Homeಮುಖಪುಟಬೆಂಬಲಿಗರಿಗೆ ಆಸ್ಪತ್ರೆಯಿಂದಲೇ ವಿಡಿಯೊ ಸಂದೇಶ: ಮಮತಾ ಬ್ಯಾನರ್ಜಿ ಹೇಳಿದ್ದೇನು?

ಬೆಂಬಲಿಗರಿಗೆ ಆಸ್ಪತ್ರೆಯಿಂದಲೇ ವಿಡಿಯೊ ಸಂದೇಶ: ಮಮತಾ ಬ್ಯಾನರ್ಜಿ ಹೇಳಿದ್ದೇನು?

- Advertisement -
- Advertisement -

ನಂದಿಗ್ರಾಮದಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಮೇಲೆ ಬುಧವಾರ ಹಲ್ಲೆ ನಡೆದಿದ್ದು, ಇದನ್ನು ವಿರೋಧಿಸಿ ಪಶ್ಚಿಮ ಬಂಗಾಳದಲ್ಲಿ ಪ್ರತಿಭಟನೆಗಳು ನಡೆಯುತ್ತಿದೆ. ಈ ಹಿನ್ನಲೆಯಲ್ಲಿ ಅವರು ಗುರುವಾರ (ಇಂದು) ರಾಜ್ಯದ ಜನರಿಗೆ ಮತ್ತು ಪಕ್ಷದ ಕಾರ್ಯಕರ್ತರಿಗೆ ವಿಡಿಯೋ ಸಂದೇಶ ರವಾನಿಸಿದ್ದಾರೆ.

ಮುಂಬರುವ ವಿಧಾನಸಭಾ ಚುನಾವಣೆಗೆ ನಂದಿಗ್ರಾಮದಲ್ಲಿ ನಾಮಪತ್ರ ಸಲ್ಲಿಸಿದ ಕೆಲವೇ ಗಂಟೆಗಳ ಅಂತರದಲ್ಲಿ ಅವರ ಮೇಲೆ ದಾಳಿ ಸಂಭವಿಸಿದೆ ಎನ್ನಲಾಗಿದೆ. ಪ್ರಾಥಮಿಕ ವೈದ್ಯಕೀಯ ಪರೀಕ್ಷೆಗಳ ಪ್ರಕಾರ, ಅವರ ಎಡ ಪಾದದ ಮೂಳೆಗೆ ತೀವ್ರವಾದ ಗಾಯಗಳಾಗಿದ್ದು, ಬಲ ಭುಜ, ಮುಂದೋಳು ಮತ್ತು ಕುತ್ತಿಗೆಗೂ ಗಾಯಗಳಾಗಿದೆ ಎಂದು ಸರ್ಕಾರಿ ಎಸ್‌ಎಸ್‌ಕೆಎಂ ಆಸ್ಪತ್ರೆಯ ಹಿರಿಯ ವೈದ್ಯರು ತಿಳಿಸಿದ್ದಾರೆಂದು ಪಿಟಿಐ ವರದಿ ಮಾಡಿತ್ತು.

ಇದನ್ನೂ ಓದಿ: ಮಮತಾ ಬ್ಯಾನರ್ಜಿ ಮೇಲೆ ಹಲ್ಲೆ: ಚುನಾವಣಾ ಆಯೋಗಕ್ಕೆ ದೂರು ನೀಡಲು ಮುಂದಾದ ಬಿಜೆಪಿ

ಇದೀಗ ಆಸ್ಪತ್ರೆಯಿಂದಲೆ ಅವರ ವಿಡಿಯೋ ಸಂದೇಶವನ್ನು ಅವರ ಪಕ್ಷದ ಟ್ವಿಟರ್‌ ಖಾತೆ ಬಿಡುಗಡೆ ಮಾಡಿದೆ. ಅದರಲ್ಲಿ ಮಮತಾ, “ನಾನು ನಿನ್ನೆ ತೀವ್ರವಾಗಿ ಗಾಯಗೊಂಡಿದ್ದೇನೆ ಎಂಬುದು ನಿಜ. ನನ್ನ ಕೈ, ಕಾಲಿನಲ್ಲಿ ಇನ್ನೂ ನೋವು, ಗಾಯಗಳಿವೆ. ನಿನ್ನೆ, ನನ್ನ ತಲೆ ಮತ್ತು ಎದೆಯಲ್ಲಿ ನೋವು ಕಾಣಿಸಿಕೊಂಡಿತ್ತು. ಆ ಸಮಯದಲ್ಲಿ ನಾನು ಪ್ರಾರ್ಥನೆ ಸಲ್ಲಿಸುತ್ತಿದ್ದೆ. ನನ್ನನ್ನು ಜೋರಾಗಿ ತಳ್ಳಲಾಗಿತ್ತು ಮತ್ತು ಇದರಿಂದಾಗಿ ಕಾಲು ಕಾರಿನಲ್ಲಿ ಸಿಲುಕಿಕೊಂಡಿತ್ತು” ಎಂದು ಮಮತಾ ವೀಡಿಯೊದಲ್ಲಿ ಹೇಳಿದ್ದಾರೆ.

“ಪ್ರತಿಯೊಬ್ಬರೂ ಶಾಂತವಾಗಿರಲು ಮತ್ತು ಸಂಯಮದಿಂದ ವರ್ತಿಸುವಂತೆ ವಿನಂತಿಸುತ್ತಿದ್ದೇನೆ. ಇತರರಿಗೆ ತೊಂದರೆಯಾಗುವಂತೆ ಏನನ್ನೂ ಮಾಡಬೇಡಿ. ಇನ್ನೂ ಎರಡು ಮೂರು ದಿನಗಳಲ್ಲಿ ನನ್ನ ಕೆಲಸಕ್ಕೆ ಮರಳಬಹುದು ಎಂದು ಆಶಿಸುತ್ತೇನೆ. ಕೆಲಸ ಮಾಡಲು ಸ್ವಲ್ಪ ಸಮಸ್ಯೆ ಇದ್ದರೂ ಅದನ್ನು ನಾನು ನಿಭಾಯಿಸುತ್ತೇವೆ. ಯಾವುದೆ ಸಭೆಗಳನ್ನು ರದ್ದು ಮಾಡುವುದಿಲ್ಲ. ಆದರೆ ಬಹುಶಃ ನಾನು ಸ್ವಲ್ಪ ಸಮಯದವರೆಗೆ ಗಾಲಿಕುರ್ಚಿಯಲ್ಲಿ ಉಳಿಯಬೇಕಾಗುತ್ತದೆ. ದಯವಿಟ್ಟು ನನ್ನೊಂದಿಗೆ ಸಹಕರಿಸಿ” ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಇದನ್ನೂ ಓದಿ: ಖಾಲಿ ಗೋಡೌನ್‌ಗೆ ಸರ್ಕಾರದಿಂದ ಆರೂವರೆ ಕೋಟಿ ಬಾಡಿಗೆ ಪಡೆದ ಅದಾನಿ! 

ಮುಖ್ಯಮಂತ್ರಿಯ ಮೇಲಿನ ದಾಳಿಯನ್ನು ವಿರೋಧಿಸಿ ಪಕ್ಷದ ಕಾರ್ಯಕರ್ತರು ಸೀಲ್ಡಾ-ಹಸ್ನಾಬಾದ್ ಮಾರ್ಗದ ಕಡಂಬಗಚಿ ನಿಲ್ದಾಣದ ಬಳಿ ರೈಲುಗಳನ್ನು ತಡೆದು ಪ್ರತಿಭಟನೆ ನಡೆಸುತ್ತಿದ್ದಾರೆ.

ಮಮತಾ ಗುರುವಾರ ಆಸ್ಪತ್ರೆಯಲ್ಲಿದ್ದ ಕಾರಣ, ಪಕ್ಷವು ತನ್ನ ಪ್ರಣಾಳಿಕೆ ಬಿಡುಗಡೆಯನ್ನು ಮುಂದೂಡಿದೆ. ಅವರು ಕಾಲಿಘಾಟ್‌ನ ತಮ್ಮ ಮನೆಗೆ ಹಿಂತಿರುಗಿದ ನಂತರ, ಪ್ರಣಾಳಿಕೆಯನ್ನು ಬಿಡುಗಡೆ ಮಾಡಲಾಗುವುದು ಎಂದು ಪಕ್ಷವು ತಿಳಿಸಿದೆ.

ಘಟನೆ ಕುರಿತು ಚುನಾವಣಾ ಆಯೋಗ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ ಅಲ್ಲಾಪನ್ ಬಂಡ್ಯೋಪಾಧ್ಯಾಯ, ಅದರ ಸಾಮಾನ್ಯ ವೀಕ್ಷಕ ಅಜಯ್ ನಾಯಕ್ ಮತ್ತು ವಿಶೇಷ ಪೊಲೀಸ್ ವೀಕ್ಷಕ ವಿವೇಕ್ ದುಬೆ ಅವರಿಂದ ವರದಿ ಕೋರಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಏಪ್ರಿಲ್ 1 ರಂದು ನಂದಿಗ್ರಾಮದಲ್ಲಿ ಎರಡನೇ ಹಂತದ ಚುನಾವಣೆ ನಡೆಯಲಿದ್ದು, ಮಾರ್ಚ್ 27 ರಿಂದ ಪಶ್ಚಿಮ ಬಂಗಾಳದಲ್ಲಿ ಎಂಟು ಹಂತಗಳಲ್ಲಿ ಮತದಾನ ಪ್ರಾರಂಭವಾಗುತ್ತದೆ. ಮೇ 2 ರಂದು ಮತ ಎಣಿಕೆ ನಡೆಯಲಿದೆ.

ಇದನ್ನೂ ಓದಿ: UAPA ಪ್ರಕರಣಗಳಲ್ಲಿ ತೀವ್ರ ಹೆಚ್ಚಳ: ಐದು ವರ್ಷಗಳಲ್ಲಿ 5,128 ಪ್ರಕರಣ- 7,050 ಜನರ ಬಂಧನ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...