Homeಮುಖಪುಟಪಶ್ಚಿಮ ಬಂಗಾಳ : ಮಹಿಳೆಗೆ ಅಮಾನುಷವಾಗಿ ಥಳಿಸಿದ ಟಿಎಂಸಿ ಮುಖಂಡ

ಪಶ್ಚಿಮ ಬಂಗಾಳ : ಮಹಿಳೆಗೆ ಅಮಾನುಷವಾಗಿ ಥಳಿಸಿದ ಟಿಎಂಸಿ ಮುಖಂಡ

- Advertisement -
- Advertisement -

ಪಶ್ಚಿಮ ಬಂಗಾಳದ ಆಡಳಿತರೂಢ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮುಖಂಡ ಎನ್ನಲಾದ ವ್ಯಕ್ತಿ ಮಹಿಳೆಯೊಬ್ಬರಿಗೆ ಸಾರ್ವಜನಿಕವಾಗಿ ಥಳಿಸಿರುವ ಘಟನೆ ನಡೆದಿದೆ.

ಉತ್ತರ ದಿನಾಜ್‌ಪುರ ಜಿಲ್ಲೆಯ ಲಖೀಂಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಘೆಮ್ಟಗಚ್ ಗ್ರಾಮದ ರಸ್ತೆಯಲ್ಲಿ ಹಲ್ಲೆ ನಡೆದಿದೆ ಎನ್ನಲಾಗಿದ್ದು, ಈ ಕುರಿತ ವಿಡಿಯೋ ವೈರಲ್ ಆಗಿದೆ. ವಿಡಿಯೋದಲ್ಲಿ ಮಹಿಳೆಗೆ ಭೀಕರವಾಗಿ ಥಳಿಸುವಾಗ ನೂರಾರು ಜನರು ಸುತ್ತುವರಿದು ನೋಡುವ ದೃಶ್ಯವಿದೆ.

ಜೂನ್ 28ರಂದು ಘಟನೆ ನಡೆದರೂ ಬೆಳಕಿಗೆ ಬಂದಿರಲಿಲ್ಲ. ಜನರ ಮೊಬೈಲ್‌ನಲ್ಲಿ ವಿಡಿಯೋ ಹರಿದಾಡುತ್ತಿತ್ತು. ಆದರೆ, ಅವರು ಭಯದಿಂದ ಪೊಲೀಸರು ಮತ್ತು ಮಾಧ್ಯಮಗಳಿಗೆ ತಿಳಿಸಿರಲಿಲ್ಲ ಎಂದು ವರದಿಗಳು ಹೇಳಿವೆ.

ಘಟನೆ ಸಂಬಂಧ ಇಸ್ಲಾಂಪುರ ಪೊಲೀಸ್ ಜಿಲ್ಲೆಯ ಪೊಲೀಸ್ ಅಧೀಕ್ಷಕ ಡಾ. ಜೋಬಿ ಥಾಮಸ್ ಕೆ ಅವರನ್ನು ನಾವು ಸಂಪರ್ಕಿಸಿದ್ದು, “ಚೋಪ್ರಾ ಪ್ರದೇಶದ ಘಟನೆಯೊಂದು ನಮ್ಮ ಗಮನಕ್ಕೆ ಬಂದಿದೆ. ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಒಬ್ಬ ವ್ಯಕ್ತಿಯನ್ನು ಬಂಧಿಸಲಾಗಿದೆ. ಪೊಲೀಸ್ ತನಿಖೆ ಮುಂದುವರಿಯುತ್ತದೆ.” ಎಂದು ತಿಳಿಸಿದ್ದಾರೆ ಎಂಬುವುದಾಗಿ ದಿ ವೈರ್ ವರದಿ ಮಾಡಿದೆ.

ಜೂನ್ 30ರಂದು ಸಂಜೆ ಘಟನೆಯ ಬಗ್ಗೆ ತಪ್ಪು ಮಾಹಿತಿ ಹರಡಲು ಪ್ರಯತ್ನಿಸಲಾಗುತ್ತಿದೆ ಎಂದು ಪೊಲೀಸರು ಎಕ್ಸ್‌ನಲ್ಲಿ ಬರೆದಿದ್ದಾರೆ. ಆದರೆ, ಆರೋಪಿಗಳ ಪಕ್ಷದ ಬಗ್ಗೆ ಪೊಲೀಸರು ಮಾಹಿತಿ ನೀಡಿಲ್ಲ.

ಹಲ್ಲೆಗೊಳಗಾದ ಮಹಿಳೆಯನ್ನು ಸುಲ್ತಾನಾ ಎಂದು ಗುರುತಿಸಲಾಗಿದ್ದು, ಈಕೆ ವಾರದ ಹಿಂದೆ ತನ್ನ ಪತಿ ಮತ್ತು ಇಬ್ಬರು ಮಕ್ಕಳನ್ನು ತೊರೆದು ರಾಜೀವ್ ಎಂಬ ವ್ಯಕ್ತಿಯೊಂದಿಗೆ ಸಿಲಿಗುರಿ ಬಳಿಯ ಮಟಿಗಾರ ಪ್ರದೇಶಕ್ಕೆ ತೆರಳಿದ್ದರು. ಜೂನ್ 28 ರಂದು ರಾಜೀವ್ ಮತ್ತು ಸುಲ್ತಾನಾ ಗ್ರಾಮಕ್ಕೆ ಮರಳಿದಾಗ ಥಳಿಸಲಾಗಿದೆ ಎಂದು ದಿ ವೈರ್ ಹೇಳಿದೆ.

ಟಿಎಂಸಿಯ ಸ್ಥಳೀಯ ಮುಖಂಡ ತಾಜಿಮುಲ್ ಅಲಿಯಾಸ್ ‘ಜೆಸಿಬಿ’ ಮಹಿಳೆಗೆ ಥಳಿಸಿದ್ದು, ಆಕೆ ತನ್ನ ಪತಿಯನ್ನು ಎರಡನೇ ಬಾರಿ ಮದುವೆಯಾಗಬೇಕಾದರೆ 3 ಲಕ್ಷ ರೂ. ಮತ್ತು ತಾಜಿಮುಲ್‌ಗೆ 2 ಲಕ್ಷ ರೂ. ಪಾವತಿಸಬೇಕೆಂದು ಷರತ್ತು ವಿಧಿಸಲಾಗಿತ್ತು. ಆದರೆ, ಸುಲ್ತಾನಾ ಹಣ ಪಾವತಿಸಲು ನಿರಾಕರಿಸಿದ್ದರು.

ಇದರಿಂದ ಕುಪಿತಗೊಂಡ ತಾಜಿಮುಲ್, ಮೊದಲು ಮಹಿಳೆಗೆ ಅವಮಾನಿಸಿ ಬಳಿಕ ಸುಮಾರು ಒಂದು ಗಂಟೆಗಳ ಕಾಲ ಭೀಕರವಾಗಿ ಥಳಿಸಿದ್ದಾನೆ. ಕೆಲ ಪ್ರತ್ಯಕ್ಷದರ್ಶಿಗಳ ಪ್ರಕಾರ, ರಾಜೀವ್‌ಗೂ ಥಳಿಸಲಾಗಿದೆ ಎನ್ನಲಾಗಿದೆ.

ಘಟನೆ ನಡೆದ ನಾಲ್ಕೈದು ಗಂಟೆಗಳ ನಂತರ ಚೋಪ್ರಾ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪ್ರಜ್ಞಾಹೀನರಾಗಿದ್ದ ಇಬ್ಬರನ್ನೂ ಆಸ್ಪತ್ರೆಗೆ ಕರೆದೊಯ್ದರು ಎಂದು ಸ್ಥಳೀಯರು ತಿಳಿಸಿದ್ದಾರೆ. ಅವರು ಈಗ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬಂಧನಕ್ಕೊಳಗಾದ ವ್ಯಕ್ತಿ ತಾಜಿಮುಲ್ ಜಾಮೀನು ಕೂಡ ಪಡೆದಿದ್ದಾನೆ ಎಂದು ದಿ ವೈರ್ ಖಚಿತಪಡಿಸಿದೆ.

ತಾಜಿಮುಲ್ ಚೋಪ್ರಾ ಶಾಸಕ ಹಮೀದುರ್ ರೆಹಮಾನ್ ಅವರ ಬಲಗೈ ಬಂಟ ಎಂದು ತಿಳಿದು ಬಂದಿದೆ. ಈತ ಹಲವು ಕೊಲೆ ಪ್ರಕರಣಗಳಲ್ಲಿ ಆರೋಪಿಯಾಗಿದ್ದಾನೆ ಎಂದು ವರದಿಯಾಗಿದೆ. ಕಳೆದ ವರ್ಷ ನಡೆದ ಪಂಚರಾಜ್ಯ ಚುನಾವಣೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಗುಂಡಿನ ದಾಳಿಯಿಂದ ಹತ್ಯೆಗೀಡಾದ ಯುವ ಸಿಪಿಐ(ಎಂ) ಕಾರ್ಯಕರ್ತ ಮನ್ಸೂರ್ ಹತ್ಯೆ ಪ್ರಕರಣದ ಪ್ರಮುಖ ಶಂಕಿತ ಆರೋಪಿ ಈತನಾಗಿದ್ದಾನೆ.

ಮಾಜಿ ಸಂಸದ ಮತ್ತು ಸಿಪಿಐ (ಎಂ) ರಾಜ್ಯ ಕಾರ್ಯದರ್ಶಿ ಮೊಹಮ್ಮದ್ ಸಲೀಂ ಅವರು ಎಕ್ಸ್‌ ಪೋಸ್ಟ್‌ನಲ್ಲಿ ಹಲ್ಲೆಯ ವಿಡಿಯೋವನ್ನು ಚಿತ್ರೀಕರಿಸಿದ ವ್ಯಕ್ತಿಯನ್ನು ಈಗಾಗಲೇ ಗ್ರಾಮದಿಂದ ಹೊರಹಾಕಲಾಗಿದೆ ಎಂದು ಹೇಳಿದ್ದಾರೆ. ದಿ ವೈರ್‌ ಇದನ್ನು ದೃಢಪಡಿಸಿವೆ. ವಿಡಿಯೋ ಹಂಚಿಕೆಯಲ್ಲಿ ಪಾತ್ರವಹಿಸಿದ ಇನ್ನೊಬ್ಬ ವ್ಯಕ್ತಿಗೆ 50,000 ರೂ “ದಂಡ” ವಿಧಿಸಲಾಗಿದೆ ಎಂದು ಹೇಳಲಾಗಿದೆ.

ಇದನ್ನೂ ಓದಿ : ನೀಟ್-ಯುಜಿ ಮರು ಪರೀಕ್ಷೆ: ಪರಿಷ್ಕೃತ ಶ್ರೇಣಿಯ ಪಟ್ಟಿ ಪ್ರಕಟಿಸಿದ ಎನ್‌ಟಿಎ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...