Homeಮುಖಪುಟಪಶ್ಚಿಮ ಬಂಗಾಳ | ಅಪ್ರಾಪ್ತ ಬಾಲಕಿಯ ಶವ ಪತ್ತೆ; ಅತ್ಯಾಚಾರ ಆರೋಪ

ಪಶ್ಚಿಮ ಬಂಗಾಳ | ಅಪ್ರಾಪ್ತ ಬಾಲಕಿಯ ಶವ ಪತ್ತೆ; ಅತ್ಯಾಚಾರ ಆರೋಪ

- Advertisement -
- Advertisement -

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಜವುಗು ಭೂಮಿಯಲ್ಲಿ 10 ವರ್ಷದ ಬಾಲಕಿಯ ಶವವೊಂದು ಶನಿವಾರ ಪತ್ತೆಯಾಗಿದ್ದು, ಉದ್ರಿಕ್ತ ಸ್ಥಳೀಯ ಜನರು ಅಲ್ಲಿನ ಪೊಲೀಸ್ ಔಟ್‌ಪೋಸ್ಟ್‌ನಲ್ಲಿ ಬೆಂಕಿ ಹಚ್ಚಿದ್ದಾರೆ. ಅಪ್ರಾಪ್ತ ಬಾಲಕಿ ಶುಕ್ರವಾರ ಸಂಜೆಯಿಂದ ನಾಪತ್ತೆಯಾಗಿದ್ದು ಅವರ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿದೆ, ಆದರೆ ಪೊಲೀಸರು ದೂರು ನೀಡಿದರೂ ತಕ್ಷಣವೇ ಕ್ರಮ ಕೈಗೊಂಡಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.ಪಶ್ಚಿಮ ಬಂಗಾಳ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಇಂದು ಮುಂಜಾನೆ ಜಯನಗರ ಪ್ರದೇಶದಲ್ಲಿ ಬಾಲಕಿಯ ಶವವನ್ನು ಸ್ಥಳೀಯರು ಪತ್ತೆಹಚ್ಚಿದ್ದು, ತಕ್ಷಣವೆ ಗುಂಪೊಂದು ಮಹಿಸ್ಮರಿ ಪೊಲೀಸ್ ಔಟ್‌ಪೋಸ್ಟ್‌ಗೆ ಬೆಂಕಿ ಹಚ್ಚಿ ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಜನರು ಹೊರಠಾಣೆ ಹೊರಗೆ ನಿಲ್ಲಿಸಿದ್ದ ಹಲವಾರು ವಾಹನಗಳನ್ನು ಧ್ವಂಸಗೊಳಿಸಿದ್ದು, ಪೊಲೀಸರನ್ನು ಠಾಣೆಯ ಆವರಣದಿಂದ ಹೊರಹೋಗುವಂತೆ ಮಾಡಲಾಗಿತ್ತು ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನೂಓದಿ: ಜನರನ್ನು ಹೆದರಿಸಿ, ಸಂವಿಧಾನವನ್ನು ಧ್ವಂಸಗೊಳಿಸಿ ಶಿವಾಜಿಗೆ ತಲೆಬಾಗಿ ಪ್ರಯೋಜನವಿಲ್ಲ: ನರೇಂದ್ರ ಮೋದಿ ವಿರುದ್ಧ ರಾಹುಲ್ ಗಾಂಧಿ

ಪ್ರದೇಶಕ್ಕೆ ಭಾರಿ ಪೊಲೀಸ್ ಪಡೆಯನ್ನು ಕಳುಹಿಸಲಾಗಿದ್ದು, ಜನರು SDPO ಮತ್ತು ಇತರ ಹಿರಿಯ ಸಿಬ್ಬಂದಿಯನ್ನು ಸ್ಥಳದಲ್ಲಿ ಮುತ್ತಿಗೆ ಹಾಕಲು ಪ್ರಯತ್ನಿಸಿದ್ದಾರೆ. ಈ ವೇಳೆ ಗುಂಪನ್ನು ಹತ್ತಿಕ್ಕಲು ಅಶ್ರುವಾಯು ಶೆಲ್‌ಗಳನ್ನು ಹಾರಿಸಲಾಯಿತು ಎಂದು ವರದಿಯಾಗಿದೆ. ಪಶ್ಚಿಮ ಬಂಗಾಳ

“ಬಾಲಕಿಯ ಕುಟುಂಬ ಸದಸ್ಯರು ಪ್ರದೇಶದ ಮಹಿಸ್ಮರಿ ಔಟ್‌ಪೋಸ್ಟ್‌ನಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ ಆದರೆ ಪೊಲೀಸರು ದೂರಿನ ಮೇರೆಗೆ ತಕ್ಷಣ ಕ್ರಮ ಕೈಗೊಂಡಿಲ್ಲ” ಎಂದು ಸ್ಥಳೀಯರೊಬ್ಬರು ಆರೋಪಿದ್ದಾರೆ. ಆಗಸ್ಟ್‌ ವೇಳೆ ಕೊಲ್ಕತ್ತಾದ ಆರ್‌ಜಿ ಕರ್ ಆಸ್ಪತ್ರೆಯಲ್ಲಿ ಮಹಿಳಾ ವೈದ್ಯರ ಶವ ಪತ್ತೆಯಾದ ನಂತರ ಪೊಲೀಸರು ಪ್ರತಿಕ್ರಿಯಿಸಿದ ರೀತಿಯಲ್ಲಿಯೇ ಇಲ್ಲಿಯೂ ಪ್ರತಿಕ್ರಿಯಿಸಿದ್ದಾರೆ ಎಂದು ಮತ್ತೊಬ್ಬ ಗ್ರಾಮಸ್ಥರು ಹೇಳಿದ್ದಾರೆ.

ಇದನ್ನೂಓದಿ: ಉತ್ತರ ಲೆಬನಾನ್ ಗುರಿಯಾಗಿರಿಸಿಕೊಂಡ ಇಸ್ರೇಲ್; ಇತ್ತೀಚಿನ ವೈಮಾನಿಕ ದಾಳಿಯಲ್ಲಿ ಹಮಾಸ್ ನಾಯಕನ ಹತ್ಯೆ

“ನಮ್ಮ ಅಪ್ರಾಪ್ತ ಮಗಳ ಅತ್ಯಾಚಾರ ಮತ್ತು ಕೊಲೆ ಆರೋಪಿಗಳಿಗೆ ಶಿಕ್ಷೆಯಾಗುವವರೆಗೂ ನಾವು ನಮ್ಮ ಪ್ರತಿಭಟನೆಯನ್ನು ಮುಂದುವರಿಸುತ್ತೇವೆ. ದೂರಿಗೆ ತಡವಾಗಿ ಪ್ರತಿಕ್ರಿಯಿಸಿದವರ ವಿರುದ್ಧವೂ ಕ್ರಮ ಕೈಗೊಳ್ಳಬೇಕು. ಅವರ ವಿಳಂಬ ಬಾಲಕಿಯ ಸಾವಿಗೆ ಕಾರಣ. ಪೊಲೀಸರು ತಕ್ಷಣ ಕ್ರಮ ಕೈಗೊಂಡಿದ್ದರೆ, ಬಾಲಕಿಯನ್ನು ರಕ್ಷಿಸಬಹುದಿತ್ತು” ಎಂದು ಸ್ಥಳೀಯರಾದ ಗಣೇಶ್ ಡೋಲುಯಿ ಹೇಳಿದ್ದಾರೆ.

ಆದಾಗ್ಯೂ, ದೂರು ಸ್ವೀಕರಿಸಿದ ತಕ್ಷಣ ಕ್ರಮ ಕೈಗೊಳ್ಳಲಾಗಿದೆ ಮತ್ತು ಬಾಲಕಿಯ ಅತ್ಯಾಚಾರ ಮತ್ತು ಹತ್ಯೆಗೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. “ಶುಕ್ರವಾರ ರಾತ್ರಿ 9 ಗಂಟೆಗೆ ಎಫ್‌ಐಆರ್ ದಾಖಲಿಸಲಾಗಿದ್ದು, ಪೊಲೀಸರು ಕಾರ್ಯಾಚರಣೆಗೆ ಇಳಿದಿದ್ದಾರೆ. ಆರಂಭಿಕ ತನಿಖೆಯ ನಂತರ ಇಂದು ಬೆಳಿಗ್ಗೆ ಆರೋಪಿಯನ್ನು ಬಂಧಿಸಿದ್ದಾರೆ. ತನಿಖೆ ನಡೆಯುತ್ತಿದೆ ಮತ್ತು ನಾವು ಮೃತರ ಕುಟುಂಬದೊಂದಿಗೆ ಇದ್ದೇವೆ.” ಎಂದು ಪೊಲೀಸರು ಹೇಳಿದ್ದಾರೆ.

“ಪೊಲೀಸ್ ಔಟ್‌ಪೋಸ್ಟ್‌ನಲ್ಲಿ ಬೆಂಕಿ ಹಚ್ಚುವ ಮತ್ತು ಎಲ್ಲಾ ಪ್ರಮುಖ ದಾಖಲೆಗಳನ್ನು ನಾಶಪಡಿಸಿದವರನ್ನು ಗುರುತಿಸಿ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು” ಎಂದು ಅಧಿಕಾರಿ ತಿಳಿಸಿದ್ದಾರೆ.

ವಿಡಿಯೊ ನೋಡಿ: ‘ಭೂಮಿ- ವಸತಿ ಹಕ್ಕು ವಂಚಿತರ ಪ್ರಾತಿನಿಧ್ಯ ಸಮಾವೇಶ’ದ ಕುರಿತು ಸಂಘಟಕರ ಮಾತುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...