Homeಮುಖಪುಟಮೆಸ್ಸಿ ಕಾರ್ಯಕ್ರಮದಲ್ಲಿ ಅವ್ಯವಸ್ಥೆ: ಪಶ್ಚಿಮ ಬಂಗಾಳದ ಕ್ರೀಡಾ ಸಚಿವ ರಾಜೀನಾಮೆ

ಮೆಸ್ಸಿ ಕಾರ್ಯಕ್ರಮದಲ್ಲಿ ಅವ್ಯವಸ್ಥೆ: ಪಶ್ಚಿಮ ಬಂಗಾಳದ ಕ್ರೀಡಾ ಸಚಿವ ರಾಜೀನಾಮೆ

- Advertisement -
- Advertisement -

ಡಿಸೆಂಬರ್ 13ರಂದು ಫುಟ್ಬಾಲ್ ಆಟಗಾರ ಲಿಯೋನೆಲ್ ಮೆಸ್ಸಿ ಭೇಟಿ ನೀಡಿದ ಸಂದರ್ಭದಲ್ಲಿ ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಅವ್ಯವಸ್ಥೆ ಉಂಟಾದ ಹಿನ್ನೆಲೆ, ಪಶ್ಚಿಮ ಬಂಗಾಳದ ಕ್ರೀಡಾ ಸಚಿವ ಅರೂಪ್ ಬಿಸ್ವಾಸ್ ಅವರು ತನ್ನ ಸ್ಥಾನಕ್ಕೆ ಮಂಗಳವಾರ (ಡಿ.16) ರಾಜೀನಾಮೆ ನೀಡಿದ್ದಾರೆ. ಅದನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅಂಗೀಕರಿಸಿದ್ದಾರೆ.

ಘಟನೆಯ ಕುರಿತು ನಿಷ್ಪಕ್ಷಪಾತ ತನಿಖೆ ನಡೆಯಲು ಅನುವು ಮಾಡಿಕೊಡುವ ಸಲುವಾಗಿ ತನ್ನನ್ನು ಸಚಿವ ಸ್ಥಾನದಿಂದ ಬಿಡುಗಡೆ ಮಾಡುವಂತೆ ಅರೂಪ್ ಬಿಸ್ವಾಸ್ ಕೋರಿದ್ದರು. ಬಿಸ್ವಾಸ್ ಅವರ ಈ ನಿರ್ಧಾರವನ್ನು ಸಿಎಂ ಮಮತಾ ಬ್ಯಾನರ್ಜಿ ಶ್ಲಾಘಿಸಿದ್ದಾರೆ ಎಂದು ವರದಿಯಾಗಿದೆ.

ತನಿಖೆ ನಿಷ್ಪಕ್ಷಪಾತವಾಗಿ ಮುಗಿಯುವವರೆಗೆ ಸಚಿವ ಸ್ಥಾನದಿಂದ ಕೆಳಗಿಳಿಯುವ ಬಿಸ್ವಾಸ್ ಅವರ ನಿರ್ಧಾರ ಸರಿಯಾಗಿದೆ. ತನಿಖೆ ಮುಗಿಯುವವರೆಗೆ ಕ್ರೀಡಾ ಇಲಾಖೆಯನ್ನು ನಾನು ನೋಡಿಕೊಳ್ಳುತ್ತೇನೆ ಎಂದು ಮಮತಾ ಬ್ಯಾನರ್ಜಿ ಹೇಳಿರುವುದಾಗಿ ವರದಿ ಉಲ್ಲೇಖಿಸಿದೆ.

ಕ್ರೀಡಾ ಇಲಾಖೆಯನ್ನು ಸಿಎಂ ಮಮತಾ ಬ್ಯಾನರ್ಜಿ ಅವರೇ ನೇರವಾಗಿ ನೋಡಿಕೊಳ್ಳುತ್ತಾರೆ. ಬಿಸ್ವಾಸ್ ಅವರು ವಿದ್ಯುತ್ ಇಲಾಖೆಯ ಸಚಿವರೂ ಹೌದು. ಆ ಹುದ್ದೆಯಲ್ಲಿ ಅವರು ಮುಂದುವರೆಯಲಿದ್ದಾರೆ ಎಂದು ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಕ್ತಾರ ಕುನಾಲ್ ಘೋಷ್ ಹೇಳಿದ್ದಾರೆ.

‘ಗೋಟ್ ಇಂಡಿಯಾ ಟೂರ್ 2025’ರ ಮೊದಲ ಹಂತವಾಗಿ ಶನಿವಾರ (ಡಿ.13) ಬೆಳಿಗ್ಗೆ 11:30ರ ಸುಮಾರಿಗೆ ಮೆಸ್ಸಿ ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣ ತಲುಪಿದ್ದರು. ಅವರೊಂದಿಗೆ ಅರ್ಜೆಂಟೀನಾ ತಂಡದ ಸಹ ಆಟಗಾರರಾದ ಲೂಯಿಸ್ ಸುವಾರೆಜ್ ಮತ್ತು ರೊಡ್ರಿಗೋ ಡಿ ಪಾಲ್ ಕೂಡ ಇದ್ದರು. ಮೆಸ್ಸಿ ಕ್ರೀಡಾಂಗಣದಲ್ಲಿ ಜನರತ್ತ ಕೈ ಬೀಸಿ, ಸಣ್ಣ ಗೌರವ ಸ್ವೀಕರಿಸಿ ಬಳಿಕ ಆಟಗಾರರು ಮತ್ತು ಗಣ್ಯರೊಂದಿಗೆ ಸಂವಾದ ನಡೆಸಿದ್ದರು.

ಕೇವಲ 10-20 ನಿಮಿಷಗಳಷ್ಟೇ ಇದ್ದು ಬೇಗನೇ ಹೊರಟು ಹೋಗಿದ್ದರು. ಇದರಿಂದ 4 ರಿಂದ 18 ಸಾವಿರದವರೆಗೆ ಪಾವತಿಸಿ ಟಿಕೆಟ್ ಪಡೆದಿದ್ದ ಅಭಿಮಾನಿಗಳಿಗೆ ಮೆಸ್ಸಿಯನ್ನು ಸರಿಯಾಗಿ ನೋಡಲು ಸಾಧ್ಯವಾಗಿರಲಿಲ್ಲ. ಕಾರಣ, ರಾಜಕಾರಣಿಗಳು, ಸೆಲೆಬ್ರಿಟಿಗಳು, ಅಧಿಕಾರಿಗಳು ಮತ್ತು ಭದ್ರತಾ ಸಿಬ್ಬಂದಿ ಅವರನ್ನು ಬಿಗಿಯಾಗಿ ಸುತ್ತುವರಿದಿದ್ದರು.

ಇದರಿಂದ ನಿರಾಸೆಗೊಂಡ ಪ್ರೇಕ್ಷಕರು ಜೋರಾಗಿ ಕೂಗಲು ಶುರು ಮಾಡಿದ್ದರು. ನೀರಿನ ಬಾಟಲ್‌ಗಳು, ಕುರ್ಚಿಗಳು ಮತ್ತು ಇತರ ವಸ್ತುಗಳನ್ನು ಮೈದಾನಕ್ಕೆ ಎಸೆದಿದ್ದರು. ಕೆಲವರು ಬ್ಯಾರಿಕೇಡ್‌ಗಳನ್ನು ಮುರಿದು ಮೈದಾನಕ್ಕೆ ನುಗ್ಗಿದ್ದರು. ಬ್ಯಾನರ್‌, ಹೋರ್ಡಿಂಗ್ಸ್, ಮತ್ತು ಕುಳಿತುಕೊಳ್ಳುವ ಕುರ್ಚಿಗಳನ್ನು ಹಾನಿಗೊಳಿಸಿದ್ದರು. ಈ ವೇಳೆ ಪೊಲೀಸರು ಲಘು ಲಾಠಿ ಪ್ರಹಾರ ಮಾಡಿ ಗಲಾಟೆ ನಿಯಂತ್ರಿಸಿದ್ದರು.

ಸಿಎಂ ಮಮತಾ ಬ್ಯಾನರ್ಜಿ ಅವರು ಕಳಪೆ ವ್ಯವಸ್ಥೆಗೆ ಆಘಾತ ವ್ಯಕ್ತಪಡಿಸಿ, ಮೆಸ್ಸಿ ಮತ್ತು ಅಭಿಮಾನಿಗಳಿಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ್ದಾರೆ. ಘಟನೆಯ ತನಿಖೆಗೆ ಉನ್ನತ ಮಟ್ಟದ ಸಮಿತಿ (ನಿವೃತ್ತ ನ್ಯಾಯಮೂರ್ತಿ ಅಧ್ಯಕ್ಷತೆಯಲ್ಲಿ) ಘೋಷಿಸಿದ್ದಾರೆ. ಈ ಸಮಿತಿ ಘಟನೆಗೆ ಕಾರಣ ತಿಳಿಸಲಿದೆ ಮತ್ತು ಭವಿಷ್ಯದಲ್ಲಿ ಇಂತಹ ಘಟನೆಗಳನ್ನು ತಡೆಗಟ್ಟುವ ಕ್ರಮಗಳನ್ನು ಶಿಫಾರಸು ಮಾಡಲಿದೆ.

ಪೊಲೀಸರು ಮುಖ್ಯ ಸಂಘಟಕ ಸತಾದ್ರು ದತ್ತ ಅವರನ್ನು ಕಳಪೆ ವ್ಯವಸ್ಥೆಗಾಗಿ ಬಂಧಿಸಿದ್ದಾರೆ. ಅವರಿಗೆ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.

ಡಿಜಿಪಿ ರಾಜೀವ್ ಕುಮಾರ್ ಅವರು ಸಂಘಟಕರು ಟಿಕೆಟ್ ಹಣ ಮರುಪಾವತಿಗೆ ಲಿಖಿತ ಭರವಸೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ. ರಾಜ್ಯಪಾಲ ಸಿ.ವಿ ಆನಂದ ಬೋಸ್ ಸರ್ಕಾರದಿಂದ ವಿವರವಾದ ವರದಿ ಕೇಳಿದ್ದು, ವ್ಯವಸ್ಥೆಯ ಬಗ್ಗೆ ಟೀಕೆ ವ್ಯಕ್ತಪಡಿಸಿದ್ದಾರೆ.

ಘಟನೆಯ ಬಳಿಕ ಆಡಳಿತರೂಡ ಟಿಎಂಸಿ ಮತ್ತು ವಿಪಕ್ಷ ಬಿಜೆಪಿ ನಡುವೆ ರಾಜಕೀಯ ವಾಕ್ಸಮರ ನಡೆಯುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...

ಹೋರಾಟಗಾರ ಸೋನಮ್ ವಾಂಗ್ಚುಕ್ ಬಂಧನ ರದ್ದುಗೊಳಿಸಿದ ಕೇಂದ್ರ

ಲಡಾಖ್‌ನಲ್ಲಿ ಶಾಂತಿಯನ್ನು ಮರುಸ್ಥಾಪಿಸಲು ಮತ್ತು ಮಾತುಕತೆಗೆ ಪೂರಕವಾದ ವಾತಾವರಣವನ್ನು ನಿರ್ಮಿಸುವ ಉದ್ದೇಶದಿಂದ, ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (ಎನ್‌ಎಸ್‌ಎ) ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಬಂಧನವನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ ಎಂದು ವರದಿಯಾಗಿದೆ. ಸರ್ಕಾರ...

‘ಭಾರತವನ್ನು ಬೆದರಿಸುವಲ್ಲಿ ತಿಂಗಳುಗಟ್ಟಲೆ ಕಳೆದ ಅಮೆರಿಕ ಈಗ ಜಗತ್ತನ್ನ ಬೇಡಿಕೊಳ್ಳುತ್ತಿದೆ’: ರಷ್ಯಾದ ತೈಲ ವಿಚಾರದ ಕುರಿತು ಇರಾನ್ ಟೀಕೆ

ಟೆಹ್ರಾನ್: ರಷ್ಯಾದ ತೈಲದ ವಿಷಯದಲ್ಲಿ ಅಮೆರಿಕವು ದ್ವಿಮುಖ ನೀತಿಯನ್ನು ಅನುಸರಿಸುತ್ತಿದೆ ಎಂದು ಇರಾನ್ ಶನಿವಾರ ಆರೋಪಿಸಿದೆ. ವಾಷಿಂಗ್ಟನ್ ಈಗ ಒತ್ತಡ ಮತ್ತು ನಿರ್ಬಂಧಗಳ ಮೂಲಕ ನಿರ್ಬಂಧಿಸಲು ಪ್ರಯತ್ನಿಸಿದ ಅದೇ ಕಚ್ಚಾ ತೈಲವನ್ನು ಖರೀದಿಸಲು...

ಗಾಝಾ ನರಮೇಧ : ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಇಸ್ರೇಲ್‌ ಪರ ಅಮೆರಿಕ ವಕಾಲತ್ತು

ಗಾಝಾ ನರಮೇಧಕ್ಕೆ ಸಂಬಂಧಿಸಿದಂತೆ ಇಸ್ರೇಲ್ ವಿರುದ್ದ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ದಕ್ಷಿಣ ಆಫ್ರಿಕಾ ಹೂಡಿರುವ ಪ್ರಕರಣದಲ್ಲಿ ಅಮೆರಿಕ ಸೇರಿದಂತೆ ಕೆಲ ರಾಷ್ಟ್ರಗಳು ಮಧ್ಯ ಪ್ರವೇಶಿಸಿದ್ದು, ಇಸ್ರೇಲ್ ಪರ ವಕಾಲತ್ತು ವಹಿಸಲು ಮುಂದಾಗಿವೆ ಎಂದು ವರದಿಯಾಗಿದೆ. ದಿ...

ಇರಾನ್‌ನ ಕಿರೀಟ ರತ್ನ ಖಾರ್ಗ್ ದ್ವೀಪದ ಮೇಲೆ ಅಮೆರಿಕದಿಂದ ಬಾಂಬ್ ದಾಳಿ : ಟ್ರಂಪ್ ಹೇಳಿಕೆ

ಇರಾನ್‌ನ ಖಾರ್ಗ್ ದ್ವೀಪದ ಮೇಲೆ ಅಮೆರಿಕ 'ಅತ್ಯಂತ ಶಕ್ತಿಶಾಲಿ ಬಾಂಬ್ ದಾಳಿ' ನಡೆಸಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ದ್ವೀಪದಲ್ಲಿರುವ ತೈಲ ಮೂಲಸೌಕರ್ಯಗಳನ್ನು ನಾಶಪಡಿಸದೆ ಇರಲು ನಿರ್ಧರಿಸಿದ ಅಮೆರಿಕ ಪಡೆಗಳು, ಅಲ್ಲಿನ ಮಿಲಿಟರಿ ಕೇಂದ್ರಗಳನ್ನು...

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...