Homeಮುಖಪುಟಪ.ಬಂಗಾಳ: ರಾಮನವಮಿ ಮೆರವಣಿಗೆ ವೇಳೆ ಕಲ್ಲು ತೂರಾಟ; 144 ಸೆಕ್ಷನ್ ಜಾರಿ, ಇಂಟರ್ನೆಟ್ ಸೇವೆ ಬಂದ್

ಪ.ಬಂಗಾಳ: ರಾಮನವಮಿ ಮೆರವಣಿಗೆ ವೇಳೆ ಕಲ್ಲು ತೂರಾಟ; 144 ಸೆಕ್ಷನ್ ಜಾರಿ, ಇಂಟರ್ನೆಟ್ ಸೇವೆ ಬಂದ್

- Advertisement -
- Advertisement -

ಭಾನುವಾರ ಸಂಜೆ ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯಲ್ಲಿ ರಾಮನವಮಿ ಮೆರವಣಿಗೆ ವೇಳೆ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದೆ ಎಂದು ಪಿಟಿಐ ವರದಿ ಮಾಡಿದೆ. ನೆರೆಯ ಹೌರಾ ಜಿಲ್ಲೆಯಲ್ಲಿ ಹಿಂಸಾಚಾರ ಭುಗಿಲೆದ್ದ ಕೆಲವು ದಿನಗಳ ನಂತರ ಈ ಘರ್ಷಣೆಗಳು ನಡೆದಿವೆ.

ಈ ಮೆರವಣಿಗೆಯ ವೇಳೆ ನಡೆದ ಗಲಾಟೆ ಹಿಂಸಾಚಾರಕ್ಕೆ ತಿರುಗಿದ್ದರಿಂದ ಸ್ಥಳದಲ್ಲಿ ಉದ್ವಿಘ್ನತೆ ಉಂಟಾಯಿತು. ಇದರಲ್ಲಿ ಹಲವಾರು ಪೊಲೀಸ್ ಸಿಬ್ಬಂದಿಗೆ ಗಾಯಗಳಾಗಿವೆ. ಆನಂತರ ಅಧಿಕಾರಿಗಳು ಹೂಗ್ಲಿ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿ ಮಾಡಿ, ಇಂಟರ್ನೆಟ್ ಸೇವೆಗಳನ್ನೂ ಸ್ಥಗಿತಗೊಳಿಸಿದ್ದಾರೆ.

ನಗರದ ರಿಶ್ರಾ ಪ್ರದೇಶದಲ್ಲಿ ಭಾನುವಾರ ಸಂಜೆ 6 ಗಂಟೆ ಸುಮಾರಿಗೆ ಘರ್ಷಣೆ ನಡೆದಿದೆ. ಈ ಪ್ರದೇಶದಲ್ಲಿ ಎರಡು ರಾಮನವಮಿ ಮೆರವಣಿಗೆಗಳನ್ನು ಆಯೋಜಿಸಲಾಗಿತ್ತು ಎಂದು ಪೊಲೀಸರು ತಿಳಿಸಿರುವುದಾಗಿ ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಈ ಮೆರವಣಿಗೆಯಲ್ಲಿ ಬಿಜೆಪಿ ನಾಯಕರೂ ಭಾಗಿಯಾಗಿದ್ದರು. ”ಮೇದಿನಿಪುರ ಸಂಸದ ದಿಲೀಪ್ ಘೋಷ್ ಮತ್ತು ದಾಳಿಗೊಳಗಾದ ಪುರ್ಸುರಾ ಶಾಸಕ ಬಿಮನ್ ಘೋಷ್ ಮೆರವಣಿಗೆಯಲ್ಲಿ ಉಪಸ್ಥಿತರಿದ್ದರು” ಎಂದು ಚಂದನನಗರ ಪೊಲೀಸ್ ಕಮಿಷನರೇಟ್‌ನ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಬಿಹಾರದಲ್ಲಿ ಮುಂದುವರೆದ ಕೋಮು ಹಿಂಸಾಚಾರ: ಬಾಂಬ್ ಸ್ಪೋಟ, ಓರ್ವ ಸಾವು, ಹಲವರಿಗೆ ಗಾಯ

”ಈ ಮೆರವಣಿಗೆ ಸಾಂಪ್ರದಾಯಿಕ ಮಾರ್ಗದಲ್ಲಿ ಹೋಗುತ್ತಿದ್ದಾಗ ಒಂದು ಗುಂಪು ಅದರ ಮೇಲೆ ಕಲ್ಲು ಎಸೆಯಲು ಪ್ರಾರಂಭಿಸಿತು. ಪರಿಸ್ಥಿತಿ ಹತೋಟೆಗೆ ತಗೆದುಕೊಳ್ಳಲು ನಾವು ತಕ್ಷಣದಲ್ಲೇ ಕ್ರಮಗಳನ್ನು ತೆಗೆದುಕೊಂಡಿದ್ದೇವೆ” ಎಂದು ಅವರು ಹೇಳಿದರು.

ಹಿಂಸಾಚಾರದಲ್ಲಿ ಬಿಮನ್ ಘೋಷ್ ಗಾಯಗೊಂಡಿದ್ದಾರೆ. ”ಕಲ್ಲು ಎಸೆದವರನ್ನು ಓಡಿಸುವ ಮುನ್ನ ಪೊಲೀಸರು ಸ್ವಲ್ಪ ಹೊತ್ತು ಮೂಕ ಪ್ರೇಕ್ಷಕರಾಗಿದ್ದರು” ಎಂದು ಘೋಷ್ ಆರೋಪಿಸಿದ್ದಾರೆ.

ಹಿಂಸಾಚಾರ ನಡೆದ ಬಳಿಕ ರಿಶ್ರಾದ 1-5 ವಾರ್ಡ್‌ ಮತ್ತು ಸೆರಾಂಪೋರ್‌ನ 24ರ ವಾರ್ಡ್‌ಗಳಲ್ಲಿ 144 ಸೆಕ್ಷನ್ ಜಾರಿ ಮಾಡಿ ನಿಷೇಧಾಜ್ಞೆಗಳನ್ನು ವಿಧಿಸಲಾಗಿದೆ. ಸೋಮವಾರ ರಾತ್ರಿ 10 ಗಂಟೆಯವರೆಗೆ ರಿಶ್ರಾ ಮತ್ತು ಸೆರಾಂಪೋರ್‌ನ ಕೆಲವು ಭಾಗಗಳಲ್ಲಿ ಇಂಟರ್ನೆಟ್ ಸೇವೆಗಳನ್ನು ಕೂಡ ಸ್ಥಗಿತಗೊಳಿಸಲಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.

ಹಿಂಸಾಚಾರದ ಕುರಿತು ಪ್ರತಿಕ್ರಿಯಿಸಿರುವ ತೃಣಮೂಲ ಕಾಂಗ್ರೆಸ್ ವಕ್ತಾರ ಜಾಯ್‌ಪ್ರಕಾಶ್ ಮಜುಂದಾರ್, ”ಬಿಜೆಪಿಯು ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಲಾಭಕ್ಕಾಗಿ ಗಲಭೆಗಳನ್ನು ಸೃಷ್ಟಿಸಿ, ರಾಜ್ಯದಲ್ಲಿ ಅಸ್ಥಿರತೆ ಉಂಟುಮಾಡಲು ಬಯಸಿದೆ” ಎಂದು ಆರೋಪಿಸಿದ್ದಾರೆ.

”ಪವಿತ್ರ ರಂಜಾನ್ ತಿಂಗಳಲ್ಲಿ ರಾಮನವಮಿ ಮೆರವಣಿಗೆಗಳನ್ನು ಕೈಗೊಳ್ಳಲು ಅವರು ಏಕೆ ಒಲವು ತೋರುತ್ತಿದ್ದಾರೆ? ರಾಮ ನವಮಿ ಮುಗಿದು ಎರಡು ದಿನಗಳ ನಂತರ ಏಕೆ ರ್ಯಾಲಿಯನ್ನು ನಡೆಸಲಾಯಿತು?” ಎಂದು ಅವರು ಕೇಳಿದರು.

”ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ತರಲು ಬಿಜೆಪಿ ಇಂತಹ ಪರಿಸ್ಥಿತಿಯನ್ನು ಸೃಷ್ಟಿಸುತ್ತಿದೆ” ಎಂದು ಮಜುಂದಾರ್ ಆರೋಪಿಸಿದರು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಅರವಿಂದ್ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು ನೀಡುವ ಬಗ್ಗೆಯೂ ಯೋಚಿಸಬಹುದು: ಸುಪ್ರೀಂ ಕೋರ್ಟ್‌

0
ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಅರವಿಂದ್ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು ನೀಡುವ ಬಗ್ಗೆ ಕೂಡ ನಾವು ಯೋಚಿಸಬಹುದು ಎಂದು ಸುಪ್ರೀಂ ಕೋರ್ಟ್ ನಿನ್ನೆ ಹೇಳಿದೆ. ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ತನ್ನ...