Homeಮುಖಪುಟಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

- Advertisement -
- Advertisement -

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ ದುರಂತವೇ ಸಾಕ್ಷಿ. ಮುರ್ಷಿದಾಬಾದ್ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ರೈಲು ಅಪಘಾತದಲ್ಲಿ ಇಬ್ಬರು ಮುಗ್ಧ ಶಾಲಾ ವಿದ್ಯಾರ್ಥಿಗಳು ಸೇರಿದಂತೆ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ರೈಲ್ವೆ ಇಲಾಖೆಯ ಸಿಬ್ಬಂದಿಯ ಕರ್ತವ್ಯ ಲೋಪವೇ ಈ ದುರಂತಕ್ಕೆ ಕಾರಣ ಎಂದು ಆರೋಪಿಸಲಾಗಿದ್ದು, ಐವರು ವಿದ್ಯಾರ್ಥಿಗಳು ತೀವ್ರವಾಗಿ ಗಾಯಗೊಂಡಿದ್ದಾರೆ.

ಪೂರ್ವ ರೈಲ್ವೆಯ ಹೌರಾ ವಿಭಾಗದ ಅಜೀಮ್‌ಗಂಜ್-ಕಟ್ವಾ ರೈಲು ಮಾರ್ಗದಲ್ಲಿ ಈ ಘಟನೆ ಸಂಭವಿಸಿದೆ. ಮುಂಜಾನೆ ಸುಮಾರು 7 ಗಂಟೆಯ ಸುಮಾರಿಗೆ ಶಾಲಾ ವ್ಯಾನ್ ಒಂದರಲ್ಲಿ ಮಕ್ಕಳು ಎಂದಿನಂತೆ ಶಾಲೆಗೆ ಹೊರಟಿದ್ದರು. ವ್ಯಾನ್ ರೈಲ್ವೆ ಲೆವೆಲ್ ಕ್ರಾಸಿಂಗ್ ದಾಟುತ್ತಿದ್ದಾಗ, ವೇಗವಾಗಿ ಬಂದ ಪ್ಯಾಸೆಂಜರ್ ರೈಲೊಂದು ಭೀಕರವಾಗಿ ಡಿಕ್ಕಿ ಹೊಡೆದಿದೆ. ರೈಲು ಬರುವ ಮುನ್ಸೂಚನೆ ಇದ್ದರೂ ರೈಲ್ವೆ ಗೇಟ್ ಮುಚ್ಚದೇ ಮುಕ್ತವಾಗಿಟ್ಟಿದ್ದೇ ಈ ಅಪಘಾತಕ್ಕೆ ನೇರ ಕಾರಣ ಎಂದು ಪ್ರತ್ಯಕ್ಷದರ್ಶಿಗಳು ತೀವ್ರ ಆಕ್ರೋಶ ಹೊರಹಾಕಿದ್ದಾರೆ.

ಡಿಕ್ಕಿಯ ರಭಸಕ್ಕೆ ಶಾಲಾ ವ್ಯಾನ್ ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಹಳಿಗಳ ಮೇಲೆ ಬಿದ್ದಿದ್ದ ಅದರ ಅವಶೇಷಗಳು ಸ್ಥಳೀಯರ ಕರುಳು ಹಿಂಡುವಂತಿತ್ತು. ಅಪಘಾತದ ಬೆನ್ನಲ್ಲೇ ಸ್ಥಳೀಯ ನಿವಾಸಿಗಳು ತಕ್ಷಣ ಧಾವಿಸಿ ರಕ್ಷಣಾ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ.

ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡ ಐವರು ವಿದ್ಯಾರ್ಥಿಗಳನ್ನು ತಕ್ಷಣವೇ ಮುರ್ಷಿದಾಬಾದ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಗಾಯಾಳುಗಳ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯಕೀಯ ಮೂಲಗಳು ತಿಳಿಸಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಭೀತಿ ಎದುರಾಗಿದೆ. ಅಪಘಾತದ ಹಿನ್ನೆಲೆಯಲ್ಲಿ ಅಜೀಮ್‌ಗಂಜ್-ಕಟ್ವಾ ಮಾರ್ಗದಲ್ಲಿ ರೈಲು ಸಂಚಾರ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ.

ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಹಾಗೂ ರೈಲ್ವೆ ಸುರಕ್ಷತಾ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರೈಲ್ವೆ ಗೇಟ್‌ಮ್ಯಾನ್‌ನ ಗಂಭೀರ ನಿರ್ಲಕ್ಷ್ಯದ ಹಿನ್ನೆಲೆಯಲ್ಲಿ ಇಲಾಖಾ ತನಿಖೆಗೆ ಆದೇಶಿಸಲಾಗಿದೆ.

“ಯಾವುದೇ ಜೀವಹಾನಿ ದುರಂತವೇ, ಆದರೆ ಮುಗ್ಧ ಮಕ್ಕಳ ಸಾವು ಇನ್ನೂ ಹೆಚ್ಚು ಹೃದಯವಿದ್ರಾವಕವಾಗಿದೆ. ಈ ಘಟನೆಯ ಕುರಿತು ಸಮಗ್ರ ತನಿಖೆಯ ಅಗತ್ಯವಿದ್ದು, ರೈಲ್ವೆ ಇಲಾಖೆಯು ಉನ್ನತ ಮಟ್ಟದ ತನಿಖೆ ನಡೆಸಲಿದೆ ಎಂಬ ನಂಬಿಕೆ ನನಗಿದೆ.” ಎಂದು ಕೇಂದ್ರ ಸಚಿವ ಸುಕಾಂತ ಮಜುಂದಾರ್ ಪ್ರತಿಕ್ರಿಯಿಸಿದ್ದಾರೆ.

ದೇಶದಲ್ಲಿ ಬುಲೆಟ್ ರೈಲು, ವಂದೇ ಭಾರತ್‌ಗಳಂತಹ ಕಾರ್ಪೊರೇಟ್ ಮಾದರಿಯ ಆಧುನಿಕ ರೈಲುಗಳ ಪ್ರಚಾರ ಮತ್ತು ಹೂಡಿಕೆಗಳು ಜೋರಾಗಿ ನಡೆಯುತ್ತಿದ್ದರೂ, ಗ್ರಾಮೀಣ ಭಾಗದ ಸಾಮಾನ್ಯ ಪ್ಯಾಸೆಂಜರ್ ರೈಲುಗಳು ಚಲಿಸುವ ಮಾರ್ಗಗಳಲ್ಲಿನ ಕನಿಷ್ಠ ಸುರಕ್ಷತಾ ಕ್ರಮಗಳ ಕೊರತೆ ಎದ್ದುಕಾಣುತ್ತಿದೆ. ಸಿಬ್ಬಂದಿಗಳ ಬೇಜವಾಬ್ದಾರಿತನ ಮುಗ್ಧ ಬಡ ಮಕ್ಕಳ ಜೀವಗಳನ್ನು ಬಲಿಪಡೆಯುತ್ತಲೇ ಇರುವುದು ಆತಂಕಕಾರಿ ಸಂಗತಿಯಾಗಿದೆ. ಅಧಿಕಾರಿಗಳ ಮತ್ತು ಸರ್ಕಾರದ ಈ ವ್ಯವಸ್ಥಿತ ನಿರ್ಲಕ್ಷ್ಯದ ವಿರುದ್ಧ ತಳಮಟ್ಟದ ಜನರಿಂದ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...