Homeಕರ್ನಾಟಕಮೃತರ ಗೌರವಯುತ ವಿದಾಯಕ್ಕೂ ಅವಕಾಶ ಮಾಡದ ಯಾವ ಸೀಮೆಯ ಸರ್ಕಾರವಿದು: ಡಿ.ಕೆ.ಶಿವಕುಮಾರ್‌ ಆಕ್ರೋಶ

ಮೃತರ ಗೌರವಯುತ ವಿದಾಯಕ್ಕೂ ಅವಕಾಶ ಮಾಡದ ಯಾವ ಸೀಮೆಯ ಸರ್ಕಾರವಿದು: ಡಿ.ಕೆ.ಶಿವಕುಮಾರ್‌ ಆಕ್ರೋಶ

- Advertisement -
- Advertisement -

ಮೃತರಿಗೆ ಗೌರವಯುತ ವಿದಾಯಕ್ಕೆ ಅವಕಾಶ ಮಾಡಿಕೊಡಿ. ಮೃತರಿಗೆ ಗೌರವಯುತ ವಿದಾಯಕ್ಕೂ ಅವಕಾಶ ಮಾಡಿಕೊಡಲು ಆಗದಿದ್ದರೆ ಇದ್ಯಾವ ಸೀಮೆ ಸರ್ಕಾರ? ಇದಕ್ಕೂ ರಾಜ್ಯಪಾಲರ ಆದೇಶಕ್ಕಾಗಿ ಕಾಯಬೇಕಾ? ಶವ ಸಂಸ್ಕಾರಕ್ಕೆ ಟೋಕನ್ ವ್ಯವಸ್ಥೆ ಯಾಕೆ? ಎಂದು ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಮಂಗಳವಾರ ಆಕ್ರೋಶ ವ್ಯಕ್ತಪಡಿಸಿದರು.

ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, “ರಾಜ್ಯಪಾಲರ ಆಹ್ವಾನದ ಮೇರೆಗೆ ಸರ್ವಪಕ್ಷ ಸಭೆಯಲ್ಲಿ ಭಾಗವಹಿಸಲಿದ್ದೇವೆ. ರಾಜ್ಯಪಾಲರು ಸರ್ಕಾರದಿಂದ ನೇರವಾಗಿ ಮಾಹಿತಿ ಪಡೆಯಬಹುದಿತ್ತು. ಆದರೆ ಮೊದಲ ಬಾರಿಗೆ ರಾಜ್ಯಪಾಲರು ವಿರೋಧ ಪಕ್ಷ ಹಾಗೂ ಸ್ಪೀಕರ್ ಅವರನ್ನು ಸೇರಿಸಿ ಸಭೆ ಕರೆದಿದ್ದಾರೆ. ನಮ್ಮ ರಾಜ್ಯ ಪುದುಚೇರಿ, ದೆಹಲಿಯಂತೆ ಕೇಂದ್ರಾಡಳಿತ ಪ್ರದೇಶವಲ್ಲ. ನಮ್ಮ ಸಂವಿಧಾನದ ಹಕ್ಕಿನಲ್ಲಿ, ಯಾವ ಕಾನೂನಿನ ಅನ್ವಯ ನಮ್ಮ ಜತೆ ಚರ್ಚೆ ಮಾಡುತ್ತಿದ್ದಾರೋ ಗೊತ್ತಿಲ್ಲ” ಎಂದು ಹೇಳಿದರು.

ಇದನ್ನು ಓದಿ: ಸಂಘ ಪರಿವಾರ ಬೆಂಬಲಿಗ ಪತ್ರಿಕೆ ‘ಹೊಸದಿಗಂತ’ದ ಸಂಪಾದಕ ಮತ್ತು ಪ್ರಕಾಶಕರಿಗೆ ಏಳು ತಿಂಗಳ ಜೈಲು

“ಮುಖ್ಯಮಂತ್ರಿಗಳು ಆಸ್ಪತ್ರೆಯಲ್ಲಿದ್ದು, ಅವರ ಆರೋಗ್ಯ ಆದಷ್ಟು ಬೇಗ ಚೇತರಿಸಿಕೊಳ್ಳಲಿ. ಸರ್ಕಾರ ಇರುವಾಗ ರಾಜ್ಯಪಾಲರು ಈ ರೀತಿ ಹಸ್ತಕ್ಷೇಪ ಮಾಡಲು ಯಾವ ಕಾನೂನು ಬಳಸಿದ್ದಾರೆ ಎಂಬುದು ಗೊತ್ತಿಲ್ಲ. ಕಾನೂನು ಸಚಿವರು ನಮಗೆ ಈ ಬಗ್ಗೆ ಬೆಳಕು ಚೆಲ್ಲಿದರೆ ತಿಳಿದುಕೊಳ್ಳುತ್ತೇವೆ. ನಾವು ಸಭೆಯಲ್ಲಿ ಭಾಗವಹಿಸಿ ನಮ್ಮ ಸಲಹೆ ನೀಡುತ್ತೇವೆ. ನಾವು ಸರ್ಕಾರಕ್ಕೆ ಎಲ್ಲ ಸಹಕಾರ ಕೊಟ್ಟಿದ್ದೇವೆ” ಎಂದು ಅವರು ತಿಳಿದರು.

“ಕೇಂದ್ರ ಸರ್ಕಾರ 20 ಲಕ್ಷ ಕೋಟಿ, ರಾಜ್ಯ ಸರ್ಕಾರ 1600 ಕೋಟಿ ಪ್ಯಾಕೇಜ್ ಘೋಷಿಸಿದಾಗ ಯಾರಿಗೆ ತಲುಪಿದೆ ಅಂತಾ ಪಟ್ಟಿ ಕೇಳಿದ್ದೇವೆ. ಈ ಬಗ್ಗೆ ಶ್ವೇತಪತ್ರ ಹೊರಡಿಸಿ ಎಂದು ಆಗ್ರಹಿಸಿದ್ದೇವೆ. ಆದರೆ ಸರ್ಕಾರ ಈ ಬಗ್ಗೆ ಮಾಹಿತಿ ಕೊಟ್ಟಿಲ್ಲ. ತಾಂತ್ರಿಕ ಸಮಿತಿಯು ಎರಡನೇ ಅಲೆ ಬಗ್ಗೆ ನವೆಂಬರ್ 30ರಂದೇ ಎಚ್ಚರಿಕೆ ನೀಡಿತ್ತು. ಪ್ರತಿನಿತ್ಯ 1.25 ಲಕ್ಷ ಪರೀಕ್ಷೆ ನಡೆಸಿ ಎಂಬುದು ಸೇರಿ 17 ಶಿಫಾರಸ್ಸು ಮಾಡಿತ್ತು. ಈ ಎಚ್ಚರಿಕೆ ನೀಡಿದ್ದರೂ ಸರ್ಕಾರ ಕ್ರಮ ಕೈಗೊಂಡಿಲ್ಲ. ರಾಜ್ಯದಲ್ಲಿ ಸರ್ಕಾರ ಅಸ್ತಿತ್ವದಲ್ಲಿ ಇಲ್ಲ ಎಂದು ರಾಜ್ಯಪಾಲರು ಸಭೆ ಕರೆದಿದ್ದಾರೆ” ಎಂದು ಅವರು ಕಿಡಿ ಕಾರಿದರು.

“ಔಷಧಿ, ಲಸಿಕೆಗಳು ಎಷ್ಟು ಕಡೆ ತಯಾರಾಗುತ್ತಿದೆ ಎಂದು ಗೊತ್ತಿದ್ದ ಮೇಲೆ ಅದನ್ನು ಬೇರೆ ಕಡೆಗಳಲ್ಲಿ ಉತ್ಪಾದನೆ ಮಾಡಲು ಯಾಕೆ ಕ್ರಮ ಕೈಗೊಳ್ಳಲಿಲ್ಲ? ಇಂದು ರಾಜ್ಯಪಾಲರು ಸಭೆ ಕರೆದಿರುವುದರಿಂದ ಕೇಂದ್ರ ಸರ್ಕಾರ ಈ ವಿಚಾರದಲ್ಲಿ ಹಸ್ತಕ್ಷೇಪ ಮಾಡಿದಂತಾಗಿದ್ದು, ಅವರು ಲಸಿಕೆ ತಯಾರಿಕೆ ಬಗ್ಗೆ ಮಾಹಿತಿ ನೀಡುವ ವಿಶ್ವಾಸವಿದೆ” ಎಂದು ತಿಳಿಸಿದರು.

ಇದನ್ನು ಓದಿ:18-45 ವರ್ಷ ವಯಸ್ಸಿನವರಿಗೆ ಲಸಿಕೆ ಉಚಿತವಲ್ಲ: ಕೇಂದ್ರದ ತಾರತಮ್ಯಕ್ಕೆ ರಾಹುಲ್ ಗಾಂಧಿ ಆಕ್ಷೇಪ 

“ರಾಜ್ಯದಲ್ಲಿ ಎಷ್ಟು ಐಸಿಯು ಹಾಸಿಗೆ ಇವೆ? ಯಾವ ಆಸ್ಪತ್ರೆಯಲ್ಲಿ ಏನೇನಿದೆ, ಏನೇನಿಲ್ಲ ಎಂಬುದರ ಬಗ್ಗೆ ರಿಯಾಲಿಟಿ ಚೆಕ್ ಮಾಡೋಣ. ಈ ಪರಿಸ್ಥಿತಿಯಲ್ಲಿ ಜನರಿಗೆ ಧೈರ್ಯ ತುಂಬಬೇಕು ಮಾಧ್ಯಮಗಳು ಹೆದರಿಸುತ್ತಿವೆ ಅಂತಾ ಸಚಿವರು ಹೇಳಿಕೆ ಕೊಟ್ಟಿದ್ದಾರೆ. ಸಚಿವರಾಗಿ ನೀವು ಜನರಿಗೆ ಯಾವ ರೀತಿ ಧೈರ್ಯ ತುಂಬುವ ಕೆಲಸ ಮಾಡುತ್ತಿದ್ದೀರಿ? ಕೇವಲ ಆರೋಗ್ಯ ಹಾಗೂ ಕಂದಾಯ ಸಚಿವರು ಮಾಧ್ಯಮಗಳಿಗೆ ಹೇಳಿಕೆ ಕೊಟ್ಟರೆ ಆಗೋದಿಲ್ಲ. ಸರ್ಕಾರದಲ್ಲಿರುವ ಎಲ್ಲ ಮಂತ್ರಿಗಳು, ಅಧಿಕಾರಿಗಳು ಸಮರೋಪಾದಿಯಲ್ಲಿ ಕೆಲಸ ಮಾಡಬೇಕು” ಎಂದು ಸರ್ಕಾರಕ್ಕೆ ಸಲಹೆ ನೀಡಿದರು.

“ಈ ಪರಿಸ್ಥಿತಿಯಲ್ಲಿ ಲಾಕ್‌ಡೌನ್ ಬಗ್ಗೆ ಮಾತನಾಡುತ್ತಿದ್ದಾರೆ. ಈಗ ರೈತರ ಕತೆ ಏನು? ಕಳೆದ ಬಾರಿಯೇ ನೀವು ಏನೂ ಮಾಡಲು ಆಗಲಿಲ್ಲ. 20 ಲಕ್ಷ ಕೋಟಿ ರುಪಾಯಿಯಲ್ಲಿ ಯಾರಿಗೂ 1 ರೂಪಾಯಿ ತಲುಪಿಲ್ಲ. ನೀವು ಪರಿಸ್ಥಿತಿ ನಿಭಾಯಿಸಲು ವಿಫಲವಾಗಿರುವ ಹಿನ್ನೆಲೆಯಲ್ಲಿ ಈ ಸ್ಥಿತಿ ನಿರ್ಮಾಣವಾಗಿದೆ. ಸರ್ಕಾರ ನೈತಿಕ ಜವಾಬ್ದಾರಿ ಹೊತ್ತು ಜನತೆಯ ಕ್ಷಮೆ ಕೊರಬೇಕು” ಎಂದು ಹೇಳಿದರು.

“ಶವ ಸಂಸ್ಕಾರದ ವಿಚಾರದಲ್ಲಿ ಹೆಚ್ಚಿನ ವೆಚ್ಚದ ಬಗ್ಗೆ ಮಾತನಾಡುತ್ತೀರಿ. ಬೆಂಗಳೂರಿನ ಸುತ್ತಮುತ್ತಲಿನ ಸರ್ಕಾರಿ ಜಾಗಗಳನ್ನು ಗುರುತಿಸಿ, ತಾತ್ಕಾಲಿಕ ವ್ಯವಸ್ಥೆ ಕಲ್ಪಿಸಿ. ಮೃತರಿಗೆ ಗೌರವಯುತ ವಿದಾಯಕ್ಕೆ ಅವಕಾಶ ಮಾಡಿಕೊಡಿ. ಅದಕ್ಕೂ ಅವಕಾಶ ಮಾಡಿಕೊಡಲು ಆಗದಿದ್ದರೆ ಇದ್ಯಾವ ಸೀಮೆ ಸರ್ಕಾರ? ಇದಕ್ಕೂ ರಾಜ್ಯಪಾಲರ ಆದೇಶಕ್ಕಾಗಿ ಕಾಯಬೇಕಾ? ಶವ ಸಂಸ್ಕಾರಕ್ಕೆ ಟೋಕನ್ ವ್ಯವಸ್ಥೆ ಯಾಕೆ? ನಿಮ್ಮ ಆಡಳಿತ ನೋಡಿ ಹಳ್ಳಿ ಜನ ನಗುತ್ತಿದ್ದಾರೆ” ಎಂದು ಹೇಳಿದರು.

ಇದನ್ನು ಓದಿ: ಮಾಧ್ಯಮ ಸ್ವಾತಂತ್ರ್ಯ ಸೂಚ್ಯಂಕದಲ್ಲಿ ಪ್ರಪಾತಕ್ಕೆ ಬಿದ್ದ ಭಾರತ: ಮೋದಿ ಸರ್ಕಾರವೇ ಕಾರಣವೆಂದ ಸಮೀಕ್ಷಾ ಸಂಸ್ಥೆ!

“ಕೋವಿಡ್ ಸಾವಿನ ಬಗ್ಗೆ ಆಡಿಟ್ ನಡೆಯಬೇಕಿದೆ. 164 ಜನರು ಸತ್ತಿದ್ದರೆ, ಅಧಿಕಾರಿಗಳ ಮೂಲಕ ಸತ್ತವರ ಕುಟುಂಬಕ್ಕೆ ಸಾವಿನ ಬಗ್ಗೆ ಮಾಹಿತಿ ಕೊಡಿ. ಇಲ್ಲಿ ಯಾರೂ ಪರಿಪಕ್ವರಲ್ಲ. ನಿಮ್ಮ ತಪ್ಪನ್ನು ನೀವು ತಿದ್ದಿಕೊಂಡು ಮುಂದಿನ ಹೆಜ್ಜೆ ಇಡಿ. ಸರ್ಕಾರ ಎಂದರೆ ಪಂಚಾಯಿತಿಯಿಂದ ಸಂಸತ್ ವರೆಗೂ ಎಲ್ಲವೂ ಸರ್ಕಾರದ ಭಾಗವೇ. ಮುಖ್ಯಮಂತ್ರಿ ಪರಿಹಾರ ನಿಧಿ, ಪಿಎಂ ಕೇರ್ ಗೆ ಎಷ್ಟು ಹಣ ಬಂತು, ಎಷ್ಟು ಖರ್ಚಾಯ್ತು ಅಂತಾ ಲೆಕ್ಕ ಹೇಳಿ” ಎಂದು ಸರ್ಕಾರವನ್ನು ಆಗ್ರಹಿಸಿದರು.

“ಸರ್ಕಾರ ಕೋವಿಡ್ ವಾರಿಯರ್ಸ್ ಗಳಿಗೆ ವಿಮೆ ರದ್ದುಗೊಳಿಸಿದೆ. ನಾವು ಪ್ರಶ್ನಿಸಿದ ಮೇಲೆ ಬೇರೆ ಮಾದರಿಯಲ್ಲಿ ನೀಡಲಾಗುವುದು ಎಂದು ಹೇಳಿದೆ. ಲಸಿಕೆಯನ್ನು ಮೊದಲು ಪ್ರಧಾನಿ, ಮುಖ್ಯಮಂತ್ರಿಗಳು ತೆಗೆದುಕೊಳ್ಳದೇ, ಆ ಕೊರೊನಾ ವಾರಿಯರ್ಸ್ ಮೇಲೆ ಪ್ರಯೋಗಿಸಿದ್ದೀರಿ. ಇದು ಅತ್ಯಂತ ವಿಫಲ ಸರ್ಕಾರ. ಈ ಪರಿಸ್ಥಿತಿ ನಿಭಾಯಿಸಲು ನಿಮ್ಮ ಕೈಯಲ್ಲಿ ಆಗದಿದ್ದರೆ ರಾಜೀನಾಮೆ ಕೊಟ್ಟು ಹೋಗಿ” ಎಂದು ಡಿ.ಕೆ. ಶಿವಕುಮಾರ್‌ ಆಕ್ರೋಶ ವ್ಯಕ್ತಪಡಿಸಿದರು.

ಇದನ್ನು ಓದಿ: ಪ್ರಧಾನಿ ‘ಕೊರೊನಾ ವಾರಿಯರ್‌’ ಇದ್ದಂತೆ, ಸೋಂಕಿನ ವಿರುದ್ದ ಹೋರಾಡಲು 24×7 ಸಭೆ ನಡೆಸುತ್ತಾರೆ: ಕೇಂದ್ರ ಆರೋಗ್ಯ ಸಚಿವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...