Homeಮುಖಪುಟಪಶ್ಚಿಮ ಬಂಗಾಳ: ಬುಗಿಲೆದ್ದ ಪಂಚಾಯ್ತಿ ಚುನಾವಣಾ ಹಿಂಸಾಚಾರ; ಬಾಂಬ್‌ ಸ್ಫೋಟದಲ್ಲಿ ಮಕ್ಕಳಿಗೆ ಗಾಯ

ಪಶ್ಚಿಮ ಬಂಗಾಳ: ಬುಗಿಲೆದ್ದ ಪಂಚಾಯ್ತಿ ಚುನಾವಣಾ ಹಿಂಸಾಚಾರ; ಬಾಂಬ್‌ ಸ್ಫೋಟದಲ್ಲಿ ಮಕ್ಕಳಿಗೆ ಗಾಯ

- Advertisement -
- Advertisement -

ಪಶ್ಚಿಮ ಬಂಗಾಳದಲ್ಲಿ ನಡೆದ ಪಂಚಾಯ್ತಿ ಚುನಾವಣೆಯಲ್ಲಿ ಹಿಂಸಾಚಾರ ಬುಗಿಲೆದ್ದಿದ್ದು, ವಿವಿಧ ಪಕ್ಷಗಳ ಒಂಬತ್ತು ಜನ ಮೃತಪಟ್ಟ ಬೆನ್ನಲ್ಲೇ ಇದೀಗ ಬಾಂಬ್‌ ಸ್ಫೋಟ ಸಂಭವಿಸಿದೆ. ಈ ಘಟನೆಯಲ್ಲಿ ಇಬ್ಬರು ಮಕ್ಕಳು ಗಾಯಗೊಂಡಿದ್ದಾರೆ. ಗಾಯಗೊಂಡ ಮಕ್ಕಳನ್ನು ಆಸ್ಪತ್ರೆಗೆ ಸೇರಿಸಲಾಗಿದ್ದು, ಆಸ್ಪತ್ರೆಗೆ ರಾಜ್ಯಪಾಲ ಡಾ. ಸಿ.ವಿ.ಆನಂದ ಬೋಸ್ ಅವರು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿದ ಅಧಿಕಾರಿಗಳು, ”ದಕ್ಷಿಣ 24 ಪರಗಣ ಜಿಲ್ಲೆಯಲ್ಲಿ ಶನಿವಾರ ನಡೆದ ಮತದಾನ ಸಂದರ್ಭದಲ್ಲಿ ದುಷ್ಕರ್ಮಿಗಳು ಇಟ್ಟಿದ್ದ ಕಚ್ಚಾ ಬಾಂಬ್ ಸ್ಫೋಟಗೊಂಡಿದೆ. ಚೆಂಡು ಎಂದುಕೊಂಡ ಮಕ್ಕಳು ಬಾಂಬ್‌ ಅನ್ನು ಮುಟ್ಟಿದಾಗ ಅದು ಸ್ಫೋಟಗೊಂಡಿದೆ ಈ ವೇಳೆ 8 ಹಾಗೂ 10 ವರ್ಷದ ಇಬ್ಬರು ಮಕ್ಕಳು ಸೇರಿ ಹಲವರು ಗಾಯಗೊಂಡಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಇನ್ನಷ್ಟು ಬಾಂಬುಗಳು ಇರುವ ಕುರಿತು ಪತ್ತೆಕಾರ್ಯ ಕೈಗೊಂಡಿದ್ದಾರೆ” ಎಂದು ತಿಳಿಸಿದ್ದಾರೆ.

”ಮತದಾನಕ್ಕೆ ಬರುವ ಜನರನ್ನು ಬೆದರಿಸುವ ಉದ್ದೇಶದಿಂದ ಶುಕ್ರವಾರ ರಾತ್ರಿಯೇ ಈ ಕಚ್ಚಾ ಬಾಂಬುಗಳನ್ನು ಇಡಲಾಗಿದೆ. ಈ ಸಮಯದಲ್ಲಿ ಸ್ಥಳದಲ್ಲಿ ಆಗ ಪೊಲೀಸರೇ ಇರಲಿಲ್ಲ. ಇದ್ದಿದ್ದರೆ ಈ ಅನಾಹುತವನ್ನು ತಪ್ಪಿಸಬಹುದಿತ್ತು” ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಘಟನೆಯ ಕುರಿತು ಮಾಹಿತಿ ಪಡೆದ ರಾಜ್ಯಪಾಲ ಡಾ. ಸಿ.ವಿ.ಆನಂದ ಬೋಸ್, ಮಕ್ಕಳ ಮನೆಗೆ ಭೇಟಿ ನೀಡಿ ಪಾಲಕರೊಂದಿಗೆ ಚರ್ಚಿಸಿದರು. ನಂತರ ಆಸ್ಪತ್ರೆಗೆ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿದರು . ಹೆಚ್ಚಿನ ಚಿಕಿತ್ಸೆಗಾಗಿ ಕೊಲ್ಕತ್ತದ ಅರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಗಾಯಗೊಂಡ ಮಕ್ಕಳನ್ನು ಸ್ಥಳಾಂತರಿಸಲು ಅಧಿಕಾರಿಗಳಿಗೆ ಸೂಚಿಸಿದರು.

ಇದನ್ನೂ ಓದಿ: ಪಶ್ಚಿಮ ಬಂಗಾಳ ಪಂಚಾಯತ್ ಚುನಾವಣೆ ವೇಳೆ ಹಿಂಸಾಚಾರ: 9 ಜನರ ಸಾವು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿ ‘ಸಂವಿಧಾನ ಮತ್ತು ಮೀಸಲಾತಿ’ಯನ್ನು ರದ್ದುಗೊಳಿಸಲು ಬಯಸುತ್ತಿದೆ: ಲಾಲು ಪ್ರಸಾದ್ ಯಾದವ್

0
ಬಿಜೆಪಿ ಸಂವಿಧಾನ ಮತ್ತು ಮೀಸಲಾತಿಯನ್ನು ರದ್ದುಗೊಳಿಸಲು ಬಯಸುತ್ತಿದೆ, ಸರ್ಕಾರಿ ಉದ್ಯೋಗ ಮತ್ತು ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಮುಸ್ಲಿಮರು ಕೂಡ ಮೀಸಲಾತಿಯನ್ನು ಪಡೆಯಬೇಕು, ಅವರ ಮೀಸಲಾತಿ ಪರವಾಗಿ ನಾನಿದ್ದೇನೆ ಎಂದು ರಾಷ್ಟ್ರೀಯ ಜನತಾ ದಳ(ಆರ್‌ಜೆಡಿ)...