Homeಮುಖಪುಟಪಶ್ಚಿಮ ಬಂಗಾಳ: 187 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ ಟಿಎಂಸಿ - ಗಮನಾರ್ಹ ಸಾಧನೆ ಮಾಡಿದ ಬಿಜೆಪಿ

ಪಶ್ಚಿಮ ಬಂಗಾಳ: 187 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ ಟಿಎಂಸಿ – ಗಮನಾರ್ಹ ಸಾಧನೆ ಮಾಡಿದ ಬಿಜೆಪಿ

- Advertisement -
- Advertisement -

ಭಾರೀ ಕೂತುಹಲ ಹುಟ್ಟಿಸಿದ್ದ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮತ ಎಣಿಕೆ ಬಿರುಸಿನಿಂದ ಸಾಗಿದ್ದು ಆರಂಭಿಕ ಹಂತಗಳಲ್ಲಿ ಸಿಎಂ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಸಿಂ 187 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸುವ ಮೂಲಕ ಹ್ಯಾಟ್ರಿಕ್ ಸಾಧನೆಯತ್ತ ದಾಪುಗಾಲಿಟ್ಟಿದೆ. ಈ ಬಾರಿ ಅಧಿಕಾರಕ್ಕೆ ಏರುತ್ತೇವೆ ಎಂದು ಆತ್ಮವಿಶ್ವಾಸ ಪ್ರದರ್ಶಿಸಿದ್ದ ಬಿಜೆಪಿ ಗಮನಾರ್ಹ ಸಾಧನೆ ಮಾಡಿದ್ದು 97 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.

294 ಕ್ಷೇತ್ರಗಳ ಪಶ್ಚಿಮ ಬಂಗಾಳದಲ್ಲಿ ಸರಳ ಬಹುಮತಕ್ಕೆ 148 ಸ್ಥಾನಗಳ ಅಗತ್ಯವಿದೆ. ಸದ್ಯದ ಮತ ಎಣಿಕೆ ಪ್ರಕಾರ ಟಿಎಂಸಿ 187 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡು ಸುರಕ್ಷಿತವಾಗಿದೆ. ಬಿಜೆಪಿ 97 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದು ಅಂತಿಮ ಫಲಿತಾಂಶಕ್ಕಾಗಿ ಕಾಯುತ್ತಿದೆ.

ದಶಕಗಳ ಕಾಲ ಬಂಗಾಳದ ಆಡಳಿತ ಚುಕ್ಕಾಣಿ ಹಿಡಿದಿದ್ದ ಎಡಪಕ್ಷಗಳು ಸಂಪೂರ್ಣ ಹಿನ್ನಡೆ ಅನುಭವಿಸಿವೆ. ಅವು ಕೇವಲ 03 ಸ್ಥಾನಗಳಲ್ಲಿ ಮಾತ್ರ ಮುನ್ನಡೆ ಸಾಧಿಸುವ ಮೂಲಕ ಕಳಪೆ ಸಾಧನೆ ಮಾಡಿವೆ.

ಎಡಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಂಡಿದ್ದ ಕಾಂಗ್ರೆಸ್ ಸಹ ಮುಖಭಂಗಕ್ಕೆ ಒಳಗಾಗಿದೆ. ಬಂಗಾಳದಲ್ಲಿ ಯಾವುದೇ ಸ್ಥಾನದಲ್ಲಿ ಅದು ಮುನ್ನಡೆ ಸಾಧಿಸಲು ಸಾಧ್ಯವಾಗಿಲ್ಲ.

ಟಿಎಂಸಿ ಉತ್ತಮ ಸಾಧನೆ ಮಾಡಿದರೂ ಸಿಎಂ ಮಮತಾ ಬ್ಯಾನರ್ಜಿ ನಂದಿಗ್ರಾಮದಲ್ಲಿ 5 ಸಾವಿರ ಮತಗಳ ಅಂತರದಿಂದ ಹಿನ್ನಡೆ ಅನುಭವಿಸುತ್ತಿದ್ದರು. ಆದರೆ ಸದ್ಯದ ಮತ ಎಣಿಕೆ ಪ್ರಕಾರ ನೇರಾನೇರ ಪೈಪೋಟಿ ಏರ್ಪಟ್ಟಿದೆ ಎಂದು ಚುನಾವನಾ ಆಯೋಗದ ವೆಬ್‌ಸೈಟ್ ತಿಳಿಸಿದೆ.


ಇದನ್ನೂ ಓದಿ: ‘ಸತೀಶ್ ಆಚಾರ್ಯ ಅವರೇ, ನೀವು ಆನೆಯಂತೆ‌ ನಡೆಯಿರಿ’: ಬಿಜೆಪಿ ಐಟಿ ಸೆಲ್‌ ದಾಳಿ ವಿರುದ್ದ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...