Homeಮುಖಪುಟಪ.ಬಂಗಾಳ| ಮುರ್ಶಿದಾಬಾದ್ ಹಿಂಸಾಚಾರ ಪೂರ್ವ ಯೋಜಿತ: ಮಮತಾ ಬ್ಯಾನರ್ಜಿ

ಪ.ಬಂಗಾಳ| ಮುರ್ಶಿದಾಬಾದ್ ಹಿಂಸಾಚಾರ ಪೂರ್ವ ಯೋಜಿತ: ಮಮತಾ ಬ್ಯಾನರ್ಜಿ

- Advertisement -
- Advertisement -

‘ಮುರ್ಶಿದಾಬಾದ್‌ನಲ್ಲಿ ಇತ್ತೀಚೆಗೆ ನಡೆದ ಕೋಮು ಹಿಂಸಾಚಾರ ಪೂರ್ವ ಯೋಜಿತ’ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಗಲಭೆ ಪರಿಸ್ಥಿತಿಯ ಕುರಿತು ಇಮಾರುಗಳೊಂದಿಗೆ ಸಭೆ ನಡೆಸಿದ ಸಿಎಂ, “ಹಿಂಸಾಚಾರದ ಹಿಂದೆ ಟಿಎಂಸಿ ಕೈವಾಡ ಇದೆ ಎಂದು ಬಿಜೆಪಿ ಆರೋಪಿಸಿದೆ. ಅವರು ಹೇಳಿದಂತೆ ನಮ್ಮ ಕೈವಾಡವಿದ್ದಿದ್ದರೆ ನಮ್ಮ ನಾಯಕರ ಮನೆಗಳ ಮೇಲೆ ದಾಳಿ ನಡೆಯುತ್ತಿರಲಿಲ್ಲ” ಎಂದಿದ್ದಾರೆ.

ಮುಂದುವರಿದು, “ಸಂಸತ್ತಿನ ಟಿಎಂಸಿ ವಕ್ಫ್‌ (ತಿದ್ದುಪಡಿ) ಮಸೂದೆ ವಿರುದ್ದ ಬಲವಾದ ನಿಲುವು ವ್ಯಕ್ತಪಡಿಸಿದೆ. ವಕ್ಫ್ (ತಿದ್ದುಪಡಿ) ಕಾಯ್ದೆ ವಿರುದ್ದದ ಹೋರಾಟದಲ್ಲಿ ಟಿಎಂಸಿ ಮುಂಚೂಣಿಯಲ್ಲಿದೆ” ಎಂದು ಹೇಳಿದ್ಧಾರೆ.

“ಮುರ್ಶಿದಾಬಾದ್ ಹಿಂಸಾಚಾರದಲ್ಲಿ ಬಾಂಗ್ಲಾದೇಶ ಭಾಗಿಯಾಗಿದೆ ಎಂದು ಕೇಂದ್ರ ಗೃಹ ಸಚಿವಾಲಯ ಆರೋಪಿಸಿದೆ. ಇದು ಒಂದು ವೇಳೆ ನಿಜವಾಗಿದ್ದರೆ, ಇದಕ್ಕೆ ಕೇಂದ್ರ ಸರ್ಕಾರವೇ ಹೊಣೆ ಹೊರತು ರಾಜ್ಯವಲ್ಲ. ಗಡಿ ಕಾಯುತ್ತಿರುವುದು ಬಿಎಸ್‌ಎಫ್‌ ಹೊರತಯ ರಾಜ್ಯ ಸರ್ಕಾರವಲ್ಲ. ಹೊರಗಡೆಯಿಂದ ಬಿಜೆಪಿಯವರು ಬಂದು ಗಲಾಟೆ ಸೃಷ್ಟಿಸಿ ಓಡಿ ಹೋಗಲು ನೀವು ಅನುವು ಮಾಡಿ ಕೊಡುವುದು ಏಕೆ?” ಎಂದು ಮಮತಾ ಬ್ಯಾನರ್ಜಿ ಪ್ರಶ್ನಿಸಿದ್ದಾರೆ.

“ಕೆಲವು ಗೋದಿ ಮೀಡಿಯಾಗಳು ಬಂಗಾಳದ ಕುರಿತು ಸುಳ್ಳು ಸುದ್ದಿಗಳನ್ನು ಹರಡುತ್ತಿವೆ. ಅನ್ಯಾಯವಾಗಿ ಬಂಗಾಳವನ್ನು ಗುರಿಯಾಗಿಸಿಕೊಂಡಿವೆ. ಪೆಟ್ರೋಲ್ , ಡೀಸೆಲ್ ಬೆಲೆ ಏರಿಕೆ ಮಾಡಿರುವುದು ಕೇಂದ್ರ ಸರ್ಕಾರ, ಆದರೆ ಗೋದಿ ಮೀಡಿಯಾಗಳು ಪಶ್ಚಿಮ ಬಂಗಾಳ ಮತ್ತು ನನ್ನ ವಿರುದ್ದ ಮಾತನಾಡುತ್ತಿವೆ” ಎಂದ ಮಮತಾ ಬ್ಯಾನರ್ಜಿ, “ಟೀಕೆ ಮಾಡುವವರು ಸುಳ್ಳು ಸುದ್ದಿ ಹರಡಬೇಡಿ, ನನ್ನ ಜೊತೆ ನೇರವಾಗಿ ಮಾತನಾಡಿ” ಎಂದು ಸವಾಲು ಹಾಕಿದ್ದಾರೆ.

“ಪಶ್ಚಿಮ ಬಂಗಾಳವನ್ನು ಅವಹೇಳನ ಮಾಡಲು ಬಿಜೆಪಿ ಬೆಂಬಲಿತ ಮಾಧ್ಯಮಗಳು ಸುಳ್ಳು ವಿಡಿಯೋಗಳನ್ನು ಹಂಚಿಕೊಳ್ಳುತ್ತಿವೆ. ನಾವು ಅವರನ್ನು ಪತ್ತೆ ಹೆಚ್ಚಿದ್ದೇವೆ. ಒಟ್ಟು 8 ವಿಡಿಯೋಗಳಲ್ಲಿ ಕೆಲವು ಕರ್ನಾಟಕ, ಉತ್ತರ ಪ್ರದೇಶ, ರಾಜಸ್ಥಾನ ಮತ್ತು ಬಿಹಾರದ್ದು. ಬಂಗಾಳದ ಹೆಸರಿಗೆ ಮಸಿ ಬಳಿಯಲು ಅವರು ಪ್ರಯತ್ನಿಸುತ್ತಿದ್ದಾರೆ. ಅವರಿಗೆ ನಾಚಿಕೆಯಾಗಬೇಕು” ಎಂದು ಮಮಥಾ ಬ್ಯಾನರ್ಜಿ ಹರಿಹಾಯ್ದಿದ್ದಾರೆ.

“ಉದ್ಯೋಗ ಸೃಷ್ಟಿ ಮತ್ತು ಹಣದುಬ್ಬರ ವಿಚಾರಗಳಲ್ಲಿ ಕೇಂದ್ರವನ್ನು ಪ್ರಶ್ನಿಸಿದ ಮಮತಾ ಬ್ಯಾನರ್ಜಿ, “ನೀವು ಯುವಜನರಿಗೆ ಎಷ್ಟು ಉದ್ಯೋಗಗಳನ್ನು ಸೃಷ್ಠಿ ಮಾಡಿದ್ದೀರಿ ಎಂದು ಕೇಳಿದ್ದಾರೆ. ಔಷಧಿ, ಪೆಟ್ರೋಲ್, ಡೀಸೆಲ್ ಬೆಲೆಗಳು ಹೆಚ್ಚಾಗಿವೆ. ಆದರೆ, ಕೇಂದ್ರ ಸರ್ಕಾರ ಸುಳ್ಳು ನಿರೂಪಣೆ ಮೂಲಕ ಬಂಗಾಳವನ್ನು ಗುರಿಯಾಗಿಸುವುದರಲ್ಲಿ ಬ್ಯುಸಿಯಾಗಿದೆ” ಎಂದು ಮಮತಾ ಬ್ಯಾನರ್ಜಿ ಕಿಡಿಕಾರಿದ್ದಾರೆ.

ಮುರ್ಶಿದಾಬಾದ್ ಗಲಭೆಗೆ ಸಂಬಂಧಿಸಿದಂತೆ ಟಿಎಂಸಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದ ಬಿಜೆಪಿ “ಹಿಂದೂ ಸಮುದಾಯವನ್ನು ಗುರಿಯಾಗಿಸಿ ನಡೆಯುತ್ತಿರುವ ದಾಳಿಗಳನ್ನು ಮಮತಾ ಸರ್ಕಾರ ಬೆಂಬಲಿಸುತ್ತಿದೆ” ಎಂದು ಆರೋಪಿಸಿತ್ತು.

ಲಡ್ಕಿ ಬಹಿನ್ ಯೋಜನೆಯ ಫಲಾನುಭವಿ 8 ಲಕ್ಷ ಮಹಿಳೆಯರಿಗೆ 1500 ರಿಂದ 500 ಗೆ ಕಡಿತಗೊಳಿಸಿದ ಮಹಾರಾಷ್ಟ್ರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...