Homeಮುಖಪುಟಪ.ಬಂಗಾಳ: ಬಿಜೆಪಿ ಅಭ್ಯರ್ಥಿ ಭಾರತಿ ಘೋಷ್ ಬಂಧನದ ವಾರೆಂಟ್ ತಡೆ ಹಿಡಿದ ಸುಪ್ರೀಂ

ಪ.ಬಂಗಾಳ: ಬಿಜೆಪಿ ಅಭ್ಯರ್ಥಿ ಭಾರತಿ ಘೋಷ್ ಬಂಧನದ ವಾರೆಂಟ್ ತಡೆ ಹಿಡಿದ ಸುಪ್ರೀಂ

ಒಂದು ಕಾಲದಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಗೆ ಆಪ್ತರಾಗಿದ್ದ ಭಾರತಿ ಘೋಷ್ ವಿರುದ್ಧ ಪೊಲೀಸರು ಒಂದು ಡಜನ್‌ಗೂ ಹೆಚ್ಚು ಎಫ್ಐಆರ್ ದಾಖಲಿಸಿದ್ದಾರೆ

- Advertisement -
- Advertisement -

ಪಶ್ಚಿಮ ಬಂಗಾಳ ಬಿಜೆಪಿ ಅಭ್ಯರ್ಥಿ ಮತ್ತು ಮಾಜಿ ಐಪಿಎಸ್ ಅಧಿಕಾರಿ ಭಾರತಿ ಘೋಷ್ ವಿರುದ್ಧ ಹೊರಡಿಸಲಾಗಿರುವ ಜಾಮೀನು ರಹಿತ ಬಂಧನದ ವಾರಂಟ್ ಅನ್ನು ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆ ಮುಗಿಯುವವರೆಗೂ ತಡೆ ಹಿಡಿಯುವಂತೆ ಸುಪ್ರೀಂಕೋರ್ಟ್‌ ಮಂಗಳವಾರ ನಿರ್ದೇಶಿಸಿದೆ.

2019ರ ಲೋಕಸಭಾ ಚುನಾವಣಾ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತಿ ಘೋಷ್ ವಿರುದ್ಧ ಜಾಮೀನು ರಹಿತ ಬಂಧನದ ವಾರಂಟ್ ಹೊರಡಿಸಲಾಗಿತ್ತು. ಭಾರತಿ ಘೋಷ್, ಮಾಜಿ ಐಪಿಎಸ್ ಅಧಿಕಾರಿ, ತೃಣಮೂಲ ಕಾಂಗ್ರೆಸ್ ಅಭ್ಯರ್ಥಿ ಹುಮಾಯೂನ್ ಕಬೀರ್ ವಿರುದ್ಧ ಡರ್ಬಾ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ.

ಘೋಷ್ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳಬಾರದು ಎಂದು ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್, ಎಸ್.ಅಬ್ದುಲ್ ನಜೀರ್ ಮತ್ತು ಹೇಮಂತ್ ಗುಪ್ತಾ ಅವರ ನ್ಯಾಯಪೀಠ ಹೇಳಿದೆ. ಎರಡು ತಿಂಗಳ ನಂತರ ಹೆಚ್ಚಿನ ವಿಚಾರಣೆಗೆ ಈ ಪ್ರಕರಣವನ್ನು  ತೆಗೆದುಕೊಳ್ಳುವುದಾಗಿ ಸುಪ್ರೀಂಕೋರ್ಟ್‌ ತಿಳಿಸಿದೆ.

ಇದನ್ನೂ ಓದಿ: ರೈತ ಹೋರಾಟ: ಬಿಜೆಪಿಗೆ ಮತ ನೀಡದಂತೆ ಪಶ್ಚಿಮ ಬಂಗಾಳದಲ್ಲಿ ಪ್ರಚಾರ ಮಾಡಲಿರುವ ಟಿಕಾಯತ್‌‌

2019ರ ಲೋಕಸಭಾ ಚುನಾವಣೆಯ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತನ್ನ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ ರದ್ದುಗೊಳಿಸಬೇಕು ಹಾಗೂ ಬಂಧನದ ವಾರಂಟ್‌ ತಡೆಹಿಡಿಯಬೇಕು ಎಂದು ಕೋರಿ ಸೋಮವಾರ ಸುಪ್ರೀಂಕೋರ್ಟ್‌ ಮೊರೆ ಹೋಗಿದ್ದರು.

ಒಂದು ಕಾಲದಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಗೆ ಆಪ್ತರಾಗಿದ್ದ ಭಾರತಿ ಘೋಷ್ ವಿರುದ್ಧ ಪೊಲೀಸರು ಒಂದು ಡಜನ್‌ಗೂ ಹೆಚ್ಚು ಎಫ್ಐಆರ್ ದಾಖಲಿಸಿದ್ದಾರೆ. ಅದರಲ್ಲಿ ಸುಲಿಗೆ ಮತ್ತು ಚಿನ್ನಕ್ಕಾಗಿ ನಿಷೇಧಿತ ನೋಟುಗಳನ್ನು ಅಕ್ರಮವಾಗಿ ವಿನಿಮಯ ಮಾಡಿಕೊಂಡಿರುವ ಪ್ರಕರಣಗಳು ಇವೆ. ಈ ಎರಡು ಕೇಸುಗಳಲ್ಲಿ ವಾರೆಂಟ್‌ ಬಂಧನದಿಂದ ಸುಪ್ರೀಂ ಕೋರ್ಟ್ ರಕ್ಷಣೆ ನೀಡಿದೆ.

ಭಾರತಿ ಪರ ಹಾಜರಾಗಿದ್ದ ಹಿರಿಯ ವಕೀಲ ನೀರಜ್ ಕಿಶನ್ ಕೌಲ್, ನ್ಯಾಯಾಲಯವು ಮಾಜಿ ಐಪಿಎಸ್ ಅಧಿಕಾರಿಯನ್ನು ರಕ್ಷಿಸುತ್ತಿದೆ. ಆದರೆ, ಪಶ್ಚಿಮ ಬಂಗಾಳದ ಆಡಳಿತಾರೂಢ ಟಿಎಂಸಿಗೆ ರಾಜೀನಾಮೆ ನೀಡಿದ ನಂತರ ಆಕೆಯ ವಿರುದ್ಧ ಅನೇಕ ಪ್ರಕರಣಗಳು ದಾಖಲಾಗಿವೆ ಎಂದು ಹೇಳಿದ್ದಾರೆ.


ಇದನ್ನೂ ಓದಿ: ಕಾರಿನಲ್ಲಿ ಕೊಕೇನ್ ಸಾಗಾಟ – ಪಶ್ಚಿಮ ಬಂಗಾಳದ ಬಿಜೆಪಿ ನಾಯಕಿಯ ಬಂಧನ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಹಾಸನ ಪೆನ್‌ಡ್ರೈವ್ ಪ್ರಕರಣ: ಎಸ್‌ಐಟಿ ರಚಿಸಲು ಕೋರಿ ಮಹಿಳಾ ಆಯೋಗದಿಂದ ಸಿಎಂಗೆ ಪತ್ರ

0
ಹಾಸನ ಜಿಲ್ಲೆಯಲ್ಲಿ ಹರಿದಾಡುತ್ತಿರುವ ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ವಿಶೇಷ ತಂಡ ರಚನೆ ಮಾಡುವಂತೆ ಕೋರಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ ಅವರು ಸಿಎಂ ಸಿದ್ದರಾಮಯ್ಯ, ಗೃಹ ಸಚಿವ...