Homeಮುಖಪುಟಪಶ್ಚಿಮ ಬಂಗಾಳ| ದುರ್ಗಾಪೂಜೆ ಸಂದರ್ಭದಲ್ಲಿ ಮಾಂಸ ಮಾರಾಟ ನಿಷೇಧ ಆದೇಶ ಹೊರಡಿಸಿದ ವಿಎಚ್‌ಪಿ; ಬಲಪಂಥೀಯ ಸಂಘನೆಯ...

ಪಶ್ಚಿಮ ಬಂಗಾಳ| ದುರ್ಗಾಪೂಜೆ ಸಂದರ್ಭದಲ್ಲಿ ಮಾಂಸ ಮಾರಾಟ ನಿಷೇಧ ಆದೇಶ ಹೊರಡಿಸಿದ ವಿಎಚ್‌ಪಿ; ಬಲಪಂಥೀಯ ಸಂಘನೆಯ ಅಧಿಕಾರ ಪ್ರಶ್ನಿಸಿದ ವಿಪಕ್ಷಗಳು

- Advertisement -
- Advertisement -

ಪಶ್ಚಿಮ ಬಂಗಾಳದಲ್ಲಿ ದುರ್ಗಾಪೂಜೆ ಆಚರಣೆಗೆ ಸಂಬಂಧಿಸಿದಂತೆ ಬಲಪಂಥೀಯ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಹೊರಡಿಸಿರುವ ಮಾರ್ಗಸೂಚಿಯು ರಾಜಕೀಯ ಚರ್ಚೆಗೆ ಗ್ರಾಸವಾಗಿದೆ. ಪೂಜಾ ಮಂಟಪಗಳ ಸುತ್ತಮುತ್ತ ಸಸ್ಯಾಹಾರಿ ಅಲ್ಲದ ಮಾಂಸ ಮತ್ತು ಮೀನು ಆಹಾರದ ಮಾರಾಟ ಹಾಗೂ ಸೇವನೆಯನ್ನು ನಿರ್ಬಂಧಿಸಬೇಕು ಎಂಬ ವಿಎಚ್‌ಪಿಯ ‘ಆದೇಶ’ದ ಕುರಿತು ಜೆಡಿಯು, ಕಾಂಗ್ರೆಸ್ ಸೇರಿದಂತೆ ವಿವಿಧ ಪಕ್ಷಗಳ ನಾಯಕರು ತಮ್ಮ ಭಿನ್ನಾಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ.

ವಿಎಚ್‌ಪಿಯ ಮಾರ್ಗಸೂಚಿಗಳಿಗೆ ಪ್ರತಿಕ್ರಿಯಿಸಿದ ಜೆಡಿಯು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಶ್ಯಾಮ್ ರಜಾಕ್, ದುರ್ಗಾಪೂಜೆಯ ಸಮಯದಲ್ಲಿ ಮಾಂಸ ಮತ್ತು ಮೀನು ಮಾರಾಟವನ್ನು ತಡೆಯುವುದು ಒಳ್ಳೆಯ ವಿಷಯ. ಆದರೆ ಹಬ್ಬದ ಸಮಯದಲ್ಲಿ ನಡೆಸಲಾಗುವ ಸಾಂಪ್ರದಾಯಿಕ ಪ್ರಾಣಿ ಬಲಿ ಆಚರಣೆಗಳಿಗೆ ಈ ನಿಯಮ ಹೇಗೆ ಅನ್ವಯಿಸುತ್ತದೆ ಎಂದು ಪ್ರಶ್ನಿಸಿದ್ದಾರೆ.

“ದುರ್ಗಾಪೂಜೆಯ ಸಮಯದಲ್ಲಿ ಮಾಂಸ ಮತ್ತು ಮೀನು ಮಾರಾಟವನ್ನು ತಡೆಯುವುದು ಧನಾತ್ಮಕ ಹೆಜ್ಜೆ. ಆದರೆ, ದುರ್ಗಾಪೂಜೆಯ ಸಮಯದಲ್ಲಿ ಜನರು ಪ್ರಾಣಿ ಬಲಿ ನೀಡುತ್ತಾರೆ. ಪ್ರಾಣಿ ಬಲಿಯು ಕೆಲವು ಸಂಪ್ರದಾಯ ಹಾಗೂ ಧಾರ್ಮಿಕ ಆಚರಣೆಗಳ ಭಾಗವೂ ಆಗಿದೆ. ಇಂತಹ ಬಲಿಗಳು ನಡೆದಾಗ, ಆ ಮಾಂಸ ಏನಾಗುತ್ತದೆ? ಅದನ್ನು ಬಳಸಲು ಜನರಿಗೆ ನೀಡಲಾಗುತ್ತದೆಯೇ ಅಥವಾ ಇಲ್ಲವೇ?” ಎಂದು ರಜಾಕ್ ಕೇಳಿದ್ದಾರೆ.

ಈ ವಿಷಯವನ್ನು ವಿಎಚ್‌ಪಿ ಪರಿಗಣಿಸಬೇಕು ಎಂದಿರುವ ಅವರು, ಮಾಂಸ ಮತ್ತು ಮೀನು ಮಾರಾಟವನ್ನು ನಿಯಂತ್ರಿಸಲು ಬಯಸುವುದಾದರೆ, ಸಂಘಟನೆಯು ಮೊದಲು ಪ್ರಾಣಿ ಬಲಿ ಆಚರಣೆಯನ್ನು ಕೊನೆಗೊಳಿಸುವಂತೆ ಧಾರ್ಮಿಕ ಸಮುದಾಯಗಳಿಗೆ ಮನವಿ ಮಾಡಬೇಕು ಎಂದು ಹೇಳಿದ್ದಾರೆ.

ವಿಎಚ್‌ಪಿಯ ಈ ನಿಲುವಿಗೆ ವಿಶ್ವ ಹಿಂದೂ ಪರಿಷತ್ತಿನ ಇಂದ್ರಪ್ರಸ್ಥ ಪ್ರಾಂತ್ಯದ ಅಧ್ಯಕ್ಷೆ ಉಪಾಸನಾ ಅರೋರಾ ಬೆಂಬಲ ವ್ಯಕ್ತಪಡಿಸಿದ್ದಾರೆ. ದೆಹಲಿಯಲ್ಲಿ ಮಾತನಾಡಿದ ಅರೋರಾ, ಈ ಮಾರ್ಗದರ್ಶಿ ಸೂತ್ರಗಳನ್ನು ಧನಾತ್ಮಕವಾಗಿ ನೋಡುವುದಾಗಿ ತಿಳಿಸಿದ್ದು, ಇವು ದುರ್ಗಾಪೂಜೆಗೆ ಸಂಬಂಧಿಸಿದ ಸಾಂಪ್ರದಾಯಿಕ ಆಚರಣೆಗಳಿಗೆ ಅನುಗುಣವಾಗಿವೆ ಎಂದು ಬಣ್ಣಿಸಿದ್ದಾರೆ.

“ನಾನು ಇದನ್ನು ಧನಾತ್ಮಕವಾಗಿ ನೋಡುತ್ತೇನೆ. ಏಕೆಂದರೆ ನನ್ನ ಬಾಲ್ಯದಿಂದಲೂ ದುರ್ಗಾಪೂಜೆಯ ಸಮಯದಲ್ಲಿ ಜನರು ಸಾಮಾನ್ಯವಾಗಿ ತಮ್ಮ ಮನೆಗಳಲ್ಲಿ ಮಾಂಸ ಮತ್ತು ಮದ್ಯ ಸೇವನೆಯನ್ನು ನಿಲ್ಲಿಸುವುದನ್ನು ನೋಡಿದ್ದೇನೆ. ಈ ದಿನಗಳಲ್ಲಿ ನಾನು ನನ್ನ ಮನೆಗೆ ಈರುಳ್ಳಿಯನ್ನು ಸಹ ತರುವುದಿಲ್ಲ” ಎಂದು ಅವರು ಹೇಳಿದ್ದಾರೆ.

ಇಂತಹ ಆಚರಣೆಗಳು ಭಾರತೀಯ ಸಂಸ್ಕೃತಿಯ ಭಾಗವಾಗಿದ್ದು, ಆ ಮೌಲ್ಯಗಳನ್ನು ರಕ್ಷಿಸುವ ಮತ್ತು ಪ್ರಚಾರ ಮಾಡುವ ಜವಾಬ್ದಾರಿ ವಿಎಚ್‌ಪಿಗೆ ಇದೆ ಎಂದು ಅರೋರಾ ಸಮರ್ಥಿಸಿಕೊಂಡಿದ್ದಾರೆ.

ವಿಎಚ್‌ಪಿ ಅಧಿಕಾರವನ್ನು ಪ್ರಶ್ನಿಸಿದ ಕಾಂಗ್ರೆಸ್

ಕಾಂಗ್ರೆಸ್ ನಾಯಕ ಉದಿತ್ ರಾಜ್, ವಿಎಚ್‌ಪಿ ಬೇಡಿಕೆಯನ್ನು ತೀವ್ರವಾಗಿ ವಿರೋಧಿಸಿದ್ದು, ಇಂತಹ ಮಾರ್ಗದರ್ಶಿ ಸೂತ್ರಗಳನ್ನು ಹೊರಡಿಸಲು ಸಂಘಟನೆಗೆ ಇರುವ ಅಧಿಕಾರವನ್ನು ಪ್ರಶ್ನಿಸಿದ್ದಾರೆ.

“ಜನರು ಏನು ಮಾಡಬೇಕೆಂದು ನಿರ್ದೇಶಿಸಲು ಇವರಾರು? ಇವರೇನು ಚುನಾಯಿತ ಪ್ರತಿನಿಧಿಗಳೇ? ಇವರು ಗೂಂಡಾಗಳು ಮತ್ತು ಕಿಡಿಗೇಡಿಗಳು, ತಪ್ಪು ನಿರೂಪಣೆಯನ್ನು ಸೃಷ್ಟಿಸುತ್ತಿದ್ದಾರೆ. ಯಾರು ಏನು ತಿನ್ನಬೇಕು ಎಂಬುದು ಸಂವಿಧಾನಾತ್ಮಕ ಹಕ್ಕು. ಇದರ ಮೇಲೆ ಯಾವುದೇ ಸುತ್ತೋಲೆ ಹೊರಡಿಸಲು ಇವರಿಗೆ ಹಕ್ಕಿಲ್ಲ” ಎಂದು ರಾಜ್ ವಾಗ್ದಾಳಿ ನಡೆಸಿದ್ದಾರೆ.

ಬಂಗಾಳದಲ್ಲಿ ದುರ್ಗಾಪೂಜೆಗೂ ಮುನ್ನ ಶುಕ್ರವಾರ ಮಾರ್ಗಸೂಚಿ ಹೊರಡಿಸಿರುವ ವಿಎಚ್‌ಪಿ, ಆಯೋಜಕರು ಸಾಂಪ್ರದಾಯಿಕ ಆಚರಣೆಗಳಿಗೆ ಮರಳಬೇಕು. ಪೂಜಾ ಪೆಂಡಾಲ್‌ಗಳ ಸುತ್ತಮುತ್ತ ಮಾಂಸಹಾರ ಮಾರಾಟವಾಗದಂತೆ ಹಾಗೂ ಸೇವನೆಯಾಗದಂತೆ ನೋಡಿಕೊಳ್ಳಬೇಕು ಎಂದು ಮನವಿ ಮಾಡಿದೆ.

ಹಬ್ಬದ ಸಮಯದಲ್ಲಿ ಮಾಂಸಹಾರದ ಮೇಲೆ ಸಂಪೂರ್ಣ ನಿಷೇಧವನ್ನು ತಾನು ಕೋರುತ್ತಿಲ್ಲ ಎಂದು ಸ್ಪಷ್ಟಪಡಿಸಿರುವ ಸಂಘಟನೆಯು, ಬಂಗಾಳದಲ್ಲಿ ದುರ್ಗಾಪೂಜೆಯು ಐತಿಹಾಸಿಕವಾಗಿ ಕಟ್ಟುನಿಟ್ಟಿನ ಸಸ್ಯಾಹಾರವಾಗಿರಲಿಲ್ಲ ಎಂಬುದನ್ನು ಒಪ್ಪಿಕೊಂಡಿದೆ. ಆದರೆ, ದೇವಿಯ ಮೂರ್ತಿಯ ಪವಿತ್ರತೆಯನ್ನು ಕಾಪಾಡಿಕೊಳ್ಳಬೇಕು. ಮೂರ್ತಿಯು ಮಾಂಸಹಾರಿ ಆಹಾರದ ಸಂಪರ್ಕಕ್ಕೆ ಬಾರದಂತೆ ನೋಡಿಕೊಳ್ಳಬೇಕು ಎಂದು ಒತ್ತಾಯಿಸಿದೆ.

ಈ ಮಾರ್ಗದರ್ಶಿ ಸೂತ್ರಗಳು ಧಾರ್ಮಿಕ ಸಂಪ್ರದಾಯಗಳು, ಆಹಾರದ ಆಯ್ಕೆಗಳು, ಸಾಂಸ್ಕೃತಿಕ ಆಚರಣೆಗಳು ಹಾಗೂ ಸಾರ್ವಜನಿಕವಾಗಿ ನಡೆಯುವ ಧಾರ್ಮಿಕ ಸಂಭ್ರಮಾಚರಣೆಗಳನ್ನು ನಿಯಂತ್ರಿಸುವಲ್ಲಿ ಸಂಘಟನೆಗಳ ಪಾತ್ರದ ಕುರಿತು ವ್ಯಾಪಕ ಚರ್ಚೆಗೆ ಕಾರಣವಾಗಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...