Homeಕರ್ನಾಟಕಬಿಎಸ್​​ವೈರಿಂದ ಅಧಿಕಾರ ಪಡೆದ ಅತಿರಥ ಮಹಾರಥರು ಮಾಡಿದ್ದೇನು?: ಬೊಮ್ಮಾಯಿ ವಿರುದ್ಧ ಪ್ರತಾಪ್ ಸಿಂಹ ವಾಗ್ದಾಳಿ

ಬಿಎಸ್​​ವೈರಿಂದ ಅಧಿಕಾರ ಪಡೆದ ಅತಿರಥ ಮಹಾರಥರು ಮಾಡಿದ್ದೇನು?: ಬೊಮ್ಮಾಯಿ ವಿರುದ್ಧ ಪ್ರತಾಪ್ ಸಿಂಹ ವಾಗ್ದಾಳಿ

- Advertisement -
- Advertisement -

ಬಿ.ಎಸ್. ಯಡಿಯೂರಪ್ಪ ಬಳಿಕ ಅಧಿಕಾರಕ್ಕೆ ಬಂದವರು ಮಾಡಿದ್ದೇನು? ಬಿಎಸ್​​ವೈರಿಂದ ಅಧಿಕಾರ ಪಡೆದ ಅತಿರಥ ಮಹಾರಥರು ಮಾಡಿದ್ದೇನು? ಕಾರ್ಯಕರ್ತರ ಇಚ್ಛೆಗೆ ತಕ್ಕಂತೆ ನಡೆದು ಕೊಂಡರಾ? ಎಂದು ಸ್ವಪಕ್ಷ ನಾಯಕರಾದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ವಿರುದ್ಧ ಮೈಸೂರು ಸಂಸದ ಪ್ರತಾಪ್ ಸಿಂಹ ವಾಗ್ದಾಳಿ ನಡೆಸಿದ್ದಾರೆ.

ಮಂಗಳವಾರ ಪ್ರತಾಪ್ ಸಿಂಹ್ ಅವರು, ಬಿಜೆಪಿಯ ಕೆಲವು ನಾಯಕರು ಕಾಂಗ್ರೆಸ್ ನಾಯಕರ ಜೊತೆ ಹೊಂದಾಣಿಕೆ ರಾಜಕಾರಣ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದರು.

‘ಹೊಂದಾಣಿಕೆ ರಾಜಕಾರಣ ಮಾಡುವ ಅವಶ್ಯಕತೆ ಇಲ್ಲ’ ಎಂದು ಹಿಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿಕೆಗೆ ಸಂಸದ ಪ್ರತಾಪ್ ಸಿಂಹ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದಾರೆ.

”ಬಿ.ಎಸ್.ಯಡಿಯೂರಪ್ಪ ತುಂಬಾ ಪ್ರಯತ್ನ ಮಾಡಿ ಸರ್ಕಾರ ತಂದರು. ಬಿ.ಎಸ್​​.ಯಡಿಯೂರಪ್ಪ ಸಿಎಂ ಆದ ಕೂಡಲೇ ಪ್ರವಾಹ ಬಂದಿತ್ತು. ಬಿ.ಎಸ್.ಯಡಿಯೂರಪ್ಪ ಒಬ್ಬರೇ ಪ್ರವಾಹ ಪರಿಸ್ಥಿತಿ ನಿಭಾಯಿಸಿದರು. ಕೊವಿಡ್​ ವೇಳೆ ಜನರ ಪ್ರಾಣ ಉಳಿಸಲು BSY ಸರ್ಕಾರ ಪ್ರಯತ್ನಿಸಿತು. ಕಷ್ಟದ ಸಂದರ್ಭದಲ್ಲಿ ಯಡಿಯೂರಪ್ಪ ರಾಜ್ಯವನ್ನು ಕಾಪಾಡಿದರು. ಬಿ.ಎಸ್. ಯಡಿಯೂರಪ್ಪ ಬಳಿಕ ಅಧಿಕಾರಕ್ಕೆ ಬಂದವರು ಮಾಡಿದ್ದೇನು? ಬಿಎಸ್​​ವೈರಿಂದ ಅಧಿಕಾರ ಪಡೆದ ಅತಿರಥ ಮಹಾರಥರು ಮಾಡಿದ್ದೇನು? ಕಾರ್ಯಕರ್ತರ ಇಚ್ಛೆಗೆ ತಕ್ಕಂತೆ ನಡೆದು ಕೊಂಡರಾ? ಪ್ರವೀಣ್ ನೆಟ್ಟಾರು, ಹರ್ಷ ಕೊಲೆಯಾದಾಗ ಸೂಕ್ತ ಕ್ರಮ ಕೈಗೊಳ್ಳಲಿಲ್ಲ. ಮತ್ತೆ ಅಧಿಕಾರಕ್ಕೆ ತರಬೇಕೆಂಬ ಉತ್ಸಾಹ ಅವರಲ್ಲಿ ಯಾಕೆ ಕಾಣಲಿಲ್ಲ? ಜನರ ಆಕ್ರೋಶ, ಕಾರ್ಯಕರ್ತರ ನೋವಿಗೆ ನಾನು ಧ್ವನಿಯಾಗಿದ್ದೇನೆ” ಎಂದು ಮಾಜಿ ಸಿಎಂ ಬೊಮ್ಮಾಯಿ ವಿರುದ್ಧ ಪ್ರತಾಪ್ ​​ಸಿಂಹ ವಾಗ್ದಾಳಿ ನಡೆಸಿದರು.

ಇದನ್ನೂ ಓದಿ: ‘ಇಷ್ಟೊಂದು ಸುಳ್ಳು ಹೇಳುವುದನ್ನು ಮೋದಿಯವರಿಂದ ಕಲಿತಿರಾ?’: ಬೊಮ್ಮಾಯಿಗೆ ಕಾಂಗ್ರೆಸ್ ಪ್ರಶ್ನೆ

ಬಿಜೆಪಿ ಸರ್ಕಾರದ ವಿರುದ್ಧ ಮಾಡಿದ ಆರೋಪಗಳ ಬಗ್ಗೆ ತನಿಖೆಯಾಗಲಿ

ಮುಂದುವರೆದು, ”ಕಾಂಗ್ರೆಸ್ ಪ್ರತಿಪಕ್ಷದಲ್ಲಿದ್ದಾಗ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಪಿಎಸ್‌ಐ) ನೇಮಕಾತಿ ಹಗರಣ, 40 ಪರ್ಸೆಂಟ್‌ ಕಮಿಷನ್ ಮತ್ತು ಬಿಟ್‌ಕಾಯಿನ್ ಹಗರಣದಂತಹ ವಿಷಯಗಳಲ್ಲಿ ಆಗಿನ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿತ್ತು. ಆದರೆ, ನಮ್ಮ ನಾಯಕರು ಅರ್ಕಾವತಿ ಬಡಾವಣೆಯಲ್ಲಿನ ಭೂ ಡಿನೋಟಿಫಿಕೇಷನ್ ಹಗರಣದ ಬಗ್ಗೆ ತನಿಖೆ ಮಾಡಲು ಮುಂದಾಗಲೇ ಇಲ್ಲ” ಎಂದು ಪ್ರತಾಪ್‌ ಸಿಂಹ ಹೇಳಿದ್ದಾರೆ.

”ಅರ್ಕಾವತಿ ಬಡಾವಣೆಯಲ್ಲಿನ ಜಮೀನು ಡಿನೋಟಿಫಿಕೇಷನ್ ಆರೋಪ ಆಗಿ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಕೇಳಿಬಂದಿತ್ತು. ಕೆಂಪಣ್ಣ ಆಯೋಗದ ವರದಿಯನ್ನು ಬಹಿರಂಗ ಪಡಿಸುವುದಾಗಿ ಆಡಳಿತಾರೂಢ ಬಿಜೆಪಿ ನಾಯಕರು ಬೆದರಿಕೆ ಹಾಕಿದ್ದರೂ ಅದನ್ನು ವಿಧಾನಸಭೆಯಲ್ಲಿ ಮಂಡಿಸಲೇ ಇಲ್ಲ ಎಂದು ಪ್ರತಾಪ್‌ ಸಿಂಹ ಆಕ್ರೋಶ ವ್ಯಕ್ತಪಡಿಸಿದರು. ಈಗ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಒಂದು ತಿಂಗಳು ಕಳೆದಿದೆ. ನೀವು ( ಕಾಂಗ್ರೆಸ್‌ ನಾಯಕರು ) ಬಿಜೆಪಿ ನಾಯಕರೊಂದಿಗೆ ಹೊಂದಾಣಿಕೆ ರಾಜಕಾರಣ ಮಾಡದಿದ್ದರೆ, ಬಿಜೆಪಿ ಸರ್ಕಾರದ ವಿರುದ್ಧ ನೀವು ಮಾಡಿರುವ ಆರೋಪಗಳ ಬಗ್ಗೆ ತನಿಖೆಗೆ ಆದೇಶಿಸಿ” ಎಂದೂ ಪ್ರತಾಪ್‌ ಸಿಂಹ ಹೇಳಿದ್ದಾರೆ.

”ಬಿಲ್‌ಗಳನ್ನು ತೆರವುಗೊಳಿಸಲು ಶೇ. 40 ಕಮಿಷನ್ ಕೇಳಿದ ಆರೋಪದ ಬಗ್ಗೆ ತನಿಖೆಗೆ ಆದೇಶಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಲ್ಲಿ ಮನವಿ ಮಾಡಿದ್ದಾರೆ. ಅದೇ ರೀತಿ ಪಿಎಸ್‌ಐ ನೇಮಕಾತಿ ಮತ್ತು ಬಿಟ್‌ಕಾಯಿನ್ ಹಗರಣಗಳ ಬಗ್ಗೆಯೂ ತನಿಖೆಯಾಗಲಿ” ಎಂದು ಅವರು ತಿಳಿಸಿದ್ದಾರೆ.

ಬೊಮ್ಮಾಯಿ ತಿರುಗೇಟು

ಸಂಸದ ಪ್ರತಾಪ್ ಸಿಂಹ ಮಾಡಿರುವ ಆರೋಪದ ವಿರುದ್ಧ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಗರಂ ಆಗಿದ್ದಾರೆ. ‘ನನ್ನ ಬದುಕಿನಲ್ಲಿ ಹೊಂದಾಣಿಕೆ ರಾಜಕಾರಣ ಮಾಡಿಲ್ಲ, ಮುಂದೆ ಮಾಡುವುದೂ ಇಲ್ಲ. ನನಗೆ ಹೊಂದಾಣಿಕೆ ರಾಜಕಾರಣದ ಅವಶ್ಯಕತೆಯೂ‌ ಇಲ್ಲ’ ಎಂದು ಸ್ಪಷ್ಟೀಕರಣ ನೀಡಿದರು.

”ಬೇರೆ ಪಕ್ಷಗಳ ನಾಯಕರನ್ನು ರಾಜಕೀಯದಲ್ಲಿ ಭೇಟಿ ಮಾಡುವುದು ಸರ್ವೇ ಸಾಮಾನ್ಯ. ಎಲ್ಲ ಪಕ್ಷಗಳಲ್ಲೂ, ಎಲ್ಲರಿಗೂ ಸ್ನೇಹಿತರಿದ್ದಾರೆ. ಪ್ರತಾಪ್ ಸಿಂಹ ಅವರು ದಾಖಲೆಗಳನ್ನು ನೋಡಿ ಮಾತಾಡಬೇಕು. ಸಿದ್ದರಾಮಯ್ಯ ವಿರುದ್ಧ ಐದು ಪ್ರಕರಣಗಳನ್ನು ಫೈಲ್​ ಮಾಡಿ ದೂರು ದಾಖಲಿಸಿದ್ದೇವೆ. ಈ ಐದೂ ಪ್ರಕರಣಗಳಲ್ಲೂ ಅವರೇ ಆರೋಪಿ. ಅಲ್ಲದೆ 60 ಪ್ರಕರಣಗಳನ್ನು ಎಸಿಬಿಯಿಂದ ಲೋಕಾಯುಕ್ತಕ್ಕೆ ವರ್ಗಾಯಿಸಿದ್ದೆವು ಎಂದು ಪ್ರತಾಪ್ ಸಿಂಹ ಆರೋಪಕ್ಕೆ ಬೊಮ್ಮಾಯಿ ತಿರುಗೇಟು ನೀಡಿದರು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...