ಪಶ್ಚಿಮ ಬಂಗಾಳದಲ್ಲಿ ಎಂಟು ಹಂತಗಳಲ್ಲಿ ವಿಧಾನಸಭಾ ಚುನಾವಣೆ ನಡೆಸುವ ಚುನಾವಣಾ ಆಯೋಗದ ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಇಂದು (ಮಾ.1) ಮನವಿ ಸಲ್ಲಿಸಲಾಗಿದೆ.
ವಕೀಲರಾದ ಎಂ.ಎಲ್. ಶರ್ಮಾ ಅವರು ಸಲ್ಲಿಸಿರುವ ಮನವಿಯಲ್ಲಿ, ರಾಜ್ಯದಲ್ಲಿ ಸುದೀರ್ಘ ಎಂಟು ಹಂತದ ಚುನಾವಣೆಗಳನ್ನು ನಡೆಸದಂತೆ ತಡೆಯಲು ಸುಪ್ರೀಂ ಕೋರ್ಟ್ ಮತದಾನ ಸಮಿತಿಗೆ ನಿರ್ದೇಶನ ನೀಡಬೇಕು ಎಂದು ಕೋರಲಾಗಿದೆ.
ಚುನಾವಣಾ ಆಯೋಗವು ಪಶ್ಚಿಮ ಬಂಗಾಳ, ಅಸ್ಸಾಂ, ಕೇರಳ, ತಮಿಳುನಾಡು ಮತ್ತು ಪುದುಚೇರಿಯಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯ ವೇಳಾಪಟ್ಟಿಯನ್ನು ಫೆಬ್ರವರಿ 26 ರಂದು ಪ್ರಕಟಿಸಿತ್ತು.
ಇದನ್ನೂ ಓದಿ: ದೆಹಲಿ ಹಿಂಸಾಚಾರದ ಅಸಲಿ ಪಿತೂರಿಗಾರರು ಯಾರು? ದೆಹಲಿ ಪೊಲೀಸ್ ನೋಡಲೊಲ್ಲದ ಭೀಕರ ಸತ್ಯಗಳನ್ನು ತೆರೆದಿಟ್ಟ ದಿ ವೈರ್ ವರದಿ
ಪಶ್ಚಿಮ ಬಂಗಾಳದಲ್ಲಿ ಮಾರ್ಚ್ 27 ರಿಂದ ಏಪ್ರಿಲ್ 29 ರವರೆಗೆ ಎಂಟು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ತಮಿಳುನಾಡು, ಕೇರಳ ಮತ್ತು ಪುದುಚೇರಿಯಲ್ಲಿ ಏಪ್ರಿಲ್ 6 ರಂದು ಒಂದೇ ಹಂತದಲ್ಲಿ ಮತ್ತು ಅಸ್ಸಾಂನಲ್ಲಿ ಮೂರು ಹಂತಗಳಲ್ಲಿ ನಡೆಯಲಿದೆ.
ಕೆಲವೇ ದಿನಗಳಲ್ಲಿ ವಿಚಾರಣೆಗೆ ಬರಬಹುದಾದ ಈ ಮನವಿಯಲ್ಲಿ, “ಪಶ್ಚಿಮ ಬಂಗಾಳದಲ್ಲಿ ಚುನಾವಣೆಯ ಸಂದರ್ಭದಲ್ಲಿ ಧಾರ್ಮಿಕ ಘೋಷಣೆಗಳನ್ನು ಕೂಗಿರುವ ಆರೋಪದ ಮೇಲೆ ಎಫ್‌ಐಆರ್ ದಾಖಲಿಸುವಂತೆ ಸಿಬಿಐಗೆ ನಿರ್ದೇಶನ ನೀಡಬೇಕು” ಎಂದು ಕೋರಲಾಗಿದೆ.
“ಜೈ ಶ್ರೀ ರಾಮ್ ಮತ್ತು ಇತರ ಧಾರ್ಮಿಕ ಘೋಷಣೆಗಳು ವಿಘಟನೆಯನ್ನು ಸೃಷ್ಟಿಸುತ್ತಿವೆ” ಎಂದೂ, ಇದು ಭಾರತೀಯ ದಂಡಸಂಹಿತೆ ಮತ್ತು ಜನರ ಪ್ರಾತಿನಿಧ್ಯ ಕಾಯ್ದೆ 1951 ರ ಅಡಿಯಲ್ಲಿ ಅಪರಾಧವಾಗಿದೆ ಎಂದೂ ಮನವಿಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ: ಇಂಧನ ಬೆಲೆ ಏರಿಕೆಗೆ ವ್ಯಂಗ್ಯ: ಚಾಕೋಲೆಟ್ ಹಂಚಿ, ಟ್ರ್ಯಾಕ್ಟರ್ ಎಳೆದು ವಿಭಿನ್ನ ಪ್ರತಿಭಟನೆ!


