Homeಕರೋನಾ ತಲ್ಲಣಕೊರೋನಾ 3ನೇ ಅಲೆ ನಿರ್ವಹಣೆಗೆ 10 ಜನ ತಜ್ಞರ ಸಮಿತಿ ರಚಿಸಿದ ಪಶ್ಚಿಮ ಬಂಗಾಳ ಸರ್ಕಾರ

ಕೊರೋನಾ 3ನೇ ಅಲೆ ನಿರ್ವಹಣೆಗೆ 10 ಜನ ತಜ್ಞರ ಸಮಿತಿ ರಚಿಸಿದ ಪಶ್ಚಿಮ ಬಂಗಾಳ ಸರ್ಕಾರ

- Advertisement -
- Advertisement -

ದೇಶದಲ್ಲಿ ಸಂಭಾವ್ಯ ಕೊರೋನಾ ಸಾಂಕ್ರಾಮಿಕದ 3 ನೇ ಅಲೆಯ ನಿರ್ವಹಣೆ ಕುರಿತು ದೇಶದಲ್ಲಿ ಅನೇಕ ರಾಜ್ಯಗಳು ಪೂರ್ವಸಿದ್ಧತೆಗಳನ್ನು ಮಾಡಿಕೊಳ್ಳುತ್ತಿವೆ. ಮಹಾರಾಷ್ಟ್ರ, ಕರ್ನಾಟಕ, ಸೇರಿದಂತೆ ವಿವಿಧ ರಾಜ್ಯಗಳು ಈಗಾಗಲೇ ಕೊರೋನಾ ಮೂರನೇ ಅಲೆಯನ್ನು ಎದುರಿಸಲು ಮಕ್ಕಳಿಗಾಗಿ ವಿಶೇಷ ಆಸ್ಪತ್ರೆಗಳ ವ್ಯವಸ್ಥೆಗಳನ್ನು ಮಾಡಿಕೊಳ್ಳುತ್ತಿವೆ. ಈಗ ಪಶ್ಚಿಮ ಬಂಗಾಳ ಸರ್ಕಾರ ಕೊರೋನಾ ಮೂರನೇ ಅಲೆಯ ನಿರ್ವಹಣೆಗೆ 10 ಜನ ತಜ್ಞರ ಸಮಿತಿಯನ್ನು ರಚಿಸಿದೆ. ಈ ಸಮಿತಿಯು ಮಕ್ಕಳ ತಜ್ಞರು ಮತ್ತು ಪರಿಣಿತ ವೈದ್ಯರನ್ನು ಒಳಗೊಳ್ಳಲಿದೆ.

ಪಶ್ಚಿಮ ಬಂಗಾಳ ರಾಜ್ಯದಲ್ಲಿ ಕೊರೋನಾ 2 ನೇ ಅಲೆಯ ಸಂದರ್ಭದಲ್ಲಿ 20,000 ಪ್ರಕರಣಗಳು ದಾಖಲಾಗಿದ್ದವು. ಹಾಗೇ ಚುನಾವಣೆ ಕಾರಣದಿಂದ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಗಣನೀಯ ಹೆಚ್ಚಳವಾಗಿತ್ತು. ಎರಡನೇ ಅಲೆಯ ಸಂದರ್ಭದಲ್ಲಿ ಆದ ಲೋಪದೋಷಗಳನ್ನು ಸರಿಪಡಿಸಿಕೊಂಡು ಸಂಭಾವ್ಯ ಮೂರನೇ ಅಲೆಯನ್ನು ತಡೆಯುವ ನಿಟ್ಟಿನಲ್ಲಿ ತಜ್ಞರ ಸಮಿತಿ ಪಶ್ಚಿಮ ಬಂಗಾಳ ಸರ್ಕಾರದ ಜೊತೆ ಕೆಲಸ ಮಾಡಲಿದೆ. ಸರ್ಕಾರ ಕೊರೋನಾ ತಡೆಗೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸಮಿತಿ ಸರ್ಕಾರಕ್ಕೆ ಸಲಹೆಗಳನ್ನು ನೀಡಲಿದೆ.

ಪಶ್ಚಿಮ ಬಂಗಾಳ ಸರ್ಕಾರವು ಈಗಾಗಲೇ 12 ವರ್ಷದೊಳಗಿನ ಮಕ್ಕಳ ಕೊರೋನಾ ಚಿಕಿತ್ಸೆಗಾಗಿ ವಿಶೇಷ ಆಸ್ಪತ್ರೆಗಳ ವ್ಯವಸ್ಥೆ ಮಾಡಿದೆ. ಸುಮಾರ 10,000 ಬೆಡ್‌ಗಳನ್ನು ರಾಜ್ಯದಲ್ಲಿ ಮಕ್ಕಳಿಗಾಗಿ ಮೀಸಲಿಡಲಾಗಿದೆ. ಈ ಆಸ್ಪತ್ರೆಗಳಲ್ಲಿ ತಾಯಿ ಮತ್ತು ಮಗು ಒಟ್ಟಿಗೆ ಇರುವ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ಪಶ್ಚಿಮ ಬಂಗಾಳ ಸರ್ಕಾರ ತಿಳಿಸಿದೆ. ಕೊರೋನಾ ಮೂರನೇ ಅಲೆಯು ಆಗಸ್ಟ್‌ ತಿಂಗಳಿನಲ್ಲಿ ಕಾಣಿಸಿಕೊಳ್ಳಲಿದ್ದು ಈ ಸಂದರ್ಭದಲ್ಲಿ ಮಕ್ಕಳು ತೀವ್ರವಾಗಿ ಸೋಂಕಿಗೆ ತುತ್ತಾಗಲಿದ್ದಾರೆ ಎಂದು ತಜ್ಞರು ತಿಳಿಸಿದ್ದಾರೆ. ತಜ್ಞರ ಎಚ್ಚರಿಕೆಯಿಂದ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರಗಳು 3 ನೇ ಅಲೆಯ ತಡೆಗೆ ಭರದ ಸಿದ್ಧತೆಗಳನ್ನು ಮಾಡಿಕೊಂಡಿದ್ದು ಪಶ್ಚಿಮ ಬಂಗಾಳದ ಜೊತೆಗೆ ಇತರ ರಾಜ್ಯಗಳೂ ಮಕ್ಕಳ ತಜ್ಞರನ್ನು ನೇಮಿಸಿಕೊಂಡಿವೆ.


ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ 2-4 ವಾರಗಳಲ್ಲಿ ಅಪ್ಪಳಿಸಲಿರುವ ಕೋವಿಡ್ ಮೂರನೇ ಅಲೆ: ಹೆಚ್ಚಿನ ಪ್ರಕರಣಗಳ ಸಾಧ್ಯತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...