Homeಮುಖಪುಟಬಂಗಾಳ ಚುನಾವಣೆ ಪ್ರಚಾರ: ಮಮತಾ ಬ್ಯಾನರ್ಜಿಗೆ ಸಾಥ್ ನೀಡಲಿರುವ ಹಿರಿಯ ನಟಿ ಜಯಾ ಬಚ್ಚನ್

ಬಂಗಾಳ ಚುನಾವಣೆ ಪ್ರಚಾರ: ಮಮತಾ ಬ್ಯಾನರ್ಜಿಗೆ ಸಾಥ್ ನೀಡಲಿರುವ ಹಿರಿಯ ನಟಿ ಜಯಾ ಬಚ್ಚನ್

- Advertisement -

ಬಾಲಿವುಡ್‌ನ ಹಿರಿಯ ನಟಿ ಹಾಗೂ ಸಮಾಜವಾದಿ ಪಕ್ಷದ ರಾಜ್ಯಸಭಾ ಸದಸ್ಯೆ ಜಯಾ ಬಚ್ಚನ್‌ ಅವರು ಪಶ್ಚಿಮ ಬಂಗಾಳದಲ್ಲಿ ಮೂರನೇ ಹಂತದ ಚುನಾವಣೆಗೆ ತೃಣಮೂಲ ಕಾಂಗ್ರೆಸ್‌ (ಟಿಎಂಸಿ) ಪರವಾಗಿ ಪ್ರಚಾರ ಕೈಗೊಳ್ಳಲಿದ್ದಾರೆ ಎಂದು ಪಕ್ಷದ ಮುಖಂಡರು ತಿಳಿಸಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ 8 ಹಂತಗಳಲ್ಲಿ ಚುನಾವಣೆ ನಡೆಯುತ್ತಿದ್ದು, ಮೊದಲ ಎರಡು ಹಂತಗಳಲ್ಲಿ ಈಗಾಗಲೇ 60 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ನಡೆದಿದೆ. ಉಳಿದ 234 ಸ್ಥಾನಗಳಿಗೆ ಚುನಾವಣೆ ಇನ್ನೂ ಆರು ಹಂತಗಳಲ್ಲಿ ಏಪ್ರಿಲ್ 29 ರವರೆಗೆ ಮತದಾನ ನಡೆಯಲಿದೆ.

’ಏಪ್ರಿಲ್ 6 ಮತ್ತು 7 ರಂದು ಬಚ್ಚನ್ ಕನಿಷ್ಠ ನಾಲ್ಕು ರೋಡ್‌ ಶೋಗಳಲ್ಲಿ ಭಾಗವಹಿಸಲಿದ್ದಾರೆ. ಏಪ್ರಿಲ್ 8 ರಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರೊಂದಿಗೆ ಚುನಾವಣಾ ರ್‍ಯಾಲಿಯಲ್ಲಿ ವೇದಿಕೆ ಹಂಚಿಕೊಳ್ಳಬಹುದು’ ಎಂದು ಟಿಎಂಸಿಯ ಹಿರಿಯ ಮುಖಂಡರೊಬ್ಬರು ಹೇಳಿದ್ದಾರೆ.

ಇದನ್ನೂ ಓದಿ: ಅಸ್ಸಾಂನಲ್ಲಿ ಕೊರೊನಾ ಇಲ್ಲ, ಮಾಸ್ಕ್ ಬೇಡ ಹೇಳಿಕೆ ನೀಡಿ ಟ್ರೋಲ್ ಆದ ಬಿಜೆಪಿ ಸಚಿವ

ಬಂಗಾಳಿ ನಟರಾದ ಅನಿಲ್ ಚಟರ್ಜಿ ಮತ್ತು ಮಾಧಾಬಿ ಮುಖರ್ಜಿ ನಟಿಸಿದ್ದ, ಸತ್ಯಜಿತ್ ರೇ ಅವರ ಮಹಾನಗರ ಚಿತ್ರದಲ್ಲಿ ನಟಿಸುವ ಮೂಲಕ ಜಯಾ ಬಚ್ಚನ್‌ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದರು. ಅವರನ್ನು ಬಂಗಾಳಿ ಮತಗಳನ್ನು ಸೆಳೆಯಲು ಮತ್ತು ಟಿಎಂಸಿಯ ಚುನಾವಣಾ ಘೋಷವಾಕ್ಯವಾದ ‘ಬಂಗಾಳ ತನ್ನ ಸ್ವಂತ ಮಗಳನ್ನು ಬಯಸುತ್ತದೆ’ ಎಂಬುದನ್ನು ಪ್ರಚಾರ ಪಡಿಸಲು ಚುನಾವಣಾ ಪ್ರಚಾರದ ಅಖಾಡಕ್ಕೆ ಇಳಿಸಲಾಗಿದೆ ಎನ್ನಲಾಗುತ್ತಿದೆ.

ಇತ್ತ ಬಾಲಿವುಡ್‌ನ ಹಿರಿಯ ನಟ ಮಿಥುನ್ ಚಕ್ರವರ್ತಿ ಕೂಡ ಬಿಜೆಪಿ ಸೇರ್ಪಡೆಯಾಗಿ, ಪಕ್ಷಕ್ಕಾಗಿ ಪಶ್ಚಿಮ ಬಂಗಾಳದಲ್ಲಿ ವ್ಯಾಪಕವಾಗಿ ಪ್ರಚಾರ ಮಾಡುತ್ತಿದ್ದಾರೆ. ಬಿಜೆಪಿ ಟಿಕೆಟ್ ನೀಡದೆ ಇದ್ದರು ಕೂಡ ಅವರಿಗೆ ಸ್ಟಾರ್ ಪ್ರಚಾರಕನ ಸ್ಥಾನ ನೀಡಿದೆ.


ಇದನ್ನೂ ಓದಿ: ‘ತಂಬಿ ತೇಜಸ್ವಿ ಸೂರ್ಯ, ಇದು ತಮಿಳುನಾಡು; ನಿಮ್ಮ ನಾಟಕ ಬೆಂಗಳೂರಲ್ಲೇ ಬಿಟ್ಟು ಬನ್ನಿ’

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಸೀದಿ ಒಡೆಯುವ ಮಾತುಗಳು: ‘ಮುತಾಲಿಕ್‌’ ಮುಂದುವರಿದ ಭಾಗ ‘ಕಾಳಿ ಸ್ವಾಮೀಜಿ’ ಪ್ರಕರಣ

ಕೋಮು ಪ್ರಚೋದನೆ ಮಾಡಿರುವ ರಿಷಿ ಕುಮಾರ ಸ್ವಾಮೀಜಿ (ಕಾಳಿ ಸ್ವಾಮೀಜಿ) ಈಗ ಸುದ್ದಿಯಲ್ಲಿದ್ದಾರೆ. ಮಸೀದಿ ಒಡೆಯಬೇಕೆಂದು ಕರೆ ನೀಡಿದ ಹಿನ್ನೆಲೆಯಲ್ಲಿ ಅವರನ್ನು ಬಂಧಿಸಲಾಗಿದೆ. ಬಾಬ್ರಿ ಮಸೀದಿ ರೀತಿಯಲ್ಲಿ ಶ್ರೀರಂಗಪಟ್ಟಣದ ಮಸೀದಿ ಕೆಡವಬೇಕೆಂದು ಕಾಳಿ...
Wordpress Social Share Plugin powered by Ultimatelysocial