Homeಮುಖಪುಟ27 ಪ್ರಕರಣಗಳು: ಪ್ರಧಾನಿ ಮೋದಿ ವಿರುದ್ಧದ ದೂರುಗಳಿಗೆ ಸಂಬಂಧಿಸಿ ಚುನಾವಣಾ ಆಯೋಗ ಏನು ಮಾಡಿದೆ?

27 ಪ್ರಕರಣಗಳು: ಪ್ರಧಾನಿ ಮೋದಿ ವಿರುದ್ಧದ ದೂರುಗಳಿಗೆ ಸಂಬಂಧಿಸಿ ಚುನಾವಣಾ ಆಯೋಗ ಏನು ಮಾಡಿದೆ?

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ವಿರುದ್ಧ 2019ರಿಂದ ಮಾದರಿ ನೀತಿ ಸಂಹಿತೆ ಉಲ್ಲಂಘನೆಯ ಆರೋಪದ ಮೇಲೆ  ವಿರೋಧ ಪಕ್ಷಗಳು ಭಾರತೀಯ ಚುನಾವಣಾ ಆಯೋಗಕ್ಕೆ ಕನಿಷ್ಠ 27 ದೂರುಗಳನ್ನು ನೀಡಿದೆ. ಆದರೆ ಇದ್ಯಾವುದೇ ಪ್ರಕರಣಗಳಲ್ಲಿ ಪ್ರಧಾನಿಯ ವಿರುದ್ಧ ಕ್ರಮವನ್ನು ತೆಗೆದುಕೊಂಡಿಲ್ಲ ಎನ್ನುವುದು ಪ್ರತಿಪಕ್ಷಗಳ ಆರೋಪವಾಗಿದೆ.

ಮೋದಿ ವಿರುದ್ಧ ಚುನಾವಣಾ ಆಯೋಗಕ್ಕೆ ನೀಡಿದ ದೂರುಗಳಲ್ಲಿ ದ್ವೇಷ ಭಾಷಣದ ಆರೋಪಗಳು, ಮತಗಳನ್ನು ಪಡೆಯಲು ಸಶಸ್ತ್ರ ಪಡೆಗಳ ಬಳಕೆ, ಧರ್ಮದ ಹೆಸರಿನಲ್ಲಿ ಮತಯಾಚಣೆ ಮತ್ತು ಪ್ರಧಾನ ಮಂತ್ರಿಯ ಚುನಾವಣಾ ರ್ಯಾಲಿಗಳಿಗೆ ಭಾಷಣಗಳನ್ನು ತಯಾರಿಸಲು ಸರ್ಕಾರಿ ಸಚಿವಾಲಯಗಳ ಬಳಕೆ ಸೇರಿದಂತೆ ಇತರ ಆರೋಪಗಳ ಮೇಲೆ ಪ್ರಧಾನಿ ವಿರುದ್ಧ ಪ್ರತಿಪಕ್ಷಗಳು 2019ರಿಂದ 27 ದೂರುಗಳನ್ನು ದಾಖಲಿಸಿದ್ದವು.

ಆದರೆ ಮೊದಲ ಬಾರಿಗೆ, ಚುನಾವಣಾ ಆಯೋಗವು ಏಪ್ರಿಲ್ 25 ರಂದು ಮೋದಿ ರಾಜಸ್ಥಾನದಲ್ಲಿ ಮಾಡಿದ್ದ  ದ್ವೇಷದ ಭಾಷಣಕ್ಕೆ ಸಂಬಂಧಿಸಿ ಬಿಜೆಪಿ ಅಧ್ಯಕ್ಷ  ಜೆಪಿ ನಡ್ಡಾ ಅವರಿಗೆ ನೊಟೀಸ್‌ನ್ನು ನೀಡಿದೆ. ನೋಟಿಸ್‌ನಲ್ಲಿ ಕಾಂಗ್ರೆಸ್, ಸಿಪಿಐ(ಎಂ), ಮತ್ತು ಸಿಪಿಐ(ಎಂ) ನೀಡಿದ ದೂರಿನ ಪ್ರತಿಯನ್ನು ಉಲ್ಲೇಖಿಸಿದೆ.

ಈ ದೇಶದ ಸಂಪತ್ತನ್ನು ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಮ್ ಸಮುದಾಯಕ್ಕೆ ನೀಡುವುದೇ ಕಾಂಗ್ರೆಸ್‌ನ ಗ್ಯಾರಂಟಿ ಎಂದು ಹೇಳಿದ್ದು, ಮುಸ್ಲಿಂ ಅಲ್ಪಸಂಖ್ಯಾತರನ್ನು “ಒಳನುಸುಳುವವರು” ಮತ್ತು “ಹೆಚ್ಚು ಮಕ್ಕಳನ್ನು ಹೊಂದಿರುವವರು” ಎಂದು ಹೇಳಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶದ ಸಂಪತ್ತನ್ನು “ಒಳನುಸುಳುಕೋರರು” ಮತ್ತು “ಹೆಚ್ಚು ಮಕ್ಕಳನ್ನು ಹೊಂದಿರುವವರಿಗೆ” ಹಂಚಬಹುದು ಎಂದು ಹೇಳಿ ವಿವಾದವನ್ನು ಸೃಷ್ಟಿಸಿದ್ದರು.

ದೇಶದ ವೈಯಕ್ತಿಕ ಆಸ್ತಿಗಳನ್ನು ಕಸಿದು, ಅದನ್ನು ಮುಸ್ಲಿಮರಿಗೆ ಕಾಂಗ್ರೆಸ್ ಹಂಚಲಿದೆ. ಇದು ನಗರ ನಕ್ಸಲರ ಯೋಜನೆಯಾಗಿದೆ. ಈ ‘ನಗರ ನಕ್ಸಲ್’ ಮನಸ್ಥಿತಿಯಿಂದ ತಾಯಂದಿರೇ ಮತ್ತು ಸಹೋದರಿಯರೇ, ಅವರು ನಿಮ್ಮ ‘ಮಂಗಲಸೂತ್ರ’ವನ್ನು ಸಹ ಬಿಡುವುದಿಲ್ಲ. ಅವರು ಆ ಮಟ್ಟಕ್ಕೆ ಹೋಗಬಹುದು. ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಅವರು ತಾಯಿ ಮತ್ತು ಸಹೋದರಿಯರ ಚಿನ್ನವನ್ನು ಲೆಕ್ಕ ಹಾಕುತ್ತಾರೆ, ಅದರ ಬಗ್ಗೆ ಮಾಹಿತಿ ಪಡೆದು ನಂತರ ಆ ಆಸ್ತಿಯನ್ನು ಹಂಚುತ್ತಾರೆ. ಅವರು ಅದನ್ನು ಯಾರಿಗೆ ಹಂಚುತ್ತಾರೆ? ಮನಮೋಹನ್ ಸಿಂಗ್ ಅವರ ಸರ್ಕಾರವು ದೇಶದ ಆಸ್ತಿಯಲ್ಲಿ ಮುಸ್ಲಿಮರಿಗೆ ಮೊದಲ ಹಕ್ಕು ಎಂದು ಹೇಳಿತ್ತು. ಇದನ್ನು ನುಸುಳುಕೋರರಿಗೆ ವಿತರಿಸಲಾಗುವುದು. ನೀವು ಕಷ್ಟಪಟ್ಟು ಸಂಪಾದಿಸಿದ ಹಣ ನುಸುಳುಕೋರರಿಗೆ ಹೋಗಬೇಕೇ? ನೀವು ಇದನ್ನು ಅನುಮೋದಿಸುತ್ತೀರಾ? ಇದು ನಿಮಗೆ ಸ್ವೀಕಾರಾರ್ಹವೇ? ನೀವು ಕಷ್ಟಪಟ್ಟು ಸಂಪಾದಿಸಿದ ನಿಮ್ಮ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳುವ ಹಕ್ಕು ಸರ್ಕಾರಗಳಿಗೆ ಇದೆಯೇ? ತಾಯಂದಿರ ಮಂಗಳಸೂತ್ರದ ಮೌಲ್ಯವು ಚಿನ್ನ ಅಥವಾ ಅದರ ಬೆಲೆಯಲ್ಲಿಲ್ಲ, ಆದರೆ ಜೀವನದಲ್ಲಿ ಅವಳ ಕನಸುಗಳಿಗೆ ಸಂಬಂಧಿಸಿದೆ ಮತ್ತು ನೀವು ಅದನ್ನು ಕಸಿದುಕೊಳ್ಳುವ ಬಗ್ಗೆ ಮಾತನಾಡುತ್ತಿದ್ದೀರಾ? ಎಂದು ಪ್ರಧಾನಿ ಮೋದಿ ಪ್ರಶ್ನಿಸಿದ್ದರು.

ಭಿನ್ನಾಭಿಪ್ರಾಯಗಳನ್ನು ಉಲ್ಬಣಗೊಳಿಸುವ ಅಥವಾ ಪರಸ್ಪರ ದ್ವೇಷವನ್ನು ಉಂಟುಮಾಡುವ ಅಥವಾ ವಿವಿಧ ಜಾತಿಗಳು ಮತ್ತು ಸಮುದಾಯಗಳ ನಡುವೆ ಅಥವಾ ಧರ್ಮಗಳು, ವಿಭಿನ್ನ ಭಾಷಿಗರ ನಡುವೆ ಉದ್ವಿಗ್ನತೆಗೆ ಪ್ರಚೋದಿಸುವ ಚಟುವಟಿಕೆಯಲ್ಲಿ ಯಾವುದೇ ಪಕ್ಷ ಅಥವಾ ಅಭ್ಯರ್ಥಿಗಳು ತೊಡಗಿಸಿಕೊಳ್ಳಬಾರದು ಎಂದು ಚುನಾವಣಾ ಆಯೋಗ ಹೇಳುತ್ತದೆ. ಮೋದಿಯ ಭಾಷಣಕ್ಕೆ ಸಂಬಂಧಿಸಿ ತನ್ನ ನೋಟಿಸ್‌ಗೆ ಏಪ್ರಿಲ್ 29ರೊಳಗೆ ಪ್ರತಿಕ್ರಿಯೆ ನೀಡುವಂತೆ ಚುನಾವಣಾ ಆಯೋಗವು ಬಿಜೆಪಿಗೆ ಸೂಚಿಸಿದೆ.

2019ರಿಂದ ಪ್ರತಿಪಕ್ಷಗಳು ಪ್ರಧಾನಿ ವಿರುದ್ಧ ದಾಖಲಿಸಿದ ಕನಿಷ್ಠ 27 ದೂರುಗಳು ಈ ಕೆಳಗಿನ ಆರೋಪಕ್ಕೆ ಸಂಬಂಧಿಸಿದೆ.

ಇವುಗಳಲ್ಲಿ 12 ದೂರುಗಳನ್ನು ಕೋಮು ಭಾಷಣದ ಆರೋಪಕ್ಕೆ ಸಂಬಂಧಿಸಿ ನೀಡಲಾಗಿದೆ.

ಮತ ಕೇಳಲು ಸಶಸ್ತ್ರ ಪಡೆಗಳನ್ನು ಬಳಸಿದ್ದಕ್ಕೆ 8 ದೂರುಗಳನ್ನು ಚುನಾವಣಾ ಆಯೋಗಕ್ಕೆ ನೀಡಲಾಗಿದೆ.

ರಾಜಕೀಯ ಜಾಹೀರಾತುಗಳಲ್ಲಿ ಸರ್ಕಾರದ ಯೋಜನೆಗಳನ್ನು ಬಳಸುವುದಕ್ಕಾಗಿ ದೂರನ್ನು ನೀಡಲಾಗಿದೆ.

ಧರ್ಮದ ಆಧಾರದ ಮೇಲೆ ಮತ ಕೇಳಿದ ಆರೋಪದಲ್ಲಿ ಒಂದು ಪ್ರಕರಣ ದಾಖಲಾಗಿದೆ

ಚುನಾವಣಾ ಭಾಷಣಗಳನ್ನು ಸಿದ್ಧಪಡಿಸಲು ಸರ್ಕಾರಿ ಸಚಿವಾಲಯಗಳನ್ನು ಬಳಕೆ ಆರೋಪದಲ್ಲಿ ದೂರನ್ನು ದಾಖಲಿಸಲಾಗಿದೆ.

ಪ್ರಚಾರದ ವೇಳೆ ಪ್ರಧಾನಿಯವರ ಹೆಲಿಕಾಪ್ಟರ್‌ನಲ್ಲಿ ಅನುಮಾನಾಸ್ಪದ ಕಪ್ಪು ಪೆಟ್ಟಿಗೆ ಇತ್ತೆಂದು ಎರಡು ದೂರುಗಳನ್ನು ಮೋದಿ ವಿರುದ್ಧ ಚುನಾವಣಾ ಆಯೋಗಕ್ಕೆ ನೀಡಲಾಗಿದೆ.

ಪ್ರಚಾರಗಳಲ್ಲಿ ಅಪ್ರಾಪ್ತರನ್ನು ಬಳಸುವುದಕ್ಕಾಗಿ ಒಂದು ದೂರು ದಾಖಲಾಗಿದೆ. ಆದರೆ ವಿರೋಧ ಪಕ್ಷಗಳ ಪ್ರಕಾರ, ಈ ಯಾವುದೇ ದೂರನ್ನು ಗಂಭೀರವಾಗಿ ಪರಿಗಣಿಸಿ ಪ್ರಧಾನಿ ವಿರುದ್ಧ ಚುನಾವಣಾ ಆಯೋಗ ಕ್ರಮವನ್ನು ಕೈಗೊಂಡಿಲ್ಲ. ಆದರೆ ಈ ಬಾರಿ ಮಾತ್ರ ರಾಜಸ್ಥಾನದಲ್ಲಿ ಮಾಡಿದ ಮೋದಿಯ ದ್ವೇಷ ಭಾಷಣಕ್ಕೆ ಸಂಬಂಧಿಸಿ ನೊಟೀಸ್‌ ನೀಡಿದೆ. ಅದು ಕೂಡ ಮೋದಿಗೆ ನೀಡದೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾಗೆ ನೊಟೀಸ್‌ ನೀಡಿದೆ. ಈ ಬಗ್ಗೆ ಪ್ರತಿಕ್ರಿಯಿಸಿದ್ದ ಕಾಂಗ್ರೆಸ್‌ ಚುನಾವಣಾ ಆಯೋಗ ಮೋದಿ ವಿಚಾರದಲ್ಲಿ ಜಾಗರೂಕರಾಗಿದೆ ಎಂದು ಟೀಕಿಸಿತ್ತು.

ಇದನ್ನು ಓದಿ: ತ್ರಿಪುರದಲ್ಲಿ ಬುಡಕಟ್ಟು ಜನರಿಂದ ಮತದಾನ ಬಹಿಷ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...