ಅಯೋಧ್ಯೆ ತೀರ್ಪಿನ ಕುರಿತು ರಾಜ್ಯ ನಾಯಕರು.. ಯಾರ್ಯಾರು ಏನ್ ಹೇಳಿದ್ರು ಅನ್ನೋದು ಇಲ್ಲಿದೆ ನೋಡಿ..
— B.S. Yediyurappa (@BSYBJP) November 9, 2019
ಮಾಜಿ ಸಿಎಂ, ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿ, ರಾಮ ಜನ್ಮಭೂಮಿ-ಬಾಬರಿ ಮಸೀದಿ ಭೂವ್ಯಾಜ್ಯದ ಸುಪ್ರೀಂಕೋರ್ಟ್ ತೀರ್ಪನ್ನು ಗೌರವಿಸೋಣ. ಪ್ರಜಾಪ್ರಭುತ್ವದ ಧರ್ಮವಾದ ಸಂವಿಧಾನದ ಮೇಲೆ ಭರವಸೆ ಇಡೋಣ. ಶಾಂತಿ ಮತ್ತು ಸೌಹಾರ್ದತೆಯನ್ನು ಕಾಪಾಡೋಣ ಎಂದು ಕರೆ ನೀಡಿದ್ದಾರೆ.
ರಾಮಜನ್ಮಭೂಮಿ-ಬಾಬರಿ ಮಸೀದಿ ಭೂವ್ಯಾಜ್ಯದ ಸುಪ್ರೀಮ್ ಕೋರ್ಟ್ ತೀರ್ಪನ್ನು ಗೌರವಿಸೋಣ. ಪ್ರಜಾಪ್ರಭುತ್ವದ ಧರ್ಮವಾದ ಸಂವಿಧಾನದ ಮೇಲೆ ಭರವಸೆ ಇಡೋಣ.
ಶಾಂತಿ ಮತ್ತು ಸೌಹಾರ್ದತೆಯನ್ನು ಕಾಪಾಡೋಣ.#Ayodhya #BabriMasjid— Siddaramaiah (@siddaramaiah) November 9, 2019
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮಾಡಿ ಐತಿಹಾಸಿಕ ತೀರ್ಪನ್ನು ಸ್ವಾಗತಿಸಿದ್ದಾರೆ. ಇದು ಯಾರೊಬ್ಬರ ಗೆಲುವು ಅಥವಾ ಸೋಲು ಎಂದು ಭಾವಿಸಬೇಡಿ, ಉದ್ವೇಗಕ್ಕೆ ಒಳಗಾಗಬೇಡಿ, ವಿಜೃಂಭಿಸಬೇಡಿ. ಎಲ್ಲರೂ ಸಮಾಜದ ಸಾಮರಸ್ಯ ಕದಡದೆ ಶಾಂತಿ ಕಾಪಾಡೋಣ ಎಂದು ಹೇಳಿದ್ದಾರೆ.
ಅಯೋದ್ಯೆ ಜಮೀನು ವಿವಾದ ಸಂಬಂಧ ಸುಪ್ರೀಂಕೋರ್ಟ್ ನೀಡಿರುವ ತೀರ್ಪನ್ನು ಕಾಂಗ್ರೆಸ್ ಸ್ವಾಗತಿಸುತ್ತದೆ.
ಭಾರತದ ಸರ್ವಧರ್ಮ ಸಮ್ಮಾನದೊಂದಿಗೆ ಶಾಂತಿ ಸುವಸ್ಥೆ ಕಾಪಾಡುವಂತೆ ಎಲ್ಲಾ ಸಮುದಾಯಗಳಲ್ಲಿ ಮನವಿ ಮಾಡುತ್ತೇವೆ.
ದೇಶದಲ್ಲಿಯ ಜಾತ್ಯಾತೀತತೆ, ಏಕತೆ, ಸೌಹಾರ್ಧತೆಯನ್ನು ಕಾಪಾಡಿಕೊಳ್ಳುವುದು ಪ್ರತಿ ಭಾರತೀಯರ ಜವಾಬ್ದಾರಿ ಆಗಿದೆ.
— Karnataka Congress (@INCKarnataka) November 9, 2019
ಕರ್ನಾಟಕ ಕಾಂಗ್ರೆಸ್ ಟ್ವೀಟ್ ಮಾಡಿ, ಸುಪ್ರೀಂಕೋರ್ಟ್ ತೀರ್ಪನ್ನು ಕಾಂಗ್ರೆಸ್ ಸ್ವಾಗತಿಸುತ್ತದೆ. ದೇಶದ ಜಾತ್ಯತೀತತೆ, ಏಕತೆ, ಸೌಹಾರ್ದತೆ ಕಾಪಾಡಿಕೊಳ್ಳುವುದು ಭಾರತೀಯರ ಜವಾಬ್ದಾರಿ ಎಂದು ಹೇಳಿದೆ.
The judgement is delivered by Honourable SC, taking the views of every religion and citizen of the country, this judgement is not a defeat to anyone. we all should respect and accept.#AyodhyaJudgment
— Sadananda Gowda (@DVSadanandGowda) November 9, 2019
ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಮಾತನಾಡಿ, ಹಲವು ವರ್ಷಗಳಿಂದ ದೇಶದ ಜನ ಜಾತಿ, ಮತ, ಭೇದ ತೊರೆದು ಐತಿಹಾಸಿಕ ತೀರ್ಪಿಗಾಗಿ ಕಾಯುತ್ತಿದ್ದರು. ಸುಪ್ರೀಂಕೋರ್ಟ್ ನೀಡಿರುವ ಮಹತ್ವದ ತೀರ್ಪು ಸಂತಸ ತಂದಿದೆ. ನೂರಾರು ವರ್ಷಗಳ ಸಂಘರ್ಷಕ್ಕೆ ತೆರೆ ಬಿದ್ದಿದೆ ಎಂದು ಹೇಳಿದರು.
ರಾಮ ಜನ್ಮ ಭೂ ವಿವಾದದ ತೀರ್ಪನ್ನು ಎಲ್ಲರೂ ಗೌರವಿಸೋಣ. ಶಾಂತಿ ಮತ್ತು ಅಹಿಂಸೆಯನ್ನು ಪ್ರತಿಪಾದಿಸಿದ ಈ ದೇಶದ ಸಿದ್ಧಾಂತವನ್ನು ಪಾಲಿಸೋಣ. ನಾವೆಲ್ಲರೂ ಎಂದಿನಂತೆ ಸಾಮರಸ್ಯದಿಂದ ಬದುಕುತ್ತಾ ಅಭಿವೃದ್ಧಿಯ ಕಡೆ ಚಿಂತಿಸೋಣ. ಅಂದಹಾಗೆ "ಅನ್ನ ದೇವರ ಮುಂದೆ ಇನ್ಯಾವ ದೇವರಿಲ್ಲ…" ರಾಮಮಂದಿರದ ಜೊತೆಗೆ ಅನ್ನದಾತನ ಬದುಕು ಕಟ್ಟಲು ಶ್ರಮಿಸೋಣ.
— H D Kumaraswamy (@hd_kumaraswamy) November 9, 2019
ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಟ್ವೀಟ್ ಮಾಡಿ, ರಾಮಜನ್ಮ ಭೂ ವಿವಾದದ ತೀರ್ಪನ್ನು ಎಲ್ಲರೂ ಗೌರವಿಸೋಣ. ಶಾಂತಿ ಮತ್ತು ಅಹಿಂಸೆ ಪ್ರತಿಪಾದಿಸಿದ ದೇಶದ ಸಿದ್ಧಾಂತವನ್ನು ಪಾಲಿಸೋಣ. ನಾವೆಲ್ಲರೂ ಎಂದಿನಂತೆ ಸಾಮರಸ್ಯದಿಂದ ಬದುಕುತ್ತಾ ಅಭಿವೃದ್ಧಿಯ ಕಡೆ ಚಿಂತಿಸೋಣ. ಅನ್ನದಾತನ ಬದುಕು ಕಟ್ಟಲು ಶ್ರಮಿಸೋಣ ಎಂದು ಹೇಳಿದ್ದಾರೆ.
?
ಸೌಹಾರ್ದತೆ ಕಾಪಾಡೋಣ.
— S.Suresh Kumar, Minister – Govt of Karnataka (@nimmasuresh) November 9, 2019
ರಾಜ್ಯ ಪ್ರಾಥಮಿಕ ಮತ್ತು ಪ್ರೌಢಶಾಲಾ ಸಚಿವ ಸುರೇಶ್ ಕುಮಾರ್ ಟ್ವೀಟ್ ಮಾಡಿ, ಎಲ್ಲರೂ ಸೌಹಾರ್ದತೆ ಕಾಪಾಡೋಣ ಎಂದು ಕರೆ ನೀಡಿದ್ದಾರೆ.
Justice has been served, One of the most conflicting scenarios of country marks end today.
Wholeheartedly welcome SC's decision of giving disputed land to Hindus to build the #RamMandir & allotment of 5 acres of land to build Masjid.
INDIA HAS WON!#AyodhyaVerdict#JaiShriRam
— Shobha Karandlaje (@ShobhaBJP) November 9, 2019
ಸಂಸದೆ ಶೋಭಾ ಕರಂದ್ಲಾಜೆ ಮಾತನಾಡಿ, ಶ್ರೀರಾಮ ಹುಟ್ಟಿದ ಅಯೋಧ್ಯೆಯಲ್ಲಿ ಮಂದಿರ ನಿರ್ಮಾಣವಾಗಬೇಕೆಂಬ ಹೋರಾಟವಿತ್ತು. ಜನ ಜಾತಕ ಪಕ್ಷಿಯಂತೆ ಕಾಯುತ್ತಿದ್ದರು. ಇದೊಂದು ಐತಿಹಾಸಿಕ ತೀರ್ಪು ಎಂದರು.
ಸ್ವಾಗತಾರ್ಹ ?
ಐತಿಹಾಸಿಕ ದಿನ 9/11/19#RamMandir #JaiShriRam
— Jagadish Shettar (@JagadishShettar) November 9, 2019
ಬೃಹತ್ ಕೈಗಾರಿಕೆ ಸಚಿವ ಜಗದೀಶ್ ಶೆಟ್ಟರ್, ಅಯೋಧ್ಯೆ ವಿವಾದಕ್ಕೆ ಸಂಬಂಧಿಸಿದ ಸುಪ್ರೀಂಕೋರ್ಟ್ ತೀರ್ಪು ಸ್ವಾಗತಾರ್ಹ. ಇಂದು ಐತಿಹಾಸಿಕ ದಿನ ಎಂದು ಟ್ವೀಟ್ ಮಾಡಿದ್ದಾರೆ.


