Homeಮುಖಪುಟಹಸಿರು ಪಟಾಕಿಗಳು ಎಂದರೇನು..? ಅವು ಮಾಲಿನ್ಯಕಾರಕವಲ್ಲವೇ..?

ಹಸಿರು ಪಟಾಕಿಗಳು ಎಂದರೇನು..? ಅವು ಮಾಲಿನ್ಯಕಾರಕವಲ್ಲವೇ..?

ಈ ವರ್ಷ ಮಾರುಕಟ್ಟೆಯಲ್ಲಿ ಲಭ್ಯವಿರುವ ಸುಮಾರು 80% ಪಟಾಕಿಗಳು ಹಸಿರು ಪಟಾಕಿ ಟ್ಯಾಗ್ ಹೊತ್ತುಕೊಳ್ಳುತ್ತವೆ ಎನ್ನುತ್ತಾರೆ ಹಸಿರು ಪಟಾಕಿ ತಯಾರಕರು

- Advertisement -
- Advertisement -

ಕೊರೊನಾ ಸಾಂಕ್ರಾಮಿಕ ರೋಗ ಮತ್ತು ಪ್ರತಿ ಬಾರಿ ದೀಪಾವಳಿ ಸಂದರ್ಭದಲ್ಲಿ ಬಳಸಲಾಗುವ ಪಟಾಕಿಗಳಿಂದ ವಾಯಮಾಲಿನ್ಯ ಹೆಚ್ಚಾಗುವ ಕಾರಣ ಈ ಬಾರಿ ಪಟಾಕಿ ನಿಷೇಧಿಸಲಾಗಿದೆ. ಕರ್ನಾಟಕ ಸರ್ಕಾರ ಸಾಂಪ್ರದಾಯಿಕ ಪಟಾಕಿಗೆ ನಿಷೇಧ ಹೇರಿ, ಹಸಿರು ಪಟಾಕಿಗೆ  ಅಸ್ತು ಎಂದಿದೆ. ನವೆಂಬರ್ 16ರ ವರೆಗೆ ಹಸಿರು ಪಟಾಕಿ ಮಾರಾಟ ಮಾಡಲು ಅನುಮತಿ ನೀಡಿದೆ.

ಸುಪ್ರೀಂ ಕೋರ್ಟ್ ಆದೇಶದ ಎರಡು ವರ್ಷಗಳ ನಂತರ, ಹಸಿರು ಪಟಾಕಿಗಳು ಈ ದೀಪಾವಳಿಯಲ್ಲಿ ಮಾರುಕಟ್ಟೆಯಲ್ಲಿ ಹೆಚ್ಚಿನ ಪಾಲು ಪಡೆಯುತ್ತಿವೆ. ವಾಯುಮಾಲಿನ್ಯವನ್ನು ಕಡಿಮೆ ಮಾಡುವ ಹಿನ್ನೆಲೆ ಸುಪ್ರೀಂ ಕೋರ್ಟ್‌‌ನಲ್ಲಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಂತರ ಈ ನಿರ್ಧಾರ ಬಂದಿತ್ತು. ಈ ಬಾರಿ ಕೊರೊನಾ ಇರುವ ಹಿನ್ನೆಲೆ ಮಕ್ಕಳು ಹಾಗೂ ಕೊರೊನಾ ಸೋಕಿತರ ಆರೋಗ್ಯದ ಹಿತದೃಷ್ಟಿಯಿಂದ ಪಟಾಕಿ ನಿಷೇಧ ನಿರ್ಧಾರ ಕೈಗೊಳ್ಳಲಾಗಿದೆ.

ಹಾಗಾದರೆ ಹಸಿರು ಪಟಾಕಿ ಎಂದರೇನು..?

ಸಾಮಾನ್ಯ ಪಟಾಕಿಯಂತೆಯೇ ಕಾಣುವ ಇದು ಪರಿಸರ ಸ್ನೇಹಿ ಪಟಾಕಿಯಾಗಿದೆ. ಕೌನ್ಸಿಲ್​ ಆಫ್ ಸೈಂಟಿಫಿಕ್​ ಅಂಡ್​ ಇಂಡಸ್ಟ್ರಿಯಲ್​ ರಿಸರ್ಚ್​ (ಸಿಎಸ್​ಐಆರ್​) ಮತ್ತು ನ್ಯಾಷನಲ್ ಎನ್ವಿರಾನ್ಮೆಂಟ್ ಇಂಜಿನಿಯರಿಂಗ್ ರಿಸರ್ಚ್ ಇನ್ಸ್ ಟಿಟ್ಯೂಟ್‌ (ಎನ್‌ಇಇಆರ್‌ಐ)ನ ವಿಜ್ಞಾನಿಗಳು ಅಭಿವೃದ್ಧಿಪಡಿಸಿರುವ ಈ ಪಟಾಕಿಗಳು ಕೇವಲ ಶೇಕಡಾ 30ರಷ್ಟು ಪ್ರಮಾಣದ ಹೊಗೆಯನ್ನು ಹೊರಹಾಕುತ್ತದೆ.

ಸಾಮಾನ್ಯ ಪಟಾಕಿಗಳಂತೆ ಅಧಿಕ ಶಬ್ಧ ಹಾಗೂ ಹೊಗೆ ಸೂಸುವ ಬದಲಾಗಿ ನೀರಿನ ಆವಿಯನ್ನು ಮಾತ್ರ ಬಿಡುಗಡೆ ಮಾಡುತ್ತದೆ.  ಈ ಪಟಾಕಿಯಲ್ಲಿ ಲೀಥಿಯಂ, ಆರ್ಸೆನಿಕ್, ಬೇರಿಯಂ ಮತ್ತು ಸತುವಿನಂತಹ ಅಪಾಯಕಾರಿ ರಾಸಾಯನಿಕಗಳನ್ನು ಬಳಸುವುದಿಲ್ಲ. ಕಳೆದ ವರ್ಷ ಈ ಪಟಾಕಿಯನ್ನು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ​ದೆಹಲಿಯಲ್ಲಿ ಬಿಡುಗಡೆ ಮಾಡಿದ್ದರು.

ಇದನ್ನೂ ಓದಿ: ವಾಯುಮಾಲಿನ್ಯ: ಪಟಾಕಿ ನಿಷೇಧ ಸಂಬಂಧ 18 ರಾಜ್ಯಗಳಿಗೆ ಎನ್‌ಜಿಟಿ ನೋಟಿಸ್!

ಚೆನ್ನೈನಿಂದ 540 ಕಿ.ಮೀ ದೂರದಲ್ಲಿರುವ ಶಿವಕಾಸಿಯಲ್ಲಿರುವ ಪಟಾಕಿ ತಯಾರಕರು, ಎನ್‌ಇಇಆರ್‌ಐ ಜೊತೆಗೆ ಒಪ್ಪಂದ ಮಾಡಿಕೊಂಡಿದ್ದಾರೆ. “ನಾವು 2019 ರಲ್ಲಿ ಹಸಿರು ಪಟಾಕಿ‌ಗಳನ್ನು ತಯಾರಿಸಲು ಪ್ರಾರಂಭಿಸಿದ್ದೇವೆ. ಇದು ವಾಯುಮಾಲಿನ್ಯವನ್ನು ಕಡಿಮೆ ಮಾಡುತ್ತದೆ. ಈ ವರ್ಷ ಮಾರುಕಟ್ಟೆಯಲ್ಲಿ ಲಭ್ಯವಿರುವ ಸುಮಾರು 80% ಪಟಾಕಿಗಳು ಹಸಿರು ಪಟಾಕಿ ಟ್ಯಾಗ್ ಅನ್ನು ಹೊತ್ತುಕೊಳ್ಳುತ್ತವೆ ”ಎಂದು ತಮಿಳುನಾಡು ಪಟಾಕಿ ಮತ್ತು ಸಿಡಿಮದ್ದು ತಯಾರಕರ ಸಂಘದ ಅಧ್ಯಕ್ಷ ಪಿ.ಗಣೇಶನ್ ತಿಳಿಸಿದ್ದಾರೆ.

ಹಸಿರು ಪಟಾಕಿಗಳಲ್ಲಿ ಎರಡು ವಿಧಗಳಿವೆ

೧.ಬೇರಿಯಂ ಸಾಲ್ಟ್ ಇಲ್ಲದ ಪಟಾಕಿ: ಇದು ಬಹು-ಕೋಟಿ ಪಟಾಕಿ ಉದ್ಯಮಕ್ಕೆ ಅನಿವಾರ್ಯವೆಂದು ಪರಿಗಣಿಸಲಾದ ರಾಸಾಯನಿಕ

೨.ಕಡಿಮೆ ಪ್ರಮಾಣದಲ್ಲಿ ಬೇರಿಯಂ ಇರುವ ಪಟಾಕಿ

ಈ ಎರಡು ವಿಧದ ಪಟಾಕಿಗಳು ಕೂಡ ಸಾಂಪ್ರದಾಯಿಕ ಪಟಾಕಿಗಳಿಗೆ ಹೋಲಿಸಿದರೆ 30% ರಿಂದ 35% ಕಡಿಮೆ ಮಾಲಿನ್ಯಕಾರಕವಾಗಿವೆ. ಸಾಂಪ್ರದಾಯಿಕ ಪಟಾಕಿಗಳು ಹೊರಸೂಸುವ 160 ಡೆಸಿಬಲ್ ಶಬ್ಧಕ್ಕಿಂತ ಕಡಿಮೆ ಅಂದರೆ 125 ಡೆಸಿಬಲ್ ಧ್ವನಿಯನ್ನು ಉಂಟು ಮಾಡುತ್ತವೆ ಎಂದು ತಯಾರಕರು ಮತ್ತು ವಿಜ್ಞಾನಿಗಳು ಸ್ಪಷ್ಟಪಡಿಸಿದ್ದಾರೆ.

ಒಟ್ಟಾರೆ, ಸುಪ್ರೀಂ ಕೋರ್ಟ್‌ನ ತೀರ್ಪಿನ ನಂತರ ಉದ್ಯಮವು ವಾಯುಮಾಲಿನ್ಯವನ್ನು ಕಡಿಮೆ ಮಾಡುವ ಬದ್ಧತೆಯನ್ನು ಪೂರೈಸಿದೆ ಎಂದು ಪಟಾಕಿ ತಯಾರಕರು ಹೇಳಿದ್ದಾರೆ. “ಅಗ್ಗದ ಉತ್ಪನ್ನಗಳು ಮಾರುಕಟ್ಟೆಯಲ್ಲಿ ಭಾರೀ ಮಾಲಿನ್ಯಕ್ಕೆ ಕಾರಣವಾಗಿದ್ದರೂ ಅವು ಕಾನೂನುಬಾಹಿರವಾಗಿವೆ. ಅವುಗಳನ್ನು ನಿಷೇಧಿಸಬೇಕು ಮತ್ತು ಹಸಿರು ಕ್ರ್ಯಾಕರ್‌ಗಳನ್ನು ಮಾತ್ರ ಬಳಸಬೇಕು” ಎಂದು ಪಟಾಕಿ ತಯಾರಕರು ಹೇಳುತ್ತಾರೆ.

ಈ ಪಟಾಕಿಗಳನ್ನು ಅಧಿಕೃತ ಪರವಾನಗಿ ಪಡೆದಿರುವ ಮಳಿಗೆಗಳಿಂದ ಮಾತ್ರ ಕೊಳ್ಳಬಹುದು. ನೀವು ಕೊಳ್ಳುವ ಪಟಾಕಿ ಹಸಿರು ಪಟಾಕಿಯೇ ಎಂಬ ಗೊಂದಲ ನಿವಾರಿಸಿಕೊಳ್ಳಲು ಪಟಾಕಿ ಪ್ಯಾಕ್ ಮೇಲಿನ ಕ್ಯೂಆರ್ ಕೋಡ್ ಅನ್ನು ಸ್ಕ್ಯಾನ್ ಮಾಡುವ ಮೂಲಕ ದೃಢಪಡಿಸಿಕೊಳ್ಳಬಹುದು.


ಇದನ್ನೂ ಓದಿ: ತಮಿಳುನಾಡಿನ ಪಟಾಕಿ ಕಾರ್ಖಾನೆ ಸ್ಪೋಟ; 7 ಮಹಿಳೆಯರ ದಾರುಣ ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...