Homeಕೊರೊನಾಓಮಿಕ್ರಾನ್ ಆತಂಕ: ಬಂಗಾಳದಲ್ಲಿ ಶಾಲಾ-ಕಾಲೇಜ್‌ ಬಂದ್, ಕಚೇರಿಗೆ 50% ಉದ್ಯೋಗಿಗಳು

ಓಮಿಕ್ರಾನ್ ಆತಂಕ: ಬಂಗಾಳದಲ್ಲಿ ಶಾಲಾ-ಕಾಲೇಜ್‌ ಬಂದ್, ಕಚೇರಿಗೆ 50% ಉದ್ಯೋಗಿಗಳು

- Advertisement -
- Advertisement -

ಓಮಿಕ್ರಾನ್ ರೂಪಾಂತರ ಸೇರಿದಂತೆ ದೈನಂದಿನ ಕೊರೊನಾ ಪ್ರಕರಣಗಳಲ್ಲಿ ಆತಂಕಕಾರಿ ಹೆಚ್ಚಳದ ಹಿನ್ನೆಲೆ, ಪಶ್ಚಿಮ ಬಂಗಾಳವು ಭಾನುವಾರ ಕೆಲವು ಕೋವಿಡ್ ನಿರ್ಬಂಧಗಳನ್ನು ಜಾರಿಗೊಳಿಸಿದೆ. ಶಾಲೆಗಳು ಮತ್ತು ಕಾಲೇಜುಗಳನ್ನು ಸಂಪೂರ್ಣವಾಗಿ ಮುಚ್ಚುವುದು. ಖಾಸಗಿ ಮತ್ತು ಸರ್ಕಾರಿ ಕಚೇರಿಗಳಲ್ಲಿ ಹಾಜರಾತಿಯನ್ನು ಶೇಕಡಾ 50 ಕ್ಕೆ ಮಿತಿಗೊಳಿಸಬೇಕು ಎಂದು ಆದೇಶಿಸಲಾಗಿದೆ.

ಹರಿಯಾಣ, ದೆಹಲಿ, ಕರ್ನಾಟಕ ಮತ್ತು ಉತ್ತರ ಪ್ರದೇಶಗಳ ಮಾದರಿಯಲ್ಲೇ ರಾತ್ರಿ 10 ರಿಂದ ಬೆಳಿಗ್ಗೆ 5 ರವರೆಗೆ ನೈಟ್ ಕರ್ಫ್ಯೂಗೆ ಆದೇಶಿಸಲಾಗಿದೆ. ಈ ಸಮಯದಲ್ಲಿ ಅಗತ್ಯ ಮತ್ತು ತುರ್ತು ಸೇವೆಗಳು ಮಾತ್ರ ಕಾರ್ಯನಿರ್ವಹಿಸುತ್ತವೆ.

“ಸೋಮವಾರದಿಂದ (ಜ.3) ಬಂಗಾಳದಲ್ಲಿ ಶಾಲೆಗಳು, ಕಾಲೇಜುಗಳು ಮತ್ತು ವಿಶ್ವವಿದ್ಯಾನಿಲಯಗಳನ್ನು ಮುಚ್ಚಲಾಗುವುದು. ಹಾಗೆಯೇ ಈಜುಕೊಳಗಳು, ಜಿಮ್‌ಗಳು, ಸ್ಪಾಗಳು ಮತ್ತು ಬ್ಯೂಟಿ ಸಲೂನ್‌ಗಳನ್ನು ಮುಚ್ಚಲಾಗುತ್ತದೆ. ಸರ್ಕಾರಿ ಮತ್ತು ಖಾಸಗಿ ಕಚೇರಿಗಳು ಶೇಕಡಾ 50 ರಷ್ಟು ಹಾಜರಾತಿಯ ಸಾಮರ್ಥ್ಯದಲ್ಲಿ ಕೆಲಸ ಮಾಡಬಹುದು, ಎಲ್ಲಾ ಆಡಳಿತಾತ್ಮಕ ಸಭೆಗಳನ್ನು ವಾಸ್ತವಿಕವಾಗಿ ನಡೆಸಲಾಗುವುದು” ಎಂದು ಬಂಗಾಳದ ಮುಖ್ಯ ಕಾರ್ಯದರ್ಶಿ ಎಚ್‌ಕೆ ದ್ವಿವೇದಿ ಹೇಳಿದ್ದಾರೆ.

ಇದನ್ನೂ ಓದಿ: ಮದರ್‌ ತೆರೇಸಾರ ಮಿಷನರೀಸ್‌ ಬ್ಯಾಂಕ್‌ ಖಾತೆಗಳ ಸ್ಥಗಿತ: ಮಮತಾ ಬ್ಯಾನರ್ಜಿ ಆರೋಪ

ಕೋಲ್ಕತ್ತಾ ಮೆಟ್ರೋ ಸೇವೆಗಳನ್ನು ಶೇಕಡಾ 50 ರಷ್ಟು ಸಾಮರ್ಥ್ಯಕ್ಕೆ ಸೀಮಿತಗೊಳಿಸಲಾಗುವುದು. ಸ್ಥಳೀಯ ರೈಲುಗಳು ರಾತ್ರಿ 7 ರವರೆಗೆ ಮಾತ್ರ ಕಾರ್ಯನಿರ್ವಹಿಸಬಹುದು. ಆದರೆ ದೂರದ ರೈಲುಗಳು ಮಾಮೂಲಿಯಾಗಿ ಕಾರ್ಯ ನಿರ್ವಹಿಸಲಿವೆ.

ಸಿನಿಮಾ ಹಾಲ್‌ಗಳು, ರೆಸ್ಟೋರೆಂಟ್‌ಗಳು ಮತ್ತು ಬಾರ್‌ಗಳು ಶೇಕಡಾ 50 ರಷ್ಟು ಸಾಮರ್ಥ್ಯದಲ್ಲಿ ರಾತ್ರಿ 10 ರವರೆಗೆ ಕಾರ್ಯನಿರ್ವಹಿಸಬಹುದು. ಶಾಪಿಂಗ್ ಮಾಲ್‌ಗಳು ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ತೆರೆದಿರುತ್ತವೆ, ಆದರೆ ಜನಸಂದಣಿಯು ಶೇಕಡಾ 50 ರಷ್ಟು ಇರಬೇಕು.

ಮದುವೆಗಳು ಮತ್ತು ಇತರ ಸಾಮಾಜಿಕ, ಧಾರ್ಮಿಕ ಮತ್ತು ಸಾಂಸ್ಕೃತಿಕ ಸಂದರ್ಭಗಳಲ್ಲಿ ಕೂಟಗಳಲ್ಲಿ 50 ಮಂದಿ ಭಾಗಿಯಾಗಬಹುದು. ಅಂತ್ಯಕ್ರಿಯೆಗೆ 20 ಜನರು ಭಾಗವಹಿಸಬಹುದು.

ದೇಶದಲ್ಲಿ ಕೋವಿಡ್ ಪ್ರಕರಣಗಳ ನಿರಂತರ ಹೆಚ್ಚಳದ ಬಗ್ಗೆ ಕಳವಳ ವ್ಯಕ್ತಪಡಿಸಿದ ಒಕ್ಕೂಟ ಸರ್ಕಾರ ಜನವರಿ 1 ರಂದು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಪತ್ರ ಬರೆದು ಅಸ್ತಿತ್ವದಲ್ಲಿರುವ ವೈದ್ಯಕೀಯ ಮೂಲಸೌಕರ್ಯಗಳನ್ನು ನವೀಕರಿಸುವಂತೆ ಒತ್ತಾಯಿಸಿದೆ.


ಇದನ್ನೂ ಓದಿ: ಎಲ್ಲೆಡೆ ಕೊರೊನಾ ನಿರ್ಬಂಧ ಹೇರಲು ಸಾಧ್ಯವಿಲ್ಲ: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

‘ಚುನಾವಣೆಯನ್ನು ನಿಯಂತ್ರಿಸಲು ಸಾಧ್ಯವಿಲ್ಲ..’; ಇವಿಎಂ-ವಿವಿಪ್ಯಾಟ್ ಪರಿಶೀಲನೆ ಆದೇಶವನ್ನು ಕಾಯ್ದಿರಿಸಿದ ಸುಪ್ರೀಂ ಕೋರ್ಟ್

0
'ಇವಿಎಂ-ವಿವಿಪ್ಯಾಟ್ ಪರಿಶೀಲನಾ ಅರ್ಜಿ' ಕುರಿತ ತೀರ್ಪನ್ನು ಸುಪ್ರೀಂ ಕೋರ್ಟ್ ಇಂದು ಕಾಯ್ದಿರಿಸಿದ್ದು, 'ಮತ್ತೊಂದು ಸಾಂವಿಧಾನಿಕ ಪ್ರಾಧಿಕಾರದಿಂದ ನಡೆಸಬೇಕಾದ ಚುನಾವಣೆಗಳನ್ನು ನಿಯಂತ್ರಿಸಲು ಸಾಧ್ಯವಿಲ್ಲ' ಎಂದು ನ್ಯಾಯಾಲಯವು ಹೇಳಿತು. 2024ರ ಲೋಕಸಭಾ ಚುನಾವಣೆಯ ಎರಡನೇ ಹಂತವು...