Homeಕರ್ನಾಟಕರೋಹಿತ್‌ ಚಕ್ರತೀರ್ಥ ಆಯ್ಕೆಯ ಮಾನದಂಡಗಳೇನು?: ಬಹಿರಂಗ ಪತ್ರ ಬರೆದ ಶಿಕ್ಷಣ ತಜ್ಞರು

ರೋಹಿತ್‌ ಚಕ್ರತೀರ್ಥ ಆಯ್ಕೆಯ ಮಾನದಂಡಗಳೇನು?: ಬಹಿರಂಗ ಪತ್ರ ಬರೆದ ಶಿಕ್ಷಣ ತಜ್ಞರು

ಪಠ್ಯ ಪುಸ್ತಕ ರಚನೆ ಮತ್ತು ಪರಿಶೀಲನೆಗೆ, ಭಾರತದ ಚುನಾವಣಾ ಆಯೋಗದ ರೀತಿಯಲ್ಲೇ ಒಂದು ಸ್ವಾಯತ್ತ ಆಯೋಗ ರಚಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ

- Advertisement -
- Advertisement -

ಪಠ್ಯ ಪುಸ್ತಕಗಳನ್ನು ‘ಬ್ರಾಹ್ಮಣೀಕರಣ’ ಮಾಡಿರುವ ರಾಜ್ಯ ಬಿಜೆಪಿ ಸರ್ಕಾರದ ನಿಲುವು ಹಾಗೂ ಪಠ್ಯಗಳನ್ನು ಪರಿಷ್ಕರಣೆ ಮಾಡಿರುವ ಬಲಪಂಥೀಯ ಲೇಖಕ ರೋಹಿತ್‌ ಚಕ್ರತೀರ್ಥ ಅವರ ಅರ್ಹತೆಗಳನ್ನು ಪ್ರಶ್ನಿಸಿ ರಾಜ್ಯದ ಶಿಕ್ಷಣ ತಜ್ಞರು, ಪ್ರಾಧ್ಯಾಪಕರುಗಳು, ಸಂಶೋಧಕರು, ಸಾಹಿತಿಗಳು ಹಾಗೂ ಹೋರಾಟಗಾರರು ಸೇರಿದಂತೆ ಹಲವು ಗಣ್ಯರು ಬಹಿರಂಗ ಪತ್ರ ಬರೆದಿದ್ದಾರೆ. ಪತ್ರದಲ್ಲಿ ಅವರು ಪಠ್ಯ ಪುಸ್ತಕಗಳ ರಚನೆ ಮತ್ತು ಪರಿಶೀಲನೆಗೆ, ಭಾರತದ ಚುನಾವಣಾ ಆಯೋಗದ ರೀತಿಯಲ್ಲೇ ಒಂದು ಸ್ವಾಯತ್ತ ಆಯೋಗ ರಚಿಸಬೇಕು ಎಂದು ಆಗ್ರಹಿಸಿದ್ದಾರೆ.

“ಶಿಕ್ಷಣ ತಜ್ಞರಲ್ಲದ, ಶಿಕ್ಷಣ ಕ್ಷೇತ್ರದಲ್ಲಿ ಯಾವುದೇ ಬಗೆಯಲ್ಲಿ ಸಕ್ರಿಯವಾಗಿ ಸಂಶೋಧನೆ ಮಾಡಿಲ್ಲದ ಚಕ್ರತೀರ್ಥ ಅವರನ್ನು ಯಾವ ಮಾನದಂಡದಲ್ಲಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದ್ದಾರೆ? ಈ ಮುಖ್ಯ ಪ್ರಶ್ನೆಗೆ ಸಂಬಂಧಪಟ್ಟವರಿಂದ ಉತ್ತರವಿಲ್ಲ” ಎಂದು ಪತ್ರವು ಉಲ್ಲೇಖಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ರೋಹಿತ್ ಚಕ್ರತೀರ್ಥ ಅಧ್ಯಕ್ಷತೆಯ ಈ ಸಮಿತಿಯು ಆರಂಭದಲ್ಲಿಯೇ ಆರನೇ ತರಗತಿಯ ಸಮಾಜ ವಿಜ್ಞಾನದ ಹೊಸ ಧರ್ಮಗಳ ಉದಯ ಎನ್ನುವ ಪಠ್ಯದಲ್ಲಿ ಜೈನ, ಬುದ್ಧದಮ್ಮಗಳ ಉದಯವಾದದ್ದು ಯಾಕೆ ಎಂದು ವಿವರಿಸುವ ಪಠ್ಯ ಭಾಗಗಳನ್ನು ತೆಗೆಯಬೇಕೆಂದು ಸೂಚನೆ ಮಾಡಿತ್ತು. ಮತ್ತು ಈ ಹೊಸ ಪರಿಷ್ಕರಣ ಸಮಿತಿಯ ಜವಾಬ್ದಾರಿ ಇದರಾಚೆಗೆ ಎಲ್ಲ ಪಠ್ಯ ಪುಸ್ತಕಗಳನ್ನು ಪರಿಶೀಲಿಸುವುದು ಎಂದೂ ಸಹ ವರದಿಯಾಗಿದೆ. ಅದರ ಮುಂದುವರೆದ ಭಾಗವಾಗಿ ಯಾವ ಮುನ್ಸೂಚನೆಯೂ ಇಲ್ಲದೇ, ಶಿಕ್ಷಣದ ಭಾಗೀದಾರರೊಂದಿಗೆ, ಶಿಕ್ಷಣ ತಜ್ಞರೊಂದಿಗೆ ಸಮಾಲೋಚನೆ ನಡೆಸದೇ ಏಕಪಕ್ಷೀಯವಾಗಿ 10 ನೇ ತರಗತಿಯ ಪಠ್ಯಗಳಲ್ಲಿ ಅನೇಕ ಬದಲಾವಣೆ ಮಾಡಿದೆ” ಎಂದು ಪತ್ರವೂ ಹೇಳಿದೆ.

ಇದನ್ನೂ ಓದಿ: ರಹಸ್ಯ ಕಾರ್ಯಸೂಚಿಗಳನ್ನು ಒಳಗೊಂಡ ನೂತನ ಪಠ್ಯಪುಸ್ತಕಗಳು ಬೇಕೆ?

ಪರಿಷ್ಕರಣೆಗೊಂಡಿರುವ ಪಠ್ಯ ಪುಸ್ತಕದಲ್ಲಿ ಪಿ. ಲಂಕೇಶ್‌ರ ‘ಮೃಗ ಮತ್ತು ಸುಂದರಿ’, ಡಾ.ಜಿ. ರಾಮಕೃಷ್ಣರ ‘ಭಗತಸಿಂಗ್’, ಸಾರಾ ಅಬೂಬಕರ್‌ರವರ ‘ಯುದ್ಧ’, ಎ.ಎನ್. ಮೂರ್ತಿರಾಯರ ‘ವ್ಯಾಘ್ರ ಕಥೆ’, ಶಿವ ಕೋಟ್ಯಾಚಾರ್ಯರ ‘ಸುಕುಮಾರ ಸ್ವಾಮಿ ಕಥೆ’ ಈ ಪಠ್ಯಗಳನ್ನು ಕೈ ಬಿಡಲಾಗಿದೆ ಎಂದು ಲಭ್ಯವಿರುವ ಪಿಡಿಎಫ್‌ಯಿಂದ ತಿಳಿದು ಬರುತ್ತದೆ. ಆದರೆ ಸರ್ಕಾರ ಮತ್ತು ಪರಿಷ್ಕರಣೆ ಸಮಿತಿ ಭಗತ್ ಸಿಂಗ್ ಪಠ್ಯವನ್ನು ಕೈಬಿಟ್ಟಿಲ್ಲವೆಂದು ಹೇಳಿಕೆ ನೀಡುತ್ತಲೆ ಬರುತ್ತಿದೆ.

“ಕೈ ಬಿಟ್ಟ ಪಠ್ಯ ಮತ್ತು ಸೇರ್ಪಡೆ ಮಾಡಿದ ಪಠ್ಯಗಳನ್ನು ನೋಡಿದರೆ, ಸಮಾಜದ ಪುರೋಗಾಮಿ ಅಬಿವೃದ್ದಿಗೆ ಪೂರಕವಲ್ಲದ, ಸನಾತನವಾದವನ್ನು ಎತ್ತಿ ಹಿಡಿಯುವ, ಆರ್.ಎಸ್.ಎಸ್ ಸಿದ್ದಾಂತಕ್ಕೆ ಬದ್ಧವಾದ ಎಲ್ಲ ಅಂಶಗಳೂ ಸ್ಪಷ್ಟವಾಗಿ ಕಾಣುತ್ತಿವೆ. ಶಿಕ್ಷಣ ಸಚಿವರು ಇನ್ನೂ ಪಠ್ಯ ಪುಸ್ತಕಗಳ ಮುದ್ರಣವೇ ಆಗಿಲ್ಲ ಇವೆಲ್ಲ ವದಂತಿ ಎಂದು ನಿರಾಕರಿಸಿದ್ದಾರೆಂದೂ ವರದಿಗಳಿವೆ. ನಿಯಮದಂತೆ ಮೇ 25 ರೊಳಗೆ ಪಠ್ಯ ಪುಸ್ತಕ ಪೂರೈಕೆ ಆಗಬೇಕು, ಆದರೆ ಇನ್ನೂ ವಿವಾದವನ್ನೇ ಇಟ್ಟುಕೊಂಡಿರುವ ಸರಕಾರ ಪುಸ್ತಕ ಪೂರೈಸಬಹುದೇ ಎಂಬ ಪ್ರಶ್ನೆಯೂ ಇದೆ” ಎಂದು ಪತ್ರ ಉಲ್ಲೇಖಿಸಿದೆ.

“ಕನ್ನಡ ನಾಡಿನ ಅಸ್ಮಿತೆ, ಕನ್ನಡ ಭಾಷೆಯ ಘನತೆಗಳನ್ನು ಗಾಳಿಗೆ ತೂರುವ ರೋಹಿತ್ ಚಕ್ರತೀರ್ಥರವರ ಸಮಿತಿ ಅದಕ್ಕೆ ಬದಲಾಗಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸ್ಥಾಪಕರಲ್ಲೊಬ್ಬರಾದ ಹೆಡಗೆವಾರ್‌‌ರವರ ‘ನಿಜವಾದ ಆದರ್ಶ ಪುರುಷ ಯಾರಾಗಬೇಕು’, ಬನ್ನಂಜೆ ಗೋವಿಂದಾಚಾರ್ಯರವರ ‘ಶುಕನಾಸನ ಉಪದೇಶ’, ಶತಾವಧಾನಿ ಗಣೇಶ್‌ರವರ ‘ಶ್ರೇಷ್ಠ ಭಾರತೀಯ ಚಿಂತನೆಗಳು’, ಶಿವಾನಂದ ಕಳವೆಯವರ ‘ಸ್ವದೇಶಿ ಸೂತ್ರದ ಸರಳ ಹಬ್ಬ’ ಪಠ್ಯಗಳನ್ನು ಸೇರಿಸಲಾಗಿದೆ” ಎಂದು ಪತ್ರ ಹೇಳಿದೆ.

ಇದನ್ನೂ ಓದಿ: ಪಠ್ಯಪುಸ್ತಕಗಳಿಗೂ ಪ್ರತಿಕ್ರಾಂತಿ; ಪಕ್ಷರಾಜಕೀಯಕ್ಕೆ ನೈಜ ಶಿಕ್ಷಣದ ಬಲಿ

“ಯಾವ ಕಾರಣಕ್ಕೆ ಕನ್ನಡದ ಪ್ರಮುಖ ಲೇಖಕ, ಲೇಖಕಿಯರ ಪಠ್ಯಗಳನ್ನು ಕೈ ಬಿಟ್ಟಿದ್ದಾರೆ ಎನ್ನುವುದಕ್ಕೆ ಯಾವುದೇ ಕಾರಣಗಳನ್ನು ಕೊಟ್ಟಿಲ್ಲ. ಹಾಗೆಯೇ ಹೆಡಗೇವಾರ್ ಅವರ ಭಾಷಣವನ್ನು ಸೇರಿಸುವುದರ ಕಾರಣ ಮಾತ್ರ ಹೇಳದೇ ಹೋದರೂ ಅರ್ಥವಾಗುತ್ತದೆ. ಒಟ್ಟಾರೆಯಾಗಿ ಇಲ್ಲಿ ಯಾವುದೇ ರೀತಿಯ ಪಾರದರ್ಶಕತೆ ಕಂಡು ಬರುತ್ತಿಲ್ಲ” ಎಂದು ಪತ್ರವು ಹೇಳಿದೆ.

ಪಠ್ಯ ಪುಸ್ತಕ ರಚನೆಯ ಸಂದರ್ಭದಲ್ಲಿ ಕಡ್ಡಾಯವಾಗಿ ಅನುಸರಿಸಬೇಕಾದ ಮೌಲ್ಯಗಳು, ನೀತಿಗಳು ಪ್ರಜಾತಾಂತ್ರಿಕತೆಗೆ ಪೂರಕವಾಗಿರಬೇಕು ಎಂದು ಹೇಳಿರುವ ಪತ್ರವೂ ಪಠ್ಯ ಪುಸ್ತಕಗಳನ್ನು ರಚನೆ ಮಾಡಲು ಬೇಕಾದ ಕೆಲವು ಮುಖ್ಯ ಮೌಲ್ಯಗಳನ್ನು, ನೀತಿ ನಿಯಮಗಳನ್ನು ಹೇಳಿದೆ.

  1. ಸರಕಾರಗಳು ಬದಲಾದಂತೆ ತಮ್ಮ ಸಿದ್ಧಾಂತಕ್ಕೆ ಅನುಗುಣವಾಗಿ ಪಠ್ಯಪುಸ್ತಕಗಳನ್ನು ಬದಲಾಯಿಸುವ ಈ ಪರಿಪಾಠ ಸರಿಯಲ್ಲ.
  2. ಪಠ್ಯ ಪುಸ್ತಕಗಳ ರಚನೆ ಮತ್ತು ಪರಿಷ್ಕರಣೆಯು ಸಂಪೂರ್ಣವಾಗಿ ಶಿಕ್ಷಣ ತಜ್ಞರ ಮೂಲಕ ಮಾತ್ರ ನಡೆಯಬೇಕು ಎನ್ನುವುದು ಇಲ್ಲಿನ ಪ್ರಜ್ಞಾವಂತರ ಆಶಯವಾಗಿದೆ. ಭಾರತದ ಚುನಾವಣಾ ಆಯೋಗದ ರೀತಿಯಲ್ಲಿ ಈ ಪಠ್ಯ ಪುಸ್ತಕಗಳ ರಚನೆ ಮತ್ತು ಪರಿಶೀಲನೆಗೆ ಒಂದು ಸ್ವಾಯತ್ತ ಆಯೋಗ ರಚಿಸಬೇಕು ಮತ್ತು ಇದು ಸರಕಾರದ ನಿಯಂತ್ರಣದಲ್ಲಿ ಇರಬಾರದು ಎಂದು ಶಿಕ್ಷಣ ತಜ್ಞರು ಅಭಿಪ್ರಾಯ ಪಡುತ್ತಾರೆ.
  3. ಯಾವುದೇ ಪೂರ್ವಾಲೋಚನೆ ಇಲ್ಲದೇ ಶಿಕ್ಷಣ ತಜ್ಞರು, ವಿಷಯ ತಜ್ಞರುಗಳ ಜೊತೆ, ಹಿಂದಿನ ಪರಿಷ್ಕರಣಾ ಸಮಿತಿಯ ಅಧ್ಯಕ್ಷರ ಜೊತೆ ಸಮಾಲೋಚಿಸದೇ, ತನ್ನ ಹಿಂದುತ್ವ ಸಿದ್ಧಾಂತಕ್ಕೆ ಬದ್ಧರಾಗಿರುವವರನ್ನು ಅಧ್ಯಕ್ಷರನ್ನಾಗಿ ನೇಮಿಸಿ ಅವರ ಮೂಲಕ ಪಠ್ಯಪುಸ್ತಕಗಳ ಬದಲಾವಣೆಗೆ ಮುಂದಾಗಿರುವುದು ನಮ್ಮ ಆತಂಕಕ್ಕೆ ಕಾರಣ.
  4. ಪಠ್ಯ ಪುಸ್ತಕ ರಚನಾ ಸಮಿತಿ, ಪರಿಷ್ಕರಣಾ ಸಮಿತಿಗಳಿಗೆ ಅದರದೇ ಆದ ಮಾನದಂಡಗಳಿರುತ್ತವೆ. ಅದರ ಅಧ್ಯಕ್ಷರು ಮತ್ತು ಸದಸ್ಯರು ಶಿಕ್ಷಣ ತಜ್ಞರಾಗಿರಬೇಕು. ಸಮಿತಿಯ ರಚನೆಯಲ್ಲಿ ಸಾಮಾಜಿಕ ನ್ಯಾಯವನ್ನು ಪಾಲಿಸಬೇಕು. ಮುಖ್ಯವಾಗಿ ಕರ್ನಾಟಕ ರಾಜ್ಯಕ್ಕೆ ಸಂಬಂಧಿಸಿದಂತೆ ಅದು ಕನ್ನಡದ ಅಸ್ಮಿತೆಗೆ ಪೂರಕವಾಗಿದ್ದು, ಇಲ್ಲಿನ ಬಹು ಸಂಸ್ಕೃತಿಯ ಆಶಯಗಳನ್ನು ಪ್ರತಿನಿಧಿಸುವಂತಿರಬೇಕು. ವೈಜ್ಞಾನಿಕ ಮನೋಧರ್ಮ, ವೈಚಾರಿಕತೆ, ಆಧುನಿಕ ಪ್ರಜ್ಞೆ, ಜಾತ್ಯಾತೀತ ತತ್ವಗಳಿಗೆ ಬದ್ಧವಾಗಿರಬೇಕು. ಸಾಮಾಜಿಕ ಸಾಮರಸ್ಯ, ನೈತಿಕತೆ, ವ್ಯಕ್ತಿತ್ವ ವಿಕಸನಕ್ಕೆ ಅನುವಾಗುವಂತೆ ಪಠ್ಯಪುಸ್ತಕಗಳನ್ನು ರೂಪಿಸಬೇಕು.
  5. ಸಂವಿಧಾನದ ಆಶಯಗಳ ಅನುಸಾರ ರಾಷ್ಟ್ರೀಯ ಪಠ್ಯಕ್ರಮ ಚೌಕಟ್ಟು ರೂಪಿಸಿದ ಮಾರ್ಗಸೂಚಿಗಳಿಗೆ ಅನುಗುಣವಾಗಿ ಪಠ್ಯಕ್ರಮ ರೂಪಿಸಬೇಕು.
  6. ಪಠ್ಯಗಳನ್ನು ಆಯ್ಕೆ ಮಾಡುವಾಗ ಲಿಂಗತ್ವ ಅಸಮಾನತೆ, ಪ್ರಾದೇಶಿಕ ಅಸಮಾನತೆಯನ್ನು ತಪ್ಪಿಸಬೇಕು. ಸಾಮಾಜಿಕ ನ್ಯಾಯದ ತತ್ವ ಪಾಲನೆಯಾಗಬೇಕು.
  7. ತರಗತಿಗಳ ಮಕ್ಕಳ ವಯೋಮಾನವನ್ನು ಆಧರಿಸಿ ಪಠ್ಯಗಳನ್ನು ಆಯ್ಕೆ ಮಾಡಬೇಕು.
  8. ಪಠ್ಯಕ್ರಮವು ಕನ್ನಡ ಭಾಷೆಯ ಎಲ್ಲಾ ಸಾಹಿತ್ಯ ಪರಂಪರೆಯನ್ನು ಪ್ರತಿನಿಧಿಸಬೇಕು.
  9. ಮುಖ್ಯವಾಗಿ ಮಕ್ಕಳ ನಡುವೆ ದ್ವೇಷವನ್ನು ಬಿತ್ತುವಂತಹ, ದೇಶ, ಸಂವಿಧಾನ, ರಾಷ್ಟ್ರದ ಬಾವುಟಕ್ಕೆ ಅವಮಾನ ಮಾಡುವ ಪಠ್ಯಗಳನ್ನು ಯಾವುದೇ ಕಾರಣಕ್ಕೂ ಆಯ್ಕೆ ಮಾಡಬಾರದು. ಜಾತೀಯತೆಯನ್ನು ಪೋಷಿಸುವಂತಹ ಪಠ್ಯಗಳನ್ನು ಆಯ್ಕೆ ಮಾಡಬಾರದು.
  10. ಪಠ್ಯ ಪುಸ್ತಕಗಳ ಪರಿಷ್ಕರಣೆಯು ಪ್ರಜಾಸತ್ತಾತ್ಮಕವಾಗಿರಬೇಕು.
  11. ಮಕ್ಕಳ ಮೇಲೆ ಯಾವುದೇ ರಾಜಕೀಯ, ಧಾರ್ಮಿಕ ಸಿದ್ಧಾಂತಗಳನ್ನು ಹೇರುವ ಪಠ್ಯಗಳನ್ನು ಆಯ್ಕೆ ಮಾಡಬಾರದು.

ರೋಹಿತ್ ಚಕ್ರತೀರ್ಥರ ಅಧ್ಯಕ್ಷತೆಯ ಈ ಪಠ್ಯಪುಸ್ತಕ ಪರಿಷ್ಕರಣೆಯ ಸಮಿತಿಯು ಯಾವುದೇ ಮೌಲ್ಯಗಳನ್ನು , ನೀತಿ ನಿಯಮಗಳನ್ನು ಪಾಲನೆ ಮಾಡಿಲ್ಲ ಎಂದು ಆರೋಪಿಸಿರುವ ಪತ್ರ, ಹಲವು ಪಠ್ಯಗಳನ್ನು ಕೈ ಬಿಟ್ಟಿದ್ದೇಕೆ ಎಂದು ಕೇಳಿದಾಗ ಶಿಕ್ಷಣ ಸಚಿವರಿಂದ ಉತ್ತರವೇ ಇಲ್ಲ. ಹಾಗಾಗಿ ಅದು ಪೂರ್ವಗ್ರಹಪೀಡಿತವಾಗಿದೆ ಎಂದು ತಿಳಿದಿದೆ.

ಇದನ್ನೂ ಓದಿ: ಸ್ವಾಮಿ ವಿವೇಕಾನಂದರ ಚಿಂತನೆಗಳ ತಿರುಚುವಿಕೆ: ಪ್ರಗತಿಪರ ವಿಚಾರ ಕೈಬಿಟ್ಟು, ಶಾಸ್ತ್ರ, ವೇದಾಂತ ಹೇರಿದ ನೂತನ ಪಠ್ಯ ಸಮಿತಿ

“ಆರ್.ಎಸ್.ಎಸ್‌ನ ಹಿಂದುತ್ವ ಸಿದ್ಧಾಂತವನ್ನು ರೂಪಿಸಿದ ಹೆಡಗೇವಾರ್ ಅವರ ಭಾಷಣವನ್ನು ಸೇರಿಸುವ ಔಚಿತ್ಯವೇನು ಎಂಬುದಕ್ಕೆ ಯಾವುದೇ ಸ್ಪಷ್ಟೀಕರಣವಿಲ. ಬದಲಿಗೆ ಹೆಡಗೇವಾರ್ ಭಾಷಣ ಸೇರಿಸಿರುವುದನ್ನು ಸಮರ್ಥಿಸಿಕೊಂಡಿದ್ದಾರೆ. ಒಬ್ಬ ಜವಾಬ್ದಾರಿಯುತ ಸಚಿವರಾಗಿ ಈ ವಿಷಯದಲ್ಲಿ ಸಂವಿಧಾನಕ್ಕೆ ಬದ್ಧರಾಗಿ ನಡೆದುಕೊಂಡಿಲ್ಲ” ಎಂದು ಪತ್ರವೂ ಹೇಳಿದ್ದು, ಸಚಿವರ ವರ್ತನೆಯು ಇದು ಪ್ರಶ್ನಾರ್ಹವಾಗಿದೆ ಎಂದು ತಿಳಿಸಿದೆ.

“ಇದೇ ಪದ್ಧತಿ ಮುಂದುವರೆದರೆ ಮುಂದಿನ ದಿನಗಳಲ್ಲಿ ಗೋಡ್ಸೆ ಕುರಿತಾದ ಆಧ್ಯಾಯವನ್ನು ಸೇರಿಸುವ ದಿನಗಳು ದೂರವಿಲ್ಲ” ಎಂದು ಆತಂಕ ವ್ಯಕ್ತಪಡಿಸಿರುವ ಪತ್ರವು, ಈ ಬದಲಾವಣೆ ಕುರಿತು ಸ್ಪಷ್ಟೀಕರಣ ಕೇಳಿದಾಗ ಆರ್.ಎಸ್.ಎಸ್ ಸಿದ್ಧಾಂತದಲ್ಲಿ ನಂಬಿಕೆ, ಗೌರವವಿದೆ ಎಂದು ಹೇಳಿಕೊಳ್ಳುತ್ತಿರುವ ರೋಹಿತ್ ಚಕ್ರತೀರ್ಥರವರು ಉಡಾಫೆಯಲ್ಲಿ ಮಾತನಾಡಿದ್ದಾರೆ ಎಂದು ತಿಳಿಸಿದ್ದಾರೆ.

ಹೊಸ ಪರಿಷ್ಕರಣೆಯನ್ನು ಯಾವುದೇ ಕಾರಣಕ್ಕೂ ಜಾರಿಗೊಳಿಸಬಾರದು. ಶಿಕ್ಷಣ ತಜ್ಞರು ಹಾಗೂ ಭಾಗೀದಾರರೊಂದಿಗೆ ಸಮಾಲೋಚನೆ ನಡೆಸುವ ಕ್ರಮ ಅಳವಡಿಕೆಯಾಗಬೇಕು. ಕನ್ನಡದ ಅಸ್ಮಿತೆಯ, ಘನತೆ ಹಾಗೂ ಪ್ರಾದೇಶಿಕ ಆಶೋತ್ತರಗಳಿಗೆ ಕುಂದು ತರಬಾರದು ಎಂದು ಪತ್ರವೂ ಆಗ್ರಹಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...