Homeಕರ್ನಾಟಕ‘ಥರ್ಡ್‌ ಕ್ಲಾಸ್‌ ವಂಚಕನಿಂದ ಇನ್ನೇನು ನಿರೀಕ್ಷಿಸಲು ಸಾಧ್ಯ’: ಅಸ್ಸಾಂ ಸಿಎಂಗೆ ಪ್ರಿಯಾಂಕ್ ಖರ್ಗೆ ತಿರುಗೇಟು

‘ಥರ್ಡ್‌ ಕ್ಲಾಸ್‌ ವಂಚಕನಿಂದ ಇನ್ನೇನು ನಿರೀಕ್ಷಿಸಲು ಸಾಧ್ಯ’: ಅಸ್ಸಾಂ ಸಿಎಂಗೆ ಪ್ರಿಯಾಂಕ್ ಖರ್ಗೆ ತಿರುಗೇಟು

- Advertisement -
- Advertisement -

ಬೆಂಗಳೂರು: ಕರ್ನಾಟಕ ಐಟಿ/ಬಿಟಿ ಸಚಿವ ಪ್ರಿಯಾಂಕ ಖರ್ಗೆ ಅವರನ್ನು ‘ಫಸ್ಟ್ ಕ್ಲಾಸ್ ಈಡಿಯಟ್’  ಎಂದಿದ್ದ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರಿಗೆ ತಿರುಗೇಟು ನೀಡಿರುವ ಪ್ರಿಯಾಂಕ್ ಖರ್ಗೆ ‘ಥರ್ಡ್ ಕ್ಲಾಸ್ ವಂಚಕನಿಂದ ನಾವು ಇನ್ನೇನು ನಿರೀಕ್ಷಿಸಲು ಸಾಧ್ಯ’ ಎಂದು ತಿರುಗೇಟು ನೀಡಿದ್ದಾರೆ. 

ಅಸ್ಸಾಂನಲ್ಲಿ ಸೆಮಿಕಂಡಕ್ಟರ್‌ ಘಟಕ ಸ್ಥಾಪನೆಗೆ ಅನುಮತಿ ದೊರೆತ ವಿಚಾರವಾಗಿ ಇಬ್ಬರು ನಾಯಕರ ನಡುವೆ ವಾಗ್ವಾದ ನಡೆಯುತ್ತಿದ್ದು, ಅದು ವೈಯಕ್ತಿಕ ನಿಂದನೆಯ ಮಟ್ಟಕ್ಕೆ ಇಳಿದಿದೆ. ದೊಡ್ಡ ಕೈಗಾರಿಕೆಗಳನ್ನು ಸ್ಥಾಪಿಸಲು ಈಶಾನ್ಯ ರಾಜ್ಯಗಳಲ್ಲಿ ಪ್ರತಿಭೆ ಕೊರೆತೆಯಿದೆ ಎಂಬ ಪ್ರಿಯಾಂಕ್‌ ಖರ್ಗೆ ಹೇಳಿಕೆಗೆ ಪ್ರತಿಕ್ರಿಯಿಸಿದ್ದ ಬಿಸ್ವಾ, ಪ್ರಿಯಾಂಕ್ ಅವರನ್ನು ಒಬ್ಬ ‘ಫಸ್ಟ್ ಕ್ಲಾಸ್ ಈಡಿಯಟ್’ ಎಂದು ಕರೆದಿದ್ದರು.

ಈ ಹೇಳಿಕೆ ಕುರಿತು ವರದಿಗಾರರೊಂದಿಗೆ ಮಾತನಾಡಿದ ಪ್ರಿಯಾಂಕ ಖರ್ಗೆ “ಇದು ಅವರ ವರ್ಗ ಸವಲತ್ತು ಮತ್ತು ಕುರ್ಚಿಯ ಕಾರಣದಿಂದಾಗಿ ಅವರಿಗೆ ಸಿಕ್ಕಿರುವ ಸವಲತ್ತನ್ನು ತೋರಿಸುತ್ತದೆ. ಇಲ್ಲದಿದ್ದರೆ, ಅದರಲ್ಲಿ ಏನೂ ಇಲ್ಲ. ಸ್ಪಷ್ಟವಾಗಿ, ಅವರು ನನ್ನ ಹೇಳಿಕೆಗಳನ್ನು ತಪ್ಪಾಗಿ ಅರ್ಥೈಸಿಕೊಳ್ಳುತ್ತಿದ್ದಾರೆ, ಅದನ್ನು ರಾಜಕೀಯಗೊಳಿಸುತ್ತಿದ್ದಾರೆ. ಆದರೆ ಅಸ್ಸಾಂನಿಂದ ಅನೇಕ ಜನರು ತರಬೇತಿಗಾಗಿ ಬೆಂಗಳೂರಿಗೆ ಬರುತ್ತಿದ್ದಾರೆ ಎಂದು ಅವರೇ ಟ್ವೀಟ್ ಮಾಡಿದ್ದರು ಎಂಬುದು ಸತ್ಯ. ನಾವು ಅವರನ್ನು ಸ್ವಾಗತಿಸುತ್ತೇವೆ. ಯಾರೂ ಇಲ್ಲ ಎಂದು ಹೇಳುತ್ತಿಲ್ಲ. ಶರ್ಮಾ ಅವರ ಭಾಷೆ ಅವರ ಹತಾಶೆಯನ್ನು ತೋರಿಸುತ್ತದೆ. ಮೂರನೇ ದರ್ಜೆಯ ವಂಚಕನಿಂದ ನಾವು ಇನ್ನೇನು ನಿರೀಕ್ಷಿಸಬಹುದು?” ಎಂದು ಪ್ರಶ್ನಿಸಿದ್ದಾರೆ. 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಎಂಯು ಕ್ಯಾಂಪಸ್‌ನಲ್ಲಿ ಗುಂಡಿನದಾಳಿ; ಅಪಹರಣ ಪ್ರಯತ್ನದ ಆರೋಪ

ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯದ (ಎಎಂಯು) ವಿದ್ಯಾರ್ಥಿ ಕಾರ್ಯಕರ್ತನೊಬ್ಬನ ಮೇಲೆ ನವೆಂಬರ್ 5, 2025 ರ ಸಂಜೆ ಗ್ರಂಥಾಲಯದ ಪಾರ್ಕಿಂಗ್ ಪ್ರದೇಶದಲ್ಲಿ ನಾಲ್ವರು ಅಪರಿಚಿತ ವ್ಯಕ್ತಿಗಳು ಸೇರಿದಂತೆ ಏಳು ಜನರ ಗುಂಪು ದಾಳಿ ನಡೆಸಿದೆ...

ಹೆದ್ದಾರಿ, ಶಾಲೆ, ಆಸ್ಪತ್ರೆ, ರೈಲು ನಿಲ್ದಾಣಗಳಿಂದ ಬೀದಿ ನಾಯಿಗಳನ್ನು ತೆರವುಗೊಳಿಸುವಂತೆ ಸುಪ್ರೀಂ ಕೋರ್ಟ್ ಆದೇಶ

ನಾಯಿ ಕಡಿತದ ಘಟನೆಗಳಲ್ಲಿ ಆತಂಕಕಾರಿ ಏರಿಕೆಯನ್ನು ಉಲ್ಲೇಖಿಸಿ ಪ್ರಮುಖ ನಿರ್ದೇಶನ ನೀಡಿರುವ ಸುಪ್ರೀಂ ಕೋರ್ಟ್, ಎಲ್ಲ ಶಿಕ್ಷಣ ಸಂಸ್ಥೆಗಳು, ಆಸ್ಪತ್ರೆಗಳು, ಸಾರ್ವಜನಿಕ ಕ್ರೀಡಾ ಸಂಕೀರ್ಣಗಳು, ಬಸ್ ನಿಲ್ದಾಣಗಳು, ಡಿಪೋಗಳು ಮತ್ತು ರೈಲು ನಿಲ್ದಾಣಗಳಿಗೆ...

ಉತ್ತರ ಪ್ರದೇಶ| ಆರ್‌ಪಿಎಫ್ ಕಸ್ಟಡಿಯಲ್ಲಿ ದಲಿತ ವ್ಯಕ್ತಿ ಸಾವು; ಚಿತ್ರಹಿಂಸೆ ಆರೋಪ ಮಾಡಿದ ಮೃತನ ಕುಟುಂಬ

ಉತ್ತರ ಪ್ರದೇಶದ ಗೊಂಡಾ ಜಿಲ್ಲೆಯಲ್ಲಿ ರೈಲ್ವೆ ರಕ್ಷಣಾ ಪಡೆ ಕಸ್ಟಡಿಯಲ್ಲಿ ದಲಿತ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಅವರ ಮೇಲೆ ಕಬ್ಬಿಣದ ರಾಡ್ ಮತ್ತು ಚಾಕುಗಳಿಂದ ಹಲ್ಲೆ ನಡೆಸಿರುವ ಆಳವಾದ ಗಾಯದ ಗುರುತುಗಳು ಇವೆ ಎಂದು...

ಜೆಎನ್‌ಯು ವಿದ್ಯಾರ್ಥಿ ಸಂಘದ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ ಎಡಪಂಥೀಯ ಒಕ್ಕೂಟ

ನವದೆಹಲಿ: ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ (ಜೆಎನ್‌ಯು) ವಿದ್ಯಾರ್ಥಿಗಳ ಒಕ್ಕೂಟದ ಚುನಾವಣೆಯ ಫಲಿತಾಂಶ ಗುರುವಾರ ಪ್ರಕಟಗೊಂಡಿದ್ದು, ನಾಲ್ಕೂ ಸ್ಥಾನಗಳಲ್ಲಿ ಎಡ ಪಕ್ಷಗಳ ವಿದ್ಯಾರ್ಥಿ ಸಂಘಟನೆಗಳು ಜಯ ಸಾಧಿಸಿವೆ. ಈ ಮೂಲಕ ಆರ್‌ಎಸ್‌ಎಸ್‌ ಬೆಂಬಲಿತ ಅಖಿಲ...

‘ಚುನಾವಣೆ ಕಳ್ಳತನ’ದ ಮೂಲಕ ನರೇಂದ್ರ ಮೋದಿ ಪ್ರಧಾನಿಯಾಗಿರುವುದನ್ನು ತೋರಿಸುತ್ತೇನೆ’: ರಾಹುಲ್ ಗಾಂಧಿ

ದೆಹಲಿ: ಚುನಾವಣಾ ಅಕ್ರಮಗಳನ್ನು ಬಹಿರಂಗಪಡಿಸುವ ಪ್ರಕ್ರಿಯೆಯನ್ನು ಮುಂದುವರಿಸುವುದಾಗಿ ಮತ್ತು ನರೇಂದ್ರ ಮೋದಿ "ಚುನಾವ್ ಚೋರಿ" (ಚುನಾವಣಾ ಕಳ್ಳತನ) ಮೂಲಕ ಹೇಗೆ ಪ್ರಧಾನಿಯಾದರು ಎಂಬುದನ್ನು ದೇಶದ ಯುವಜನರಿಗೆ ತೋರಿಸುವುದಾಗಿ ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಹುಜನರನ್ನು ಬಾಲಿವುಡ್ ನಿರ್ಲಕ್ಷಿಸಿದೆ, ಶೇ.10-15 ರಷ್ಟಿರುವ ಪ್ರಬಲ ಜಾತಿಗಳ ಕಥೆ ಮಾತ್ರ ಹೇಳಿದೆ: ನೀರಜ್ ಘಯ್ವಾನ್

ನೀರಜ್ ಘಯ್ವಾನ್ ಅವರ ಇತ್ತೀಚಿನ ಬಾಲಿವುಡ್ ಚಿತ್ರ 'ಹೋಮ್‌ಬೌಂಡ್' ಆಧುನಿಕ ಭಾರತೀಯ ಸಮಾಜದಲ್ಲಿ ಇರುವ ಜಾತಿ ಅಸಮಾನತೆಗಳ ಮೇಲೆ ಬೆಳಕು ಚೆಲ್ಲುತ್ತದೆ. ಈ ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಮುಂದಿನ ವರ್ಷ ಆಸ್ಕರ್‌ಗೆ...

ಬಿಹಾರದಲ್ಲೂ ಮತಗಳ್ಳತನ ಮಾಡಲು ಎನ್‌ಡಿಎ ಪ್ರಯತ್ನಿಸುತ್ತಿದೆ: ಪ್ರಿಯಾಂಕಾ ಗಾಂಧಿ

ಹರಿಯಾಣದಲ್ಲಿ ಮತಗಳ್ಳತನ ಮಾಡಿದಂತೆ ಬಿಹಾರದಲ್ಲೂ ಮಾಡಲು ಎನ್‌ಡಿಎ ತಯಾರಿ ನಡೆಸುತ್ತಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ, ಸಂಸದೆ ಪ್ರಿಯಾಂಕಾ ಗಾಂಧಿ ಆರೋಪಿಸಿದ್ದಾರೆ.  ಸೀತಮ್‌ ಹಾರಿ ಹಾಗೂ ಚಂಪಾರಣ್ಯ ಜಿಲ್ಲೆಯಲ್ಲಿ ನಡೆದ ಚುನಾವಣಾ ಸಮಾವೇಶದಲ್ಲಿ ಮಾತನಾಡಿದ...

ಕಬ್ಬಿಗೆ ‘ಎಫ್‌ಆರ್‌ಪಿ’ ನಿರ್ಧಾರ ಮಾಡಿರುವುದು ಕೇಂದ್ರ ಸರ್ಕಾರ: ಸಿಎಂ ಸಿದ್ದರಾಮಯ್ಯ

ಕಬ್ಬಿಗೆ ಎಫ್‌ಆರ್‌ಪಿ (ನ್ಯಾಯಯುತ ಮತ್ತು ಲಾಭದಾಯಕ ಬೆಲೆ) ನಿರ್ಧರಿಸಿರುವುದು ಕೇಂದ್ರದ ಬಿಜೆಪಿ ಸರ್ಕಾರ. ಆದ್ದರಿಂದ, ರೈತರು ಯಾವುದೇ ಕಾರಣಕ್ಕೂ ರೈತ ದ್ರೋಹಿಯಾದ ರಾಜ್ಯದ ಬಿಜೆಪಿಯವರ ಮರಳು ಮಾತುಗಳಿಗೆ ಬಲಿಯಾಗಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...

ಬಿಹಾರ ವಿಧಾನಸಭಾ ಚುನಾವಣೆ 2025: ಮಧ್ಯಾಹ್ನ 3 ಗಂಟೆಯವರೆಗೂ ಶೇ. 53 ರಷ್ಟು ಮತದಾನ

ಪಾಟ್ನಾ: ತೀವ್ರ ಕುತೂಹಲ ಕೆರಳಿಸಿರುವ ಬಿಹಾರ ವಿಧಾನಸಭೆಯ ಮೊದಲ ಹಂತದ ಚುನಾವಣೆ ಪ್ರಗತಿಯಲ್ಲಿದ್ದು, ಕೇಂದ್ರ ಚುನಾವಣಾ ಆಯೋಗ ಹಂಚಿಕೊಂಡ ಮಾಹಿತಿಯ ಪ್ರಕಾರ ಮಧ್ಯಾಹ್ನ 3 ಗಂಟೆಯವರೆಗೂ ಶೇ.53.77 ರಷ್ಟು ಮತದಾನವಾಗಿದೆ. 18 ಜಿಲ್ಲೆಗಳ ಪೈಕಿ...

ಛತ್ತೀಸ್‌ಗಢ| ₹17 ಲಕ್ಷ ಬಹುಮಾನ ಹೊಂದಿದ್ದ ಮಾವೋವಾದಿ ಕಮಲಾ ಸೋಡಿ ಶರಣಾಗತಿ

₹17 ಲಕ್ಷ ಬಹುಮಾನ ಹೊಂದಿದ್ದ 'ಮೋಸ್ಟ್‌ ವಾಂಟೆಡ್' ಮಾವೋವಾದಿ ಕಾರ್ಯಕರ್ತೆ ಕಮಲಾ ಸೋಡಿ ಗುರುವಾರ ಖೈರಾಗಢ-ಚುಯಿಖಾದನ್-ಗಂಡೈ ಜಿಲ್ಲೆಯಲ್ಲಿ ಪೊಲೀಸರಿಗೆ ಶರಣಾಗಿದ್ದು, ಛತ್ತೀಸ್‌ಗಢದ ನಕ್ಸಲ್ ವಿರೋಧಿ ಅಭಿಯಾನದಲ್ಲಿ ಪ್ರಮುಖ ಪ್ರಗತಿಯಾಗಿದೆ. ಉಂಗಿ ಮತ್ತು ತರುಣ ಎಂಬ...