Homeಮುಖಪುಟಪಶ್ಚಿಮ ಬಂಗಾಳ ಚುನಾವಣೆ: ಮಮತಾ ಬ್ಯಾನರ್ಜಿ ಸಮ್ಮುಖದಲ್ಲಿ ಟಿಎಂಸಿ ಸೇರಿದ ಕ್ರಿಕೆಟಿಗ ಮನೋಜ್ ತಿವಾರಿ

ಪಶ್ಚಿಮ ಬಂಗಾಳ ಚುನಾವಣೆ: ಮಮತಾ ಬ್ಯಾನರ್ಜಿ ಸಮ್ಮುಖದಲ್ಲಿ ಟಿಎಂಸಿ ಸೇರಿದ ಕ್ರಿಕೆಟಿಗ ಮನೋಜ್ ತಿವಾರಿ

- Advertisement -
- Advertisement -

ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಗೆ ಕೆಲವೇ ದಿನಗಳಿರುವ ಮುನ್ನ ಕ್ರಿಕೆಟಿಗ ಮನೋಜ್ ತಿವಾರಿ ತೃಣಮೂಲ ಕಾಂಗ್ರೆಸ್ ಪಕ್ಷ ಸೇರಿದ್ದಾರೆ. ಹೂಗ್ಲಿ ಜಿಲ್ಲೆಯಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದಲ್ಲಿ ನಡೆದ ರ್ಯಾಲಿಯಲ್ಲಿ ಮನೋಜ್ ತಿವಾರಿ ಅಧಿಕೃತವಾಗಿ ಟಿಎಂಸಿಗೆ ಸೇರಿದರು.

ಈ ಕುರಿತು ತಮ್ಮ ಟ್ವಿಟರ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, “ಇಂದು ಹೊಸ ಪ್ರಯಾಣ ಪ್ರಾರಂಭವಾಗಲಿದೆ. ನಿಮ್ಮೆಲ್ಲರ ಪ್ರೀತಿ ಮತ್ತು ಬೆಂಬಲ ಬೇಕು. ಇಂದಿನಿಂದ ಇದು ಇನ್‌ಸ್ಟಾಗ್ರಾಮ್‌ನಲ್ಲಿ ನನ್ನ ರಾಜಕೀಯ ಪ್ರೊಫೈಲ್ ಆಗಿರುತ್ತದೆ” ಎಂದು ಲಿಂಕ್ ಒಂದನ್ನು ಹಂಚಿಕೊಂಡಿದ್ದಾರೆ. ಇನ್‌ಸ್ಟಾಗ್ರಾಮ್ ಪುಟದ ಅವರ ಬಯೋದಲ್ಲಿ ‘ರಾಜಕಾರಣಿ, ಎಐಟಿಎಂಸಿ’ ಎಂದು ಬರೆಯಲಾಗಿದೆ.

ಮನೋಜ್ ತಿವಾರಿ ಅಂತಾರಾಷ್ಟ್ರೀಯ ಏಕದಿನ ಮತ್ತು ಟಿ 20 ವಿಭಾಗದಲ್ಲಿ ಭಾರತೀಯ ಕ್ರಿಕೆಟ್ ತಂಡವನ್ನು ಪ್ರತಿನಿಧಿಸಿದ್ದಾರೆ. ಪ್ರಸ್ತುತ ಅವರು ದೇಶೀಯ ಕ್ರಿಕೆಟ್‌ನಲ್ಲಿ ಬಂಗಾಳವನ್ನು ಪ್ರತಿನಿಧಿಸುತ್ತಿದ್ದಾರೆ ಮತ್ತು ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ (ಐಪಿಎಲ್‌) ಕೋಲ್ಕತಾ ನೈಟ್ ರೈಡರ್ಸ್, ಕಿಂಗ್ಸ್ ಇಲೆವೆನ್ ಪಂಜಾಬ್ ಮತ್ತು ರೈಸಿಂಗ್ ಪುಣೆ ಸೂಪರ್‌ಜಾಯಂಟ್ಸ್ ಪರ ಆಡಿದ್ದಾರೆ.

ಇತ್ತೀಚೆಗೆ ಮನೋಜ್ ತಿವಾರಿ ಕೇಂದ್ರ ಸರ್ಕಾರದ ವಿರುದ್ಧ ತೀಕ್ಷ್ಣ ಟೀಕೆಗಳ ಮೂಲಕ ಗಮನ ಸೆಳೆದಿದ್ದರು. ರೈತ ಹೋರಾಟದ ವಿರುದ್ಧ ಭಾರತದ ಸೆಲೆಬ್ರಿಟಿಗಳು ಮತ್ತು ಕ್ರಿಕೆಟಿಗರು ಒಂದೇ ಥರನೇ ಟ್ವೀಟ್ ಮಾಡುತ್ತಿದ್ದ ಸಮಯದಲ್ಲಿ ಅದನ್ನು ಕೈಗೊಂಬೆ ಆಟವೆಂದು ಕರೆದು ವ್ಯಂಗ್ಯವಾಡಿದ್ದರು. “ನಾನು ಚಿಕ್ಕವನಿದ್ದಾಗ ಯಾವತ್ತೂ ಈ ಕೈಗೊಂಬೆ ಆಟ ನೋಡಲು ಆಗಿರಲಿಲ್ಲ.. ಅದನ್ನು ನೋಡಲು 35 ವರ್ಷ ಬೇಕಾಯಿತು” ಎಂದು ಕೈಗೊಂಬೆ ಆಟದ ಫೋಟೊವೊಂದನ್ನು ಟ್ವೀಟ್ ಮಾಡಿದ್ದರು.

ಅಲ್ಲದೆ ಏರುತ್ತಿರುವ ಪೆಟ್ರೋಲ್ ಡಿಸೇಲ್ ಬೆಲೆ ಏರಿಕೆ ವಿರುದ್ಧ ಕ್ರಿಕೆಟ್ ಕಾಮೆಂಟರಿ ಶೈಲಿಯಲ್ಲಿ “ಪೆಟ್ರೋಳ್ ಅತ್ಯುತ್ತಮ ಇನ್ನಿಂಗ್ಸ್ ಪ್ರದರ್ಶಿಸಿದೆ. ಇಂತಹ ಕಷ್ಟಕರ ಪರಿಸ್ಥಿತಿಯಲ್ಲೂ ಪೆಟ್ರೋಲ್ ಶತಕ ಬಾರಿಸಿದೆ. ಡೀಸೆಲ್ ನ ಬೆಂಬಲದೊಂದಿಗೆ ಉತ್ತಮ ಇನ್ನಿಂಗ್ಸ್ ಕಟಿದ್ದು, ನಿಮ್ಮಿಬ್ಬರದು ಉತ್ತಮ ಜೊತೆಯಾಟವಾಗಿದೆ. ಸಾಮಾನ್ಯ ಜನರ ವಿರುದ್ಧ ಆಡುವುದು ತುಂಬಾ ಕಷ್ಟಕರ ಕೆಲಸ. ಆದರೆ ನೀವದನ್ನು ಮಾಡಿ ತೋರಿಸಿದ್ದೀರಿ” ಎಂದು ವ್ಯಂಗ್ಯವಾಗಿ ಟ್ವೀಟ್ ಮಾಡಿದ್ದರು.


ಇದನ್ನೂ ಓದಿ: ಪಾಂಡಿಚೇರಿ ನಂತರ ಮಹಾರಾಷ್ಟ್ರ ಸರ್ಕಾರ ಪತನಕ್ಕೆ ಬಿಜೆಪಿ ಯತ್ನ: ಶಿವಸೇನೆ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...