Homeಮುಖಪುಟವನ್ಯಜೀವಿ ರಕ್ಷಣೆ ವಿಚಾರದಲ್ಲಿ ಮೋದಿ ಮಾಡುತ್ತಿರುವುದೇನು?- ಇದು ಚೀತಾ ಕಥೆಯಷ್ಟೇ ಅಲ್ಲ!

ವನ್ಯಜೀವಿ ರಕ್ಷಣೆ ವಿಚಾರದಲ್ಲಿ ಮೋದಿ ಮಾಡುತ್ತಿರುವುದೇನು?- ಇದು ಚೀತಾ ಕಥೆಯಷ್ಟೇ ಅಲ್ಲ!

- Advertisement -
- Advertisement -

“ಒಂದು ಸಮಯದಲ್ಲಿ ಪಾರಿವಾಳಗಳನ್ನು ಬಿಡುತ್ತಿದ್ದರು. ಈಗ ನಾವು ಚೀತಾಗಳನ್ನು ಬಿಡುತ್ತಿದ್ದೇವೆ”- ಹೀಗೆ ಪ್ರಧಾನಿ ನರೇಂದ್ರ ಮೋದಿಯವರ ಅನುಯಾಯಿಯೊಬ್ಬರು ಇತ್ತೀಚೆಗೆ ಟ್ವೀಟ್ ಮಾಡಿದ್ದಾರೆ.

ಭಾರತದ ಮೊದಲ ಪ್ರಧಾನಿ ಜವಾಹರಲಾಲ್‌ ನೆಹರೂ ಅವರು ಪಾರಿವಾಳವನ್ನು ಹಾರಿಬಿಡುತ್ತಿರುವ ಫೋಟೋವನ್ನು, ಕುನೊ ರಾಷ್ಟ್ರೀಯ ಉದ್ಯಾನವನಕ್ಕೆ ನರೇಂದ್ರ ಮೋದಿಯವರು ಚೀತಾಗಳನ್ನು ಬಿಡುತ್ತಿರುವುದನ್ನು ವಿಡಿಯೊವನ್ನು ಸೇರಿಸಿ ಎಡಿಟ್ ಮಾಡಿ ಪೋಸ್ಟ್ ಮಾಡಲಾಗಿದೆ. ಯಾವುದೇ ವಿದ್ಯಮಾನವನ್ನು ರಾಜಕೀಯಗೊಳಿಸುವ ವಿಚಿತ್ರ ಕಾಲಘಟ್ಟದಲ್ಲಿ ಭಾರತೀಯರು ಇರುವುದರಿಂದ ‘ಚೀತಾ’ ರಾಜಕಾರಣವೂ ನಡೆಯುತ್ತಿದೆ. ಈ ಚೀತಾಗಳನ್ನು ಭಾರತಕ್ಕೆ ತರುವಲ್ಲಿ ಕಾಂಗ್ರೆಸ್‌ ಕೂಡ ಯತ್ನಿಸಿತ್ತು. ಎರಡು ಪಕ್ಷಗಳೂ ‘ಚೀತಾ ರಾಜಕಾರಣ’ ಮಾಡುತ್ತಿವೆಯಾದರೂ ವನ್ಯಜೀವಿತಜ್ಞರು ಭಿನ್ನ ಅಭಿಪ್ರಾಯಗಳನ್ನು ತಾಳುತ್ತಿದ್ದಾರೆ.

“ನೂರಕ್ಕೆ ನೂರರಷ್ಟು ಈ ಚೀತಾ ಯೋಜನೆ ವಿಫಲವಾದದ್ದು. ರಾಜಕೀಯವಾಗಿ ಇವರಿಗೆ ಒಂದಿಷ್ಟು ಉಪಯೋಗವಾಗುವುದು ಬಿಟ್ಟರೆ ಚೀತಾಗಳಿಗಾಗಲೀ, ಕುನೋ ರಾಷ್ಟ್ರೀಯ ಉದ್ಯಾನಕ್ಕಾಗಲೀ ಯಾವುದೇ ಪ್ರಯೋಜನವಿಲ್ಲ” ಎನ್ನುತ್ತಾರೆ ವನ್ಯಜೀವಿತಜ್ಞರಾದ ಕೃಪಾಕರ.

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಅವರು, “ಈ ಯೋಜನೆಯಿಂದಾಗಿ ಸುಮಾರು ನೂರು ಕೋಟಿ ರೂಪಾಯಿಗಳನ್ನೂ ಗೊತ್ತಿದ್ದೂ ಕಳೆದುಕೊಳ್ಳುತ್ತಿದ್ದೇವೆ. ತಿಳಿವಳಿಕೆ ಇದ್ದವರು ಯಾರಾದರೂ ಇದನ್ನು ಒಪ್ಪುವುದಿಲ್ಲ” ಎಂದು ತಿಳಿಸಿದರು.

ಇದನ್ನೂ ಓದಿರಿ: ಚೀತಾಗಳನ್ನೇನೋ ತಂದಾಯಿತು; ಮುಂದಿನ ಪರಿಣಾಮ ಬಲ್ಲಿರೇನು? ಪರಿಸರತಜ್ಞರು ಹೇಳಿದ್ದೇನು?

“ಈ ಚೀತಾ ಕಾರ್ಯಕ್ರಮದಲ್ಲಿ ಯಾವುದೇ ಒಳನೋಟ ಕಾಣುತ್ತಿಲ್ಲ. ಈಗ ನಮೀಬಿಯಾದಿಂದ ತಂದಿರುವ ಚೀತಾಗಳು ಈ ನೆಲಕ್ಕೆ ಸಂಬಂಧಪಟ್ಟಿರುವ ಪ್ರಾಣಿಗಳು. ನಮ್ಮ ದೇಶದಲ್ಲಿ ಹಿಂದೆ ಇದ್ದದ್ದು ಏಷ್ಯಾ ಖಂಡದ ಚೀತಾಗಳು. ಈಗ ಪ್ರಧಾನಿಯವರು ಇಲ್ಲಿಗೆ ಆಫ್ರಿಕಾ ಚೀತಾಗಳನ್ನು ತಂದಿದ್ದಾರೆ. ಯಾವುದೇ ಒಂದು ಜೀವಿ ಬದುಕಲು ಒಂದು ಜೀವಪರಿಸರ ಮುಖ್ಯವಾಗುತ್ತದೆ. ವಿಜ್ಞಾನದ ಮೂಲ ತತ್ವವಿದು. ಇಲ್ಲವಾದರೆ ಇಂತಹ ಪ್ರಯೋಜನಗಳು ಹೆಚ್ಚು ಕಾಲ ಉಳಿಯುವುದಿಲ್ಲ” ಎಂದು ಭವಿಷ್ಯ ನುಡಿದರು.

ಬಾಗಿಲಿಗೆ ಬಂದ ನವಿಲು | Prajavani
ವನ್ಯಜೀವಿ ತಜ್ಞರಾದ ಕೃಪಾಕರ- ಸೇನಾನಿ

“ಇಲ್ಲಿನ ಜೀವ ವೈವಿಧ್ಯತೆಯನ್ನು, ಘಟ್ಟ ಪ್ರದೇಶಗಳನ್ನು ಉಳಿಸುವುದು ಯಾವುದೇ ಸರ್ಕಾರದ ಮೂಲಭೂತ ಕಾಳಜಿಯಾಗಬೇಕು. ದುರಾದೃಷ್ಟವಶಾತ್‌ ಈ ಕೆಲಸ ಶೇ. 1ರಷ್ಟೂ ಆಗಿಲ್ಲ. ಆ ದಿಕ್ಕಿನಲ್ಲಿ ಯೋಚನೆಯನ್ನೂ ಮಾಡುತ್ತಿಲ್ಲ. ಘಟ್ಟ ಪ್ರದೇಶದಲ್ಲಿ ರೈಲು ಮಾರ್ಗ ನಿರ್ಮಾಣ, ಗಣಿಗಾರಿಕೆ ನಡೆಯುತ್ತಲೇ ಇದೆ. ಇದೆಲ್ಲವೂ ವನ್ಯಜೀವಿ ಉಳಿವಿಗೆ ಅಪಾಯಕಾರಿ ನಡೆ” ಎಂದು ಎಚ್ಚರಿಸಿದರು.

ನಮೀಬಿಯಾದಿಂದ ಚೀತಾಗಳನ್ನು ತಂದಿರುವ ಹಿನ್ನೆಲೆಯಲ್ಲಿ ಬರಹವೊಂದನ್ನು ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿರುವ ಪರಸರತಜ್ಞ ನಾಗೇಶ ಹೆಗಡೆಯವರು, “ಭಾರತದ ವನ್ಯಜೀವಿ ಮಂಡಳಿಗೆ ಪ್ರಧಾನಿಯೇ ಅಧ್ಯಕ್ಷರು. ಆದರೆ ಮೋದಿಯವರು ಪ್ರಧಾನಿಯಾದ ಈ ಎಂಟು ವರ್ಷಗಳಿಂದ ಒಮ್ಮೆಯೂ ಈ ಮಂಡಳಿ ಸಭೆ ಸೇರಿಲ್ಲ” ಎಂದು ದೂರಿದ್ದಾರೆ.

“ನಮೀಬಿಯಾದ ಸಿವಂಗಿಗಳು ʼನಮೋʼಬಿಯಾಕ್ಕೆ” ಎಂಬ ಶೀರ್ಷಿಕೆಯಲ್ಲಿ ಲೇಖನವನ್ನು ಅವರು ಪೋಸ್ಟ್ ಮಾಡಿದ್ದು, “ಅಳಿದುಹೋದ ವನ್ಯ ಸಂತತಿಯೊಂದಕ್ಕೆ ಮರುಜೀವ ಕೊಡುವ ಮಹಾಯತ್ನ ಇದೆಂದು ಮೋದಿಯವರು ಮಹಾ ಉತ್ಸಾಹದಿಂದ ಭಾಷಣ ಮಾಡಿದ್ದಾರೆ. ಮಾಧ್ಯಮಗಳು ಜೈಕಾರ ಹಾಕಿವೆ. ಹಾಕಲಿ. ಭಾರತದ ವನ್ಯಜೀವಿ ಮಂಡಳಿಗೆ ಪ್ರಧಾನಿಯೇ ಅಧ್ಯಕ್ಷರು. ಆದರೆ ಮೋದಿಯವರು ಪ್ರಧಾನಿಯಾದ ಈ ಎಂಟು ವರ್ಷಗಳಿಂದ ಒಮ್ಮೆಯೂ ಈ ಮಂಡಳಿ ಸಭೆ ಸೇರಿಲ್ಲ. ಈ ಅವಧಿಯಲ್ಲಿ ಭಾರತದ ವನ್ಯಜೀವಿಗಳ ಸ್ಥಿತಿಗತಿ ಇನ್ನಷ್ಟು ದಾರುಣವಾಗಿದೆ. ಉದ್ಯಮ ವಲಯದ ಬೆಳವಣಿಗೆಗೆ ಅರಣ್ಯ ರಕ್ಷಣಾ ಕಾನೂನುಗಳು ಅಡ್ಡಿ ಒಡ್ಡುತ್ತಿವೆ ಎಂದು ಹೇಳಿ ಪರಿಸರ ರಕ್ಷಣಾ ಕಾನೂನು(ಇಐಎ)ಗಳನ್ನು ಸಾಕಷ್ಟು ಸಡಿಲಗೊಳಿಸಲಾಗಿದೆ” ಎಂದಿದ್ದಾರೆ.

“ಅದು ಸಾಲದೆಂಬಂತೆ ವನ್ಯ ಸಂರಕ್ಷಣಾ ಸಂಸ್ಥೆಗಳಿಗೆ ಅನುದಾನವನ್ನು ಕಡಿತಗೊಳಿಸಲಾಗುತ್ತಿದೆ. ʼನಿಮಗೆ ಬೇಕಿದ್ದ ಹಣವನ್ನು ನೀವೇ ಹೊಂದಿಸಿಕೊಳ್ಳಿʼ ಎಂದು ಅವಕ್ಕೆ ತಾಕೀತು ಮಾಡಲಾಗುತ್ತಿದೆ. ಈ ಸಂಸ್ಥೆಗಳು ಪ್ರವಾಸೋದ್ಯಮ ಯೋಜನೆಗಳಿಗೆ, ಉದ್ಯಮಿಗಳ ಪ್ರಾಯೋಜಕತ್ವಕ್ಕೆ ಅಂತ ಅದೂ ಇದೂ ಏನೇನೋ ಕಸರತ್ತು ಮಾಡಿ ವನ್ಯ ಸಂರಕ್ಷಣೆಗೆ ಹಣವನ್ನು ಹೊಂದಿಸಬೇಕಾಗಿದೆ” ಎಂದು ವಿಷಾದಿಸಿದ್ದಾರೆ.

Nagesh Hegde (@nageshstweets) / Twitter
ಪರಿಸರತಜ್ಞರಾದ ನಾಗೇಶ ಹೆಗಡೆ

“ಅದೆಷ್ಟೊ ಬಗೆಯ ಪ್ರಾಣಿಪಕ್ಷಿಗಳು ಅವಸಾನದ ಅಂಚಿಗೆ ಬಂದಿವೆ. ನಮ್ಮ ಸಿಂಹಬಾಲದ ಲಂಗೂರಗಳು, ಬಸ್ಟಾರ್ಡ್‌ ಪಕ್ಷಿಗಳು (ದೊರೆವಾಯನ ಹಕ್ಕಿ), ಕಾಝಿರಂಗಾದ ಒಂಟಿಕೊಂಬಿನ ಘೇಂಡಾಗಳು, ಬೆಂಗಾಲ್‌ ಫ್ಲೋರಿಕನ್‌ ಪಕ್ಷಿ ಇವೆಲ್ಲವುಗಳ ಸಂತತಿ ಕ್ಷೀಣಿಸುತ್ತಿದೆ. ಅವುಗಳ ವಾಸಸ್ಥಾನ ಕಿರಿದಾಗುತ್ತಿದೆ. ಇಂಥ ಸಂಗತಿಗಳತ್ತ ಪ್ರಧಾನಿಯವರ ಗಮನ ಸೆಳೆಯುವ ಬದಲು ಅವರನ್ನು ವನ್ಯರಕ್ಷಣಾ ಧುರಂಧರ ಎಂದು ಬಿಂಬಿಸಿದ್ದು ಸರಿಯೆ?” ಎಂದು ಪ್ರಶ್ನಿಸಿದ್ದಾರೆ.

“ಸಿವಂಗಿಗಳಿಗೆ (ಚೀತಾಗಳಿಗೆ) ವಿಶಾಲ ಹುಲ್ಲುಗಾವಲು ಬೇಕು. ಅಲ್ಲಿ ಚಿರತೆ, ಕಿರುಬ (ಹೈನಾ)ದಂಥ ಪ್ರಾಣಿಗಳು ಜಾಸ್ತಿ ಇರಬಾರದು. ಕುನೋದಲ್ಲಿನ ಕುರುಚಲು ಕಾಡನ್ನು ಹುಲ್ಲುಗಾವಲನ್ನಾಗಿ ಮಾಡಲು ಕಾನೂನಿನಲ್ಲಿ ಅವಕಾಶ ಇಲ್ಲ. ಅಥವಾ ಚಿರತೆ, ಹೈನಾಗಳನ್ನು ದೂರ ಸಾಗಿಸಲೂ ಅವಕಾಶ ಇಲ್ಲ. ಇಲ್ಲಿ ಸಿವಂಗಿಗಳಿಗೆ ಬೇಕಾದ ಚುಕ್ಕಿಜಿಂಕೆ, ಚಿಂಕಾರಾ/ ಕೃಷ್ಣ ಮೃಗ, ಸಾಂಬಾರ್‌ ಜಿಂಕೆಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ತಂದು ಸಾಕೋಣವೆಂದರೆ, ಅವಕ್ಕೂ ಹುಲ್ಲುಗಾವಲು ಬೇಕಲ್ಲ? ಈಗಿರುವ ಕುರುಚಲು ಅರಣ್ಯದಲ್ಲೇ ಅವು ಬದುಕಲು ಕಲಿತರೂ ಅವು ಸಿವಂಗಿ ದಾಳಿಯ ಸೂಕ್ಷ್ಮ ಅರಿತು ಪೊದೆಯೊಳಗೆ ಅವಿತು ಕಣ್ಮರೆಯಾದರೆ ಅವನ್ನು ಸಿವಂಗಿ ಅಟ್ಟಾಡಿಸಿ ಹಿಡಿಯಲಾರದು. ಹಾಗಾಗಿ ಇಂಥ ಗೊರಸು ಪ್ರಾಣಿಗಳೆಲ್ಲ ಚಿರತೆಗಳ ಪಾಲಾಗಿ, ಚಿರತೆ ಸಂತತಿ ಬಲುಶೀಘ್ರ ಜಾಸ್ತಿಯಾಗಬಹುದು. ಅವುಗಳ ಜೊತೆ ಸಿವಂಗಿಗಳು ಹೋರಾಡಿ ಗೆಲ್ಲುವುದು ಕಷ್ಟ. ಚಿರತೆ ಮತ್ತು ಕಿರುಬಗಳು ಸೇರಿ ಸಿವಂಗಿಗಳನ್ನು ಹಿಡಿದು ಕೊಂದೇ ಹಾಕಬಹುದು” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿರಿ: ಕುನೋ: ಚೀತಾಗಳು ಒಳಗೆ, ಆದಿವಾಸಿಗಳು ಹೊರಕ್ಕೆ- ‘ಪರಿ’ ವರದಿ

“ಕುನೋ ಅರಣ್ಯ ಪ್ರದೇಶದಲ್ಲಿ ಆದಿವಾಸಿಗಳ, ಗಿರಿಜನರ ಸುಮಾರು 150 ಹಳ್ಳಿಗಳಿವೆ. ಮೋದಿಯವರ ಈ ಯೋಜನೆಗೆ ಭರ್ಜರಿ ಜಯ ಸಿಗಬೇಕೆಂಬ ಉದ್ದೇಶದಿಂದ ಸಿವಂಗಿಗಳ ಓಡಾಟಕ್ಕೆ ಜಾಗ ಮಾಡಬೇಕೆಂಬ ರಣೋತ್ಸಾಹದಲ್ಲಿ ಅವರನ್ನೆಲ್ಲ ಅವಸರದಲ್ಲಿ ಎತ್ತಂಗಡಿ ಮಾಡಲು ಹೋದರೆ ಪ್ರತಿಭಟನೆ, ಹೋರಾಟ ಎಲ್ಲ ಹೆಚ್ಚಾಗಬಹುದು. ಮರುವಸತಿಗೆ ಒಪ್ಪಿದರೆ ನಿಮ್ಮ ಬದುಕು ಈಗಿಗಿಂತ ಒಳ್ಳೆಯದಾಗುತ್ತದೆಂದು ಅವರನ್ನು ನಂಬಿಸಬೇಕು. ಅಂಥ ಮಾದರಿಯನ್ನು ಅವರಿಗೆ ತೋರಿಸಬೇಕು. ಎಲ್ಲಿದೆ ಅಂಥ ಮಾದರಿ?” ಎಂದು ಕೇಳಿದ್ದಾರೆ.

“ಮುಂದಿನ ತಿಂಗಳು ದಕ್ಷಿಣ ಆಫ್ರಿಕಾದಿಂದ ಇನ್ನೂ 12 ಸಿವಂಗಿಗಳು ಬರಲಿವೆ. ಹೀಗೆ ಈ ಯೋಜನೆ ಇನ್ನೂ 13 ವರ್ಷಗಳ ಕಾಲ ಚಾಲ್ತಿಯಲ್ಲಿರುತ್ತದೆ. ಪ್ರಶ್ನೆ ಏನೆಂದರೆ, ನಮ್ಮಲ್ಲಿ ಅಳಿವಿನಂಚಿನಲ್ಲಿರುವ ಅನೇಕ ಪ್ರಾಣಿ-ಪಕ್ಷಿಗಳು ಸರಕಾರಿ ನೆರವಿಗೆ ಕಾದು ಕೂತಿವೆ. ಗಣಿಗಾರಿಕೆಯ ಅಬ್ಬರ, ನದಿಮೂಲಗಳ ನಾಶ, ಹೆದ್ದಾರಿಗಳ ವಿಸ್ತರಣೆ, ದಟ್ಟ ಅರಣ್ಯವನ್ನು ಸೀಳಿ ಹುಬ್ಬಳ್ಳಿ- ಅಂಕೋಲಾದಂಥ ನಿಷ್ಪ್ರಯೋಜಕ ರೈಲುಮಾರ್ಗ ಯೋಜನೆಗೆ ಸಿದ್ಧತೆ ಎಗ್ಗಿಲ್ಲದೆ ನಡೆಯುತ್ತಿವೆ. ಪ್ರಧಾನಿ ಮೋದಿಯವರಿಗೆ ವನ್ಯಜೀವಿ ಮಂಡಳಿಯ ಸಭೆ ಕರೆಯಲು ಪುರುಸೊತ್ತೇ ಆಗಿಲ್ಲ” ಎಂದು ಟೀಕಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Isn’t it is a shame to India?,while Limpi Virus has killed our cattles and daily death rate are at hike. Farmers and dairy farmers are loosing thier income. Getting 8 cheethas will solve the issue? Modi should start eating rice than Chinese mashroom, so he understands Indian Problems.
    It’s we citizens keeping quite at prime ministers baseless investment out of Tax Payers. Only poor pay tax, big high rich ppl are exempted from paying tax.”Sala manna”( karza Maaf)..
    Don’t waste public tax money on unimportant things.

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...