Homeಮುಖಪುಟಪಶ್ಚಿಮ ಬಂಗಾಳ: ಹಿಂಸಾಚಾರದಲ್ಲಿ ಎಂಟು ಮಂದಿ ಸಾವು; ರಾಜಕೀಯ ಕೆಸರೆರಚಾಟ

ಪಶ್ಚಿಮ ಬಂಗಾಳ: ಹಿಂಸಾಚಾರದಲ್ಲಿ ಎಂಟು ಮಂದಿ ಸಾವು; ರಾಜಕೀಯ ಕೆಸರೆರಚಾಟ

- Advertisement -
- Advertisement -

ಹೊಸದಿಲ್ಲಿ: ಪಶ್ಚಿಮ ಬಂಗಾಳದ ಬಿರ್‌ಭೂಮ್‌ನಲ್ಲಿ ನಡೆದ ರಾಜಕೀಯ ಹಿಂಸಾಚಾರದಲ್ಲಿ ಎಂಟು ಮಂದಿ ಸಾವನ್ನಪ್ಪಿದ್ದಾರೆ ಎಂದಿರುವ ಕೇಂದ್ರ ಸರಕಾರ ರಾಜ್ಯ ಸರ್ಕಾರದಿಂದ ವರದಿ ಕೇಳಿದೆ. ಕಳೆದ ವರ್ಷ ಮಮತಾ ಬ್ಯಾನರ್ಜಿ ಅವರ ದಿಗ್ವಿಜಯ ಸಾಧಿಸಿದ ನಂತರ ನಡೆದ ಅತಿದೊಡ್ಡ ಹಿಂಸಾಚಾರ ಎಂದಿರುವ ಬಿಜೆಪಿ, ತನಿಖೆ ಮಾಡಲು ಸತ್ಯಶೋಧನಾ ತಂಡವನ್ನು ಕಳುಹಿಸುತ್ತಿದೆ.

ಮಂಗಳವಾರ ಮುಂಜಾನೆ ರಾಮ್‌ಪುರಹತ್ ಪಟ್ಟಣದ ಹೊರವಲಯದಲ್ಲಿರುವ ಬೊಗ್ಟುಯಿ ಗ್ರಾಮದಲ್ಲಿ ಗುಂಪೊಂದು ಬಾಂಬ್‌ಗಳನ್ನು ಎಸೆದಿದೆ. ಇದರಲ್ಲಿ 10 ಮನೆ ಆಹುತಿಯಾಗಿವೆ. ತೃಣಮೂಲ ಕಾಂಗ್ರೆಸ್ ಪಂಚಾಯತ್ ನಾಯಕ ಭಾದು ಶೇಖ್ ಅವರ ಹತ್ಯೆಯ ಪ್ರತೀಕಾರಕ್ಕಾಗಿ ಈ ಕೃತ್ಯ ಎಸಗಲಾಗಿದೆ ಎಂದು ಆರೋಪಿಸಲಾಗಿದ್ದು, ಭಾದು ಶೇಖ್‌ ಅವರ ಶವ ಸೋಮವಾರ ಪತ್ತೆಯಾಗಿದೆ.

ಮನೆಯೊಂದರಲ್ಲಿ ಸುಟ್ಟು ಕರಕಲಾದ ಏಳು ಜನರ ಶವಗಳಲ್ಲಿ ಇಬ್ಬರು ಮಕ್ಕಳೂ ಪತ್ತೆಯಾಗಿದ್ದಾರೆ. ಎಂಟನೇ ವ್ಯಕ್ತಿ ಆಸ್ಪತ್ರೆಗೆ ಸಾಗಿಸುವ ಮಾರ್ಗದಲ್ಲಿ ಸಾವನ್ನಪ್ಪಿದ್ದಾರೆ. ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಹನ್ನೊಂದು ಜನರನ್ನು ಬಂಧಿಸಲಾಗಿದೆ ಎಂದು ರಾಜ್ಯ ಪೊಲೀಸರು ತಿಳಿಸಿದ್ದಾರೆ.

ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡವನ್ನು ರಚಿಸಲಾಗಿದೆ. ಬಂಗಾಳದ ಉನ್ನತ ಪೋಲೀಸ್ ಮನೋಜ್ ಮಾಳವಿಯಾ ಅವರು, “ಮನೆಗಳಿಗೆ ಹೇಗೆ ಬೆಂಕಿ ಹೊತ್ತಿಕೊಂಡಿತು, ನೆರೆಯ ಬರ್ಶಾಲ್ ಗ್ರಾಮದ ಪಂಚಾಯತ್ ಉಪ ಮುಖ್ಯಸ್ಥರ ಸಾವಿನಿಂದಾಗಿ ಘಟನೆ ಸಂಬಂಧಿಸಿದೆಯೇ ಎಂದು ನಾವು ತನಿಖೆ ನಡೆಸುತ್ತಿದ್ದೇವೆ” ಎಂದು ಪೊಲೀಸರು ಹೇಳಿದ್ದಾರೆ.

ರಾಜ್ಯ ಸಚಿವ ಫಿರ್ಹಾದ್ ಹಕೀಮ್ ನೇತೃತ್ವದ ಇಬ್ಬರು ಸದಸ್ಯರ ತೃಣಮೂಲ ಕಾಂಗ್ರೆಸ್ ನಿಯೋಗವು ಸಮಸ್ಯೆಯನ್ನು ಪರಿಶೀಲಿಸಲು ರಾಮ್‌ಪುರಹಟ್‌ಗೆ ತೆರಳುತ್ತಿದೆ. ಸ್ಥಳೀಯ ಇಬ್ಬರು ಪೊಲೀಸ್‌ ಅಧಿಕಾರಿಗಳನ್ನು (ಉಪವಿಭಾಗದ ಪೊಲೀಸ್ ಅಧಿಕಾರಿ ಮತ್ತು ರಾಮ್‌ಪುರಹಟ್‌ನ ಸರ್ಕಲ್ ಇನ್‌ಸ್ಪೆಕ್ಟರ್) ಹೊರಗಿಡಲಾಗಿದೆ.

ಬಂಗಾಳದ ಬಿಜೆಪಿ ತಂಡ ಮಂಗಳವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ಅವರ ಮಧ್ಯಸ್ಥಿಕೆ ಕೋರಿದೆ. ನಿಯೋಗದ ನೇತೃತ್ವ ವಹಿಸಿದ್ದ ಪಕ್ಷದ ರಾಜ್ಯ ಮುಖ್ಯಸ್ಥ ಸುಕಾಂತ ಮಜುಂದಾರ್ ಅವರು ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ ಅವರು ರಚಿಸಿರುವ ಸತ್ಯಶೋಧನಾ ತಂಡದ ಭಾಗವಾಗಲಿದ್ದಾರೆ. ತಂಡದಲ್ಲಿ ನಾಲ್ವರು ಮಾಜಿ ಪೊಲೀಸ್ ಅಧಿಕಾರಿಗಳು ಸೇರಿದ್ದಾರೆ.

ಹಿಂಸಾಚಾರದಲ್ಲಿ ತಾನು ಭಾಗಿಯಾಗಿಲ್ಲ ಎಂದು ತೃಣಮೂಲ ಕಾಂಗ್ರೆಸ್ ಹೇಳಿದೆ. ಪಕ್ಷದ ವಕ್ತಾರ ಕುನಾಲ್ ಘೋಷ್, “ಆಕಸ್ಮಿಕ ಬೆಂಕಿಯಿಂದ ಸಂಭವಿಸಿದ ಸಾವುಗಳನ್ನು ನಾವು ಖಂಡಿಸುತ್ತೇವೆ. ನಿನ್ನೆ ರಾತ್ರಿ ನಮ್ಮ ಪಕ್ಷದ ಮುಖಂಡನನ್ನು ಕೊಲ್ಲಲಾಯಿತು” ಎಂದು ಹೇಳಿದ್ದಾರೆ.

ಮುಖ್ಯಮಂತ್ರಿ ಮತ್ತು ರಾಜ್ಯಪಾಲ ಜಗದೀಪ್ ಧನಕರ್ ನಡುವೆ ಹಲವು ವರ್ಷಗಳಿಂದ ಭಿನ್ನಾಭಿಪ್ರಾಯವಿತ್ತು. ಧನಖರ್ ಅವರು ಈ ಘಟನೆಯನ್ನು ಖಂಡಿಸಿದ್ದು, “ಭಯಾನಕ ಹಿಂಸಾಚಾರ ಇದಾಗಿದೆ. ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯ ಹದಗೆಟ್ಟಿದೆ” ಎಂದು ಟೀಕಿಸಿದ್ದಾರೆ.

ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪತ್ರದ ಮೂಲಕ ತಿರುಗೇಟು ನೀಡಿದ್ದಾರೆ. ನಿಷ್ಪಕ್ಷಪಾತ ತನಿಖೆಗೆ ದಾರಿ ಮಾಡಿಕೊಡುವ ಬದಲು ಈ ಹೇಳಿಕೆ ನೀಡಿರುವುದು ಅಕ್ಷೇಪಣೀಯ. ಇಂತಹ ಬೇಜವಾಬ್ದಾರಿ ಹೇಳಿಕೆಗಳಿಗೆ ಕಡಿವಾಣ ಹಾಕಬೇಕು ಎಂದು ರಾಜ್ಯಪಾಲರಲ್ಲಿ ಕೋರಿದ್ದಾರೆ.

ಈ ವಿಷಯವು ರಾಜ್ಯ ವಿಧಾನಸಭೆಯಲ್ಲಿಯೂ ಸದ್ದು ಮಾಡಿದೆ. ಬಿಜೆಪಿ ನಾಯಕರು ಮುಖ್ಯಮಂತ್ರಿಯವರ ಹೇಳಿಕೆಗೆ ಸದನದಲ್ಲಿ ಒತ್ತಾಯಿಸಿದ್ದಾರೆ. ಇಪ್ಪತ್ತೆರಡು ಬಿಜೆಪಿ ಶಾಸಕರು ಸಭಾತ್ಯಾಗ ಮಾಡಿದರು. ಪಕ್ಷದ ನಾಯಕ ಸುವೇಂದು ಅಧಿಕಾರಿ ಸರಣಿ ಟ್ವೀಟ್‌ ಮಾಡಿ, ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಬೇಕು ಎಂದು ಒತ್ತಾಯಿಸಿದ್ದಾರೆ.

ಲೋಕಸಭೆಯಲ್ಲಿ ಕಾಂಗ್ರೆಸ್‌ನ ನಾಯಕ ಅಧೀರ್ ರಂಜನ್ ಚೌಧರಿ ಅವರು ಸದನದಲ್ಲಿ ವಿಷಯ ಪ್ರಸ್ತಾಪಿಸಿ, ಪಶ್ಚಿಮ ಬಂಗಾಳದಲ್ಲಿ ಮಹಿಳೆಯರು ಮತ್ತು ಮಕ್ಕಳನ್ನು ಜೀವಂತ ಸುಡುವ ಇಂತಹ ಭಯಾನಕ ಘಟನೆಗಳು ನಡೆಯುತ್ತಿದೆ ಎಂದು ಆರೋಪಿಸಿದ್ದಾರೆ.


ಇದನ್ನೂ ಓದಿರಿ: ಸಂಸತ್ ಸ್ಥಾನಕ್ಕೆ ರಾಜೀನಾಮೆ ನೀಡಿದ ಅಖಿಲೇಶ್ ಯಾದವ್: ವಿಪಕ್ಷ ನಾಯಕನಾಗಲಿರುವ ಉದ್ದೇಶವೇನು?

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಸಿಲಿನ ತಾಪವಿದ್ದರೂ ಬಿಜೆಪಿ ಒತ್ತಡದಿಂದ ಬಂಗಾಳದಲ್ಲಿ 7 ಹಂತದ ಚುನಾವಣೆ: ಅಭಿಷೇಕ್ ಬ್ಯಾನರ್ಜಿ

0
ಪಶ್ಚಿಮ ಬಂಗಾಳದಲ್ಲಿ ಸಾಕಷ್ಟು ಬಿಸಿಲಿನ ತಾಪವಿದ್ದರೂ, ಏಳು ಹಂತಗಳಲ್ಲಿ ಲೋಕಸಭೆ ಚುನಾವಣೆ ಆಯೋಜಿಸುವಂತೆ ಬಿಜೆಪಿ ಚುನಾವಣಾ ಆಯೋಗವನ್ನು ಒತ್ತಾಯಿಸಿದೆ ಎಂದು ಟಿಎಂಸಿಯ ನಾಯಕ ಅಭಿಷೇಕ್ ಬ್ಯಾನರ್ಜಿ ಮಂಗಳವಾರ ಆರೋಪಿಸಿದ್ದಾರೆ. ಟಿಎಂಸಿಯ ಡಾರ್ಜಿಲಿಂಗ್ ಅಭ್ಯರ್ಥಿ ಗೋಪಾಲ್...