Homeಮುಖಪುಟಪಶ್ಚಿಮ ಬಂಗಾಳ ಚುನಾವಣೆ: ಬಿಜೆಪಿ ಸ್ಟಾರ್‌ ಪ್ರಚಾರಕರ ಪಟ್ಟಿ ಬಿಡುಗಡೆ

ಪಶ್ಚಿಮ ಬಂಗಾಳ ಚುನಾವಣೆ: ಬಿಜೆಪಿ ಸ್ಟಾರ್‌ ಪ್ರಚಾರಕರ ಪಟ್ಟಿ ಬಿಡುಗಡೆ

ಮೊನ್ನೆಯಷ್ಟೇ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಗೊಂಡು ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಟ್ರೋಲ್‌ಗೆ ಒಳಗಾಗಿದ್ದ ನಟ, ರಾಜಕಾರಣಿ ಮಿಥುನ್ ಚಕ್ರವರ್ತಿ ಸ್ಟಾರ್‌ ಪ್ರಚಾರಕರ ಪಟ್ಟಿಯಲ್ಲಿದ್ದಾರೆ.

- Advertisement -
- Advertisement -

ರಂಗೇರಿರುವ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮೊದಲ ಹೆಜ್ಜೆಯಾಗಿ ಬಿಜೆಪಿ 40 ಪ್ರಮುಖ  ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ, ರಾಜನಾಥ್ ಸಿಂಗ್ ಮೊದಲ ಮೂರು ಸ್ಥಾನ ಪಡೆದುಕೊಂಡಿದ್ದಾರೆ.

ಪಶ್ಚಿಮ ಬಂಗಾಳದ ಪಕ್ಷದ ಸ್ಟಾರ್ ಪ್ರಚಾರಕರಲ್ಲಿ ಗೃಹ ಸಚಿವ ಅಮಿತ್ ಶಾ, ಕೇಂದ್ರ ಸಚಿವರಾದ ನಿತಿನ್ ಗಡ್ಕರಿ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಅರ್ಜುನ್ ಮುಂಡಾ, ಧರ್ಮೇಂದ್ರ ಪ್ರಧಾನ್, ಸ್ಮೃತಿ ಇರಾನಿ, ಕೈಲಾಶ್ ವಿಜಯವರ್ಗಿಯಾ, ಶಿವಪ್ರಕಾಶ್, ಮುಕುಲ್ ರಾಯ್, ದಿಲೀಪ್ ಘೋಷ್, ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಇದ್ದಾರೆ.

ಜೊತೆಗೆ ಉತ್ತರ ಪ್ರದೇಶದ ಮನೋಜ್ ತಿವಾರಿ ಪಶ್ಚಿಮ ಬಂಗಾಳದಲ್ಲಿ ವಾಸಿಸುವ ಬಿಹಾರಿ ಮತದಾರರನ್ನು ಬಿಜೆಪಿಯತ್ತ ಸೆಳೆಯುವ ಅಭಿಯಾನ ನಡೆಸಲಿದ್ದಾರೆ. ಮಹಾಭಾರತ ಧಾರಾವಾಹಿಯಲ್ಲಿ ದ್ರೌಪದಿ ಪಾತ್ರವನ್ನು ನಿರ್ವಹಿಸುವ ಮೂಲಕ ಜನಪ್ರಿಯರಾಗಿದ್ದ ನಟಿ, ಬಿಜೆಪಿಯ ರೂಪಾ ಗಂಗೂಲಿ ಕೂಡ ಪಕ್ಷದ ಪರವಾಗಿ ಪ್ರಚಾರ ನಡೆಸಲಿದ್ದಾರೆ.

ಇದನ್ನೂ ಓದಿ: ಪ.ಬಂಗಾಳದಲ್ಲಿ 8 ಹಂತದ ಮತದಾನ: ಚುನಾವಣಾ ಆಯೋಗದ ನಿರ್ಧಾರ ಪ್ರಶ್ನಿಸಿದ್ದ ಅರ್ಜಿ ವಜಾ

ಇವರ ಜೊತೆಗೆ ಮೊನ್ನೆಯಷ್ಟೇ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಗೊಂಡು ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಟ್ರೋಲ್‌ಗೆ ಒಳಗಾಗಿದ್ದ ನಟ, ರಾಜಕಾರಣಿ ಮಿಥುನ್ ಚಕ್ರವರ್ತಿ ಸ್ಟಾರ್‌ ಪ್ರಚಾರಕರ ಪಟ್ಟಿಯಲ್ಲಿದ್ದಾರೆ. ಇವರೊಂದಿಗೆ ಪಾಯಲ್ ಸರ್ಕಾರ್ ಕೂಡ ಪಕ್ಷದ ಸ್ಟಾರ್ ಪ್ರಚಾರಕರಾಗಿದ್ದಾರೆ.

Image

 

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಬುಧವಾರ (ಇಂದು) ವಿಧಾನಸಭಾ ಚುನಾವಣೆಗೆ ನಂದಿಗ್ರಾಮ‌ದಿಂದ ನಾಮಪತ್ರ ಸಲ್ಲಿಸುವ ಸಾಧ್ಯತೆ ಇದೆ ಎಂದು ವರದಿಯಾಗಿದೆ. ಅವರು ಬಿಜೆಪಿಯಿಂದ ಸ್ಪರ್ಧಿಸುತ್ತಿರುವ ಸುವೆಂದು ಅಧಿಕಾರಿಯ ವಿರುದ್ದ ಸ್ಪರ್ಧೆಗೆ ವೇದಿಕೆ ಸಿದ್ಧಪಡಿಸುತ್ತಿದ್ದಾರೆ.

ಈ ಬಾರಿಯ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ಮತ್ತು ಬಿಜೆಪಿ ನಡುವೆ ನೇರ ಹಣಾಹಣಿ ಏರ್ಪಟ್ಟಿದೆ. ಹಣ ಬಲ, ತೋಳ್ಬಲ, ಮಾಧ್ಯಮ ಬಲದ ಮುಂದೆ ಮಮತಾ ಬ್ಯಾನರ್ಜಿ ಒಬ್ಬರೇ ನಿಂತಿದ್ದಾರೆ ಎಂದು ಶಿವಸೇನೆ ಹೇಳಿಕೆ ನೀಡಿತ್ತು.

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ಮಾರ್ಚ್ 27 ರಿಂದ ಏಪ್ರಿಲ್ 29 ರವರೆಗೆ ಸುಧೀರ್ಘ ಎಂಟು ಹಂತಗಳಲ್ಲಿ ನಡೆಯಲಿದ್ದು, ನಂತರ ಮೇ 2 ರಂದು ಫಲಿತಾಂಶ ಪ್ರಕಟವಾಗಲಿದೆ.


ಇದನ್ನೂ ಓದಿ: ಇಂದು ನಂದಿಗ್ರಾಮದಿಂದ ನಾಮಪತ್ರ ಸಲ್ಲಿಸಲಿರುವ ಮಮತಾ ಬ್ಯಾನರ್ಜಿ; ಅವರು ಹೇಳಿದ್ದೇನು?

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

LEAVE A REPLY

Please enter your comment!
Please enter your name here

- Advertisment -

Must Read

ಚಾಮರಾಜಪೇಟೆ ಈದ್ಗಾ ಮೈದಾನ ವಿವಾದ: ಸುಪ್ರೀಂ ಮೊರೆ ಹೋಗಲಿರುವ ವಕ್ಪ್‌‌ ಮಂಡಳಿ | Naanu Gauri

ಚಾಮರಾಜಪೇಟೆ ಈದ್ಗಾ ಮೈದಾನ ವಿವಾದ: ಸುಪ್ರೀಂ ಮೊರೆ ಹೋಗಲಿರುವ ವಕ್ಪ್‌‌ ಮಂಡಳಿ

0
ಬೆಂಗಳೂರಿನ ಚಾಮರಾಜಪೇಟೆಯ ಈದ್ಗಾ ಮೈದಾನವು ತಮ್ಮ ಮಾಲೀಕತ್ವದಲ್ಲಿ ಇಲ್ಲ ಎಂದು ಬಿಬಿಎಂಪಿ ಹೇಳಿದ ನಂತರವೂ ಬಿಜೆಪಿ ಸರ್ಕಾರ ವಿವಾದವನ್ನು ಜೀವಂತವಾಗಿಡಲು ಶ್ರಮಿಸುತ್ತಿವೆ. ಇದೀಗ ಈದ್ಗಾ ಮೈದಾನವನ್ನು ಕಂದಾಯ ಭೂಮಿ ಎಂದು ಸರ್ಕಾರ ಹೇಳಿದೆ....