Homeಮುಖಪುಟಇಂದಿನ ಚುನಾವಣಾ ಭಾಷಣದಲ್ಲಿ ಮೋದಿ, ಶಾ ಮತ್ತು ಪ್ರಿಯಾಂಕಾ ಗಾಂಧಿ ಹೇಳಿದ್ದೇನು?

ಇಂದಿನ ಚುನಾವಣಾ ಭಾಷಣದಲ್ಲಿ ಮೋದಿ, ಶಾ ಮತ್ತು ಪ್ರಿಯಾಂಕಾ ಗಾಂಧಿ ಹೇಳಿದ್ದೇನು?

- Advertisement -
- Advertisement -

ಚುನಾವಣೆ ನಡೆಯಲಿರುವ ಐದೂ ರಾಜ್ಯಗಳಲ್ಲಿ ಇಂದು ಭಾನುವಾರ ಜೋರಾದ ಪ್ರಚಾರ ನಡೆದಿದೆ. ಅಮಿತ್ ಶಾ, ಮೋದಿ ಮತ್ತು ಪ್ರಿಯಾಂಕಾ ಗಾಂಧಿ ಭಾಷಣ ಮಾಡಿದ್ದಾರೆ. ಇಲ್ಲಿ ಯಾರು ಏನು ಹೇಳಿದರು ಎಂಬುದನ್ನು ನೋಡೋಣ.

ಸಿಎಎ, ಎನ್‌ಪಿಆರ್, ಎನ್‌ಸಿಆರ್‌ಗಳ ಬಗ್ಗೆ ಸದಾ ಗೊಂದಲದ ಹೇಳಿಕೆ ನೀಡುತ್ತಲೇ ಬಂದ ಗೃಹ ಸಚಿವ ಅಮಿತ್ ಶಾ ಪಶ್ಚಿಮ ಬಂಗಾಳದ ಎಗ್ರಾದಲ್ಲಿ ನಡೆದ ರ‍್ಯಾಲಿಯಲ್ಲಿ, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಐದು ವರ್ಷಗಳಲ್ಲಿ ತಮ್ಮ ಪಕ್ಷವು ಎಲ್ಲಾ “ಒಳನುಸುಳಿದವರನ್ನು” ಹೊರಹಾಕಲಿದೆ ಎಂದು ಪ್ರತಿಜ್ಞೆ ಮಾಡಿದ್ದಾರೆ!

ಅಮಿತ್ ಶಾ ಅವರು ಇಂದು ಕೋಲ್ಕತ್ತಾದಲ್ಲಿ ನಡೆಯುವ ರ‍್ಯಾಲಿಯಲ್ಲಿ ಪಕ್ಷದ ಪ್ರಣಾಳಿಕೆಯನ್ನು ಬಿಡುಗಡೆ ಮಾಡಲು ಸಜ್ಜಾಗಿದ್ದಾರೆ.

****

ಅಸ್ಸಾಂನ ಬೊಕಾಖಾಟ್‌ನಲ್ಲಿ ನಡೆದ ಬಿಜೆಪಿ ರ‍್ಯಾಲಿಯ ಸಂದರ್ಭದಲ್ಲಿ ಪ್ರತಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ ಪ್ರಧಾನಿ ಮೋದಿ, ಕೇಂದ್ರ ಮತ್ತು ಅಸ್ಸಾಂ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ನಿರ್ಲಕ್ಷ್ಯ ಮತ್ತು ಭ್ರಷ್ಟಾಚಾರವು ಡಬಲ್ ಆಗಿತ್ತು ಎಂದು ಹೇಳಿದರು. ಈಗ ಬಿಜೆಪಿ ಅಧಿಕಾರದಲ್ಲಿದೆ, ರಾಜ್ಯದಲ್ಲಿ ಬೆಳವಣಿಗೆ “ದ್ವಿಗುಣಗೊಂಡಿದೆ” ಎಂದು ಬೆನ್ನು ತಟ್ಟಿಕೊಂಡರು.

ಇಂದು ಪ್ರಧಾನಿ ಪಶ್ಚಿಮ ಬಂಗಾಳದ ಬಮಕುರಾದಲ್ಲಿ ಇನ್ನೊಂದು ರ‍್ಯಾಲಿ ಉದ್ದೇಶಿಸಿ ಮಾತನಾಡಲಿದ್ದಾರೆ.

***

ದಿಶಾ ರವಿ ಟ್ವೀಟ್ ಬಗ್ಗೆ ಪ್ರಧಾನಿ ದುಃಖಿತರಾಗಿದ್ದಾರೆ, ಆದರೆ ಅಸ್ಸಾಂನ ಪ್ರವಾಹ, ಸಿಎಎ ಬಗ್ಗೆ ಅಲ್ಲ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಟೀಕಿಸಿದ್ದಾರೆ.

ಅಸ್ಸಾಂನ ಜೋರ್ಹತ್‌ನಲ್ಲಿ ನಡೆದ ಚುನಾವಣಾ ರ‍್ಯಾಲಿಯಲ್ಲಿ ಮಾತನಾಡಿದ ಅವರು, “22 ವರ್ಷದ ಪರಿಸರ ಕಾರ್ಯಕರ್ತೆ ದಿಶಾ ರವಿ ಅವರ ಟ್ವೀಟ್ ಬಗ್ಗೆ ಪ್ರಧಾನಿ ಬೇಸರ ವ್ಯಕ್ತಪಡಿಸಿದ್ದಾರೆ, ಆದರೆ ಅಸ್ಸಾಂನಲ್ಲಿನ ಪ್ರವಾಹದ ಬಗ್ಗೆ ಅದೇ ಭಾವನೆಯನ್ನು ಹಂಚಿಕೊಂಡಿಲ್ಲ ಮತ್ತು ಸಿಎಎ ಪ್ರಭಾವ, ದುಷ್ಪರಿಣಾಮದ ಬಗ್ಗೆಯೂ ಮಾತನಾಡುತ್ತಿಲ್ಲ” ಎಂದಿದ್ದಾರೆ.

‘ಪ್ರಧಾನಿ ಎಂದಾದರೂ ಚಹಾ ತೋಟಕ್ಕೆ ಭೇಟಿ ನೀಡಿದ್ದರಾ’ ಎಂದು ಪ್ರಿಯಾಂಕಾ ಗಾಂಧಿ ಅಸ್ಸಾಂನಲ್ಲಿ ಕೇಳಿದ್ದಾರೆ. ಚಹಾ ತೋಟದ ಕಾರ್ಮಿಕರ ಸಂಕಷ್ಟ ಬಗೆಹರಿಸುವ ಯತ್ನವನ್ನು ಪ್ರಧಾನಿ ಮಾಡಲೇ ಎಂದು ಕೇಳಿದ್ದಾರೆ.


ಇದನ್ನೂ ಓದಿ: ಎಲ್ಲೆಲ್ಲೋ ಬಟ್ಟೆಬಿಚ್ಚಿ ಮರ್ಯಾದೆ ಕಳೆಯುತ್ತಿರುವ ಬಿಜೆಪಿ ನಾಯಕರಿಗಾಗಿ ಬಟ್ಟೆ ಖರೀದಿ- ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...