Homeಮುಖಪುಟ‘ಜಲಸಮಾಧಿ’ ಆಗುತ್ತೇನೆ ಎಂದಿದ್ದ ಪರಮಹಂಸ ಆಚಾರ್ಯ ಮಾಡಿದ್ದೇನು?

‘ಜಲಸಮಾಧಿ’ ಆಗುತ್ತೇನೆ ಎಂದಿದ್ದ ಪರಮಹಂಸ ಆಚಾರ್ಯ ಮಾಡಿದ್ದೇನು?

- Advertisement -
- Advertisement -

ಅಕ್ಟೋಬರ್ 2 ರೊಳಗೆ ಭಾರತವನ್ನು ‘ಹಿಂದೂ ರಾಷ್ಟ್ರ’ ಎಂದು ಘೋಷಿಸದಿದ್ದರೆ ಸರಯೂ ನದಿಯಲ್ಲಿ ‘ಜಲಸಮಾಧಿ’ ಆಗುವುದಾಗಿ ಬೆದರಿಕೆ ಒಡ್ಡಿದ್ದ, ಪರಮಹಂಸ ಆಚಾರ್ಯ ಅವರನ್ನು ಉತ್ತರ ಪ್ರದೇಶ ಸರ್ಕಾರ ಅವರನ್ನು ಗೃಹ ಬಂಧನದಲ್ಲಿ ಇಟ್ಟಿದೆ. ಆಡಳಿತವು ತನ್ನನ್ನು ಬಿಡುಗಡೆ ಮಾಡಿದರೆ ತಾನು ಜಲಸಮಾಧಿ ಆಗುವುದಾಗಿ ಮಾಧ್ಯಮಗಳಿಗೆ ಅವರು ಹೇಳಿದ್ದಾರೆ.

ಪರಮಹಂಸ ಅವರನ್ನು ಹಿಂದೂ ಮಹಾಸಭಾ ಕೂಡಾ ಬೆಂಬಲಿಸಿದ್ದು, ಅಕ್ಟೋಬರ್ 2 ರಂದು ಒಂದು ಲಕ್ಷ ಕಾರ್ಯಕರ್ತರು ಅಯೋಧ್ಯೆಯ ಸರಯೂ ನದಿಯಲ್ಲಿ ಜಲಸಮಾಧಿ ಆಗುತ್ತೇವೆ ಎಂದು ಹೇಳಿದ್ದರು. ಹೀಗಾಗಿ ಸ್ಥಳದಲ್ಲಿ ಭಾರೀ ಪೊಲೀಸ್ ಪಡೆಯನ್ನು ನಿಯೋಜಿಸಲಾಗಿದೆ.

ಇದನ್ನೂ ಓದಿ: ‘ಅಕ್ಟೋಬರ್‌ 2 ರೊಳಗೆ ದೇಶವನ್ನು ಹಿಂದೂ ರಾಷ್ಟ್ರ ಎಂದು ಘೋಷಿಸದಿದ್ದರೆ ಜಲಸಮಾಧಿ ಆಗುತ್ತೇನೆ’: ಪರಮಹಂಸ ಆಚಾರ್ಯ

ಬೆಳಿಗ್ಗೆಯಿಂದಲೇ ಆಶ್ರಮದಲ್ಲಿ ಹೋಮ-ಹವನಗಳನ್ನು ಮಾಡಿದ್ದ ಪರಮಹಂಸ ಅವರು, ಹನ್ನೆರೆಡು ಗಂಟೆಗೆ ಜಲಸಮಾಧಿ ಆಗುವುದಾಗಿ ಹೇಳಿದ್ದರು. ಅದರೊಳಗೆ ಒಕ್ಕೂಟ ಸರ್ಕಾರದ ಪ್ರತಿನಿಧಿ ತನ್ನ ಬೇಡಿಕೆಯ ಬಗ್ಗೆ ಆಸ್ವಾಸನೆ ನೀಡುತ್ತಾರೆ ಎಂದು ನನಗೆ ಭರವಸೆ ಇದೆ ಎಂದು ತಿಳಿಸಿದ್ದರು.

ಆದರೆ ಪೊಲೀಸರು ಅವರನ್ನು ಗೃಹ ಬಂಧನದಲ್ಲಿ ಇಟ್ಟಿದ್ದರು. ಈ ಬಗ್ಗೆ ಪ್ರತಿಕ್ರಿಸಿದ ಅವರು, “ನಾನು ಜಲಸಮಾಧಿ ಆಗುತ್ತೇನೆ ಎಂದು ಸರ್ಕಾರ ನನ್ನನ್ನು ಗೃಹ ಬಂಧನದಲ್ಲಿ ಇಟ್ಟಿದೆ. ಬಿಡುಗಡೆ ಮಾಡಿದರೆ ತಾನು ಜಲ ಸಮಾಧಿ ಆಗುತ್ತೇನೆ. ಆದರೂ ನಾನು ಸರಯೂ ನದಿಯಿಂದ ನೀರನ್ನು ತಂದಿದ್ದೇನೆ. ಹನ್ನೆರೆಡು ಗಂಟೆಗೆ ಇದರಲ್ಲಿ ಮೂಗು ಮುಳುಗಿಸಿ ಜಲಸಮಾಧಿ ಆಗುತ್ತೇನೆ. ಭಗವಂತನ ಇಚ್ಛೆ ಇದ್ದರೆ ಇದರಲ್ಲಿ ಸಫಲನಾಗುತ್ತೇನೆ” ಎಂದು ಸಣ್ಣ ನೀರಿನ ಕ್ಯಾನ್‌ ಅನ್ನು ಮಾಧ್ಯಮಗಳಿಗೆ ತೋರಿಸಿದ್ದಾರೆ!.

ಆದರೆ ಸರ್ಕಾರ ಅವರ ಗೃಹ ಬಂಧನವನ್ನು ಮುಂದುವರೆಸಿದೆ. ಬಗ್ಗೆ ಮತ್ತೆ ಮಾಧ್ಯಮಗಳಿಗೆ ಹೇಳಿಕೆ ನೀಡಿದ ಪರಮಹಂಸ ಅವರು, “ಸರ್ಕಾರ ನನ್ನನ್ನು 1 ವರ್ಷ ಗೃಹಬಂಧನದಲ್ಲಿರಿಸಿದರೂ, ನಾನು ಹೊರಬಂದ ತಕ್ಷಣ ಜಲಸಮಾಧಿ ಆಗುತ್ತೇನೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಮೋದಿ 2.1: ಹಿಂದೂ ರಾಷ್ಟ್ರೀಯವಾದದ ವಿಜೃಂಭಣೆಯೇ ಮೋದಿ ಸರ್ಕಾರದ ಸಾಧನೆ!

ಈ ನಡುವೆ ಪರಮಹಂಸ ಅವರನ್ನು ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್ ಮಾಡಲಾಗುತ್ತಿದೆ.

 

ಪರಮಹಂಸ ಅವರು, ಭಾರತದಲ್ಲಿ ವಾಸಿಸುತ್ತಿರುವ ಎಲ್ಲಾ ಮುಸ್ಲಿಂ ಮತ್ತು ಕ್ರಿಶ್ಚಿಯನ್ನರ ರಾಷ್ಟ್ರೀಯತೆಯನ್ನು ಅಧೀಕೃತವಾಗಿ ಕೊನೆಗೊಳಿಸಬೇಕು ಎಂದು ಕೂಡಾ ಒಕ್ಕೂಟ ಸರ್ಕಾರವನ್ನು ಒತ್ತಾಯಿಸಿದ್ದರು.

ಇದನ್ನೂ ಓದಿ: ‘ಹಿಂದೂ ರಾಷ್ಟ್ರದಲ್ಲಿ ದಲಿತ-ಶೂದ್ರರಿಗೆ ಮತದಾನದ ಹಕ್ಕಿರುತ್ತದೆಯೇ?’

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...