Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌‌ಚೆಕ್: ಕಂಗನಾ ರಾಣಾವತ್‌ ಚುನಾವಣೆಯಲ್ಲಿ ಬಲವಂತವಾಗಿ ಶಿವಸೇನೆಗೆ ಮತ ಚಲಾಯಿಸಿದರೆ?

ಫ್ಯಾಕ್ಟ್‌‌ಚೆಕ್: ಕಂಗನಾ ರಾಣಾವತ್‌ ಚುನಾವಣೆಯಲ್ಲಿ ಬಲವಂತವಾಗಿ ಶಿವಸೇನೆಗೆ ಮತ ಚಲಾಯಿಸಿದರೆ?

ತಾನು ಬಿಜೆಪಿ ಬೆಂಬಲಿಸುವವಳಾಗಿದ್ದು, ಬಿಜೆಪಿ-ಶಿವಸೇನೆ ಮೈತ್ರಿಯಿಂದ ಬಲವಂತವಾಗಿ ಶಿವಸೇನೆಗೆ ಮತನೀಡುವಂತಾಯಿತು ಎಂದಿದ್ದರು.

- Advertisement -
- Advertisement -

ಸಧ್ಯ ವಿವಾದದಲ್ಲಿರುವ ಬಾಲಿವುಡ್ ನಟಿ ಕಂಗನಾ ರಾಣಾವತ್‌, ಮಹರಾಷ್ಟ್ರದ ಶಿವಸೇನೆ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸುವುದನ್ನು ಮುಂದುವರೆಸಿದ್ದು, ಇತ್ತೀಚೆಗೆ ಟೈಮ್ಸ್‌ ನೌ ಸಂದರ್ಶನವೊಂದರಲ್ಲಿ, ’ತಾನು ಮನಸ್ಸಿಲ್ಲದೆ ಬಲವಂತವಾಗಿ ಶಿವಸೇನೆಗೆ ಮತಚಲಾಯಿಸಿದ್ದೇನೆ’ ಎಂದು ಹೇಳಿದ್ದಾರೆ.

ಕಂಗನಾ ತನ್ನ ಸಂದರ್ಶನದಲ್ಲಿ, ನಾನು ಬಿಜೆಪಿಯನ್ನು ಬೆಂಬಲಿಸುವವಳು, ಆದರೆ ಶಿವಸೇನೆಗೆ ಯಾಕೆ ಮತ ಹಾಕಬೇಕು? ಶಿವಸೇನೆ ಮತ್ತು ಬಿಜೆಪಿ ಮೈತ್ರಿಯಾಗಿದ್ದರಿಂದ ಬಾಂದ್ರಾದಲ್ಲಿ ಬಿಜೆಪಿಯ ಆಯ್ಕೆ ಇಲ್ಲದೆ ಶಿವಸೇನೆಗೆ ಮತ ಹಾಕಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕಂಗನಾಗೆ ಬೆಂಬಲ ನೀಡಲು ಮುಂಬೈಗೆ ಆಗಮಿಸಿತೆ ಕರ್ಣಿಸೇನಾ!: ಸತ್ಯಾಸತ್ಯತೆ ಏನು..?

ಫ್ಯಾಕ್ಟ್‌‌ಚೆಕ್

ಇಂಡಿಯಾ ಟುಡೆ ಉಪ ಸಂಪಾದಕ ಕಮಲೇಶ್ ಸುತಾರ್ ಕಂಗನಾ ಅವರ ಪ್ರತಿಪಾದನೆ ಸುಳ್ಳು ಎಂದು ಕೆಲವು ವಿಚಾರಗಳ ಬಗ್ಗೆ ಗಮನ ಸೆಳೆದಿದ್ದಾರೆ. “ಮಹಾರಾಷ್ಟ್ರ ಚುನಾವಣಾ ಆಯೋಗದ ಪ್ರಕಾರ, ಕಂಗನಾ ಬಾಂದ್ರಾ ಪಶ್ಚಿಮ ಕ್ಷೇತ್ರದ ಮತದಾರಾಗಿದ್ದಾರೆ. ಇಲ್ಲಿ 2019 ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಆಶಿಶ್ ಶೆಲಾರ್ ಶಿವಸೇನೆ-ಬಿಜೆಪಿ ಅಭ್ಯರ್ಥಿಯಾಗಿದ್ದರು. ಅಷ್ಟೇ ಅಲ್ಲದೆ ಲೋಕಸಭೆಯಲ್ಲಿ ಕೂಡಾ ಬಿಜೆಪಿಯ ಪೂನಂ ಮಹಾಜನ್ ಇಲ್ಲಿ ಸ್ಫರ್ಧಿಸಿ ಜಯಗಳಿಸಿದರು” ಎಂದು ಹೇಳಿದ್ದರು.

 

ಇದನ್ನೂ ಓದಿ: ಮುಸ್ಲಿಂ ಮದುವೆಯಲ್ಲಿ ಪಾಲ್ಗೊಂಡಿದ್ದಕ್ಕೆ ಕೇರಳದ RSS ಕಾರ್ಯಕರ್ತನ ಮೇಲೆ ಹಲ್ಲೆ ಮಾಡಲಾಯಿತೇ?

ಕಮಲೇಶ್‌ ಟ್ವೀಟ್‌ಗೆ ಪ್ರತಿಕ್ರಿಯೆಯಾಗಿ, ಕಮಲೇಶ್‌ ಸುಳ್ಳು ಹರಡುತ್ತಿದ್ದಾರೆ, ಆದ್ದರಿಂದ ಕಾನೂನು ಕ್ರಮದ ನೋಟಿಸು ಕಳುಹಿಸುತ್ತೇನೆ ಎಂದ ಕಂಗನಾ, “ನಾನು ಲೋಕಸಭಾ ಚುನಾವಣೆಯ ಬಗ್ಗೆ ಸ್ಪಷ್ಟವಾಗಿ ಮಾತನಾಡುತ್ತಿದ್ದೇನೆ ಆದರೆ ಅವರು ಉದ್ದೇಶಪೂರ್ವಕವಾಗಿ ವಿಧಾನಸಭಾ ಚುನಾವಣೆಯ ಬಗ್ಗೆ ಮಾತನಾಡುತ್ತಿದ್ದಾರೆ” ಎಂದು ಅವರು ಬರೆದಿದ್ದಾರೆ.

ಇದಾಗ್ಯೂ, ಕಂಗನಾ ಶಿವಸೇನೆಗೆ ಬಂಲವಂತವಾಗಿ ಮತ ಚಲಾಯಿಸಿದ್ದೇನೆ ಎಂಬ ಹೇಳಿಕೆಯು ನಿಜವಲ್ಲ. ಲೋಕಸಭಾ ಮತ್ತು ವಿಧಾನಸಭಾ ಚುನಾವಣೆಗಳೆರಡರಲ್ಲೂ ಕಂಗನಾ ಮತ ಚಲಾಯಿಸಲು ನೋಂದಾಯಿಸಲಾಗಿರುವ ಕ್ಷೇತ್ರಗಳ ಅಭ್ಯರ್ಥಿಗಳು ಬಿಜೆಪಿಗೆ ಸೇರಿದವರಾಗಿದ್ದು, ಇಲ್ಲಿ ಚುನಾವಣೆಯ ವೇಳೆ ಬಿಜೆಪಿ-ಶಿವಸೇನೆ ಮೈತ್ರಿ ಮಾಡಿಕೊಂಡಿತ್ತು.

ಲೋಕಸಭಾ ಚುನಾವಣೆ

2019 ರ ಲೋಕಸಭಾ ಚುನಾವಣೆಯಲ್ಲಿ ಕಂಗನಾ ಖಾರ್‌ನ ಮತದಾನ ಕೇಂದ್ರದಲ್ಲಿ ಮತ ಚಲಾಯಿಸಿದ್ದರು.

ಖಾರ್ ಮುಂಬೈನ ಉಪನಗರ ಜಿಲ್ಲೆಯಲ್ಲಿದ್ದು, ಇದು ಮುಂಬೈ ನಾರ್ತ್ ಸೆಂಟ್ರಲ್ ಲೋಕಸಭಾ ಕ್ಷೇತ್ರದ ವಾಂಡ್ರೆ (ಬಾಂದ್ರಾ) ಪಶ್ಚಿಮ ವಿಧಾನಸಭಾ ಕ್ಷೇತ್ರದ ಭಾಗವಾಗಿದೆ. ‘General Information>List of Polling Stations’ ಅಡಿಯಲ್ಲಿ ಮಹಾರಾಷ್ಟ್ರದ ಮುಖ್ಯ ಚುನಾವಣಾಧಿಕಾರಿಗಳ ವೆಬ್‌ಸೈಟ್‌ನಲ್ಲಿ ಓದುಗರು ಇದನ್ನು ಸ್ವಯಂ ಪರಿಶೀಲಿಸಬಹುದು.

ಇದನ್ನೂ ಓದಿ: ಕೇಂದ್ರ ಸರ್ಕಾರ ಪ್ರತಿ ಹೆಣ್ಣು ಮಕ್ಕಳಿಗೆ ಮಾಸಿಕ ತಲಾ 2000 ರೂ. ನೀಡುತ್ತಿರುವುದು ನಿಜವೆ?

ಮುಂಬೈ ನಾರ್ತ್ ಸೆಂಟ್ರಲ್‌ನಿಂದ ಬಿಜೆಪಿ-ಶಿವಸೇನೆ ಮೈತ್ರಿಯ ಅಭ್ಯರ್ಥಿ ಬಿಜೆಪಿಯ ಪೂನಂ ಮಹಾಜನ್ ವಿಜಯಶಾಲಿಯಾಗಿದ್ದರು.

ಆದ್ದರಿಂದ ಮೈತ್ರಿಯಿಂದಾಗಿ ತಾನು ಮನಸ್ಸಿಲ್ಲದೆ ಶಿವಸೇನೆಗೆ ಮತ ಚಲಾಯಿಸಿದ್ದೇನೆ ಎಂದು ಕಂಗನಾ ರಾಣಾವತ್‌ ಹೇಳಿರುವುದು ಸುಳ್ಳಾಗಿದೆ.

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್‌: ಪಶ್ಚಿಮ ಬಂಗಾಳದಲ್ಲಿ ಮುಸ್ಲಿಮರು ಕಾಳಿ ದೇವಿಯ ಮೂರ್ತಿ ಸುಟ್ಟರೆ?

ವಿಧಾನಸಭಾ ಚುನಾವಣೆ

ಅಮರ್ ಉಜಲಾ ವರದಿಯ ಪ್ರಕಾರ, 2019 ರ ಅಕ್ಟೋಬರ್‌ನಲ್ಲಿ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಕಂಗನಾ ಮುಂಬೈನಲ್ಲಿ ಇರಲಿಲ್ಲ. ಆದರೆ ಅವರು ಅಲ್ಲಿದ್ದು ಮತ ಚಲಾಯಿಸಿದ್ದರೂ ಅದು ಬಿಜೆಪಿಯ ರಾಜಕಾರಣಿಗೆ ಆಗಿರುತ್ತಿತ್ತು. ಅಂದು ಬಿಜೆಪಿಯ ಆಶಿಶ್ ಶೆಲಾರ್ ಬಾಂದ್ರಾ ವೆಸ್ಟ್ ವಿಧಾನಸಭಾ ಕ್ಷೇತ್ರದ ಬಿಜೆಪಿ-ಶಿವಸೇನೆಯ ಮೈತ್ರಿ ಅಭ್ಯರ್ಥಿಯಾಗಿದ್ದರು ಹಾಗೂ ಗೆದ್ದರು.

ಕಂಗನಾ ಟಿವಿ ಸಂದರ್ಶನದಲ್ಲಿ ಸುಳ್ಳು ಹೇಳಿಕೆ ನೀಡಿದ್ದಲ್ಲದೆ, ಅದನ್ನು ಸಮರ್ಥಿಸಲು ಹೋಗಿ ಸಾಮಾಜಿಕ ಜಾಲತಾಣದಲ್ಲಿ ಕೂಡಾ ಸುಳ್ಳು ಹೇಳಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ವೈರಲ್ ಚಿತ್ರದಲ್ಲಿರುವ ಮಹಿಳೆ ’ಲವ್‌ ಜಿಹಾದ್’ ಪ್ರಕರಣದಲ್ಲಿ ಹತ್ಯೆ ಆಗಿದ್ದು ನಿಜವೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...