Homeಮುಖಪುಟ‘ಯಾವ ದಾಳಿಯು ದೃಢತೆಯನ್ನು ಮುರಿಯದು’ - ಮಮತಾ ಮೇಲಿನ ದಾಳಿಗೆ ಟಿಎಂಸಿ ಪ್ರತಿಕ್ರಿಯೆ

‘ಯಾವ ದಾಳಿಯು ದೃಢತೆಯನ್ನು ಮುರಿಯದು’ – ಮಮತಾ ಮೇಲಿನ ದಾಳಿಗೆ ಟಿಎಂಸಿ ಪ್ರತಿಕ್ರಿಯೆ

ಮುಖ್ಯಮಂತ್ರಿಯ ಎಡ ಪಾದದ ಮೂಳೆಗೆ ತೀವ್ರವಾದ ಗಾಯಗಳಾಗಿದ್ದು, ಅಲ್ಲದೆ ಅವರ ಬಲ ಭುಜ, ಮುಂದೋಳು ಮತ್ತು ಕುತ್ತಿಗೆಗೂ ಗಾಯಗಳಾಗಿದೆ ಎಂದು ವರದಿಯಾಗಿದೆ.

- Advertisement -
- Advertisement -

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಮೇಲೆ ನಂದಿಗ್ರಾಮದ ದೇವಾಲಯವೊಂದರ ಹೊರಗೆ ನಾಲ್ಕೈದು ಜನರ ಗುಂಪಿನಿಂದ ಹಲ್ಲೆ ನಡೆದಿದೆ ಎಂದು ಬುಧವಾರ ರಾತ್ರಿ ವರದಿಯಾಗಿದೆ. ಇದೀಗ ಪ್ರಾಥಮಿಕ ವೈದ್ಯಕೀಯ ಪರೀಕ್ಷೆಗಳು ಅವರ ಎಡ ಪಾದದ ಮೂಳೆಗೆ ತೀವ್ರವಾದ ಗಾಯಗಳಾಗಿದೆ ಎಂದು ವರದಿ ನೀಡಿದೆ. ಅಷ್ಟೇ ಅಲ್ಲದೆ ಅವರ ಬಲ ಭುಜ, ಮುಂದೋಳು ಮತ್ತು ಕುತ್ತಿಗೆಗೂ ಗಾಯಗಳಾಗಿದೆ ಎಂದು ಸರ್ಕಾರಿ ಎಸ್‌ಎಸ್‌ಕೆಎಂ ಆಸ್ಪತ್ರೆಯ ಹಿರಿಯ ವೈದ್ಯರು ತಿಳಿಸಿದ್ದಾರೆಂದು ಪಿಟಿಐ ವರದಿ ಮಾಡಿದೆ.

“ಮಮತಾ ಬ್ಯಾನರ್ಜಿಯ ಧ್ವನಿಯನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿರುವುದು ಇದೇ ಮೊದಲೇನಲ್ಲ. ಮುಂಚೆಯೂ ರೈತರ ಪರ ನಿಂತಿದ್ದಕ್ಕಾಗಿ ಈ ಐತಿಹಾಸಿಕ ಸ್ಥಳದಲ್ಲಿ ಅವರ ಮೇಲೆ ದಾಳಿ ಮಾಡಲಾಗಿತ್ತು. ಆದರೆ ಯಾವುದೂ ಅವರ ದೃಡತೆಯನ್ನು ಮುರಿಯುವುದಿಲ್ಲ. ಅವರು ನಿಮ್ಮ ಪ್ರಬಲ ಧ್ವನಿಯಾಗಿ ಮುಂದುವರಿಯುತ್ತಾರೆ” ಎಂದು ಪಕ್ಷದ ಅಧಿಕೃತ ಹೇಳಿಕೆ ತಿಳಿಸಿದೆ.

ಇದನ್ನೂ ಓದಿ: ಪ.ಬಂಗಾಳ: ನಾಮಪತ್ರ ಸಲ್ಲಿಸಿ ಹಿಂದಿರುಗುತ್ತಿದ್ದ ಮಮತಾ ಬ್ಯಾನರ್ಜಿ ಮೇಲೆ ಹಲ್ಲೆ!

ಮುಂಬರುವ ವಿಧಾನಸಭಾ ಚುನಾವಣೆಗೆ ನಂದಿಗ್ರಾಮದಲ್ಲಿ ನಾಮಪತ್ರ ಸಲ್ಲಿಸಿದ ಕೆಲವೇ ಗಂಟೆಗಳ ಅಂತರದಲ್ಲಿ ಈ ಘಟನೆ ಸಂಭವಿಸಿದೆ. ಘಟನೆ ಕುರಿತು ಚುನಾವಣಾ ಆಯೋಗ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ ಅಲ್ಲಾಪನ್ ಬಂಡ್ಯೋಪಾಧ್ಯಾಯ, ಅದರ ಸಾಮಾನ್ಯ ವೀಕ್ಷಕ ಅಜಯ್ ನಾಯಕ್ ಮತ್ತು ವಿಶೇಷ ಪೊಲೀಸ್ ವೀಕ್ಷಕ ವಿವೇಕ್ ದುಬೆ ಅವರಿಂದ ವರದಿ ಕೋರಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಈ ಬಾರಿ ಪಶ್ಚಿಮ ಬಂಗಾಳವು ಟಿಎಂಸಿ, ಕಾಂಗ್ರೆಸ್-ಎಡ ಮೈತ್ರಿ ಮತ್ತು ಬಿಜೆಪಿ ಪಕ್ಷಗಳ ತ್ರಿಕೋನ ಸ್ಪರ್ಧೆಗೆ ಸಾಕ್ಷಿಯಾಗಲಿದೆ. 294 ಸದಸ್ಯರ ಪಶ್ಚಿಮ ಬಂಗಾಳ ವಿಧಾನಸಭೆಗೆ ಮಾರ್ಚ್ 27 ರಿಂದ ಎಂಟು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಅಂತಿಮ ಸುತ್ತಿನ ಮತದಾನ ಏಪ್ರಿಲ್ 29 ರಿಂದ ನಡೆಯಲಿದೆ. ಮತ ಎಣಿಕೆ ಮೇ 2 ರಂದು ನಡೆಯಲಿದೆ.

ಇದನ್ನೂ ಓದಿ: ಮಾ. 26ಕ್ಕೆ ಸಂಪೂರ್ಣ ಭಾರತ್ ಬಂದ್ – ಹೋರಾಟನಿರತ ರೈತರ ಕರೆ

ಮಮತಾ ಬ್ಯಾನರ್ಜಿ ಸತತ ಮೂರನೇ ಅವಧಿಗೆ ಅಧಿಕಾರಕ್ಕೇರಲು ಪ್ರಯತ್ನಿಸುತ್ತಿದ್ದರೆ, ಬಿಜೆಪಿಯು 200 ಸ್ಥಾನಗಳನ್ನು ಗೆಲ್ಲುವ ಗುರಿಯನ್ನು ಹೊಂದಿದೆ. ಕಾಂಗ್ರೆಸ್ ಮತ್ತು ಎಡಪಂಥೀಯರು ಚುನಾವಣೆಗೆ ಮೈತ್ರಿ ಮಾಡಿಕೊಂಡಿದ್ದು, ಈಗಾಗಲೇ ಸ್ಥಾನ ಹಂಚಿಕೆಯನ್ನು ಅಂತಿಮಗೊಳಿಸಿದ್ದಾರೆ. ಅವರು ಪ್ರಭಾವಿ ಅಲ್ಪಸಂಖ್ಯಾತ ಮುಖಂಡ ಅಬ್ಬಾಸ್ ಸಿದ್ದೀಕ್ ಅವರ ಇಂಡಿಯನ್ ಸೆಕ್ಯುಲರ್ ಫ್ರಂಟ್ (ಐಎಸ್ಎಫ್) ನೊಂದಿಗೆ ಸಂಪರ್ಕದಲ್ಲಿದ್ದಾರೆ.

2016 ರಲ್ಲಿ, ಕಾಂಗ್ರೆಸ್ 44 ಸ್ಥಾನಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದ್ದರೆ, ಎಡರಂಗವು 33 ಸ್ಥಾನಗಳನ್ನು ಗಳಿಸಿತ್ತಿ. ಆಡಳಿತಾರೂಢ ಟಿಎಂಸಿ 211 ಸ್ಥಾನಗಳನ್ನು ಮತ್ತು ಬಿಜೆಪಿ 3 ಸ್ಥಾನಗಳನ್ನು ಗೆದ್ದಿದ್ದವು.

2019 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 18 ಸ್ಥಾನಗಳನ್ನು ಗೆದ್ದಿದ್ದು ಮತ್ತು ಟಿಎಂಸಿಯ ಸಂಸದ ಸ್ಥಾನವು 22 ಕ್ಕೆ ಇಳಿದಿದೆ. ಪಶ್ಚಿಮ ಬಂಗಾಳದ ಒಟ್ಟು 42 ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಎರಡು ಸ್ಥಾನಗಳನ್ನು ಗೆದ್ದಿದ್ದರೆ, ಎಡಪಂಥೀಯರು ಒಂದೂ ಸ್ಥಾನವನ್ನು ಗೆಲ್ಲಲಿಲ್ಲ.

2019 ರ ಚುನಾವಣೆಯಲ್ಲಿ ಬಿಜೆಪಿಯ ಗಣನೀಯ ಸಾಧನೆಯ ನಂತರ ಹಲವಾರು ಟಿಎಂಸಿ ನಾಯಕರು ಬಿಜೆಪಿಗೆ ಸೇರಿದ್ದಾರೆ.

ಇದನ್ನೂ ಓದಿ: ಟೈಟಾನಿಕ್ ಚಲನಚಿತ್ರ ನೋಡಿದ್ದೀರಾ?- ಲಸಿಕೆ ಆದ್ಯತೆಯ ಬಗ್ಗೆ ಬಾಂಬೆ ಹೈಕೋರ್ಟ್ ಹೇಳಿದ್ದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...