Homeಕರ್ನಾಟಕಬಜರಂಗದಳವನ್ನು ‘ದೇಶದ್ರೋಹಿ ಸಂಘಟನೆ’ ಅನ್ನದೆ ಮತ್ತೇನು ಹೇಳಬೇಕು?: ಕುಮಾರಸ್ವಾಮಿ

ಬಜರಂಗದಳವನ್ನು ‘ದೇಶದ್ರೋಹಿ ಸಂಘಟನೆ’ ಅನ್ನದೆ ಮತ್ತೇನು ಹೇಳಬೇಕು?: ಕುಮಾರಸ್ವಾಮಿ

- Advertisement -
- Advertisement -

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಬಿಜೆಪಿ ಬೆಂಬಲಿತ ಸಂಘಟನೆಗಳಾದ ಬಜರಂಗ ದಳ ಮತ್ತು ವಿಎಚ್‌ಪಿ ವಿರುದ್ಧದ ವಾಗ್ದಾಳಿಯನ್ನು ಮತ್ತೆ ಮುಂದುವರೆಸಿದ್ದು, “ಜನರನ್ನು ಒಡೆಯುವುದಕ್ಕೆ ಮಾತ್ರ ಬಜರಂಗದಳ ಮತ್ತು ವಿಹೆಚ್‌ಪಿಯವರು ಬೀದಿಗೆ ಬರುತ್ತಾರೆ. ಹಾಗಾಗಿ ಅವರನ್ನು ದೇಶದ್ರೋಹಿಗಳು ಎಂದು ಹೇಳದೆ, ಮತ್ತೇನು ಹೇಳಲು ಸಾಧ್ಯ” ಎಂದು ಅವರು ಹೇಳಿದ್ದಾರೆ.

ಬೆಂಗಳೂರಿನ ಜೆಡಿಎಸ್ ಕಚೇರಿ, ಜೆಪಿ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಕುಮಾರಸ್ವಾಮಿ, “ಡೀಸೆಲ್-ಪೆಟ್ರೋಲ್ ಬೆಲೆ ಪ್ರತಿನಿತ್ಯ ಷೇರು ಬೆಲೆಯಂತೆ ಏರುತ್ತಲೇ ಇದೆ. ದೇಶವನ್ನೇ ಬಂಡವಾಳಶಾಹಿಗಳಿಗೆ ಮಾರಾಟ ಮಾಡಲಾಗುತ್ತಿದೆ. ಆದರೆ, ಭಜರಂಗದಳ ಮತ್ತು ವಿಹೆಚ್‌ಪಿಯವರು ಕೇಸರಿ ಟವೆಲ್ ಹಾಕಿಕೊಂಡು ರಸ್ತೆಗಿಳಿದು ಜನರ ಪರ ಹೋರಾಟ ನಡೆಸಿದ್ದನ್ನು ಒಂದೇ ಒಂದು ದಿನವೂ ನಾನು ಕಂಡಿಲ್ಲ. ಜನರ ಪರ ದನಿ ಎತ್ತುವುದಿಲ್ಲ, ಜನರನ್ನು ಒಡೆಯುವುದಕ್ಕೆ ಮಾತ್ರ ಬೀದಿಗೆ ಬರುತ್ತಾರೆ. ಹಾಗಾಗಿ ಅವರನ್ನು ದೇಶದ್ರೋಹಿಗಳು ಎಂದು ಹೇಳದೆ, ಮತ್ತೇನು ಹೇಳಲು ಸಾಧ್ಯ” ಎಂದು ಹೇಳಿದ್ದಾರೆ.

“ಬೆಲೆ ಏರಿಕೆಯಿಂದ ಜನ ನರಳುತ್ತಿದ್ದಾರೆ. ನೀವು ಬೆಲೆ ಏರಿಕೆ ವಿರುದ್ಧ ಹೋರಾಡಿ. ನಿಮಗೆ ಬೆಂಬಲ ನೀಡುತ್ತೇನೆ. ಜನಪರ ಹೋರಾಟ ಮಾಡುವುದಿಲ್ಲ ಎಂದರೆ ನೀವೇ ನಿಜವಾದ ದೇಶದ್ರೋಹಿಗಳು ಅಲ್ಲವೆ?” ಎಂದು ಕುಮಾರಸ್ವಾಮಿ ಸಂಘಪರಿವಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others

ಇದನ್ನೂ ಓದಿ: ಬಜರಂಗದಳ, VHPಯವರು ಸಮಾಜಘಾತುಕರು: ಎಚ್.ಡಿ ಕುಮಾರಸ್ವಾಮಿ

“ಕರಾವಳಿಯ ಒಂದು ಶಾಲೆಯಲ್ಲಿ ಆರಂಭವಾದ ಹಿಜಾಬ್ ವಿವಾದ ಇಂದು ಹಲಾಲ್ ಮಾಂಸ, ಮುಸ್ಲಿಮರ ವಿರುದ್ಧ ಆರ್ಥಿಕ ಜಿಹಾದ್, ಆಜಾನ್ ಬ್ಯಾನ್‌ವರೆಗೆ ಬಂದು ನಿಂತಿದೆ. ನಾಡಿನ ಕೋಮು ಸಾಮರಸ್ಯ ಸಂಪೂರ್ಣವಾಗಿ ಹದಗೆಟ್ಟಿದೆ. ಮತ ಬ್ಯಾಂಕ್‌ಗಾಗಿ ಉರಿವ ಮನೆಯ ಗಳ ಹಿರಿಯಬೇಡಿ. ನಿಮ್ಮ ಚುನಾವಣಾ ರಾಜಕಾರಣಕ್ಕೆ ಸಮಾಜದಲ್ಲಿ ಹಿಂದೂ-ಮುಸ್ಲಿಂ ದ್ವೇಷವನ್ನು ಬಿತ್ತಿ ಸಾಮರಸ್ಯ ಕೆಡಿಸಬೇಡಿ” ಎಂದು ಅವರು ಹೇಳಿದ್ದಾರೆ.

ರಾಜ್ಯ ಸರ್ಕಾರದ ವಿರುದ್ಧವು ಕಿಡಿಕಾರಿರುವ ಕುಮಾರಸ್ವಾಮಿ, “ರಾಜ್ಯ ಸರ್ಕಾರ ಮನಸ್ಸು ಮಾಡಿದರೆ ಹಿಜಾಬ್ ವಿವಾದವನ್ನು ಒಂದೇ ದಿನದಲ್ಲಿ ಮುಗಿಸಬಹುದಿತ್ತು. ಹಲಾಲ್ ವಿಚಾರ ವಿವಾದವಾಗದಂತೆ ತಡೆಯಬಹುದಿತ್ತು. ಆದರೆ, ಬಿಜೆಪಿ ನಾಯಕರು ಕೋಮು ದ್ವೇಷ ಬಿತ್ತಿ ಚಳಿ ಕಾಯಿಸಿಕೊಳ್ಳುತ್ತಿದ್ದಾರೆ. ಸರ್ಕಾರವೇ ಸ್ವತಃ ಹಿಂದೆ ನಿಂತು ಭಜರಂಗದಳ ಮತ್ತು ವಿಹೆಚ್‌ಪಿ ಸಂಘಟನೆಗಳ ಮೂಲಕ ಸಮಾಜವನ್ನೇ ಒಡೆಯುವ ಹೇಯ ರಾಜಕಾರಣ ಮಾಡುತ್ತಿದೆ. ಯಾವ ಸರ್ಕಾರವೂ ತನ್ನ ಸ್ವಯಂ ಲಾಭಕ್ಕಾಗಿ ಈ ಹಂತಕ್ಕೆ ಇಳಿಬಾರದಿತ್ತು” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ಶಾಲೆಗಳಲ್ಲಿ ಮಕ್ಕಳ ಬಾಯಲ್ಲಿ ನಾಡಗೀತೆ ಹಾಡಿಸಿ ಶಾಲೆಯ ಹೊರಗೆ ಕೋಮು ಪ್ರಚೋದನೆ ಮಾಡುವುದು ಎಷ್ಟು ಸರಿ? ದಯವಿಟ್ಟು ನಾಡಿನಲ್ಲಿ ಕುವೆಂಪು ಆಶಯವನ್ನು ಕಾಪಾಡಿ ಇಲ್ಲವೇ ನಾಡಗೀತೆಯನ್ನೇ ತೆಗೆದುಬಿಡಿ” ಎಂದು ಕುಮಾರಸ್ವಾಮಿ ಹೇಳಿದ್ದಾರೆ.

“ಪೊಲೀಸರು ನಟ ಚೇತನ್ ಟ್ವೀಟ್ ಮಾಡಿದರು ಎಂಬ ಕಾರಣಕ್ಕೆ ಬಂಧಿಸಿ ಜೈಲಿಗೆ ಕಳುಹಿಸುತ್ತಾರೆ. ಆದರೆ, ಮಟನ್ ಸ್ಟಾಲ್‌ಗಳಿಗೆ ಹೋಗಿ ಮುಸ್ಲಿಂ ಬಾಂಧವರ ಮೇಲೆ ಹಲ್ಲೆ ಮಾಡುವ, ಮುಸ್ಲಿಮರ ವಿರುದ್ಧ ಬಹಿರಂಗ ಹೇಳಿಕೆ ನೀಡಿ ಸಮಾಜದ ಸ್ವಾಸ್ಥ್ಯವನ್ನು ಹಾಳು ಮಾಡುವ ಸಮಾಜ ವಿರೋಧಿಗಳನ್ನು ಏಕೆ ಬಂಧಿಸುವುದಿಲ್ಲ? ರಾಜ್ಯ ಪೊಲೀಸರಿಗೆ ತಾಕತ್ ಇದ್ದರೆ ಇಂಥವರನ್ನು ಬಂಧಿಸಲಿ” ಎಂದು ಕುಮಾರಸ್ವಾಮಿ ಸವಾಲು ಹಾಕಿದ್ದಾರೆ.

ಇದನ್ನೂ ಓದಿ: ಲಖಿಂಪುರ್ ಖೇರಿ ಹತ್ಯಾಕಾಂಡದ ಆರೋಪಿ ವಿದೇಶಕ್ಕೆ ಪರಾರಿಯಾಗುವ ಸಾಧ್ಯತೆಯಿಲ್ಲವೆಂದ ಯುಪಿ ಸರ್ಕಾರ

ಹಲಾಲ್‌ ಕಟ್ ವಿರುದ್ಧ ಆರಂಭವಾಗಿರುವ ಅಭಿಯಾನದ ವಿರುದ್ಧವೂ ಕಿಡಿಕಾರಿರುವ ಕುಮಾರಸ್ವಾಮಿ, “ಹಲಾಲ್ ಕಟ್ಟೋ-ಜಟ್ಕಾ ಕಟ್ಟೋ? ಜನ ಏನ್ ತಿಂದ್ರೆ ನಿಮಗೇನು? ಮೊನ್ನೆ ಮೊನ್ನೆ ಯಾರೋ ಜಟ್ಕಾ ಕಟ್ ಮಾಡ್ತೀನಿ ಅಂತ ಕುರಿ ಹಿಡಿದವನ ತಲೆಗೆ ಮಚ್ಚು ಬೀಸಿದ್ದರು. ಈಗ ಜಟ್ಕಾ ಕಟ್ ಎಂದು ಮಾತನಾಡುತ್ತಿರುವವರ ತಲೆ ಹುಷಾರು. ಇಷ್ಟಕ್ಕೂ ಜನ ಏನ್ ತಿಂದರೆ ನಿಮಗೇನು?” ಎಂದು ಹೇಳಿದ್ದಾರೆ.

“ಹಳ್ಳಿ-ನಗರಗಳಲ್ಲಿ ಈಗಲೂ ಜಾತಿ ವ್ಯವಸ್ಥೆ ಆಳವಾಗಿ ಬೇರೂರಿದೆ. ಈ ಹಿಂದುತ್ವವಾದಿಗಳಿಗೆ ಸಮಸ್ಯೆ ಎದುರಾದಾಗ ಮಾತ್ರ ನಾವು ಹಿಂದುಗಳು ಎಂಬುದು ನೆನಪಾಗುತ್ತಾ? ಶ್ರೀಕೃಷ್ಣ ಮಠದಲ್ಲಿ ಕನಕದಾಸರನ್ನು ಇವರು ಹೇಗೆ ನಡೆಸಿಕೊಂಡರು ಎಂಬುದನ್ನು ಇತಿಹಾಸ ಇನ್ನೂ ಮರೆತಿಲ್ಲ. ಸಮಸ್ಯೆ ಎದುರಾದಾಗ ’ನಾವೆಲ್ಲಾ ಹಿಂದೂ ನಾವೆಲ್ಲಾ ಒಂದು’ ಎನ್ನುವುದು. ಕೆಲಸ ಮುಗಿದ ಮೇಲೆ ದಲಿತನೆಂದು ಜರಿಯುವುದು ಯಾವ ಸೀಮೆಯ ರಾಜಕಾರಣ” ಎಂದು ಅವರು ಬಿಜೆಪಿ ಬೆಂಬಲಿತ ಸಂಘಟನೆಗಳ ವಿರುದ್ಧ ಕಿಡಿಕಾರಿದ್ದಾರೆ.

ಕಾಂಗ್ರೆಸ್ ವಿರುದ್ಧವೂ ವಾಗ್ದಾಳಿ ನಡೆಸಿದ ಕುಮಾರಸ್ವಾಮಿ, “ಕಾಂಗ್ರೆಸ್ ನಾಯಕರು ಮಾತೆತ್ತಿದರೆ ’ಜೆಡಿಎಸ್ ಬಿಜೆಪಿ ಪಕ್ಷದ ಬಿ ಟೀಮ್’ ಎಂದು ಹೇಳುತ್ತಾರೆ. ಆದರೆ, ಬಿಜೆಪಿಯವರು ಸಮಾಜದಲ್ಲಿ ಮುಸ್ಲಿಂ ಸಮುದಾಯದವರ ವಿರುದ್ಧ ದ್ವೇಷ ಬಿತ್ತುತ್ತಿದ್ದಾಗ ಕಾಂಗ್ರೆಸ್ಸಿನವರೇಕೆ ಮೌನವಾಗಿದ್ದರು ಎಂಬುದು ಜಗತ್ತಿಗೆ ಗೊತ್ತಿದೆ. ಹಿಂದೂಗಳ ಮತಗಳು ಎಲ್ಲಿ ಕೈಬಿಟ್ಟು ಹೋಗುತ್ತವೋ? ಎಂಬ ಭಯದಲ್ಲಿ ಕಾಂಗ್ರೆಸ್ ಮೌನಕ್ಕೆ ಶರಣಾಗಿತ್ತು” ಎಂದು ಹೇಳಿದ್ದಾರೆ.

“ಸ್ವತಃ ರಾಹುಲ್ ಗಾಂಧಿ ಕರ್ನಾಟಕಕ್ಕೆ ಆಗಮಿಸಿ ’ಮುಸ್ಲಿಮರ ವಿರುದ್ಧ ನಡೆಯುತ್ತಿರುವ ದೌರ್ಜನ್ಯದ ವಿರುದ್ಧ ಮಾತನಾಡಬೇಕಿದೆ’ ಎಂದು ಹೇಳುವವರೆಗೆ ಇವರುಗಳು ಬಾಯಿಗೆ ಬೀಗ ಜಡಿದು ಕೂತಿದ್ದರು. ಈಗ ಈ ಬಗ್ಗೆ ಸರಣಿ ಹೇಳಿಕೆ ನೀಡುತ್ತಿದ್ದಾರೆ. ಆದರೆ, ಜೆಡಿಎಸ್ ಈ ರೀತಿ ಎಂದೂ ಮತಕ್ಕಾಗಿ ರಾಜಕಾರಣ ಮಾಡಿಲ್ಲ” ಎಂದು ಕುಮಾರಸ್ವಾಮಿ ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others

ಇದನ್ನೂ ಓದಿ: ಮೈಸೂರು: ಬಿಜೆಪಿ ಬೆಂಬಲಿತ ಸಂಘಟನೆಗಳ ಕರೆ ಬಹಿಷ್ಕರಿಸಿ ಮುಸ್ಲಿಮರ ಅಂಗಡಿಯ ಹಲಾಲ್‌‌ ಮಾಂಸ ಖರೀದಿಸಿದ ಸಾಹಿತಿ ದೇವನೂರ ಮಹದೇವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....