Homeಮುಖಪುಟನಮಗೆ, ಕೇಜ್ರಿವಾಲ್‌ಗೆ ಏನಾಗಿದೆಯೋ, ಅದು ನಿತೀಶ್, ನಾಯ್ಡುಗೂ ಆಗಬಹುದು : ಆದಿತ್ಯ ಠಾಕ್ರೆ

ನಮಗೆ, ಕೇಜ್ರಿವಾಲ್‌ಗೆ ಏನಾಗಿದೆಯೋ, ಅದು ನಿತೀಶ್, ನಾಯ್ಡುಗೂ ಆಗಬಹುದು : ಆದಿತ್ಯ ಠಾಕ್ರೆ

- Advertisement -
- Advertisement -

ದೇಶದ ಪ್ರತಿಯೊಂದು ಪ್ರಾದೇಶಿಕ ಪಕ್ಷವನ್ನು ಒಡೆದು ಮುಗಿಸುವುದು ಬಿಜೆಪಿಯ ಕನಸಾಗಿರುವುದರಿಂದ ದೇಶದ ಭವಿಷ್ಯ ಅಪಾಯದಲ್ಲಿದೆ ಎಂದು ಶಿವಸೇನೆ (ಯುಬಿಟಿ) ನಾಯಕ ಆದಿತ್ಯ ಠಾಕ್ರೆ ಗುರುವಾರ (ಫೆ.13) ಹೇಳಿದ್ದಾರೆ.

ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಠಾಕ್ರೆ, ಮತದಾರರು ಮತ್ತು ಇವಿಎಂ ವಂಚನೆಯನ್ನು ಉಲ್ಲೇಖಿಸಿ ದೇಶದ ಚುನಾವಣಾ ಪ್ರಕ್ರಿಯೆಯನ್ನು ಪ್ರಶ್ನಿಸಿದ್ದಾರೆ.

“ಇಂದು ನಮ್ಮ ದೇಶದ ಭವಿಷ್ಯ ಅಪಾಯದಲ್ಲಿದೆ. ದೇಶದಲ್ಲಿ ಮತದಾರರ ವಂಚನೆ ಮತ್ತು ಇವಿಎಂ ವಂಚನೆಯ ಮಧ್ಯೆ ನಮ್ಮ ಮತ ಎಲ್ಲಿಗೆ ಹೋಗುತ್ತಿದೆ ಎಂದು ನಮಗೇ ಗೊತ್ತಾಗುತ್ತಿಲ್ಲ. ದೇಶದಲ್ಲಿ ಚುನಾವಣೆಗಳು ಮುಕ್ತ ಮತ್ತು ನ್ಯಾಯಯುತ ರೀತಿಯಲ್ಲಿ ನಡೆಯುತ್ತಿವೆಯೇ? ನಾವು ಪ್ರಜಾಪ್ರಭುತ್ವದಲ್ಲಿ ವಾಸಿಸುತ್ತಿದ್ದೇವೆ ಭಾವಿಸಿದ್ದೇವೆ. ಆದರೆ, ಅದು ಇದು ಪ್ರಜಾಪ್ರಭುತ್ವವಲ್ಲ. ನಮಗೆ, ಕೇಜ್ರಿವಾಲ್ ಅವರಿಗೆ ಮತ್ತು ಕಾಂಗ್ರೆಸ್‌ಗೆ ಏನಾಯಿತೋ, ಭವಿಷ್ಯದಲ್ಲಿ ನಿತೀಶ್, ಆರ್‌ಜೆಡಿ ಮತ್ತು ಚಂದ್ರಬಾಬು ನಾಯ್ಡು ಅವರಿಗೂ ಆಗಬಹುದು” ಎಂದು ಹೇಳಿದ್ದಾರೆ.

“ದೇಶದ ಪ್ರತಿಯೊಂದು ಪ್ರಾದೇಶಿಕ ಪಕ್ಷವನ್ನು ಒಡೆದು ಮುಗಿಸುವುದು ಬಿಜೆಪಿಯ ಕನಸು. ಇದೇ ಅವರು ಪ್ರಜಾಪ್ರಭುತ್ವಕ್ಕೆ ಕೊಡುತ್ತಿರುವ ಕೊಡುಗೆ” ಎಂದಿದ್ದಾರೆ.

ಇಂಡಿಯಾ ಒಕ್ಕೂಟದ ನಾಯಕರ ಭೇಟಿಯ ಕುರಿತು ಮಾತನಾಡಿದ ಆದಿತ್ಯ ಠಾಕ್ರೆ, ದೇಶದ ಭವಿಷ್ಯಕ್ಕಾಗಿ ಮಾರ್ಗಸೂಚಿಯನ್ನು ಸಿದ್ಧಪಡಿಸಲು ಪ್ರಯತ್ನಗಳು ನಡೆಯುತ್ತಿವೆ ಎಂದು ಹೇಳಿದ್ದಾರೆ.

“ಇಂಡಿಯಾ ಒಕ್ಕೂಟದಲ್ಲಿ ಮಾರ್ಗಸೂಚಿ ಸಿದ್ಧಪಡಿಸುವ ಅನೇಕ ಹಿರಿಯ ನಾಯಕರಿದ್ದಾರೆ. ಇಂಡಿಯಾ ಒಕ್ಕೂಟದ ಜಂಟಿ ನಾಯಕತ್ವವನ್ನು ಹೊಂದಿದೆ. ಒಬ್ಬನೇ ಒಬ್ಬ ನಾಯಕನಲ್ಲ. ಇದು ಅಹಂಕಾರದ ಹೋರಾಟ ಅಥವಾ ಒಬ್ಬರ ಲಾಭಕ್ಕಾಗಿ ಅಲ್ಲ, ಬದಲಾಗಿ ದೇಶದ ಭವಿಷ್ಯಕ್ಕಾಗಿ ಹೋರಾಟ” ಎಂದಿದ್ದಾರೆ.

ಹರಿಯಾಣ, ಮಹಾರಾಷ್ಟ್ರ ಮತ್ತು ದೆಹಲಿ ವಿಧಾನಸಭಾ ಚುನಾವಣೆಗಳಲ್ಲಿ ಕಳಪೆ ಪ್ರದರ್ಶನದೊಂದಿಗೆ, ಇಂಡಿಯಾ ಒಕ್ಕೂಟದ ಆಡಳಿತಾರೂಢ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ವಿರುದ್ಧದ ಹೋರಾಟದಲ್ಲಿ ಸವಾಲುಗಳನ್ನು ಎದುರಿಸುತ್ತಿದೆ.

ಕೆಲ ದಿನಗಳ ಹಿಂದೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿಶೇಷವಾಗಿ 2024ರ ಲೋಕಸಭೆ ಮತ್ತು ಮಹಾರಾಷ್ಟ್ರದ ವಿಧಾನಸಭಾ ಚುನಾವಣೆಗಳ ನಡುವೆ ಹೊಸ ಮತದಾರರ ಸಂಖ್ಯೆಯಲ್ಲಿ ಹೆಚ್ಚಳದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದರು. ಲೋಕಸಭಾ ಚುನಾವಣೆಯ ನಂತರ ಕೇವಲ ಐದು ತಿಂಗಳಲ್ಲಿ 39 ಲಕ್ಷ ಹೊಸ ಮತದಾರರು ಸೇರ್ಪಡೆಯಾಗಿದ್ದಾರೆ ಎಂದು ಅವರು ಹೇಳಿದ್ದರು.

ಮತದಾರರ ನೋಂದಣಿ ಅಂಕಿ ಅಂಶಗಳಲ್ಲಿನ ವ್ಯತ್ಯಾಸಗಳನ್ನು ಅವರು ಪ್ರಶ್ನಿಸಿದ್ದರು. ನೋಂದಾಯಿತ ಮತದಾರರ ಸಂಖ್ಯೆ ಮಹಾರಾಷ್ಟ್ರದ ಒಟ್ಟು ವಯಸ್ಕ ಜನಸಂಖ್ಯೆಯನ್ನು ಮೀರಿದೆ ಎಂದು ಆರೋಪಿಸಿದ್ದರು.

ದೆಹಲಿ ಚುನಾವಣೆಯಲ್ಲಿ ಸೋಲು; ಯೂಟ್ಯೂಬರ್ ಆಗಿ ಬದಲಾದ ಎಎಪಿಯ ಸೌರಭ್ ಭಾರದ್ವಾಜ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....