Homeಕರ್ನಾಟಕದಲಿತರು, ಹಿಂದುಳಿದವರು ಬಿಜೆಪಿ- ಆರ್‌ಎಸ್‌ಎಸ್‌ ಸೇರ್ತಾರಲ್ಲಾ ಇವರಿಗೆ ಏನು ಹೇಳೋದು : ಸಿಎಂ ಸಿದ್ದರಾಮಯ್ಯ

ದಲಿತರು, ಹಿಂದುಳಿದವರು ಬಿಜೆಪಿ- ಆರ್‌ಎಸ್‌ಎಸ್‌ ಸೇರ್ತಾರಲ್ಲಾ ಇವರಿಗೆ ಏನು ಹೇಳೋದು : ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಹಿಂದುಳಿದವರು-ದಲಿತರು ತಮ್ಮ ವಿರೋಧಿಗಳಾದ ಬಿಜೆಪಿ, ಆರ್‌ಎಸ್‌ಎಸ್‌, ಎಬಿವಿಪಿ ಸೇರ್ತಾರಲ್ಲಾ ಇವರಿಗೆ ಏನು ಹೇಳೋದು. ಬಿಜೆಪಿ-ಆರ್‌ಎಸ್ಎಸ್‌ ಸಿದ್ಧಾಂತ ಹಿಂದುಳಿದವರ ಶತ್ರು ಎಂದು ಗೊತ್ತಿದ್ದೂ, ಹೋಗಿ ಹೋಗಿ ಅಲ್ಲಿಗೇ ಸೇರ್ತಾರಲ್ಲ ಇದಕ್ಕೆ ಏನು ಮಾಡೋದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದರು.

ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟ ಬುಧವಾರ (ನವೆಂಬರ್ 19) ಆಯೋಜಿಸಿದ್ದ, ಎಲ್.ಜಿ ಹಾವನೂರು ವರದಿಯ ಸುವರ್ಣ ಮಹೋತ್ಸವ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ದೇವರು, ಧರ್ಮದ ಹೆಸರಲ್ಲಿ ಸಾಯ್ತಾ ಇರೋರೆಲ್ಲಾ ನಮ್ಮ ಹಿಂದುಳಿದವರೇ. ಸ್ವಾರ್ಥಕ್ಕಾಗಿ ಬಿಜೆಪಿ-ಆರ್‌ಎಸ್‌ಎಸ್‌ ಸೇರಿ ಇವರೇ ಮೂಲ ಆರ್‌ಎಸ್‌ಎಸ್‌ನವರಿಗಿಂತ, ಇವರೇ ಹೆಡ್ಗೇವಾರ್ ರೀತಿ ಮಾತಾಡ್ತಾರೆ ಸಿಎಂ ವ್ಯಂಗ್ಯವಾಡಿದರು.

ಹಾವನೂರು ವರದಿಯನ್ನು ದೇವರಾಜ ಅರಸರು ಹಿಂದುಳಿದವರ ಬೈಬಲ್ ಎಂದು ಕರೆದಿದ್ದಾರೆ. ಸುಪ್ರೀಂ ಕೋರ್ಟ್ ಕೂಡ ಹಾವನೂರು ವರದಿಯನ್ನು ಅಪಾರವಾಗಿ ಮೆಚ್ಚಿಕೊಂಡಿದೆ ಎಂದರು.

ಸಾಮಾನ್ಯ ಹಳ್ಳಿಯ ಪರಿಶಿಷ್ಟ ಕುಟುಂಬದಲ್ಲಿ ಹುಟ್ಟಿದ ಹಾವನೂರು ಅವರು ವಿದ್ಯಾರ್ಥಿ ದೆಸೆಯಲ್ಲೇ ಪ್ರತಿಭಟನೆ ಮಾಡುವ ಗುಣ ಹೊಂದಿದ್ದರು. ಹಾವನೂರು ಅವತ್ತು ಈ ಜಾತಿಯ ಮೊದಲ ವಕೀಲರಾಗಿದ್ದರು ಎಂದು ಸ್ಮರಿಸಿದರು.

ನಾನು ಹಣಕಾಸು ಮಂತ್ರಿಯಾದಾಗ, “ಈ ಸಿದ್ದರಾಮಯ್ಯಂಗೆ ನೂರು ಕುರಿ ಎಣಿಸೋಕೆ ಬರಲ್ಲ ಬಜೆಟ್ ಮಂಡಿಸ್ತಾರಾ” ಎಂದು ಪತ್ರಿಕೆಯೊಂದರಲ್ಲಿ ಬರೆದಿದ್ದರು. ಇದನ್ನು ನಾನು ಸವಾಲಾಗಿ ಸ್ವೀಕರಿಸಿದೆ. 16 ಬಜೆಟ್ ಮಂಡಿಸಿದೆ. 17ನೇ ಬಜೆಟನ್ನೂ ಮಂಡಿಸುತ್ತೇನೆ. ನನಗೆ ಅವಕಾಶ ಸಿಕ್ಕಿದ್ದರಿಂದ ನಾನು ಇಷ್ಟೆಲ್ಲಾ ಮಾಡಲು ಸಾಧ್ಯವಾಯಿತು. ಅವಕಾಶ ಸಿಗದಿದ್ದರೆ ನನ್ನಿಂದ ಇದನ್ನು ಮಾಡಲು ಸಾಧ್ಯವಿರಲಿಲ್ಲ. ಆದ್ದರಿಂದ ದಮನಿತ ಜಾತಿಗಳಿಗೆ ಅವಕಾಶ ಮುಖ್ಯ ಎಂದರು.

ಬೇಡರ ಜಾತಿಯಲ್ಲಿ ಜನಿಸಿದ ಹಾವನೂರು ಅವರು ತಮ್ಮ ಸಾಮರ್ಥ್ಯ ತೋರಿಸಿದ್ದಾರೆ. ಪ್ರತಿಭೆ ಯಾರ ಸ್ವತ್ತೂ ಅಲ್ಲ. ಅವಕಾಶ ಸಿಕ್ಕಾಗ ಹೊರಗೆ ಬರುತ್ತದೆ ಎಂದು ಹೇಳಿದರು.

ನಾನು 1991ರಲ್ಲಿ ಲೋಕಸಭೆಗೆ ಸ್ಪರ್ಧಿಸಿ ಸೋತಿದ್ದೆ. ಆಗ ಚುನಾವಣಾ ತಕರಾರು ಅರ್ಜಿ ಸಲ್ಲಿಸಿದ್ದೆ. ನನ್ನ ಅರ್ಜಿ ಪರವಾಗಿ ಹಾವನೂರು ಅವರು ವಾದಿಸಿದ್ದರು. ಆ ಸಂದರ್ಭದಲ್ಲಿ ನನಗೆ ಹಾವನೂರು ಅವರ ಜೊತೆ ಆತ್ಮೀಯತೆ ಬೆಳೆದಿತ್ತು ಎಂದು ಸ್ಮರಿಸಿದರು.

ಎಲ್ಲಿಯವರೆಗೂ ಜಾತಿ ವ್ಯವಸ್ಥೆ ಇರುತ್ತದೋ, ಅಲ್ಲಿಯವರೆಗೂ ಮೀಸಲಾತಿ ಇರಬೇಕು ಎನ್ನುವುದು ಡಾ.ಬಿ.ಆರ್ ಅಂಬೇಡ್ಕರ್ ಅವರ ಮಾತಾಗಿತ್ತು. ನಮ್ಮಲ್ಲಿ ಶಿಕ್ಷಣ ಪ್ರಮಾಣ ಶೇಕಡ 68ರಷ್ಟಿದ್ದರೂ ಜಾತಿ ವ್ಯವಸ್ಥೆ ಇನ್ನಷ್ಟು ಗಟ್ಟಿಯಾಗುತ್ತಿದೆ. ಜಾತಿ ವ್ಯವಸ್ಥೆಯಿಂದ ಅನುಕೂಲ ಮಾಡಿಕೊಂಡವರು ಈ ವ್ಯವಸ್ಥೆಯನ್ನು ಗಟ್ಟಿಗೊಳಿಸುತ್ತಿದ್ದರೆ, ಹಿಂದುಳಿದವರು ಇನ್ನೂ ಗುಲಾಮಗಿರಿ ಮನಸ್ಥಿತಿಯಿಂದ ಹೊರಗೆ ಬಂದಿಲ್ಲ. ಪ್ರಬಲ ಜಾತಿಯ ಬಡವರನ್ನೂ ಬಹುವಚನದಿಂದ ಕರೆಯುವುದು, ಕೆಳ ಜಾತಿಯ ಶ್ರೀಮಂತರನ್ನು ಏಕವಚನದಲ್ಲಿ ಕರೆಯುವುದೇ ಗುಲಾಮಿ ಮನಸ್ಥಿತಿಯ ಸಂಕೇತ ಎಂದರು.

ವಿದ್ಯಾವಂತರು ವಿದ್ಯೆ ಪಡೆದಷ್ಟೂ ಮೌಡ್ಯವನ್ನು ಹೆಚ್ಚೆಚ್ಚು ನಂಬುತ್ತಾರೆ. ಬಡತನಕ್ಕೆ ಹಣೆಬರಹ ಕಾರಣ ಎಂದು ನಂಬುವವರು ಇನ್ನೂ ಇದ್ದಾರೆ. ಹಿಂದುಳಿದ ವರ್ಗಗಳ ವಿದ್ಯಾವಂತರೂ ಮೌಡ್ಯವನ್ನು ನಂಬುತ್ತಾರೆ ಎಂದು ಹೇಳಿದರು.

ಬುದ್ದ, ಬಸವಣ್ಣ, ಅಂಬೇಡ್ಕರ್ ಅವರೆಲ್ಲಾ ಬಂದು ಜಾತಿ ವ್ಯವಸ್ಥೆ ವಿರುದ್ಧ ಹೋರಾಡಿದರು. ಇವರು ಹೋರಾಡಿದಾಗ ಜಾತಿ ವ್ಯವಸ್ಥೆ ಸಡಿಲ ಆದಂತೆ ಕಾಣುತ್ತದೆ. ಆದರೆ, ಬಳಿಕ ಮತ್ತೆ ಗಟ್ಟಿಯಾಗುತ್ತದೆ. ಜಾತಿ ವ್ಯವಸ್ಥೆ ಮಾತ್ರ ಹೋಗುತ್ತಿಲ್ಲ. ಅದಕ್ಕೇ ಆರ್ಥಿಕ, ಸಾಮಜಿಕ ಅಸಮಾನತೆಗೆ ತುತ್ತಾಗಿರುವ ಜನರೇ ಸ್ವಾತಂತ್ರ್ಯ ಸೌಧವನ್ನು ದ್ವಂಸ ಮಾಡುತ್ತಾರೆ ಎಂದು ಅಂಬೇಡ್ಕರ್ ಅವರು ಎಚ್ಚರಿಸಿದ್ದನ್ನು ನಾವು ಮರೆಯಬಾರದು ಎಂದರು.

ಮೀಸಲಾತಿ ಮಿತಿ ಶೇ.75ಕ್ಕೆ ಹೆಚ್ಚಿಸಲೂ ಸಿದ್ಧ: ಸಿಎಂ ಸಿದ್ದರಾಮಯ್ಯ

ನಮ್ಮ ಸರ್ಕಾರ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ವರದಿಯನ್ನು ಒಪ್ಪಿಕೊಂಡು ಜಾರಿ ಮಾಡಲು ಸಿದ್ಧವಿದೆ. ಮೀಸಲಾತಿ ಪ್ರಮಾಣವನ್ನು ಶೇ 70-75ಕ್ಕೆ ಹೆಚ್ಚಿಸುವ ಬಗ್ಗೆಯೂ ಆಸಕ್ತಿ ಹೊಂದಿದೆ. ನನ್ನ ಕೊನೆ ಉಸಿರು ಇರುವವರೆಗೂ, ನಾನು ರಾಜಕಾರಣದಲ್ಲಿ ಇರುವವರೆಗೂ ಸಾಮಾಜಿಕ ನ್ಯಾಯದ ಪರವಾಗಿ ಇರುತ್ತೇನೆ ಎಂದು ಸಿಎಂ ಸ್ಪಷ್ಟಪಡಿಸಿದರು.

ರಾಹುಲ್ ಗಾಂಧಿಯವರಿಗೆ ಸೈದ್ಧಾಂತಿಕ ಬದ್ಧತೆ ಇದ್ದಿದ್ದರಿಂದಲೇ ಜಾತಿ ಗಣತಿಗೆ ಒತ್ತಡ ಹೇರಿದರು

ರಾಹುಲ್ ಗಾಂಧಿಯವರಿಗೆ ಸೈದ್ಧಾಂತಿಕ ಬದ್ಧತೆ ಇದ್ದಿದ್ದರಿಂದಲೇ ಜಾತಿ ಗಣತಿಗೆ ಒತ್ತಡ ಹೇರಿದರು. ಮೊನ್ನೆ ನನಗೂ “ಏನಾಯ್ತು ನಿಮ್ಮ ಗಣತಿ” ಎಂದು ಕೇಳಿದರು. ರಾಹುಲ್ ಗಾಂಧಿಯವರಿಗೆ ಸ್ಪಷ್ಟತೆ ಇರುವುದರಿಂದಲೇ ಅವರು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಿ ಜಾತಿ ಗಣತಿ ನಡೆಸುವಂತೆ ಮಾಡಿದ್ದಾರೆ. ನಮ್ಮ ಸರ್ಕಾರ ಕೂಡ ಈ ಗಣತಿಯನ್ನು ಒಪ್ಪಿಕೊಂಡು ಜಾರಿ‌ಮಾಡಲು ಬದ್ದವಾಗಿದೆ ಎಂದರು.

ಮನುಸ್ಮೃತಿಯ ಶೂದ್ರ ವಿರೋಧಿ ಅಧ್ಯಾಯಗಳನ್ನು ಓದಿದ ಸಿಎಂ

ತಮ್ಮ ಭಾಷಣದ ನಡುವೆ ಮುಖ್ಯಮಂತ್ರಿಗಳು ಮನುಸ್ಮೃತಿಯ ಶೂದ್ರ ವಿರೋಧಿ ಅಧ್ಯಾಯಗಳನ್ನು ಓದಿದರು. ಶೂದ್ರ ಸಮುದಾಯವನ್ನು ನಾಯಿಗೆ ಹೋಲಿಸಿ ತಾರತಮ್ಯ ಆಚರಿಸುವ ಶ್ಲೋಕಗಳನ್ನು ಓದಿ, ನೀವೆಲ್ಲಾ ಮನುಸ್ಮೃತಿ ಓದಿ ಜಾತಿ ತಾರತಮ್ಯದ ಪ್ರಮಾಣವನ್ನು ಅರ್ಥ ಮಾಡಿಕೊಳ್ಳಬೇಕು ಎಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...