Homeಮುಖಪುಟಪ.ಬಂಗಾಳ ಚುನಾವಣೆ: ತೇಜಸ್ವಿ ಯಾದವ್ ಭೇಟಿಯಾಗಲಿರುವ ಮಮತಾ ಬ್ಯಾನರ್ಜಿ

ಪ.ಬಂಗಾಳ ಚುನಾವಣೆ: ತೇಜಸ್ವಿ ಯಾದವ್ ಭೇಟಿಯಾಗಲಿರುವ ಮಮತಾ ಬ್ಯಾನರ್ಜಿ

- Advertisement -
- Advertisement -

ಪಶ್ಚಿಮ ಬಂಗಾಳದ ಚುನಾವಣೆಯ ಹಿನ್ನೆಲೆಯಲ್ಲಿ ಟಿಎಂಸಿ ಮುಖ್ಯಸ್ಥೆ ಮತ್ತು ಸಿಎಂ ಮಮತಾ ಬ್ಯಾನರ್ಜಿ ಆರ್‌ಜೆಡಿ ಮುಖ್ಯಸ್ಥ ತೇಜಸ್ವಿ ಯಾದವ್ ಅವರನ್ನು ಭೇಟಿ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ತೃಣಮೂಲ ಕಾಂಗ್ರೆಸ್ ಪಕ್ಷದ ಚುನಾವಣಾ ಸಮಿತಿಯ ಸಭೆಯು ಇಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರ ಕಾಲಿಘಾಟ್ ನಿವಾಸದಲ್ಲಿ ನಡೆಯಲಿದೆ. ಈ ಸಮಿತಿಯಲ್ಲಿ ತೃಣಮೂಲ ಯುವ ವಿಭಾಗದ ಮುಖ್ಯಸ್ಥ ಅಭಿಷೇಕ್ ಬ್ಯಾನರ್ಜಿ ಮತ್ತು ಪಕ್ಷದ ಇತರ ಹಿರಿಯ ನಾಯಕರು ಸೇರಿಕೊಂಡಿದ್ದಾರೆ.

ಫಿರ್ಹಾದ್ ಹಕೀಮ್, ಸುಬ್ರತಾ ಬಕ್ಷಿ, ಸೌಗತಾ ರಾಯ್, ಡೆರೆಕ್ ಒ’ಬ್ರಿಯೆನ್, ಅರೂಪ್ ಬಿಸ್ವಾಸ್, ಚಂದ್ರಮಾ ಭಟ್ಟಾಚಾರ್ಯ, ಸಿಎಂ ಜತುವಾ, ಸುಬ್ರತಾ ಮುಖರ್ಜಿ, ಸುದೀಪ್ ಬಂದೋಪಾಧಯ್ ಮತ್ತು ಪಾರ್ಥ ಚಟರ್ಜಿ ಮತ್ತು ಸಮಿತಿಯ ಇತರ ಹಿರಿಯ ನಾಯಕರು ಈ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಚುನಾವಣೆ ಹತ್ತಿರವಾಗುತ್ತಿರುವ ಹಿನ್ನೆಲೆಯಲ್ಲಿ ಟಿಎಂಸಿಯು ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸುವ ಸಾಧ್ಯತೆ ಇದೆ.

ಮೂಲಗಳ ಪ್ರಕಾರ ಅಭ್ಯರ್ಥಿಗಳ ಆಯ್ಕೆಯಲ್ಲಿ ಮಮತಾ ಬ್ಯಾನರ್ಜಿ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತಾರೆ. ಅಭಿಷೇಕ್ ಬ್ಯಾನರ್ಜಿ ಸೇರಿದಂತೆ ಎಲ್ಲ ನಾಯಕರು ಸಲಹೆಗಳನ್ನು ನೀಡಲಿದ್ದಾರೆ. ಅಭ್ಯರ್ಥಿಗಳ ಪಟ್ಟಿಯಲ್ಲಿ ಹೆಚ್ಚಿನ ಯುವ ಜನರು ಕಾಣಿಸಿಕೊಳ್ಳುವ ಸಾಧ್ಯತೆಯಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿ: ದೆಹಲಿ ಹಿಂಸಾಚಾರದ ಅಸಲಿ ಪಿತೂರಿಗಾರರು ಯಾರು? ದೆಹಲಿ ಪೊಲೀಸ್ ನೋಡಲೊಲ್ಲದ ಭೀಕರ ಸತ್ಯಗಳನ್ನು ತೆರೆದಿಟ್ಟ ದಿ ವೈರ್ ವರದಿ

ತೃಣಮೂಲ ಕಾಂಗ್ರೆಸ್ ಮತ್ತು ಆರ್‌ಜೆಡಿ ನಡುವೆ ಹೊಂದಾಣಿಕೆಯಾಗುವ ಸಾಧ್ಯತೆಯಿದೆ. ಕಳೆದ ತಿಂಗಳು ಪಕ್ಷದ ಹಿರಿಯ ನಾಯಕರಾದ ಅಬ್ದುಲ್ ಬರಿ ಸಿದ್ದಿಕಿ ಮತ್ತು ಶ್ಯಾಮ್ ರಾಜಕ್ ನೇತೃತ್ವದ ಆರ್‌ಜೆಡಿ ನಿಯೋಗವು ತೃಣಮೂಲ ಚುನಾವಣಾ ಕಾರ್ಯತಂತ್ರದಲ್ಲಿ ಪ್ರಮುಖ ಪಾತ್ರ ವಹಿಸುತ್ತಿರುವ ಅಭಿಷೇಕ್ ಬ್ಯಾನರ್ಜಿಯನ್ನು ಭೇಟಿ ಮಾಡಿತ್ತು.

ತೇಜಸ್ವಿ ಯಾದವ್ ಅವರ ಆರ್‌ಜೆಡಿಯು ಯಾದವರ ಮತಗಳ ಮೇಲೆ ಸಾಕಷ್ಟು ಪ್ರಭಾವ ಬೀರಿದೆ. ಇದು ಅಸನ್ಸೋಲ್ ನಂತಹ ಪ್ರದೇಶಗಳಲ್ಲಿ ಗಮನಾರ್ಹ ಪರಿಣಾಮ ಬೀರುತ್ತದೆ. ಪಶ್ಚಿಮ ಬಂಗಾಳ ಮತ್ತು ಅಸ್ಸಾಂ ಚುನಾವಣೆಯಲ್ಲಿ ಆರ್‌ಜೆಡಿಯನ್ನು ವಿಸ್ತರಿಸಲು ಯೋಜಿಸಲಾಗುತ್ತಿದೆ ಎನ್ನುವ ಸುಳಿವನ್ನು ತೇಜಸ್ವಿ ಯಾದವ್ ಇತ್ತೀಚೆಗೆ ನೀಡಿದ್ದರು.

ಪಶ್ಚಿಮ ಬಂಗಾಳ ಚುನಾವಣೆಯು ಮಾರ್ಚ್ 27 ರಿಂದ ಏಪ್ರಿಲ್ 29 ರವರೆಗೆ ಎಂಟು ಹಂತಗಳಲ್ಲಿ ನಡೆಯಲಿದೆ ಎಂದು ಚುನಾವಣಾ ಆಯೋಗ ಶುಕ್ರವಾರ ಪ್ರಕಟಿಸಿದೆ. ಫಲಿತಾಂಶ ಮೇ 2 ರಂದು ಪ್ರಕಟವಾಗುತ್ತದೆ.


ಇದನ್ನೂ ಓದಿ: ರೈತರನ್ನು ಸುತ್ತುವರಿಯಲು ನೋಡಿದರು, ಈಗ ರೈತರೇ ಸರ್ಕಾರವನ್ನು ಸುತ್ತುವರೆದಿದ್ದಾರೆ: ಡಾ. ಅಮಿತ್ ಬಾಧುರಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮೋದಿಯವರ ಹಲವಾರು ಹೇಳಿಕೆಗಳಿಂದ ಮಾದರಿ ನೀತಿ ಸಂಹಿತೆ ಉಲ್ಲಂಘನೆ: ಸೀತಾರಾಂ ಯೆಚೂರಿ

0
'ದೇಶದ ವಿವಿಧ ಭಾಗಗಳಲ್ಲಿ ತಮ್ಮ ಲೋಕಸಭಾ ಚುನಾವಣಾ ಪ್ರಚಾರದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ಮಾದರಿ ನೀತಿ ಸಂಹಿತೆ ಉಲ್ಲಂಘಿಸುವ ಹೇಳಿಕೆಗಳನ್ನು ನೀಡಿದ್ದಾರೆ' ಎಂದು ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ...