ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಜವುಗು ಭೂಮಿಯಲ್ಲಿ 10 ವರ್ಷದ ಬಾಲಕಿಯ ಶವವೊಂದು ಶನಿವಾರ ಪತ್ತೆಯಾಗಿದ್ದು, ಉದ್ರಿಕ್ತ ಸ್ಥಳೀಯ ಜನರು ಅಲ್ಲಿನ ಪೊಲೀಸ್ ಔಟ್‌ಪೋಸ್ಟ್‌ನಲ್ಲಿ ಬೆಂಕಿ ಹಚ್ಚಿದ್ದಾರೆ. ಅಪ್ರಾಪ್ತ ಬಾಲಕಿ ಶುಕ್ರವಾರ ಸಂಜೆಯಿಂದ ನಾಪತ್ತೆಯಾಗಿದ್ದು ಅವರ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿದೆ, ಆದರೆ ಪೊಲೀಸರು ದೂರು ನೀಡಿದರೂ ತಕ್ಷಣವೇ ಕ್ರಮ ಕೈಗೊಂಡಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.ಪಶ್ಚಿಮ ಬಂಗಾಳ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
ಇಂದು ಮುಂಜಾನೆ ಜಯನಗರ ಪ್ರದೇಶದಲ್ಲಿ ಬಾಲಕಿಯ ಶವವನ್ನು ಸ್ಥಳೀಯರು ಪತ್ತೆಹಚ್ಚಿದ್ದು, ತಕ್ಷಣವೆ ಗುಂಪೊಂದು ಮಹಿಸ್ಮರಿ ಪೊಲೀಸ್ ಔಟ್‌ಪೋಸ್ಟ್‌ಗೆ ಬೆಂಕಿ ಹಚ್ಚಿ ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಜನರು ಹೊರಠಾಣೆ ಹೊರಗೆ ನಿಲ್ಲಿಸಿದ್ದ ಹಲವಾರು ವಾಹನಗಳನ್ನು ಧ್ವಂಸಗೊಳಿಸಿದ್ದು, ಪೊಲೀಸರನ್ನು ಠಾಣೆಯ ಆವರಣದಿಂದ ಹೊರಹೋಗುವಂತೆ ಮಾಡಲಾಗಿತ್ತು ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪ್ರದೇಶಕ್ಕೆ ಭಾರಿ ಪೊಲೀಸ್ ಪಡೆಯನ್ನು ಕಳುಹಿಸಲಾಗಿದ್ದು, ಜನರು SDPO ಮತ್ತು ಇತರ ಹಿರಿಯ ಸಿಬ್ಬಂದಿಯನ್ನು ಸ್ಥಳದಲ್ಲಿ ಮುತ್ತಿಗೆ ಹಾಕಲು ಪ್ರಯತ್ನಿಸಿದ್ದಾರೆ. ಈ ವೇಳೆ ಗುಂಪನ್ನು ಹತ್ತಿಕ್ಕಲು ಅಶ್ರುವಾಯು ಶೆಲ್‌ಗಳನ್ನು ಹಾರಿಸಲಾಯಿತು ಎಂದು ವರದಿಯಾಗಿದೆ. ಪಶ್ಚಿಮ ಬಂಗಾಳ
STORY | Girl's body found in Bengal, locals torch police outpost, vandalise vehicles
READ: https://t.co/XS20dMmJcl
VIDEO: #BengalNews
(Full video available on PTI Videos – https://t.co/n147TvqRQz) pic.twitter.com/tWSB9K4Vlc
— Press Trust of India (@PTI_News) October 5, 2024
“ಬಾಲಕಿಯ ಕುಟುಂಬ ಸದಸ್ಯರು ಪ್ರದೇಶದ ಮಹಿಸ್ಮರಿ ಔಟ್‌ಪೋಸ್ಟ್‌ನಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ ಆದರೆ ಪೊಲೀಸರು ದೂರಿನ ಮೇರೆಗೆ ತಕ್ಷಣ ಕ್ರಮ ಕೈಗೊಂಡಿಲ್ಲ” ಎಂದು ಸ್ಥಳೀಯರೊಬ್ಬರು ಆರೋಪಿದ್ದಾರೆ. ಆಗಸ್ಟ್ ವೇಳೆ ಕೊಲ್ಕತ್ತಾದ ಆರ್‌ಜಿ ಕರ್ ಆಸ್ಪತ್ರೆಯಲ್ಲಿ ಮಹಿಳಾ ವೈದ್ಯರ ಶವ ಪತ್ತೆಯಾದ ನಂತರ ಪೊಲೀಸರು ಪ್ರತಿಕ್ರಿಯಿಸಿದ ರೀತಿಯಲ್ಲಿಯೇ ಇಲ್ಲಿಯೂ ಪ್ರತಿಕ್ರಿಯಿಸಿದ್ದಾರೆ ಎಂದು ಮತ್ತೊಬ್ಬ ಗ್ರಾಮಸ್ಥರು ಹೇಳಿದ್ದಾರೆ.
ಇದನ್ನೂಓದಿ: ಉತ್ತರ ಲೆಬನಾನ್ ಗುರಿಯಾಗಿರಿಸಿಕೊಂಡ ಇಸ್ರೇಲ್; ಇತ್ತೀಚಿನ ವೈಮಾನಿಕ ದಾಳಿಯಲ್ಲಿ ಹಮಾಸ್ ನಾಯಕನ ಹತ್ಯೆ
“ನಮ್ಮ ಅಪ್ರಾಪ್ತ ಮಗಳ ಅತ್ಯಾಚಾರ ಮತ್ತು ಕೊಲೆ ಆರೋಪಿಗಳಿಗೆ ಶಿಕ್ಷೆಯಾಗುವವರೆಗೂ ನಾವು ನಮ್ಮ ಪ್ರತಿಭಟನೆಯನ್ನು ಮುಂದುವರಿಸುತ್ತೇವೆ. ದೂರಿಗೆ ತಡವಾಗಿ ಪ್ರತಿಕ್ರಿಯಿಸಿದವರ ವಿರುದ್ಧವೂ ಕ್ರಮ ಕೈಗೊಳ್ಳಬೇಕು. ಅವರ ವಿಳಂಬ ಬಾಲಕಿಯ ಸಾವಿಗೆ ಕಾರಣ. ಪೊಲೀಸರು ತಕ್ಷಣ ಕ್ರಮ ಕೈಗೊಂಡಿದ್ದರೆ, ಬಾಲಕಿಯನ್ನು ರಕ್ಷಿಸಬಹುದಿತ್ತು” ಎಂದು ಸ್ಥಳೀಯರಾದ ಗಣೇಶ್ ಡೋಲುಯಿ ಹೇಳಿದ್ದಾರೆ.
ಆದಾಗ್ಯೂ, ದೂರು ಸ್ವೀಕರಿಸಿದ ತಕ್ಷಣ ಕ್ರಮ ಕೈಗೊಳ್ಳಲಾಗಿದೆ ಮತ್ತು ಬಾಲಕಿಯ ಅತ್ಯಾಚಾರ ಮತ್ತು ಹತ್ಯೆಗೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. “ಶುಕ್ರವಾರ ರಾತ್ರಿ 9 ಗಂಟೆಗೆ ಎಫ್‌ಐಆರ್ ದಾಖಲಿಸಲಾಗಿದ್ದು, ಪೊಲೀಸರು ಕಾರ್ಯಾಚರಣೆಗೆ ಇಳಿದಿದ್ದಾರೆ. ಆರಂಭಿಕ ತನಿಖೆಯ ನಂತರ ಇಂದು ಬೆಳಿಗ್ಗೆ ಆರೋಪಿಯನ್ನು ಬಂಧಿಸಿದ್ದಾರೆ. ತನಿಖೆ ನಡೆಯುತ್ತಿದೆ ಮತ್ತು ನಾವು ಮೃತರ ಕುಟುಂಬದೊಂದಿಗೆ ಇದ್ದೇವೆ.” ಎಂದು ಪೊಲೀಸರು ಹೇಳಿದ್ದಾರೆ.
“ಪೊಲೀಸ್ ಔಟ್‌ಪೋಸ್ಟ್‌ನಲ್ಲಿ ಬೆಂಕಿ ಹಚ್ಚುವ ಮತ್ತು ಎಲ್ಲಾ ಪ್ರಮುಖ ದಾಖಲೆಗಳನ್ನು ನಾಶಪಡಿಸಿದವರನ್ನು ಗುರುತಿಸಿ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು” ಎಂದು ಅಧಿಕಾರಿ ತಿಳಿಸಿದ್ದಾರೆ.
ವಿಡಿಯೊ ನೋಡಿ: ‘ಭೂಮಿ- ವಸತಿ ಹಕ್ಕು ವಂಚಿತರ ಪ್ರಾತಿನಿಧ್ಯ ಸಮಾವೇಶ’ದ ಕುರಿತು ಸಂಘಟಕರ ಮಾತುಗಳು


