Homeಮುಖಪುಟಪ.ಬಂಗಾಳ: ಲೈಂಗಿಕ ದೌರ್ಜ್ಯನ್ಯದ ಆರೋಪದ ಬೆನ್ನಲ್ಲಿ ರಾಜಭವನಕ್ಕೆ ಪೊಲೀಸರಿಗೆ ಪ್ರವೇಶ ನಿಷೇಧಿಸಿದ ಗವರ್ನರ್‌

ಪ.ಬಂಗಾಳ: ಲೈಂಗಿಕ ದೌರ್ಜ್ಯನ್ಯದ ಆರೋಪದ ಬೆನ್ನಲ್ಲಿ ರಾಜಭವನಕ್ಕೆ ಪೊಲೀಸರಿಗೆ ಪ್ರವೇಶ ನಿಷೇಧಿಸಿದ ಗವರ್ನರ್‌

- Advertisement -
- Advertisement -

ಪಶ್ಚಿಮ ಬಂಗಾಳದ ರಾಜ್ಯಪಾಲ ಸಿ.ವಿ.ಆನಂದ ಬೋಸ್ ವಿರುದ್ಧ ನಿನ್ನೆ ರಾಜಭವನದ ಮಹಿಳಾ ಉದ್ಯೋಗಿಯೋರ್ವರು ಲೈಂಗಿಕ ದೌರ್ಜನ್ಯದ ಆರೋಪ ಹೊರಿಸಿದ್ದರು. ಇದರ ಬೆನ್ನಲ್ಲಿ ರಾಜ್ಯಪಾಲರು ತನಿಖೆಯ ನೆಪದಲ್ಲಿ ಪೊಲೀಸರು ರಾಜಭವನಕ್ಕೆ ಪ್ರವೇಶಿಸದಂತೆ ನಿಷೇಧಿಸಿದ್ದಾರೆ, ಇದಲ್ಲದೆ ತನ್ನ ವಿರುದ್ಧ ಸಾರ್ವಜನಿಕ ಹೇಳಿಕೆಯನ್ನು ನೀಡಿದ ಸಚಿವೆ ಚಂದ್ರಿಮಾ ಭಟ್ಟಾಚಾರ್ಯ ಅವರಿಗೂ ನಿಷೇಧವನ್ನು ವಿಧಿಸಿದ್ದಾರೆ.

ಚುನಾವಣಾ ಸಮಯದಲ್ಲಿ ರಾಜಕೀಯ ಲಾಭಕ್ಕೆ ಅನಧಿಕೃತ, ಕಾನೂನುಬಾಹಿರ ತನಿಖೆಯ ನೆಪ ನೆಪದಲ್ಲಿ ಪೊಲೀಸರು ರಾಜಭವನ ಪ್ರವೇಶಿಸುವುದನ್ನು ನಿಷೇಧಿಸಲಾಗಿದೆ ಎಂದು ರಾಜಭವನ ತಿಳಿಸಿದ್ದು, ಇದು ಪ.ಬಂಗಾಳದ ರಾಜ್ಯ ಸರಕಾರ ಮತ್ತು ರಾಜಭವನದ ನಡುವಿನ ಸಂಘರ್ಷವನ್ನು ಹೆಚ್ಚಿಸಿದೆ.

ಈ ಕುರಿತು ರಾಜಭವನ ಹೇಳಿಕೆಯನ್ನು ಹೊರಡಿಸಿದ್ದು, ರಾಜ್ಯಪಾಲರ ವಿರುದ್ಧ ಹೇಳಿಕೆ ನೀಡಿದ್ದಕ್ಕೆ ಸಚಿವರ ವಿರುದ್ಧ ಮುಂದಿನ ಕಾನೂನು ಕ್ರಮಗಳ ಕುರಿತು ಸಲಹೆಗಾಗಿ ಭಾರತದ ಅಟಾರ್ನಿ ಜನರಲ್ ಅವರನ್ನು ಸಂಪರ್ಕಿಸಲಾಗಿದೆ. ಅನಧಿಕೃತವಾಗಿ ಮತ್ತು ನ್ಯಾಯಸಮ್ಮತವಲ್ಲದ ತನಿಖೆಯ ನೆಪದಲ್ಲಿ ಪೊಲೀಸರು ರಾಜಭವನವನ್ನು ಪ್ರವೇಶಿಸುವುದನ್ನು ಗೌರವಾನ್ವಿತ ರಾಜ್ಯಪಾಲರು ನಿಷೇಧಿಸಿದ್ದಾರೆ ಎಂದು ತಿಳಿಸಿದೆ.

ರಾಜ್ಯಪಾಲರು ರಾಜಭವನದ ಸಿಬ್ಬಂದಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ಆರೋಪದ ಬೆನ್ನಲ್ಲಿ ಈ ಬೆಳವಣಿಗೆ ನಡೆದಿದೆ. ರಾಜ್ಯಪಾಲರು ತಮ್ಮ ಮೇಲಿನ ಆರೋಪವನ್ನು ನಿರಾಕರಿಸಿದ್ದರು.

ತಮ್ಮ ವಿರುದ್ಧ ಮಾನಹಾನಿಕರ ಮತ್ತು ಸಂವಿಧಾನ ವಿರೋಧಿ ಮಾಧ್ಯಮ ಹೇಳಿಕೆಗಳನ್ನು ನೀಡಿದ್ದಾರೆಂದು ರಾಜ್ಯ ಹಣಕಾಸು ಇಲಾಖೆ ಸಚಿವೆ ಚಂದ್ರಿಮಾ ಭಟ್ಟಾಚಾರ್ಯ ಅವರನ್ನು ರಾಜಧಾನಿ ಕೋಲ್ಕತ್ತಾ, ಡಾರ್ಜಿಲಿಂಗ್ ಮತ್ತು ಬ್ಯಾರಕ್‌ಪೋರ್‌ನಲ್ಲಿರುವ ಭವನದ ಆವರಣಕ್ಕೆ ಪ್ರವೇಶಿಸದಂತೆ ರಾಜ್ಯಪಾಲರು ನಿರ್ಬಂಧ ವಿಧಿಸಿದ್ದಾರೆ.

ರಾಜಭವನದಲ್ಲಿ ಏನಾಗುತ್ತಿದೆ ಎಂದು ನಾನು ಆಶ್ಚರ್ಯ ಪಡುತ್ತೇನೆ ಮತ್ತು ಅದು ಕೂಡ ಪ್ರಧಾನ ಮಂತ್ರಿ ರಾಜ್ಯಕ್ಕೆ ಬರುವ ದಿನದಂದು, ಗವರ್ನರ್ ಲೈಂಗಿಕ ಕಿರುಕುಳದಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಆರೋಪಿಸಲಾಗುತ್ತಿದೆ. ನಾವು ಯಾವ ರೀತಿಯ ರಾಜ್ಯದಲ್ಲಿ ಇದ್ದೇವೆ ಎಂದು ಸಚಿವೆ ಚಂದ್ರಿಮಾ ಭಟ್ಟಾಚಾರ್ಯ ಅವರು  ರಾಜ್ಯಪಾಲರ ಲೈಂಗಿಕ ದೌರ್ಜನ್ಯದ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿ ಹೇಳಿದ್ದರು.

ರಾಜ್ಯಪಾಲರು ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪಿಸಿ ರಾಜಭವನದ ಮಹಿಳಾ ಉದ್ಯೋಗಿಯೊಬ್ಬರು ಮೊದಲು ಕೋಲ್ಕತ್ತಾ ಪೊಲೀಸ್ ಠಾಣೆಯಲ್ಲಿ ದೂರು  ದಾಖಲಿಸಿದ್ದರು. ಇದರ ಬೆನ್ನಲ್ಲಿ ಪ.ಬಂಗಾಳದಲ್ಲಿ ಪ್ರಕರಣ ಭಾರೀ ಸದ್ದು ಮಾಡಿದೆ. ಈ ಕುರಿತು ಮಾತನಾಡಿದ ಕೇಂದ್ರ ವಿಭಾಗದ ಉಪ ಆಯುಕ್ತೆ ಇಂದಿರಾ ಮುಖರ್ಜಿ, ನಾವು ದೂರು ಸ್ವೀಕರಿಸಿದ್ದೇವೆ ಮತ್ತು ತನಿಖೆ ನಡೆಸುತ್ತಿದ್ದೇವೆ. ಕಾನೂನು ತಜ್ಞರೊಂದಿಗೆ ಈ ವಿಷಯದ ಬಗ್ಗೆ ಸಮಾಲೋಚಿಸುತ್ತಿದ್ದೇವೆ ಎಂದು ಹೇಳಿದ್ದರು.

ಇದನ್ನು ಓದಿ: ಅರವಿಂದ್ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು ನೀಡುವ ಬಗ್ಗೆಯೂ ಯೋಚಿಸಬಹುದು: ಸುಪ್ರೀಂ ಕೋರ್ಟ್‌

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...