ನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...