Homeಮುಖಪುಟ10 ವರ್ಷಗಳಲ್ಲಿ ಪಶ್ಚಿಮ ಘಟ್ಟದಲ್ಲಿ 58.22 ಚದರ ಕಿ.ಮೀ ಅರಣ್ಯ ನಾಶ

10 ವರ್ಷಗಳಲ್ಲಿ ಪಶ್ಚಿಮ ಘಟ್ಟದಲ್ಲಿ 58.22 ಚದರ ಕಿ.ಮೀ ಅರಣ್ಯ ನಾಶ

- Advertisement -
- Advertisement -

ಕಳೆದ 10 ವರ್ಷಗಳಲ್ಲಿ ಪರಿಸರ ಸೂಕ್ಷ್ಮ ಪ್ರದೇಶ ಪಶ್ಚಿಮ ಘಟ್ಟದಲ್ಲಿ 58.22 ಚದರ ಕಿಲೋಮೀಟರ್ ಅರಣ್ಯ ನಾಶವಾಗಿದೆ ಎಂದು ಭಾರತೀಯ ರಾಜ್ಯ ಅರಣ್ಯ ವರದಿ (ಐಎಸ್‌ಎಫ್‌ಆರ್‌) -2023 ಹೇಳಿದೆ.

ಭಾರತೀಯ ಅರಣ್ಯ ಸಮೀಕ್ಷೆ (ಐಎಫ್‌ಎಸ್‌)ಯ ಭಾಗವಾಗಿ ಸಿದ್ದಪಡಿಸಲಾದ ವರದಿಯನ್ನು ಶನಿವಾರ (ಡಿ.21) ಉತ್ತರಾಖಂಡದ ಡೆಹ್ರಾಡೂನ್‌ನ ಅರಣ್ಯ ಸಂಶೋಧನಾ ಸಂಸ್ಥೆಯಲ್ಲಿ ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಇಲಾಖೆ ಸಚಿವ ಭೂಪೇಂದರ್ ಯಾದವ್ ಬಿಡುಗಡೆ ಮಾಡಿದರು.

PC : pib.gov.in

ವರದಿಯಲ್ಲಿ, ಕಳೆದ 10 ವರ್ಷದ ಅವಧಿಯಲ್ಲಿ ಪಶ್ಚಿಮ ಘಟ್ಟದಲ್ಲಿ ಅತ್ಯಂತ ದಟ್ಟಾರಣ್ಯಗಳು 3,465.12 ಚ.ಕಿ.ಮೀಗಳಷ್ಟು ಹೆಚ್ಚಾದರೆ, ಮಧ್ಯಮ ದಟ್ಟಾರಣ್ಯಗಳು ಮತ್ತು ತೆರೆದ ಅರಣ್ಯಗಳು ಕ್ರಮವಾಗಿ 1,043.23 ಚ.ಕಿ.ಮೀ ಮತ್ತು 2,480.11 ಚ.ಕಿ.ಮೀ ಕಡಿಮೆಯಾಗಿದೆ ಎಂದು ಹೇಳಲಾಗಿದೆ.

ಪಶ್ಚಿಮ ಘಟ್ಟ ವ್ಯಾಪ್ತಿಯ ಆರು ರಾಜ್ಯಗಳ 45 ಘಟ್ಟ ಜಿಲ್ಲೆಗಳ ಪೈಕಿ ಮಧ್ಯಮ ದಟ್ಟಾರಣ್ಯ ಹಾಗೂ ತೆರೆದ ಅರಣ್ಯ ಹೊಂದಿದ 25 ಜಿಲ್ಲೆಗಳು ಅರಣ್ಯ ನಾಶಕ್ಕೆ ಸಾಕ್ಷಿಯಾಗಿವೆ. ಗರಿಷ್ಠ ಪ್ರಮಾಣದಲ್ಲಿ ಅರಣ್ಯ ಪ್ರದೇಶವನ್ನು ಕಳೆದುಕೊಂಡಿರುವ ಪ್ರದೇಶಗಳಾಗಿ ತಮಿಳುನಾಡಿನ ನೀಲಗಿರಿ (123 ಚ.ಕಿ.ಮೀಗಿಂತ ಹೆಚ್ಚು), ಕೇರಳದ ಇಡುಕ್ಕಿ (98 ಚ.ಕಿ.ಮೀ), ಮಹಾರಾಷ್ಟ್ರದ ಪುಣೆ (83 ಚ.ಕಿ.ಮೀ), ಹಾಗೂ ಕರ್ನಾಟಕದ ಶಿವಮೊಗ್ಗ ಜಿಲ್ಲೆಗಳನ್ನು (74.5 ಚ.ಕಿ.ಮೀ) ಗುರುತಿಸಲಾಗಿದೆ.

ಪ್ರಸ್ತುತ ಅಂದಾಜಿನ ಪ್ರಕಾರ, ಒಟ್ಟು ಅರಣ್ಯ ಮತ್ತು ಮರಗಳ ವ್ಯಾಪ್ತಿಯು 827,357 ಚದರ ಕಿ.ಮೀ ಇದೆ. ಇದು ದೇಶದ ಭೌಗೋಳಿಕ ಪ್ರದೇಶದ ಶೇಕಡಾ 25.17 ಆಗಿದೆ. ಅರಣ್ಯ ಪ್ರದೇಶವು ಸುಮಾರು 715,343 ಚದರ ಕಿ.ಮೀ (21.76%) ವಿಸ್ತೀರ್ಣವನ್ನು ಹೊಂದಿದೆ. ಮರಗಳ ಹೊದಿಕೆಯು 112,014 ಚದರ ಕಿ.ಮೀ (3.41%) ವಿಸ್ತೀರ್ಣವನ್ನು ಆವರಿಸಿದೆ.

2021ಕ್ಕೆ ಹೋಲಿಸಿದರೆ, ದೇಶದ ಒಟ್ಟು ಅರಣ್ಯ ಮತ್ತು ಮರಗಳ ಹೊದಿಕೆಯಲ್ಲಿ 1,445 ಚದರ ಕಿ.ಮೀ ಹೆಚ್ಚಳವಾಗಿದೆ. ಮಹಾರಾಷ್ಟ್ರ (65,383 ಚದರ ಕಿ.ಮೀ) ಅತಿದೊಡ್ಡ ಅರಣ್ಯ ಮತ್ತು ಮರಗಳನ್ನು ಹೊಂದಿರುವ ಮೊದಲ ಮೂರು ರಾಜ್ಯಗಳಲ್ಲಿ ಒಂದಾಗಿದೆ ಎಂದು ಐಎಸ್‌ಎಫ್‌ಆರ್‌ ಎತ್ತಿ ತೋರಿಸಿದೆ.

ವರದಿಯು ಯುನೆಸ್ಕೋ ವಿಶ್ವ ಪರಂಪರೆಯ ತಾಣವಾದ ಪಶ್ಚಿಮ ಘಟ್ಟಗಳ ಪರಿಸರ ಸೂಕ್ಷ್ಮ ಪ್ರದೇಶದಲ್ಲಿ (WGESA) ಅರಣ್ಯ ವ್ಯಾಪ್ತಿಯ ಬಗ್ಗೆ ವಿವರವಾದ ಮಾಹಿತಿಯನ್ನು ಒದಗಿಸಿದೆ. ಪಶ್ಚಿಮಘಟ್ಟ ಭಾರತದ ಅತ್ಯಂತ ಅಮೂಲ್ಯ ಜೀವವೈವಿಧ್ಯದ ತಾಣವಾಗಿದೆ. ಇದು ಗೋವಾ, ಗುಜರಾತ್, ಕರ್ನಾಟಕ, ಕೇರಳ, ಮಹಾರಾಷ್ಟ್ರ ಮತ್ತು ತಮಿಳುನಾಡು ಈ ಆರು ರಾಜ್ಯಗಳ 45 ಜಿಲ್ಲೆಗಳು ಆವರಿಸಿದೆ.

ಭಾರತೀಯ ರಾಜ್ಯ ಅರಣ್ಯ ವರದಿ (ಐಎಸ್‌ಎಫ್‌ಆರ್‌)

1987ರಿಂದ ಎರಡು ವರ್ಷಕೊಮ್ಮೆ ಭಾರತೀಯ ಅರಣ್ಯ ಸಮೀಕ್ಷೆ(ಎಫ್‌ಎಸ್‌ಐ) ವತಿಯಿಂದ ಭಾರತೀಯ ರಾಜ್ಯ ಅರಣ್ಯ ವರದಿ ( ಐಎಸ್‌ಎಫ್‌ಆರ್‌) ಪ್ರಕಟಿಸಲಾಗುತ್ತಿದೆ. ಎಫ್‌ಎಸ್‌ಐ ರಿಮೋಟ್ ಸೆನ್ಸಿಂಗ್‌ನ ವ್ಯಾಖ್ಯಾನದ ಆಧಾರದ ಮೇಲೆ ದೇಶದ ಅರಣ್ಯ ಮತ್ತು ಮರದ ಸಂಪನ್ಮೂಲಗಳ ಆಳವಾದ ಮೌಲ್ಯಮಾಪನವನ್ನು ನಡೆಸುತ್ತದೆ. ಉಪಗ್ರಹ ಡೇಟಾ ಮತ್ತು ಕ್ಷೇತ್ರ ಆಧಾರಿತ ರಾಷ್ಟ್ರೀಯ ಅರಣ್ಯ ದಾಸ್ತಾನು (ಎನ್‌ಎಫ್‌ಐಐ) ಫಲಿತಾಂಶಗಳನ್ನು ಐಎಸ್‌ಎಫ್‌ಆರ್‌ನಲ್ಲಿ ಪ್ರಕಟಿಸಲಾಗುತ್ತದೆ.

ಈ ಬಾರಿ ಪ್ರಕಟಿಸಿರುವುದು 18ನೇ ಐಎಸ್‌ಎಫ್‌ಆರ್‌ ಆಗಿದೆ. ಇದು ಭಾರತದ ಅರಣ್ಯ ಪ್ರದೇಶ, ಮರಗಳ ಹೊದಿಕೆ, ಮ್ಯಾಂಗ್ರೋವ್ ಹೊದಿಕೆ, ಅರಣ್ಯ ಹೊದಿಕೆ ಹೆಚ್ಚಳ, ಭಾರತದ ಕಾಡುಗಳಲ್ಲಿನ ಇಂಗಾಲದ ಸಂಗ್ರಹ, ಅರಣ್ಯ ಬೆಂಕಿಯ ನಿದರ್ಶನಗಳು, ಕೃಷಿ ಅರಣ್ಯ ಇತ್ಯಾದಿಗಳ ಮಾಹಿತಿಯನ್ನು ಒಳಗೊಂಡಿದೆ.

ಇದನ್ನೂ ಓದಿ : ಚುನಾವಣಾ ದಾಖಲೆಗಳನ್ನು ಒದಗಿಸುವಂತೆ ಹೈಕೋರ್ಟ್ ನಿರ್ದೇಶನ; ನಿಯಮವನ್ನೆ ಬದಲಾಯಿಸಿದ ಕೇಂದ್ರ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...