HomeಅಂಕಣಗಳುSIRಪಶ್ಚಿಮ ಬಂಗಾಳ SIR: 38 ಲಕ್ಷ ಮೇಲ್ಮನವಿಗಳಲ್ಲಿ ವಿಲೇವಾರಿಯಾಗಿದ್ದು ಕೇವಲ 1 ಲಕ್ಷ

ಪಶ್ಚಿಮ ಬಂಗಾಳ SIR: 38 ಲಕ್ಷ ಮೇಲ್ಮನವಿಗಳಲ್ಲಿ ವಿಲೇವಾರಿಯಾಗಿದ್ದು ಕೇವಲ 1 ಲಕ್ಷ

- Advertisement -
- Advertisement -

ಪಶ್ಚಿಮ ಬಂಗಾಳದಲ್ಲಿ ನಡೆದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (SIR) ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಬೃಹತ್ ಪ್ರಮಾಣದ ಮೇಲ್ಮನವಿಗಳ ಪೈಕಿ ವಿಲೇವಾರಿಯಾದ ಅರ್ಜಿಗಳ ಸಂಖ್ಯೆ ತೀರಾ ಕನಿಷ್ಠ ಮಟ್ಟದಲ್ಲಿದೆ ಎಂಬ ಆಘಾತಕಾರಿ ಮಾಹಿತಿ ಹೊರಬಿದ್ದಿದೆ. ಒಟ್ಟು ಸಲ್ಲಿಕೆಯಾಗಿರುವ 38.20 ಲಕ್ಷ ಮೇಲ್ಮನವಿಗಳ ಪೈಕಿ ಈವರೆಗೆ ಕೇವಲ 1.02 ಲಕ್ಷ ಅರ್ಜಿಗಳನ್ನು ಮಾತ್ರ ವಿಲೇವಾರಿ ಮಾಡಲಾಗಿದೆ ಎಂದು ಭಾರತೀಯ ಚುನಾವಣಾ ಆಯೋಗವೇ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿರುವ ಅಫಿಡವಿಟ್‌ನಲ್ಲಿ ಒಪ್ಪಿಕೊಂಡಿದೆ.

ಸುಪ್ರೀಂ ಕೋರ್ಟ್‌ ನೀಡಿದ್ದ ನಿರ್ದೇಶನದ ಮೇರೆಗೆ ನಿವೃತ್ತ ಹೈಕೋರ್ಟ್ ನ್ಯಾಯಾಧೀಶರನ್ನೊಳಗೊಂಡ 19 ಮೇಲ್ಮನವಿ ನ್ಯಾಯಮಂಡಳಿಗಳು (Appellate Tribunals) ರಚನೆಯಾಗಿ 5 ತಿಂಗಳು ಕಳೆದಿದ್ದರೂ, ಅರ್ಜಿಗಳ ವಿಲೇವಾರಿ ವೇಗ ತೀರಾ ಮಂದಗತಿಯಲ್ಲಿದೆ ಎಂಬುದು ಆಯೋಗದ ಅಂಕಿ-ಅಂಶಗಳಿಂದ ಬಹಿರಂಗವಾಗಿದೆ.

ಪಶ್ಚಿಮ ಬಂಗಾಳ ಕಾಂಗ್ರೆಸ್ ನಾಯಕ ಪ್ರಸೇನ್‌ಜಿತ್ ಬೋಸ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ಪೀಠವು ಜುಲೈ 17ರಂದು ಆಯೋಗಕ್ಕೆ ನೋಟಿಸ್ ಜಾರಿ ಮಾಡಿ, ಬಾಕಿ ಇರುವ ಮೇಲ್ಮನವಿಗಳ ಸಂಪೂರ್ಣ ಮಾಹಿತಿ ನೀಡುವಂತೆ ಸೂಚಿಸಿತ್ತು. ಆಯೋಗ ಸಲ್ಲಿಸಿರುವ ವರದಿಯ ಪ್ರಕಾರ ಒಟ್ಟು 38,20,683 ಮೇಲ್ಮನವಿಗಳಲ್ಲಿ 1,02,231 ವಿಲೇವಾರಿಯಾಗಿದ್ದು, ಇನ್ನೂ 37,18,452 ಬೃಹತ್ ಸಂಖ್ಯೆಯ ಅರ್ಜಿಗಳು ಬಾಕಿ ಉಳಿದಿವೆ. ಆದರೆ, ಪಟ್ಟಿಯಿಂದ ಹೊರಬಿದ್ದಿರುವ 27.16 ಲಕ್ಷ ಮಂದಿಯ ಪೈಕಿ ಎಷ್ಟು ಜನರು ಮರು ಸೇರ್ಪಡೆಗೆ ಅರ್ಜಿ ಸಲ್ಲಿಸಿದ್ದಾರೆ ಎಂಬ ನಿಖರವಾದ ವಿಂಗಡಣಾ ವಿವರಗಳನ್ನು (Break-up) ಆಯೋಗ ಇನ್ನೂ ಒದಗಿಸಿಲ್ಲ.

ಈ ಹಿಂದೆ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಜಾಯ್‌ಮಾಲ್ಯ ಬಾಗ್ಚಿ ಅವರು, “ಮತದಾರರ ಪಟ್ಟಿಯಿಂದ ಹೆಸರನ್ನು ಕೈಬಿಡುವುದು ಪ್ರಜೆಯೊಬ್ಬನ ಮೂಲಭೂತ ಮತದಾನದ ಹಕ್ಕನ್ನೇ ಕಸಿದುಕೊಂಡಂತೆ. ಹೀಗಾಗಿ, ಹೆಸರು ಕೈಬಿಟ್ಟಿರುವ ಅರ್ಜಿಗಳಿಗೆ ಮೊದಲ ಆದ್ಯತೆ ನೀಡಿ ಪರಿಶೀಲಿಸಬೇಕು” ಎಂದು ಆಯೋಗಕ್ಕೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದರು.

ಆಯೋಗದ ವರದಿಯ ಪ್ರಕಾರ, SIR ಕರಡು ಪಟ್ಟಿ ಪ್ರಕಟವಾದ ನಂತರ ಹೊಸದಾಗಿ ಸೇರ್ಪಡೆಗಾಗಿ ಸಲ್ಲಿಕೆಯಾಗಿದ್ದ 34.13 ಲಕ್ಷ ‘ಫಾರ್ಮ್ 6’ ಅರ್ಜಿಗಳಲ್ಲಿ 7.26 ಲಕ್ಷ ಅರ್ಜಿಗಳು ತಿರಸ್ಕೃತಗೊಂಡಿದ್ದರೆ, ಕೇವಲ 14,079 ಅರ್ಜಿಗಳು ಮಾತ್ರ ಅಂಗೀಕಾರಗೊಂಡಿವೆ. ಅದೇ ರೀತಿ ಹೆಸರನ್ನು ಕೈಬಿಡಲು ಸಲ್ಲಿಕೆಯಾಗಿದ್ದ 6.39 ಲಕ್ಷ ‘ಫಾರ್ಮ್ 7’ ಅರ್ಜಿಗಳಲ್ಲಿ 14,506 ತಿರಸ್ಕೃತಗೊಂಡು, 3,355 ಅರ್ಜಿಗಳನ್ನು ಪುರಸ್ಕರಿಸಲಾಗಿದೆ.

ಇದರೊಂದಿಗೆ ರಾಜ್ಯದ ಮತದಾರರ ಲಿಂಗಾನುಪಾತದಲ್ಲೂ ಏರಿಳಿತಗಳು ಕಂಡುಬಂದಿದ್ದು, 2025ರ ಅಕ್ಟೋಬರ್‌ನಲ್ಲಿ 970 ಇದ್ದ ಪ್ರತಿ 1,000 ಪುರುಷರಿಗೆ ಮಹಿಳೆಯರ ಅನುಪಾತವು ಡಿಸೆಂಬರ್ ಕರಡು ಪಟ್ಟಿಯಲ್ಲಿ 956ಕ್ಕೆ ಕುಸಿದು, ಅಂತಿಮ ಪಟ್ಟಿಯಲ್ಲಿ 964ಕ್ಕೆ ತಲುಪಿದೆ. ಪ್ರಸ್ತುತ ಪಶ್ಚಿಮ ಬಂಗಾಳದ 10.40 ಕೋಟಿ ಜನಸಂಖ್ಯೆಯಲ್ಲಿ 6.44 ಕೋಟಿ ಮತದಾರರಿದ್ದು, ದೇಶದ ಸರಾಸರಿ ಇಪಿ (EP) ಅನುಪಾತಕ್ಕೆ ಹೋಲಿಸಿದರೆ ರಾಜ್ಯದ ಪ್ರಮಾಣ ತಗ್ಗಿದೆ.

ರಾಜ್ಯ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವಿನ ಅಪನಂಬಿಕೆಯ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ 700 ನ್ಯಾಯಾಂಗ ಅಧಿಕಾರಿಗಳ ಮೂಲಕ 60.06 ಲಕ್ಷ ಅನುಮಾನಾಸ್ಪದ ಮತದಾರರ ಪರಿಶೀಲನೆಗೆ ಆದೇಶಿಸಿತ್ತು. ಈ ವೇಳೆ 32.9 ಲಕ್ಷ ಹೆಸರುಗಳನ್ನು ಸೇರ್ಪಡೆಗೊಳಿಸಿ 27.16 ಲಕ್ಷ ಹೆಸರುಗಳನ್ನು ಕೈಬಿಡಲಾಗಿತ್ತು. ಈ ಬೃಹತ್ ಪ್ರಮಾಣದ ಪ್ರಜೆಗಳ ಮತದಾನದ ಹಕ್ಕಿನ ಜಿಜ್ಞಾಸೆಯನ್ನು ಬಗೆಹರಿಸಲು ರಚನೆಯಾದ ನ್ಯಾಯಮಂಡಳಿಗಳ ಪ್ರಕ್ರಿಯೆ ಮಂದಗತಿಯಲ್ಲಿ ಸಾಗಿರುವುದು ಸುಪ್ರೀಂ ಕೋರ್ಟ್‌ನ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಕ್ರಮ ಕಲ್ಲು ಗಣಿಗಾರಿಕೆ ಆರೋಪ: ಸಚಿವ ರುದ್ರಪ್ಪ ಲಮಾಣಿಗೆ 3 ಕೋಟಿ ರೂ. ದಂಡ

ಕಲ್ಲು ಗಣಿಗಾರಿಕೆ ನಡೆಸುವ ವೇಳೆ ಸಾಲು ಸಾಲು ನಿಯಮಗಳನ್ನು ಉಲ್ಲಂಘಿಸಲಾಗಿದೆ ಎಂಬ ಗಂಭೀರ ಆರೋಪಕ್ಕೆ ಸಂಬಂಧಿಸಿದಂತೆ ಜವಳಿ ಮತ್ತು ಸಕ್ಕರೆ ಖಾತೆ ಸಚಿವ ಶ್ರೀ ರುದ್ರಪ್ಪ ಮಾನಪ್ಪ ಲಮಾಣಿ ಅವರಿಗೆ ಗಣಿ ಮತ್ತು...

ಕರ್ನಾಟಕ ಎಸ್‌ಐಆರ್: ತಡವಾಗಿ ತಲುಪಿದ ನೋಟಿಸ್‌ಗಳಿಂದ ವಿಚಾರಣಾ ಕೇಂದ್ರಗಳಲ್ಲಿ ಜನದಟ್ಟಣೆ; ಮತದಾರರಲ್ಲಿ ಗೊಂದಲ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗಳನ್ನು ಮತದಾರರಿಗೆ ತಲುಪಿಸುವಲ್ಲಿ ಉಂಟಾಗುತ್ತಿರುವ ವಿಳಂಬವು ಹಲವು ಕಡೆ ವಿಚಾರಣಾ ಕೇಂದ್ರಗಳಲ್ಲಿ ಜನದಟ್ಟಣೆ ಮತ್ತು ಗೊಂದಲಕ್ಕೆ ಕಾರಣವಾಗುತ್ತಿದೆ. ‘ನೋ-ಮ್ಯಾಪಿಂಗ್’...

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...