Homeಮುಖಪುಟ'ದಿಲ್ಲಿ ಚಲೋ': ಈಡೇರದೆ ಉಳಿದಿರುವ ರೈತರ ಪ್ರಮುಖ ಬೇಡಿಕೆಗಳೇನು?

‘ದಿಲ್ಲಿ ಚಲೋ’: ಈಡೇರದೆ ಉಳಿದಿರುವ ರೈತರ ಪ್ರಮುಖ ಬೇಡಿಕೆಗಳೇನು?

- Advertisement -
- Advertisement -

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿ ಹಲವು ರಾಜ್ಯಗಳ ರೈತರು ಇಂದು (ಫೆ.13) ‘ದಿಲ್ಲಿ ಚಲೋ’ ಹಮ್ಮಿಕೊಂಡಿದ್ದಾರೆ. ರೈತರ ಬೇಡಿಕೆಗಳಲ್ಲಿ ‘ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್‌ಪಿ) ಖಾತರಿಪಡಿಸುವ ಕಾನೂನನ್ನು ಜಾರಿಗೊಳಿಸುವುದು’ ಪ್ರಮುಖವಾಗಿದೆ.

ರೈತರ ಇತರ ಬೇಡಿಕೆಗಳೆಂದರೆ, ವಿದ್ಯುತ್ ಕಾಯ್ದೆ 2020ರ ರದ್ದತಿ, ಲಖಿಂಪುರ ಖೇರಿಯಲ್ಲಿ ಸಾವನ್ನಪ್ಪಿದ ರೈತರಿಗೆ ಪರಿಹಾರ ಮತ್ತು ರೈತ ಚಳವಳಿಯಲ್ಲಿ ತೊಡಗಿರುವವರ ವಿರುದ್ಧದ ಪ್ರಕರಣಗಳನ್ನು ಹಿಂಪಡೆಯುವುದಾಗಿದೆ.

ಸೋಮವಾರ (ಫೆ.12) ಮಧ್ಯರಾತ್ರಿಯವರೆಗೆ ರೈತ ಮುಖಂಡರ ಜೊತೆಗೆ ಚಂಡೀಗಢದಲ್ಲಿ ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಪಿಯೂಷ್ ಗೋಯಲ್ ಮತ್ತು ಕೃಷಿ ಸಚಿವ ಅರ್ಜುನ್ ಮುಂಡಾ ಸಭೆ ನಡೆಸಿದ್ದು, ವಿದ್ಯುತ್ ಕಾಯ್ದೆ 2020 ರದ್ದತಿ, ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ಮೃತಪಟ್ಟ ರೈತರಿಗೆ ಪರಿಹಾರ ಮತ್ತು ರೈತರ ಚಳವಳಿಯ ಸಂದರ್ಭಗಳಲ್ಲಿ ದಾಖಲಾದ ರೈತರ ಮೇಲಿನ ಪ್ರಕರಣಗಳನ್ನು ಹಿಂಪಡೆಯುವ ಬಗ್ಗೆ ಒಂದು ಒಪ್ಪಂದಕ್ಕೆ ಬಂದಿದ್ದಾರೆ.

ಆದರೆ, ರೈತರ ಮೂರು ಪ್ರಮುಖ ಬೇಡಿಕೆಗಳಾದ ಎಲ್ಲಾ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು ಖಾತರಿಪಡಿಸುವ ಕಾನೂನನ್ನು ಜಾರಿಗೊಳಿಸುವುದು, ರೈತರ ಸಾಲ ಮನ್ನಾ ಮತ್ತು ಸ್ವಾಮಿನಾಥನ್ ಆಯೋಗದ ಶಿಫಾರಸುಗಳ ಅನುಷ್ಠಾನದ ಬಗ್ಗೆ ಯಾವುದೇ ತೀರ್ಮಾನ ಆಗಿಲ್ಲ.

2020-21ರಲ್ಲಿ ಕೇಂದ್ರ ಸರ್ಕಾರದ ಮೂರು ಕೃಷಿ ಕಾನೂನುಗಳ ವಿರುದ್ದ ನಡೆದ ಅಂದೋಲನದ ವೇಳೆ, ರೈತ ಚಳವಳಿಯ ಸಂದರ್ಭಗಳಲ್ಲಿ ದಾಖಲಾದ ರೈತರ ಮೇಲಿನ ಪ್ರಕರಣಗಳನ್ನು ಹಿಂಪಡೆಯುವುದು, ಎಂಎಸ್‌ಪಿ ಕಾನೂನು ಜಾರಿ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವ ಭರವಸೆಯನ್ನು ಸರ್ಕಾರ ನೀಡಿತ್ತು. ನಿನ್ನೆಯ(ಫೆ.12) ಸಭೆಯಲ್ಲಿ ಕೇವಲ ಪ್ರಕರಣಗಳನ್ನು ಹಿಂಪಡೆಯಲು ಸರ್ಕಾರ ಒಪ್ಪಿಕೊಂಡಿದೆ. ಆದರೆ, ರೈತರ ಪ್ರಮುಖ ಬೇಡಿಕೆಯಾದ ಎಂಎಸ್‌ಪಿಯ ಕುರಿತು ಯಾವುದೇ ತೀರ್ಮಾನ ಆಗಿಲ್ಲ. ಹಾಗಾಗಿ, ಹೋರಾಟ ಮುಂದುವರೆಸುವುದಾಗಿ ರೈತರು ಹೇಳಿದ್ದಾರೆ.

ರೈತ ಮುಖಂಡರಾದ ಸಂಯುಕ್ತ ಕಿಸಾನ್ ಮೋರ್ಚಾದ (ರಾಜಕೀಯೇತರ) ಜಗಜಿತ್ ಸಿಂಗ್ ದಲ್ಲೆವಾಲ್ ಮತ್ತು ಕಿಸಾನ್ ಮಜ್ದೂರ್ ಸಂಘರ್ಷ ಸಮಿತಿಯ ಸರ್ವಾನ್ ಸಿಂಗ್ ಪಂಧೇರ್ ಅವರು ಸರ್ಕಾರ ರೈತರ ಬೇಡಿಕೆಗಳನ್ನು ಈಡೇರಿಸುವ ಬಗ್ಗೆ ಸಂದೇಹ ವ್ಯಕ್ತಪಡಿಸಿದ್ದಾರೆ.

ಎಂಎಸ್‌ಪಿ, ಸಾಲಮನ್ನಾ ಮತ್ತು ಸ್ವಾಮಿನಾಥನ್ ಆಯೋಗದ ಶಿಫಾರಸುಗಳ ಅನುಷ್ಠಾನ ಸಂಬಂಧ ಕಾನೂನು ಜಾರಿಗೊಳಿಸುವ ಕುರಿತು ಚರ್ಚಿಸಲು ಸಮಿತಿ ರಚಿಸುವುದಾಗಿ ಸರ್ಕಾರ ಹೇಳುತ್ತಿದೆ. ಆದರೆ, ರೈತ ಪ್ರತಿನಿಧಿಗಳು ಅದಕ್ಕೆ ಒಪ್ಪಿಲ್ಲ.

ನವೆಂಬರ್ 19, 2021ರಂದು, ಪ್ರಧಾನಿ ನರೇಂದ್ರ ಮೋದಿ ಅವರು ಮೂರು ವಿವಾದಾತ್ಮಕ ಕೃಷಿ ಕಾನೂನುಗಳನ್ನು ರದ್ದುಗೊಳಿಸುವ ಘೋಷಣೆ ಮಾಡಿದ್ದರು. ಆ ಮೂಲಕ ದೆಹಲಿಯ ಗಡಿಯಲ್ಲಿ ಹದಿಮೂರು ತಿಂಗಳ ಕಾಲ ಸತತ ಹೋರಾಟ ನಡೆಸಿದ್ದ ರೈತರಿಗೆ ಮಹತ್ವದ ಜಯ ಸಿಕ್ಕಿತ್ತು.

ರೈತರ ಹೋರಾಟದ ವೇಳೆ ಅವರ ಬೇಡಿಕೆಗಳನ್ನು ತುರ್ತಾಗಿ ಈಡೇರಿಸುವುದಾಗಿ ಸರ್ಕಾರ ಹೇಳಿತ್ತು. ಆದರೆ, ಆ ಮಾತಿಗೆ ತಪ್ಪಿದ ಸರ್ಕಾರ ಭರವಸೆ ಕೊಟ್ಟ ಸುಮಾರು 9 ತಿಂಗಳ ನಂತರ ಜುಲೈ 12, 2022 ರಂದು ಸಮಿತಿಯೊಂದನ್ನು ರಚಿಸಿತ್ತು. ಮಾಜಿ ಕೃಷಿ ಕಾರ್ಯದರ್ಶಿ ಸಂಜಯ್ ಅಗರ್ವಾಲ್ ಅವರ ಅಧ್ಯಕ್ಷತೆಯ ಸಮಿತಿಯಲ್ಲಿ ಒಟ್ಟು 29 ಸದಸ್ಯರಿದ್ದು, ನಾಲ್ವರು ಕೇಂದ್ರ ಸರ್ಕಾರದ ಕಾರ್ಯದರ್ಶಿಗಳು ಮತ್ತು ನಾಲ್ವರು ರಾಜ್ಯ ಸರ್ಕಾರ ಪ್ರತಿನಿಧಿಗಳು ಈ ಸಮಿತಿಯಲ್ಲಿದ್ದಾರೆ.

ಕೃಷಿ ಕಾನೂನಗಳ ವಿರುದ್ದ ನಡೆದ ಹೋರಾಟದಲ್ಲಿ ಉತ್ತರ ಪ್ರದೇಶ, ಪಂಜಾಬ್ ಮತ್ತು ಹರಿಯಾಣದ ರೈತರು ಪ್ರಮುಖ ವಹಿಸಿದ್ದರು. ಈ ರಾಜ್ಯಗಳ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ಆದರೆ, ಸರ್ಕಾರ ರಚಿಸಿದ ಸಮಿತಿಯಲ್ಲಿ ಈ ರಾಜ್ಯಗಳ ಪ್ರತಿನಿಧಿಗಳೇ ಇರಲಿಲ್ಲ. ಅಲ್ಲದೆ, ಕೃಷಿ ಕಾನೂನುಗಳನ್ನು ವಿರೋಧಿಸುವ ಯಾವುದೇ ಅರ್ಥಶಾಸ್ತ್ರಜ್ಞರು ಅಥವಾ ತಜ್ಞರು ಇಲ್ಲದಿರುವುದು ರೈತರಿಗೆ ಕಳವಳ ಉಂಟು ಮಾಡಿದೆ.

ಭೂಸ್ವಾಧೀನ ಕಾಯಿದೆ 2013ರ ಮರುಸ್ಥಾಪನೆ, ವಿಶ್ವ ವ್ಯಾಪಾರ ಸಂಸ್ಥೆಯಿಂದ ಹಿಂದೆ ಸರಿಯುವುದು ಮತ್ತು ಹಿಂದಿನ ಆಂದೋಲನದ ಸಮಯದಲ್ಲಿ ಸಾವನ್ನಪ್ಪಿದ ರೈತರ ಕುಟುಂಬಗಳಿಗೆ ಪರಿಹಾರ ಸೇರಿದಂತೆ ಇತರ ಹಲವು ಬೇಡಿಕೆಗಳನ್ನು ರೈತರು ಸರ್ಕಾರದ ಮುಂದಿಟ್ಟಿದ್ದಾರೆ.

ಪ್ರತಿಭಟನಾ ಮೆರವಣಿಗೆ ಕೈಗೊಂಡಿರುವ ರೈತರು ದೆಹಲಿ ಪ್ರವೇಶಿಸದಂತೆ ತಡೆಯಲು ಪೊಲೀಸರು ಸಾಧ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಂಡಿದ್ದಾರೆ. ಸಿಂಘು, ಟಿಕ್ರಿ ಮತ್ತು ಗಾಝಿಪುರ ಗಡಿಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಸಾರ್ವಜನಿಕ ಸಭೆಗಳು ನಡೆಸುವುದಕ್ಕೆ ಮತ್ತು ಟ್ರ್ಯಾಕ್ಟರ್, ಟ್ರಾಲಿಗಳು ನಗರಕ್ಕೆ ಪ್ರವೇಶಿಸದಂತೆ ಪೊಲೀಸರು ಒಂದು ತಿಂಗಳ ಕಾಲ ನಿಷೇಧ ಹೇರಿದ್ದಾರೆ.

ದೆಹಲಿಯಾದ್ಯಂತ ಬೃಹತ್ ಸಭೆಗಳನ್ನು ನಿಷೇಧಿಸಲಾಗಿದೆ. ಹೆಚ್ಚಿನ ರಸ್ತೆಗಳನ್ನು ಕಾಂಕ್ರೀಟ್ ಬ್ಲಾಕ್‌ಗಳು, ಮುಳ್ಳು ತಂತಿಗಳು ಮತ್ತು ಬ್ಯಾರಿಕೇಡ್‌ಗಳಿಂದ ಮುಚ್ಚಲಾಗಿದೆ. ವಾಣಿಜ್ಯ ವಾಹನಗಳ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.

ಇದನ್ನೂ ಓದಿ : ಮೆರವಣಿಗೆ ಆರಂಭಿಸಿದ ರೈತರು; ದೆಹಲಿ-ಹರಿಯಾಣ ಗಡಿಯಲ್ಲಿ ಕಂದಕ, ಮುಳ್ಳಿನ ಬೇಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...