Homeಮುಖಪುಟಎಸ್‌ಐಆರ್ ಬಳಿಕ ಪಶ್ಚಿಮ ಬಂಗಾಳದ ಕರಡು ಮತದಾರರ ಪಟ್ಟಿ ಪ್ರಕಟ : 58 ಲಕ್ಷ ಹೆಸರು...

ಎಸ್‌ಐಆರ್ ಬಳಿಕ ಪಶ್ಚಿಮ ಬಂಗಾಳದ ಕರಡು ಮತದಾರರ ಪಟ್ಟಿ ಪ್ರಕಟ : 58 ಲಕ್ಷ ಹೆಸರು ಡಿಲೀಟ್!

- Advertisement -
- Advertisement -

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ ಮಂಗಳವಾರ (ಡಿಸೆಂಬರ್ 16) ಚುನಾವಣಾ ಆಯೋಗ ಪಶ್ಚಿಮ ಬಂಗಾಳದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದೆ. ಸಾವು, ವಲಸೆ ಮತ್ತು ಎಣಿಕೆ ನಮೂನೆಗಳನ್ನು ಸಲ್ಲಿಸದಿರುವುದು ಸೇರಿದಂತೆ ವಿವಿಧ ಕಾರಣಗಳ ಮೇಲೆ 58 ಲಕ್ಷಕ್ಕೂ ಹೆಚ್ಚು ಮತದಾರರ ಹೆಸರುಗಳನ್ನು ಅಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹೆಸರು ಅಳಿಸಲಾದ 58 ಲಕ್ಷ (58,20,898) ಮತದಾರರ ಪೈಕಿ 24,16,852 ಮಂದಿ ಸಾವನ್ನಪ್ಪಿದ್ದಾರೆ, 19,88,076 ಜನರು ಶಾಶ್ವತವಾಗಿ ಸ್ಥಳಾಂತರಗೊಂಡಿದ್ದಾರೆ. 12,20,038 ಮಂದಿ ಪತ್ತೆಯಾಗಿಲ್ಲ ಅಥವಾ ಕಾಣೆಯಾಗಿದ್ದಾರೆ. 1,38,328 ಮಂದಿಯ ಹೆಸರು ಒಂದಕ್ಕಿಂತ ಹೆಚ್ಚು ಬಾರಿ ಇವೆ ಮತ್ತು 57,604 ಜನರ ಹೆಸರುಗಳನ್ನು ಇತರ ಕಾರಣಗಳಿಗೆ ಕೈ ಬಿಡಲಾಗಿದೆ ಎಂದು ಚುನಾವಣಾ ಆಯೋಗ ಹೇಳಿದೆ.

ಕರಡು ಮತದಾರರ ಪಟ್ಟಿಯ ಪ್ರಕಟದ ಮೂಲಕ ಪಶ್ಚಿಮ ಬಂಗಾಳದ ಎಸ್‌ಐಆರ್‌ ಪ್ರಕ್ರಿಯೆಯ ಮೊದಲ ಹಂತ ಕೊನೆಗೊಂಡಿದೆ. ಯಾರ ಹೆಸರು ತಪ್ಪಾಗಿ ಅಳಿಸಲಾಗಿದೆಯೂ, ಅವರು ಜನವರಿ 15ವರೆಗೆ ಆಕ್ಷೇಪಣೆಗಳನ್ನು ಸಲ್ಲಿಸಿ ತಮ್ಮ ಹೆಸರು ಸೇರ್ಪಡೆಗೊಳಿಸಲು ಅವಕಾಶವಿದೆ. ಎಲ್ಲಾ ಆಕ್ಷೇಪಣೆಗಳನ್ನು ಪರಿಹರಿಸಿದ ಬಳಿಕ, ಮುಂದಿನ ಫೆಬ್ರವರಿಯಲ್ಲಿ (2026) ಮತದಾರರ ಅಂತಿಮ ಪಟ್ಟಿ ಪ್ರಕಟಿಸಲಾಗುವುದು ಎಂದು ಚುನಾವಣಾ ಆಯೋಗ ತಿಳಿಸಿದೆ.

ಕರಡು ಪಟ್ಟಿಯ ಬಗ್ಗೆ ಪ್ರತಿಕ್ರಿಯಿಸಿರುವ ತೃಣಮೂಲ ಕಾಂಗ್ರೆಸ್ (ಟಿಎಂ) ಸಂಸದ ಸೌಗತ್ ರಾಯ್, “58 ಲಕ್ಷ ಹೆಸರುಗಳನ್ನು ಅಳಿಸಿರುವುದು ‘ಅನ್ಯಾಯ” ಎಂದಿದ್ದಾರೆ. “ಇದು ಬಂಗಾಳದ ಮತದಾರರ ಪಟ್ಟಿಯಿಂದ ಕಾನೂನುಬದ್ಧ ಮತದಾರರನ್ನು ತೆಗೆದುಹಾಕಲು ಬಿಜೆಪಿ ನಡೆಸಿದ ಪಿತೂರಿಯಾಗಿದೆ. ನಾವು ಮತದಾರರ ಸಹಾಯ ಕೇಂದ್ರಗಳನ್ನು ಸ್ಥಾಪಿಸಿದ್ದೇವೆ. ಜನರು ಮತದಾರರ ಪಟ್ಟಿಗೆ ತಮ್ಮ ಹೆಸರುಗಳನ್ನು ಸೇರಿಸಲು ಅರ್ಜಿ ಸಲ್ಲಿಸಲು ನಾವು ಸಹಾಯ ಮಾಡುತ್ತೇವೆ” ಎಂದು ಹೇಳಿದ್ದಾರೆ.

ಕರಡು ಪಟ್ಟಿಯ ಪ್ರಕಟಣೆಯು ಬಂಗಾಳದಲ್ಲಿ ಎಸ್‌ಐಆರ್‌ ಕುರಿತ ರಾಜಕೀಯ ಕೋಲಾಹಲವನ್ನು ತೀವ್ರಗೊಳಿಸುವ ಸಾಧ್ಯತೆಯಿದೆ. ಮುಖ್ಯಮಂತ್ರಿ ಹಾಗೂ ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರು ಎಸ್‌ಐಆರ್ ಪ್ರಕ್ರಿಯೆಯನ್ನು ವಿರೋಧಿಸಿದ್ದಾರೆ. ಕೇಂದ್ರ ಬಿಜೆಪಿ ಸರ್ಕಾರ ಮತ್ತು ಚುನಾವಣಾ ಆಯೋಗ ಎಸ್‌ಐಆರ್ ಮೂಲಕ ಚುನಾವಣೆಗೆ ಮುಂಚಿತವಾಗಿ ಲಕ್ಷಾಂತರ ಅರ್ಹ ಮತದಾರರ ಹೆಸರುಗಳನ್ನು ಅಳಿಸುತ್ತಿದೆ ಎಂದು ಆರೋಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಂದೆಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...

ಹನೂರು ಶೂಟೌಟ್ ಪ್ರಕರಣ: ಮೂವರು ಅರಣ್ಯ ಸಿಬ್ಬಂದಿಗೆ ನಿರೀಕ್ಷಣಾ ಜಾಮೀನು.!

ಕಾವೇರಿ ವನ್ಯಜೀವಿ ಅಭಯಾರಣ್ಯದ ಹನೂರು ವ್ಯಾಪ್ತಿಯಲ್ಲಿ ಮೂವರು ಮೃತಪಟ್ಟಿದ್ದ ವಿವಾದಾತ್ಮಕ ಗುಂಡಿನ ದಾಳಿ ಪ್ರಕರಣಕ್ಕೆ ಇದೀಗ ಕಾನೂನು ತಿರುವು ಸಿಕ್ಕಿದೆ. ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಮೂವರು ಅರಣ್ಯ ಸಿಬ್ಬಂದಿಗೆ ಕೊಳ್ಳೇಗಾಲದ ಮೊದಲ ಹೆಚ್ಚುವರಿ...

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...