Homeಮುಖಪುಟಪ.ಬಂಗಾಳ ಚುನಾವಣೆ: ತೇಜಸ್ವಿ ಯಾದವ್ ಭೇಟಿಯಾಗಲಿರುವ ಮಮತಾ ಬ್ಯಾನರ್ಜಿ

ಪ.ಬಂಗಾಳ ಚುನಾವಣೆ: ತೇಜಸ್ವಿ ಯಾದವ್ ಭೇಟಿಯಾಗಲಿರುವ ಮಮತಾ ಬ್ಯಾನರ್ಜಿ

- Advertisement -
- Advertisement -

ಪಶ್ಚಿಮ ಬಂಗಾಳದ ಚುನಾವಣೆಯ ಹಿನ್ನೆಲೆಯಲ್ಲಿ ಟಿಎಂಸಿ ಮುಖ್ಯಸ್ಥೆ ಮತ್ತು ಸಿಎಂ ಮಮತಾ ಬ್ಯಾನರ್ಜಿ ಆರ್‌ಜೆಡಿ ಮುಖ್ಯಸ್ಥ ತೇಜಸ್ವಿ ಯಾದವ್ ಅವರನ್ನು ಭೇಟಿ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ತೃಣಮೂಲ ಕಾಂಗ್ರೆಸ್ ಪಕ್ಷದ ಚುನಾವಣಾ ಸಮಿತಿಯ ಸಭೆಯು ಇಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರ ಕಾಲಿಘಾಟ್ ನಿವಾಸದಲ್ಲಿ ನಡೆಯಲಿದೆ. ಈ ಸಮಿತಿಯಲ್ಲಿ ತೃಣಮೂಲ ಯುವ ವಿಭಾಗದ ಮುಖ್ಯಸ್ಥ ಅಭಿಷೇಕ್ ಬ್ಯಾನರ್ಜಿ ಮತ್ತು ಪಕ್ಷದ ಇತರ ಹಿರಿಯ ನಾಯಕರು ಸೇರಿಕೊಂಡಿದ್ದಾರೆ.

ಫಿರ್ಹಾದ್ ಹಕೀಮ್, ಸುಬ್ರತಾ ಬಕ್ಷಿ, ಸೌಗತಾ ರಾಯ್, ಡೆರೆಕ್ ಒ’ಬ್ರಿಯೆನ್, ಅರೂಪ್ ಬಿಸ್ವಾಸ್, ಚಂದ್ರಮಾ ಭಟ್ಟಾಚಾರ್ಯ, ಸಿಎಂ ಜತುವಾ, ಸುಬ್ರತಾ ಮುಖರ್ಜಿ, ಸುದೀಪ್ ಬಂದೋಪಾಧಯ್ ಮತ್ತು ಪಾರ್ಥ ಚಟರ್ಜಿ ಮತ್ತು ಸಮಿತಿಯ ಇತರ ಹಿರಿಯ ನಾಯಕರು ಈ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಚುನಾವಣೆ ಹತ್ತಿರವಾಗುತ್ತಿರುವ ಹಿನ್ನೆಲೆಯಲ್ಲಿ ಟಿಎಂಸಿಯು ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸುವ ಸಾಧ್ಯತೆ ಇದೆ.

ಮೂಲಗಳ ಪ್ರಕಾರ ಅಭ್ಯರ್ಥಿಗಳ ಆಯ್ಕೆಯಲ್ಲಿ ಮಮತಾ ಬ್ಯಾನರ್ಜಿ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತಾರೆ. ಅಭಿಷೇಕ್ ಬ್ಯಾನರ್ಜಿ ಸೇರಿದಂತೆ ಎಲ್ಲ ನಾಯಕರು ಸಲಹೆಗಳನ್ನು ನೀಡಲಿದ್ದಾರೆ. ಅಭ್ಯರ್ಥಿಗಳ ಪಟ್ಟಿಯಲ್ಲಿ ಹೆಚ್ಚಿನ ಯುವ ಜನರು ಕಾಣಿಸಿಕೊಳ್ಳುವ ಸಾಧ್ಯತೆಯಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿ: ದೆಹಲಿ ಹಿಂಸಾಚಾರದ ಅಸಲಿ ಪಿತೂರಿಗಾರರು ಯಾರು? ದೆಹಲಿ ಪೊಲೀಸ್ ನೋಡಲೊಲ್ಲದ ಭೀಕರ ಸತ್ಯಗಳನ್ನು ತೆರೆದಿಟ್ಟ ದಿ ವೈರ್ ವರದಿ

ತೃಣಮೂಲ ಕಾಂಗ್ರೆಸ್ ಮತ್ತು ಆರ್‌ಜೆಡಿ ನಡುವೆ ಹೊಂದಾಣಿಕೆಯಾಗುವ ಸಾಧ್ಯತೆಯಿದೆ. ಕಳೆದ ತಿಂಗಳು ಪಕ್ಷದ ಹಿರಿಯ ನಾಯಕರಾದ ಅಬ್ದುಲ್ ಬರಿ ಸಿದ್ದಿಕಿ ಮತ್ತು ಶ್ಯಾಮ್ ರಾಜಕ್ ನೇತೃತ್ವದ ಆರ್‌ಜೆಡಿ ನಿಯೋಗವು ತೃಣಮೂಲ ಚುನಾವಣಾ ಕಾರ್ಯತಂತ್ರದಲ್ಲಿ ಪ್ರಮುಖ ಪಾತ್ರ ವಹಿಸುತ್ತಿರುವ ಅಭಿಷೇಕ್ ಬ್ಯಾನರ್ಜಿಯನ್ನು ಭೇಟಿ ಮಾಡಿತ್ತು.

ತೇಜಸ್ವಿ ಯಾದವ್ ಅವರ ಆರ್‌ಜೆಡಿಯು ಯಾದವರ ಮತಗಳ ಮೇಲೆ ಸಾಕಷ್ಟು ಪ್ರಭಾವ ಬೀರಿದೆ. ಇದು ಅಸನ್ಸೋಲ್ ನಂತಹ ಪ್ರದೇಶಗಳಲ್ಲಿ ಗಮನಾರ್ಹ ಪರಿಣಾಮ ಬೀರುತ್ತದೆ. ಪಶ್ಚಿಮ ಬಂಗಾಳ ಮತ್ತು ಅಸ್ಸಾಂ ಚುನಾವಣೆಯಲ್ಲಿ ಆರ್‌ಜೆಡಿಯನ್ನು ವಿಸ್ತರಿಸಲು ಯೋಜಿಸಲಾಗುತ್ತಿದೆ ಎನ್ನುವ ಸುಳಿವನ್ನು ತೇಜಸ್ವಿ ಯಾದವ್ ಇತ್ತೀಚೆಗೆ ನೀಡಿದ್ದರು.

ಪಶ್ಚಿಮ ಬಂಗಾಳ ಚುನಾವಣೆಯು ಮಾರ್ಚ್ 27 ರಿಂದ ಏಪ್ರಿಲ್ 29 ರವರೆಗೆ ಎಂಟು ಹಂತಗಳಲ್ಲಿ ನಡೆಯಲಿದೆ ಎಂದು ಚುನಾವಣಾ ಆಯೋಗ ಶುಕ್ರವಾರ ಪ್ರಕಟಿಸಿದೆ. ಫಲಿತಾಂಶ ಮೇ 2 ರಂದು ಪ್ರಕಟವಾಗುತ್ತದೆ.


ಇದನ್ನೂ ಓದಿ: ರೈತರನ್ನು ಸುತ್ತುವರಿಯಲು ನೋಡಿದರು, ಈಗ ರೈತರೇ ಸರ್ಕಾರವನ್ನು ಸುತ್ತುವರೆದಿದ್ದಾರೆ: ಡಾ. ಅಮಿತ್ ಬಾಧುರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ಪ್ರತ್ಯೇಕ ಘಟನೆಗಳಲ್ಲಿ ಈವರೆಗೆ ಆರು ಭಾರತೀಯರ ಸಾವು, ಒಬ್ಬರು ಕಾಣೆ; ವಿದೇಶಾಂಗ ಸಚಿವಾಲಯ ಮಾಹಿತಿ

ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಗಲ್ಫ್ ಪ್ರದೇಶದಾದ್ಯಂತ ನಡೆದ ಪ್ರತ್ಯೇಕ ಘಟನೆಗಳಲ್ಲಿ ಆರು ಭಾರತೀಯ ಪ್ರಜೆಗಳು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಒಬ್ಬರು ಕಾಣೆಯಾಗಿದ್ದಾರೆ ಎಂದು ವಿದೇಶಾಂಗ ಸಚಿವಾಲಯ (MEA) ಶುಕ್ರವಾರ ತಿಳಿಸಿದೆ.  ಭಾರತೀಯ ಕಾರ್ಯಾಚರಣೆಗಳು...

ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಇರಾನ್‌ನ ಮತ್ತೊಬ್ಬ ನಾಯಕ, ಐಆರ್‌ಜಿಸಿ ವಕ್ತಾರ ಅಲಿ ಮೊಹಮ್ಮದ್ ನೈನಿ ಸಾವು

ಟೆಹ್ರಾನ್: ಇಸ್ರೇಲಿ-ಅಮೆರಿಕನ್ ಕ್ಷಿಪಣಿ ದಾಳಿಯಲ್ಲಿ ಇರಾನ್ ವಕ್ತಾರ ಜನರಲ್ ಅಲಿ ಮೊಹಮ್ಮದ್ ನೈನಿ ಸಾವನ್ನಪ್ಪಿದ್ದಾರೆ ಎಂದು ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಶುಕ್ರವಾರ ದೃಢಪಡಿಸಿದೆ. ಸರ್ಕಾರಿ ಸ್ವಾಮ್ಯದ ತಸ್ನಿಮ್ ಸುದ್ದಿ ಸಂಸ್ಥೆ...

ಶಿವಮೊಗ್ಗ: ಚಿಕಿತ್ಸೆ ನೀಡಲು ತೆರಳಿದ್ದ ವೇಳೆ ನೀರಾನೆ ದಾಳಿ; 26 ವರ್ಷದ ಪಶುವೈದ್ಯೆ ಸಾವು

ಶಿವಮೊಗ್ಗದ ತ್ಯಾವರೆಕೊಪ್ಪ ಸಿಂಹ ಮತ್ತು ಹುಲಿ ಸಫಾರಿ ಮೃಗಾಲಯದಲ್ಲಿ ಗುರುವಾರ ತಡರಾತ್ರಿ ನೀರಾನೆ ದಾಳಿಗೆ ಒಳಗಾಗಿದ್ದ 26 ವರ್ಷದ ತರಬೇತಿ ವನ್ಯಜೀವಿ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಶುಕ್ರವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ. ಬೆಂಗಳೂರಿನ ಬನ್ನೇರುಘಟ್ಟದವರಾದ ಸಮೀಕ್ಷಾ,...

ಸಾಮೂಹಿಕ ಮತಾಂತರಕ್ಕೆ ಕಾರಣವಾದವರಿಗೆ ಜೀವಾವಧಿ ಶಿಕ್ಷೆ; ಮಸೂದೆ ಅಂಗೀಕರಿಸಿದ ಛತ್ತೀಸ್‌ಗಢ ವಿಧಾನಸಭೆ

ಬಲವಂತ, ಪ್ರಚೋದನೆ, ವಂಚನೆ ಅಥವಾ ತಪ್ಪು ನಿರೂಪಣೆಯ ಮೂಲಕ ನಡೆಸಲಾಗುವ ಧಾರ್ಮಿಕ ಮತಾಂತರಗಳನ್ನು ತಡೆಗಟ್ಟುವ ಗುರಿಯನ್ನು ಹೊಂದಿರುವ ಮಸೂದೆಯನ್ನು ಛತ್ತೀಸ್‌ಗಢ ವಿಧಾನಸಭೆಯು ಗುರುವಾರ ಅಂಗೀಕರಿಸಿದೆ. ಸಾಮೂಹಿಕ ಮತಾಂತರ ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆ ಸೇರಿದಂತೆ...

6 ವರ್ಷಗಳ ಜೈಲುವಾಸದ ನಂತರ ಮಧ್ಯಂತರ ಜಾಮೀನು; ಜೈಲಿನಿಂದ ಹೊರಬಂದ ಶಾರ್ಜೀಲ್ ಇಮಾಮ್‌

ಸಹೋದರನ ಮದುವೆಯಲ್ಲಿ ಭಾಗವಹಿಸಲು ಮತ್ತು ಅನಾರೋಗ್ಯ ಪೀಡಿತ ತಾಯಿಯನ್ನು ನೋಡಿಕೊಳ್ಳಲು ದೆಹಲಿ ನ್ಯಾಯಾಲಯವು 10 ದಿನಗಳ ಮಧ್ಯಂತರ ಜಾಮೀನು ನೀಡಿದ ನಂತರ ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್ ಶುಕ್ರವಾರ ಸುಮಾರು ಆರು ವರ್ಷಗಳ...

ಉತ್ತಮ್ ನಗರದಲ್ಲಿ ಗೌರವಯುತ-ಶಾಂತಿಯುತ ಈದ್ ಆಚರಿಸುವಂತೆ ನೋಡಿಕೊಳ್ಳಿ: ಅಧಿಕಾರಿಗಳಿಗೆ ಎಂದು ದೆಹಲಿ ಹೈಕೋರ್ಟ್ ನಿರ್ದೇಶನ

ರಾಷ್ಟ್ರ ರಾಜಧಾನಿಯ ದೆಹಲಿಯ ಉತ್ತಮ್ ನಗರ ಪ್ರದೇಶದಲ್ಲಿ ಹೆಚ್ಚುತ್ತಿರುವ ಕೋಮು ಉದ್ವಿಗ್ನತೆಯ ನಡುವೆ, ಸಮುದಾಯಗಳ ನಡುವೆ ಶಾಂತಿ ಕಾಪಾಡಿಕೊಳ್ಳುವ ಜೊತೆಗೆ ಶಾಂತಿಯುತ ಮತ್ತು ಘನತೆಯ ಈದ್ ಆಚರಣೆಯನ್ನು ಖಚಿತಪಡಿಸಿಕೊಳ್ಳಲು ಕಾನೂನಿನಡಿಯಲ್ಲಿ ಅನುಮತಿಸಬಹುದಾದ ಎಲ್ಲಾ...

ಕಥುವಾ ಪ್ರಕರಣ: ವೈಯಕ್ತಿಕ ಭದ್ರತೆ ಕಡಿತ; ‘ಮಗಳು ಶಾಲೆಗೆ ಹೋಗುತ್ತಿಲ್ಲ’ ಎಂದು ಕಳವಳ ವ್ಯಕ್ತಪಡಿಸಿದ ವಕೀಲೆ ದೀಪಿಕಾ ಪುಷ್ಕರ್ ನಾಥ್ 

2018 ರ ಕಥುವಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಎಂಟು ವರ್ಷದ ಬಾಲಕಿಯ ಕುಟುಂಬವನ್ನು ಪ್ರತಿನಿಧಿಸಿದ್ದ ಜಮ್ಮುವಿನ ಪ್ರಮುಖ ವಕೀಲೆ ಮತ್ತು ಮಾನವ ಹಕ್ಕುಗಳ ಕಾರ್ಯಕರ್ತೆ ದೀಪಿಕಾ ಪುಷ್ಕರ್ ನಾಥ್, ತಮ್ಮ ವೈಯಕ್ತಿಕ...

ಒಡಿಶಾ| ದಲಿತ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

ಸಾಮಾಜಿಕ ಬಹಿಷ್ಕಾರದ ಆತಂಕಕಾರಿ ಪ್ರಕರಣವೊಂದು ಒಡಿಶಾ ರಾಜ್ಯದ ಗಂಜಾಂ ಜಿಲ್ಲೆಯ ಕಬಿಸೂರ್ಯನಗರ ಪೊಲೀಸ್ ವ್ಯಾಪ್ತಿಯಲ್ಲಿರುವ ಅರ್ಜುನಪಲ್ಲಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಪರಿಶಿಷ್ಟ ಜಾತಿ (ಎಸ್‌ಸಿ) ಗೆ ಸೇರಿದ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ್ದಕ್ಕಾಗಿ...

‘ಕೇವಲ ಗಾಳಿಯಲ್ಲಿ ಕ್ರಾಂತಿ ಸಾಧ್ಯವಿಲ್ಲ, ನೆಲದ ಘಟಕವೂ ಬೇಕು’; ಇರಾನ್ ಮೇಲಿನ ಯುದ್ಧದಲ್ಲಿ ‘ಭೂ-ದಾಳಿ’ಯ ಸುಳಿವು ನೀಡಿದ ನೆತನ್ಯಾಹು

‘ನೀವು ಗಾಳಿಯಿಂದ ಕ್ರಾಂತಿಗಳನ್ನು ಮಾಡಲು ಸಾಧ್ಯವಿಲ್ಲ’ ಈ ಹೇಳಿಕೆಯ ಮೂಲಕ ಇರಾನ್ ವಿರುದ್ಧ ಅಮೆರಿಕ-ಇಸ್ರೇಲ್ ಯುದ್ಧಕ್ಕೆ 'ನೆಲದ ಅಂಶ'ದ ಸಾಧ್ಯತೆಯ ಬಗ್ಗೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸುಳಿವು ನೀಡಿದ್ದಾರೆ ಎನ್ನುವ ಸುದ್ದಿ...

ನಕಲಿ ಆಪಲ್ ಪರಿಕರಗಳ ದಂಧೆ ಭೇದಿಸಿದ ಮುಂಬೈ ಪೊಲೀಸರು; ₹16.33 ಲಕ್ಷ ಮೌಲ್ಯದ ಸರಕುಗಳ ವಶ; ಆರು ಜನರ ವಿರುದ್ಧ ಪ್ರಕರಣ 

ಮುಂಬೈ: ನಕಲಿ ಬ್ರಾಂಡ್ ಸರಕುಗಳ ಮಾರಾಟದ ಮೇಲೆ ಪ್ರಮುಖ ದಾಳಿ ನಡೆಸಿರುವ ಮುಂಬೈ ಪೊಲೀಸರು, ಘಾಟ್ಕೋಪರ್ ಪೂರ್ವದಲ್ಲಿ ನಕಲಿ ಆಪಲ್ ಪರಿಕರಗಳನ್ನು ಮಾರಾಟ ಮಾಡುತ್ತಿದ್ದ ಸಂಘಟಿತ ದಂಧೆಯನ್ನು ಭೇದಿಸಿದ್ದಾರೆ. ಈ ಪ್ರಕರಣದಲ್ಲಿ 16.33...