Homeಮುಖಪುಟಪ.ಬಂಗಾಳ ಚುನಾವಣೆ: ಮಮತಾ ಬ್ಯಾನರ್ಜಿಗೆ ಬೆಂಬಲ ಘೋಷಿಸಿದ ತೇಜಸ್ವಿ ಯಾದವ್

ಪ.ಬಂಗಾಳ ಚುನಾವಣೆ: ಮಮತಾ ಬ್ಯಾನರ್ಜಿಗೆ ಬೆಂಬಲ ಘೋಷಿಸಿದ ತೇಜಸ್ವಿ ಯಾದವ್

- Advertisement -
- Advertisement -

ಆರ್‌ಜೆಡಿ ಮುಖಂಡ ತೇಜಸ್ವಿ ಯಾದವ್ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯನ್ನು ಭೇಟಿಯಾಗಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷಕ್ಕೆ ತಮ್ಮ ಸಂಪೂರ್ಣ ಬೆಂಬಲ ನೀಡುವುದಾಗಿ ಘೋಷಿಸಿದ್ದಾರೆ. ಆಡಳಿತಾರೂಢ ತೃಣಮೂಲ ಕಾಂಗ್ರೆಸ್‌ನ ಮಿತ್ರಪಕ್ಷವಾಗಿ ಆರ್‌ಜೆಡಿ ಮೂರರಿಂದ ನಾಲ್ಕು ಸ್ಥಾನಗಳಲ್ಲಿ ಸ್ಪರ್ಧಿಸಲಿದೆ.

“ಬಿಹಾರದ ಅನೇಕ ಜನರು ಪಶ್ಚಿಮ ಬಂಗಾಳದಲ್ಲಿ ವಾಸಿಸುತ್ತಿದ್ದಾರೆ. ಮಮತಾ ಜಿ ಅವರನ್ನು ಬೆಂಬಲಿಸುವಂತೆ ನಾನು ಬಿಹಾರದ ಎಲ್ಲರಿಗೂ ಮನವಿ ಮಾಡುತ್ತೇನೆ” ಎಂದು ತೇಜಸ್ವಿ ಯಾದವ್ ಹೇಳಿದ್ದಾರೆ.

ಇದನ್ನು ಉಲ್ಲೇಖಿಸಿದ ಮಮತಾ ಬ್ಯಾನರ್ಜಿ, “ಬಿಹಾರ ಚುನಾವಣೆಯಲ್ಲಿ ಆರ್‌ಜೆಡಿ ಜಯಗಳಿಸುವುದನ್ನು ತಡೆಯಲು ಬಿಜೆಪಿ ಎಲ್ಲಾ ರೀತಿಯ ತಂತ್ರಗಳನ್ನು ಬಳಸಿತ್ತು” ಎಂದು ವಾಗ್ದಾಳಿ ನಡೆಸಿದರು.

ಇದನ್ನೂ ಓದಿ: ಮೃತ ಮಹಿಳೆಯ ಮಾನಹಾನಿ: ಬಿಜೆಪಿಯ ಮಾಜಿ ಮುಖ್ಯಮಂತ್ರಿ ಸೇರಿದಂತೆ 6 ಜನರ ವಿರುದ್ಧ ಪ್ರಕರಣ

ಪಶ್ಚಿಮ ಬಂಗಾಳದಲ್ಲಿ ವಾಸಿಸುವ ಬಂಗಾಳಿಗಳಲ್ಲದ ಜನರು ರಾಜ್ಯದ ಒಟ್ಟು ಮತದಾರರಲ್ಲಿ ಶೇಕಡಾ 6 ರಷ್ಟು ಇದ್ದಾರೆ. ಅನೇಕ ಸ್ಥಳಗಳಲ್ಲಿ ಬಿಹಾರದಿಂದ ವಲಸೆ ಬಂದವರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಇದು ಒಟ್ಟು ಮತದಾರರಲ್ಲಿ ಶೇಕಡಾ 12 ರಿಂದ 14 ರಷ್ಟಿದೆ. ರಾಜ್ಯದಲ್ಲಿನ ಚುನಾವಣಾ ಕಣವು ಸೆನ್ಷೇಷನ್ ಆಗಿರುವ ಈ ಸಂದರ್ಭದಲ್ಲಿ ಆರ್‌ಜೆಡಿ ಪಕ್ಷದ ಈ ನಿರ್ಧಾರವು ಮಹತ್ವದ್ದಾಗಿದೆ ಎಂದು ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಈ ಕುರಿತು ಪ್ರತಿಕ್ರಿಯಿಸಿದ ಟಿಎಂಸಿ ಮುಖಂಡರೊಬ್ಬರು, “ಶೇಕಡಾ 6 ರಷ್ಟು ಬಂಗಾಳಿಗಳಲ್ಲದ ಮತದಾರರು ಬಿಹಾರ ಮೂಲದವರು. 2019 ರ ಚುನಾವಣೆಯಲ್ಲಿ ಬಿಜೆಪಿಯ ಮತಗಳಿಕೆಯನ್ನು ಗಮನಿಸಿದರೆ, ನಾವು ಕೇವಲ ಶೇಕಡಾ 3ರಷ್ಟು ಮತಗಳಿಂದ ಮುಂದಿದ್ದೇವೆ. ಬಂಗಾಳಿಗಳಲ್ಲದ ಮತದಾರರು ಕೆಲವು ಕ್ಷೇತ್ರಗಳಲ್ಲಿ ನಿರ್ಣಾಯಕ ಪಾತ್ರವಹಿಸಬಹುದು. ಹಾಗಾಗಿ ಈ ಕ್ರಮವು ಖಂಡಿತವಾಗಿಯೂ ನಮಗೆ ಚುನಾವಣಾ ರೀತಿಯಲ್ಲಿ ಮಹತ್ವದ್ದಾಗಿದೆ” ಎಂದು ಹೇಳಿದರು.


ಇದನ್ನೂ ಓದಿ: ನನ್ನನ್ನು ಬಂಧಿಸಲು ಲಿಂಗಾಯತ IPS ಅಧಿಕಾರಿಗಳನ್ನು ಕಳುಹಿಸಿದ್ದರು: ಯತ್ನಾಳ್ ಆರೋಪ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

FACT CHECK : ಸಿದ್ದರಾಮಯ್ಯ ಸರ್ಕಾರ ಮುಸ್ಲಿಮರನ್ನು ಒಬಿಸಿ ಪಟ್ಟಿಗೆ ಸೇರಿಸಿದ್ದು ನಿಜಾನಾ?

0
ಕರ್ನಾಟಕದಲ್ಲಿ ಮುಸ್ಲಿಮರನ್ನು ಹಿಂದುಳಿದ ವರ್ಗಕ್ಕೆ ಸೇರಿಸುವ ಮೂಲಕ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಹಿಂದುಳಿದ ವರ್ಗಗಳ 36 ಜಾತಿಗಳಿಗೆ ಅನ್ಯಾಯ ಮಾಡಿದೆ ಎಂದು ಬಿಜೆಪಿ ಆರೋಪಿಸಿದೆ. ಸಿದ್ದರಾಮಯ್ಯ ಸರ್ಕಾರ ಹಿಂದುಳಿದ ವರ್ಗಗಳಿಗೆ...